ಬೆಂಗಳೂರಿನಲ್ಲಿ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ; ಇಬ್ಬರು ಸಾವು

ಬೆಂಗಳೂರು: ನಗರದ ಎಫ್‌ಟಿಐ ಸರ್ಕಲ್‌ ಸಮೀಪ ಮಂಗಳವಾರ ಬೆಳಗ್ಗೆ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ತಡೆಗೋಡೆ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಬೆಳಗ್ಗೆ ಸುಮಾರು 11 ಗಂಟೆಗೆ ಈ ಘಟನೆ ನಡೆದಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕೈಗೊಂಡಿರುವ ಅಂಡರ್‌ಪಾಸ್ ಯೋಜನೆಯ ಭಾಗವಾಗಿ ಸ್ಥಳದಲ್ಲಿ … Continued

ಬೆಂಗಳೂರು : ಪಂಚತಾರಾ ಹೊಟೇಲ್‌ನಲ್ಲಿ ರೂಂ ಬುಕ್ ಮಾಡಿ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ?!

ಬೆಂಗಳೂರು: ಬೆಂಗಳೂರಿನ ಪಂಚತಾರಾ ಹೋಟೆಲ್‌ವೊಂದರಲ್ಲಿ ಇಬ್ಬರು ಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ತಂದೆ ಶೌಚಗೃಹದಲ್ಲಿ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಕೊಲೆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವಾಗಿರಬಹುದು ಎಂದು ಶಂಕಿಸಲಾಗಿದೆ. 40 ವರ್ಷದ ಇಮ್ರಾನ್ ಎಂಬಾತ ಕುತ್ತಿಗೆ ಸೀಳಿ ಶೌಚಾಲಯದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಅವರ 10 ಮತ್ತು … Continued

ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸು

ಬೆಂಗಳೂರು: ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ ಸ್ಲೀಪರ್ ರೈಲು ಸೇವೆ ಆರಂಭಿಸಲು ದಕ್ಷಿಣ ಪಶ್ಚಿಮ ರೈಲ್ವೆ (SWR) ಸಿದ್ಧತೆ ನಡೆಸಿದೆ. ಬೆಂಗಳೂರು ಮೂಲದ ರೈಲ್ವೆ ವಲಯಕ್ಕೆ ಬಿಇಎಂಎಲ್ ನಿರ್ಮಿಸಿರುವ ಎರಡು 16 ಬೋಗಿಗಳ ವಂದೇ ಭಾರತ ಸ್ಲೀಪರ್ ರೈಲು ಸೆಟ್‌ಗಳು ತಲುಪಿದ್ದು, ಅವುಗಳನ್ನು ಸೇವೆಗೆ ನಿಯೋಜಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಚೆನ್ನೈನ ಇಂಟಿಗ್ರಲ್ ಕೋಚ್ … Continued

ದೇಶದೊಳಕ್ಕೆ ಅಕ್ರಮವಾಗಿ ಅಡಿಕೆ ಬರುವುದನ್ನು ತಡೆಯಲು ಕ್ರಮ ; ನಿಯೋಗಕ್ಕೆ ಕೇಂದ್ರ ಸಚಿವ ಅಮಿತ್‌ ಶಾ ಭರವಸೆ

ನವದೆಹಲಿ : ಅಡಿಕೆ ಬೆಳೆಗಾರರು ಹಾಗೂ ಸಹಕಾರ ಸಂಸ್ಥೆಗಳು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಕುರಿತು ರಾಜ್ಯದ ಸಂಸದರು, ಶಾಸಕರು, ಕ್ಯಾಂಪ್ಕೋ ಹಾಗೂ ಅಡಿಕೆ ಮಹಾಮಂಡಳದ ಪ್ರತಿನಿಧಿಗಳನ್ನು ಒಳಗೊಂಡ ನಿಯೋಗವು ಶನಿವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. … Continued

ಬೆಳಗಾವಿ : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಹತ್ಯೆ ; ಆರು ತಿಂಗಳ ಬಳಿಕ ಪತ್ನಿ, ಪ್ರಿಯಕರ ಬಂಧನ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿ, ಶವವನ್ನು ಹೊಲದಲ್ಲಿ ಮುಚ್ಚಿಟ್ಟು, ಪತಿ ಕಾಣೆಯಾಗಿದ್ದಾನೆ ಎಂದು ನಂಬಿಸಿ ದೂರು ನೀಡಿದ್ದ ಪ್ರಕರಣವನ್ನು ಜಿಲ್ಲೆಯ ಖಡಕಲಾಟ ಪೊಲೀಸರು ಆರು ತಿಂಗಳ ಬಳಿಕ ಭೇದಿಸಿದ್ದಾರೆ. ಮೃತನನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಬಂಗಾರಿ ಗಾವಡೆ ಹಾಗೂ … Continued

ಕಾಂಗ್ರೆಸ್‌ ಮುಖಂಡ-ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪರಾರಿಯಾಗುತ್ತಿದ್ದ ಮೂವರು ಆರೋಪಿಗಳ ಬಂಧನ

ಉಡುಪಿ : ಜಿಲ್ಲೆಯ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಮುದರಂಗಡಿಯ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.  ಉತ್ತರ ಪ್ರದೇಶದ ಥಾಣಾ ಪಿಲ್ವಾ ನಿವಾಸಿ ರಾಜು (42) ಎಂಬಾತನನ್ನು ಬೈಂದೂರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಉತ್ತರಾಖಂಡ ಮೂಲದ ಅಜಯ … Continued

ಆಗಸ್ಟ್ 14ರವರೆಗೆ ದಕ್ಷಿಣ ಭಾರತದಲ್ಲಿ ಮಳೆ : ಕರ್ನಾಟಕದ ಹಲವೆಡೆ ಭಾರಿ ಮಳೆ, ಗುಡುಗು–ಮಿಂಚು, ಜೋರಾದ ಗಾಳಿ ಮುನ್ಸೂಚನೆ

ನವದೆಹಲಿ : ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಆಗಸ್ಟ್ 14ರವರೆಗೆ ಜೋರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಕರ್ನಾಟಕ, ಕೇರಳ ಮತ್ತು ಮಾಹೆ, ಲಕ್ಷದ್ವೀಪ ಸೇರಿದಂತೆ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 14ರವರೆಗೆ ಕರಾವಳಿ ಆಂಧ್ರಪ್ರದೇಶ … Continued

ಕೊಳೆತ ಮಾಂಸ, ಅವಧಿ ಮೀರಿದ ಹಾಲು….: ಬೆಂಗಳೂರು ಪಂಚತಾರಾ ಹೋಟೆಲ್‌ಗಳ ದಾಳಿಯಲ್ಲಿ ಆಘಾತಕಾರಿ ಸಂಗತಿಗಳು ಬಹಿರಂಗ

ಬೆಂಗಳೂರು: ಅವಧಿ ಮೀರಿದ ಹಾಲು, ಕೊಳೆತ ಮಾಂಸ, ತರಕಾರಿಗಳಲ್ಲಿ ಶಿಲೀಂಧ್ರದ ಬೆಳವಣಿಗೆ ಸೇರಿದಂತೆ ಹಲವು ಗಂಭೀರ ಆಹಾರ ಸುರಕ್ಷತಾ ಉಲ್ಲಂಘನೆಗಳು ನಗರದ ಕೆಲ ಪ್ರತಿಷ್ಠಿತ ಐಷಾರಾಮಿ ಹೋಟೆಲ್‌ಗಳು ಹಾಗೂ ರೆಸಾರ್ಟ್‌ಗಳಲ್ಲಿ ಪತ್ತೆಯಾಗಿವೆ. ಬೆಂಗಳೂರಿನ ಅತ್ಯಂತ ಪ್ರತಿಷ್ಠಿತ ಹೋಟೆಲ್‌ಗಳಲ್ಲೇ ಇಂತಹ ಉಲ್ಲಂಘನೆಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಗರದ … Continued

ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರ ಮನೆ ಮೇಲೆ ಇ.ಡಿ. ದಾಳಿ

ಬೆಳಗಾವಿ : ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ನ ಮಾಲೀಕ ಶಿವಾನಂದ ನೀಲಣ್ಣವರ ಹಾಗೂ ಅವರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ. ಬೆಳಗಾವಿ, ಚಿಕ್ಕೋಡಿ ಮತ್ತು ಹುಕ್ಕೇರಿ ಸೇರಿದಂತೆ ಮೂರು ಕಡೆಗಳಲ್ಲಿ ಬೆಂಗಳೂರು ಹಾಗೂ ಗೋವಾದ ಇ.ಡಿ. ಅಧಿಕಾರಿಗಳ … Continued

ಉಡುಪಿ: ಕಾಂಗ್ರೆಸ್‌ ಮುಖಂಡ- ಉದ್ಯಮಿ ಡೇವಿಡ್ ಡಿ’ಸೋಜಾಗೆ ಗುಂಡಿಕ್ಕಿ ಹತ್ಯೆ

ಉಡುಪಿ : ಖ್ಯಾತ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಮುದರಂಗಡಿಯ ಡೇವಿಡ್ ಡಿ’ಸೋಜಾ (ಡೇವಿಡ್ ಡಾಲಿಯಾ) ಅವರನ್ನು ಶುಕ್ರವಾರ ಮಧ್ಯಾಹ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು  ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಮುದರಂಗಡಿಯಲ್ಲಿ ಮುದರಂಗಡಿ ಗ್ರಾಮ ಪಂಚಾಯತ ವ್ಯಾಪ್ತಿಯ ಪಿಲ್ಲಾರ್ ಗ್ರಾಮದ ಸೇಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಮುಂಭಾಗದಲ್ಲಿ … Continued