ಡಿಸೆಂಬರ್‌ ೧೬ ರಂದು ಅನುದಾನಿತ-ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ನೌಕರರಿಂದ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ

ಹುಬ್ಬಳ್ಳಿ: ಖಾಸಗಿ ಶಾಲೆಗಳ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿಸೆಂಬರ್‌ ೧೬ ರಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದಿಂದ ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಹಾಗೂ ನೌಕರರಿಂದ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ … Continued

ಧಾರವಾಡ :ಎಸ್‍ಡಿಎಂ ವೈದ್ಯಕೀಯ ಕಾಲೇಜಿನ ಎಲ್ಲಾ ಕೊರೊನಾ ಸೋಂಕಿತರು ಡಿಸ್ಚಾರ್ಜ್

ಧಾರವಾಡ: ಎಸ್‍ಡಿಎಂ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 306 ಕೋವಿಡ್ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಈಗ ಮಹಾವಿದ್ಯಾಲಯದಲ್ಲಿ ಯಾವುದೇ ಸಕ್ರಿಯ ಕೋವಿಡ್ ಪ್ರಕರಣಗಳು ಇಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಎಸ್‍ಡಿಎಂ ಮಹಾವಿದ್ಯಾಲಯದಲ್ಲಿ ಕಂಡು ಬಂದಿದ್ದ ಕೋವಿಡ್ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಆರೋಗ್ಯವಾಗಿದ್ದಾರೆ. ಇಂದು (ಡಿ.13) ಧಾರವಾಡ ಜಿಲ್ಲೆಯಲ್ಲಿ … Continued

ಸುಳ್ಯ: ಮಾಲೀಕರನ್ನೇ ತಿವಿದು ಕೊಂದ ಮೇಯಲು ಕಟ್ಟಿದ್ದ ಹೋರಿ

ಮಂಗಳೂರು ಹೋರಿಯೊಂದು ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ (55ವರ್ಷ) ಎಂದು ಗುರುತಿಸಲಾಗಿದೆ. ಆ ದಾರಿಯಲ್ಲಿ ಬರುತ್ತಿದ್ದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಅಲ್ಲೇ ಪಕ್ಕದಲ್ಲಿ ಹೋರಿ ಕಟ್ಟಿ ಹಾಕಿರುವುದನ್ನು ನೋಡಿದ್ದಾರೆ. … Continued

ನಾಳೆ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯ ಮತ ಎಣಿಕೆ, ಫಲಿತಾಂಶ ಪ್ರಕಟ:ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್‌

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಕಳೆದ ಶುಕ್ರವಾರ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ, ಮಂಗಳವಾರ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಡುವೆ ತುರುಸಿನ ಪೈಪೋಟಿ ನಡೆದಿತ್ತು. ನಾಳೆ ಮಂಗಳವಾರ ಯಾರು ಗೆಲ್ಲಲಿದ್ದಾರೆ ಎಂಬುದು ಗೊತ್ತಾಗಲಿದೆ. ಈ ಬಾರಿ ದಾಖಲೆಯ ಶೇ.99.80ರಷ್ಟು ಮತದಾನವಾಗಿದೆ. ಸ್ಥಳೀಯ ಸಂಸ್ಥೆಗಳ ಮತದಾರರ … Continued

ಪಂಜಾಬಿನಲ್ಲಿ ಭತ್ತದ ತಳಿಯೊಂದಕ್ಕೆ ದೇವೇಗೌಡರ ಹೆಸರು: ರೈತರಿಂದ ಮಾಜಿ ಪ್ರಧಾನಿಗೆ ವಿಶೇಷ ಗೌರವ

ನವದೆಹಲಿ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರಿಗೆ ಪಂಜಾಬ್‌ ರೈತರು ಈ ಹಿಂದೆಯೇ ವಿಶೇಷರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ. ಅತ್ಯುತ್ತಮ ಭತ್ತದ ತಳಿಯೊಂದಕ್ಕೆ ಪಂಜಾಬ್‌ನ ರೈತರು ‘ದೇವೇಗೌಡ’ ಎಂದು ಹೆಸರಿಟ್ಟಿದ್ದಾರೆ. ಸದನದ ಒಳಗೆ ಮತ್ತು ಹೊರಗೆ ರೈತ ಸಮುದಾಯದ ಪರ ಹೆಚ್‌.ಡಿ ದೇವೇಗೌಡರು ತೋರಿದ ಬದ್ಧತೆ ಗೌರವಾರ್ಥವಾಗಿ ಅವರ ಹೆಸರನ್ನೇ ಇಟ್ಟಿದ್ದಾರಂತೆ. ‘ಫುರೋಸ್‌ ಇನ್‌ ಎ ಫೀಲ್ಡ್‌: ದಿ … Continued

ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ

ಬೆಳಗಾವಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಬೆಳಗಾವಿ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಇಂದು, ಸೋಮವಾರ ಬೆಳಿಗ್ಗೆ ಸಭೆ ನಡೆಸಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ, ಅಧಿವೇಶನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ಸುಲಲಿತವಾಗಿ ನಡೆಯುವಂತಾಗಲು ತೆಗೆದುಕೊಂಡಿರುವ ರಕ್ಷಣಾ ಕ್ರಮಗಳ ಬಗ್ಗೆ ಸಚಿವರು ಸಭೆಯಲ್ಲಿ ಮಾಹಿತಿ ಪಡೆದುಕೊಂಡರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಒಳಾಡಳಿತ … Continued

ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧ: ಸಿಎಂ ಬೊಮ್ಮಾಯಿ

ಬೆಳಗಾವಿ:ವಿರೋಧಪಕ್ಷಗಳು ಪ್ರಸ್ತಾಪ ಮಾಡುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು, ಸೋಮವಾರ ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹಲವಾರು ಕಾನೂನುಗಳನ್ನು ತರುವುದು, ಜನಪರವಾದ ಅಭಿವೃದ್ಧಿಯ ಕುರಿತು ಚರ್ಚೆ ಮಾಡಿ ಅದಕ್ಕೆ ಪರಿಹಾರ ದೊರಕಿಸುವುದು ಸರ್ಕಾರದ ಆದ್ಯತೆ. ಸಮಗ್ರ ಕರ್ನಾಟಕದ … Continued

ಬೆಳಗಾವಿಯಲ್ಲಿ ಎಂಇಎಸ್ ನಾಯಕರ ಮುಖಕ್ಕೆ ಮಸಿ, ನಾಳೆ ಬೆಳಗಾವಿ ಬಂದ್‌ಗೆ ಕರೆ

ಬೆಳಗಾವಿ: ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಕರ್ನಾಟಕ ಸರಕಾರ ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಸುತ್ತಿದೆ. ಆದರೆ ಇದಕ್ಕೆ ಪರ್ಯಾಯವಾಗಿ ಎಂಇಎಸ್ ಮಹಾಮೇಳಾವ್ ನಡೆಸಲು ಎಂಇಎಸ್ ಮಹಾಮೇಳಾವಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೆ ನಿನ್ನೆ ತಡರಾತ್ರಿಯಲ್ಲಿ ಕಾರ್ಯಕರ್ತರು ವೇದಿಕೆ ನಿರ್ಮಿಸಿದ್ದರು. ಇಂದು … Continued

ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆ ಮಂಡನೆ: ಸಿಎಂ ಬೊಮ್ಮಾಯಿ

ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡಲಾಗುವುದು. ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಆ ಹಿನ್ನೆಲೆಯಲ್ಲಿಯೇ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಕ್ರೈಸ್ತ ಸಮುದಾಯದ ನಾಯಕರಿಗೆ ನಾನು ಹೇಳಿದ್ದೇನೆ. ಯಾರಿಗೂ … Continued

ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಬಳಿ ಭೀಕರ ಅಪಘಾತ: ನಾಲ್ವರ ಸಾವು

ಚಿತ್ರದುರ್ಗ: ತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಪರಿಣಾಮ ಲಾರಿ ಪಲ್ಟಿಯಾಗಿದ್ದು, ಈ ಲಾರಿಗೆ ಲಾರಿಗಳು ಹಾಗೂ ಕಾರು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ನಾಲ್ವರು ಮೃತಪಟ್ಟ ಬಗ್ಗೆ ವರದಿಗಳು ತಿಳಿಸಿವೆ. ಟೈರ್‌ ಸ್ಫೋಟಗೊಂಡು ನಿಯಂತ್ರಣ … Continued