ಪರಿಷತ್‌ ಚುನಾವಣೆಯಲ್ಲಿ ಯಾರೊಂದಿಗೂ ಜೆಡಿಎಸ್‌ ಮೈತ್ರಿ ಇಲ್ಲ: ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್‌ 14 ರಂದು ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈತ್ರಿ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಪಕ್ಷದ ಜೊತೆ ಯಾವುದೇ ಮೈತ್ರಿ ಒಪ್ಪಂದ ಇಲ್ಲ ಎಂದು ಹೇಳಿದ ಅವರು … Continued

9 ಮಕ್ಕಳಿದ್ದರೂ ಜೀವನದ ಸಂಧ್ಯಾ ಕಾಲದಲ್ಲಿ ಯಾರಿಗೂ ಬೇಡವಾದ 85ರ ವಯೋವೃದ್ಧ ತಾಯಿ..! ಹೀಗೊಂದು ಕರುಳುಹಿಂಡುವ ಘಟನೆ

ಮಂಗಳೂರು: 9 ಮಕ್ಕಳನ್ನು ಹೆತ್ತಿದ್ದರೂ ಈ ತಾಯಿಯ ಜೀವನ ಸಂಧ್ಯಾ ಕಾಲದಲ್ಲಿ ಯಾವೊಬ್ಬ ಮಕ್ಕಳೂ ಸಲಹದೆ ತಾಯಿಯನ್ನು ಒಬ್ಬಂಟಿಯಾಗಿಸಿದ್ದಾರೆ..!. ಈ 85 ವಯಸ್ಸಿನ ವೃದ್ಧೆಗೆ 9 ಮಂದಿ ಮಕ್ಕಳಿದ್ದಾರೆ. ಆದರೆ ತಾಯಿ ಎಲ್ಲರಿಗೂ ಭಾರ, ಯಾರಿಗೂ ಬೇಡವಾಗಿದ್ದಾಳೆ. ಮಕ್ಕಳ ಮನೆಯಲ್ಲಿ ಉಳಿಯಲು ತನಗೆ ಅವಕಾಶ ಕಲ್ಪಿಸಿ ಕೊಡುವಂತೆ ಪಾಂಡೇಶ್ವರ ಠಾಣೆ ಹಿರಿಯ ನಾಗರಿಕರ ಸಹಾಯವಾಣಿ ಕದ … Continued

ಡೆಲ್ಟಾಕ್ಕೆ ಹೋಲಿಸಿದರೆ ಓಮಿಕ್ರಾನ್ ತೀವ್ರತೆ ಕಡಿಮೆಯಿದೆ: ಡಾ. ಕೆ.ಸುಧಾಕರ್

ಮಕ್ಕಳ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಲ್ಲ ಬೆಂಗಳೂರು: ರಾಜ್ಯದಲ್ಲಿ ಪತ್ತೆಯಾದ ಓಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಯಾವುದೇ ಆರೋಗ್ಯ ಸಮಸ್ಯೆ, ಅಥವಾ ರೋಗ ಲಕ್ಷಣ ಕಂಡುಬಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಎರಡು ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಸೋಂಕಿತರ ಸಂಪರ್ಕದಲ್ಲಿದ್ದವರ ಜಿನೊಮಿಕ್ಸ್ ಸೀಕ್ವೆನ್ಸ್ ವರದಿ ಇನ್ನೂ ಬಂದಿಲ್ಲ. … Continued

ಬಿಜೆಪಿ ಹಿರಿಯ ನಾಯಕ ಉರಿಮಜಲು ರಾಮ್ ಭಟ್ ನಿಧನ

ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿಯ ‘ಭೀಷ್ಮ’ ಎಂದು ಕರೆಸಿಕೊಳ್ಳುತ್ತಿದ್ದ ಉರಿಮಜಲು ಕೆ.ರಾಮ್ ಭಟ್ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಅವರು ಕೆಲವು ದಿನಗಳ ಹಿಂದಷ್ಟೇ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿ ಚೇತರಿಸಿಕೊಂಡು ಮನೆಗೆ ಮರಳಿದ್ದರು.ಕೊಂಬೆಟ್ಟಿನಲ್ಲಿರುವ ಅವರ ನಿವಾಸದಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರು ಸಹಕಾರಿ ಮುಂದಾಳು ಹಾಗೂ ಸಮಾಜ ಸೇವಕಿ … Continued

ಈಗ ನಾನ ಇಲಿಯಾಗಿದ್ದೇನೆ..:ಬದಾಮಿಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ವೇದಿಕೆಯಲ್ಲೇ ಅಸಮಾಧಾನ ವ್ಯಕ್ತಪಡಿಸಿದ ಚಿಮ್ಮನಕಟ್ಟಿ..!

ಬಾಗಲಕೋಟೆ: ವಿಧಾನ ಪರಿಷತ್​ ಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಸ್ವಕ್ಷೇತ್ರ ಬದಾಮಿಯಲ್ಲಿ ಪ್ರಚಾರ ನಡೆಸಿದರು. ನಗರದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತವಾಯಿತು. ಸಿದ್ದರಾಮಯ್ಯಗಾಗಿ ಕ್ಷೇತ್ರ ಬಿಟ್ಟು ಕೊಟ್ಟ ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಮಾತಿನಿಂದ ಇಡೀ ಸಭೆ ಗೊಂದಲಕ್ಕೀಡಾಯಿತು. ವಸಿದ್ದರಾಮಯ್ಯ ಅವರು ವರುಣಾ … Continued

ತಜ್ಞರ ಅಭಿಪ್ರಾಯ ಪಡೆದ ನಂತರ ರಾತ್ರಿ ಕರ್ಫ್ಯೂ ಜಾರಿ ಬಗ್ಗೆ ತೀರ್ಮಾನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ/ಬೀದರ:ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಚಿತ್ರಮಂದಿರ ಮತ್ತು ಮಾಲ್‌ಗಳಲ್ಲಿ ಶೇ. ೫೦ರಷ್ಟು ಮಾತ್ರ ಪ್ರವೇಶ, ನೈಟ್ ಕರ್ಫ್ಯೂ ಜಾರಿ ಪ್ರಸ್ತಾಪ ಸೇರಿದಂತೆ ಎಲ್ಲ ಪ್ರಸ್ತಾಪಗಳ ಬಗ್ಗೆ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯದಲ್ಲಿ ಓಮಿಕ್ರಾನ್ ಇಬ್ಬರಲ್ಲಿ ಕಂಡುಬಂದಿದೆ. ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರು ಪತ್ತೆಯಾಗಿದ್ದು, ಇವರಲ್ಲಿ ಯಾವುದೇ … Continued

ವರಿಷ್ಠರ ಸಲಹೆ ಪಡೆದ ನಂತರವೇ ಸಚಿವ ಸಂಪುಟ ವಿಸ್ತರಣೆ:ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರ ಸಲಹೆ ಪಡೆದ ನಂತರವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ಸದ್ಯಕ್ಕೆ ನಮ್ಮ ಮುಂದೆ ವಿಧಾನ ಪರಿಷತ್ ಚುನಾವಣೆ ಹಾಗೂ ಬೆಳಗಾವಿ ಅಧಿವೇಶನವಿದೆ. ಅದಕ್ಕಾಗಿ ಗಮನಹರಿಸುತ್ತಿದ್ದೇವೆ. ನಂತರ ಈ ಕುರಿತು ವರಿಷ್ಠರ ಜೊತೆ … Continued

ಸೋಂಕು ಹೆಚ್ಚಾಗಿ ಶಾಲೆ, ಪರೀಕ್ಷೆ ನಿಲ್ಲಿಸುವ ಸನ್ನಿವೇಶ ಬಂದ್ರೆ ಶಾಲೆ ಬಂದ್‌ ಮಾಡ್ತೇವೆ: ಸಚಿವ ನಾಗೇಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಶಾಲೆ, ಪರೀಕ್ಷೆ ನಿಲ್ಲಿಸುವ ಅಗತ್ಯ ಬಂದರೆ ಅದಕ್ಕೆ ಸರ್ಕಾರ ಸಿದ್ಧ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ ಹೇಳಿದ್ದಾರೆ. ಕೆಲವು ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೋಂಕು ಹೆಚ್ಚಳ ಆತಂಕ ತಂದಿದೆ. ವಸತಿ, ನವೋದಯ ಶಾಲೆಗಳಲ್ಲಿ ಸೋಂಕು … Continued

ಬೆಂಗಳೂರು:ಉತ್ತರ ಕನ್ನಡ ಸಂಘದ ಕಾರ್ಯಕಾರಿಣಿಗೆ 19 ಸದಸ್ಯರು ಅವಿರೋಧವಾಗಿ ಆಯ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಷ್ಠಿತ ಉತ್ತರ ಕನ್ನಡ ಸಂಘ(ರಿ)ದ ಸರ್ವ ಸದಸ್ಯರ 42ನೇ ವಾರ್ಷಿಕ ಮಹಾ ಸಭೆಯು ಅಧ್ಯಕ್ಷರಾದ ವಿಜಯ ಕಾಮತ ಅಧ್ಯಕ್ಷತೆಯಲ್ಲಿ ಉತ್ತರ ಕನ್ನಡ ಭವನದಲ್ಲಿ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ 19 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾದ ಅರುಣ ಪ್ರಭು ಅವರು ಭಗವಂತನ ಸ್ತುತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. … Continued

ಗ್ರಾಮಕ್ಕೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ

ಮೈಸೂರು: ಹಾಡಹಗಲೇ ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ ದಾಂಧಲೆ ನಡೆಸಿದ ಘಟನೆ‌ ವೀರನಹೊಸಳ್ಳಿಯ ಬಳಿಯ ನಾಗಪುರ ಹಾಡಿಯಲ್ಲಿ ಭಾನುವಾರ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವೀರನಹೊಸಳ್ಳಿ ಬಳಿಯ ನಾಗಪುರಕ್ಕೆ ಹಾಡುಹಗಲೇ ಒಂಟಿ ಸಲಗ ನುಗ್ಗಿ ದಾಂಧಲೆ‌ ನಡೆಸಿದ್ದು, ರಾಗಿ, ಜೋಳ, ಬಾಳೆ ಸೇರಿದಂತೆ ಇತರ ಬೆಳೆಗಳನ್ನು ಹಾನಿ ಮಾಡಿದೆ. ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗವನ್ನು … Continued