ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡಬೇಡಿ ಎಂದು ಹೇಳಿದ್ದರು: ದೇವೇಗೌಡ

ಮಂಡ್ಯ: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದರೆ ರಾಜೀನಾಮೆ ನೀಡುವುದಾಗಿ ನಾನು ಘೋಷಿಸಿದ್ದೆ, ರಾಜೀನಾಮೆ ನಿರ್ಧಾರವನ್ನೂ ಮಾಡಿದ್ದೆ. ಆದರೆ ಪ್ರಧಾನಿ ಮೋದಿ ಅವರು ರಾಜೀನಾಮೆ ಕೊಡುವುದು ಬೇಡ ಎಂದು ಮನವೊಲಿಸಿದರು ಎಂದು ಮಾಜಿ ಪ್ರಧಾನಿ ದೇವೇಗೌಡರು ತಮ್ಮ ರಾಜೀನಾಮೆ ವಿಚಾರದ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ … Continued

ಒಂದೇ ಶಾಲೆ 63 ವಿದ್ಯಾರ್ಥಿಗಳು ಸೇರಿ ಕರ್ನಾಟಕದ 456 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ನವೋದಯ ಶಾಲೆಯ 63 ವಿದ್ಯಾರ್ಥಿಗಳು ಸೇರಿದಂತೆ ಕರ್ನಾಟಕದ 456 ಮಂದಿಯಲ್ಲಿ ಭಾನುವಾರ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಆರು ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 7132 ಸಕ್ರಿಯ ಪ್ರಕರಣಗಳಿದ್ದಾರೆ. ಒಟ್ಟು 330 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ 29,98,099 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,52,708 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ 38,230 … Continued

ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಡೀಮ್ಡ್‌ ವಿವಿ ಘಟಿಕೋತ್ಸವದಲ್ಲಿ ಸಚಿವ ನಿರಾಣಿಗೆ ಗೌರವ ಡಾಕ್ಟರೇಟ್ ಪ್ರದಾನ

ಕರಾಡ್ (ಮಹಾರಾಷ್ಟ್ರ): ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿರುವ ಕರಾಡ್ ನ ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಘಟಿಕೋತ್ಸವದಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಗೌರವ ಡಾಕ್ಟರೇಟ್‌ ಸ್ವೀಕರಿಸಿದರು. ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಚಿವ ಮುರುಗೇಶ್‌ ನಿರಾಣಿ ಅವರಿಗೆ ಸಮಾಜಸೇವೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ನೀಡಿದ ಸೇವೆ … Continued

ಕನ್ನಡದ ಹಿರಿಯ ನಟ ಶಿವರಾಂ ಪಂಚಭೂತಗಳಲ್ಲಿ ಲೀನ:ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡದ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವದೊಂದಿಗೆ ಇಂದು (ಡಿಸೆಂಬರ್​ 5) ಮಧ್ಯಾಹ್ನ ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು. ಶಿವರಾಂ ಅವರ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್‌ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಕನ್ನಡ ಚಿತ್ರರಂಗಕ್ಕೆ ಮಾರ್ಗದರ್ಶಕರಾಗಿದ್ದ ಶಿವರಾಂ, ಪಂಚಭೂತಗಳಲ್ಲಿ ಲೀನರಾದರು. ಅಯ್ಯಪ್ಪ ಗುರುಸ್ವಾಮಿಯಾಗಿದ್ದ ಶಿವರಾಂ ಅವರಿಗೆ ಪಂಚಾಮೃತ ಅಭಿಷೇಕ … Continued

ಯಡಿಯೂರಪ್ಪ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ

ಮೈಸೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ. ಯಡಿಯೂರಪ್ಪ ಮಾತ್ರ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಹಿರಂಗವಾಗಿಯೇ ನಮಗೆ ಯಾರ ಬೆಂಬಲ ಬೇಡ ಎಂದು ಹೇಳಿದೆ. ಬೆಂಬಲ ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. … Continued

ಶಿವಮೊಗ್ಗ: ನನ್ನ ಹಸುಗಳು ಹಾಲು ಕೊಡುತ್ತಿಲ್ಲ ಸ್ವಾಮಿ, ಠಾಣೆಗೆ ಕರೆಸಿ ಬುದ್ಧಿ ಹೇಳಿ ಎಂದು ಪೊಲೀಸರಿಗೆ ದೂರು ನೀಡಿದ ರೈತ..!

ಶಿವಮೊಗ್ಗ: ಗುಂಪುಗಳ ನಡುವೆ ಜಗಳವಾದರೆ ಪೊಲೀಸರಿಗೆ ದೂರು ನೀಡುತ್ತಾರೆ. ಆದರೆ ಇಲ್ಲೊಬ್ಬ ರೈತ ತನ್ನ ಹಸುಗಳು ಹಾಲು ಕೊಡುತ್ತಿಲ್ಲ ಅವುಗಳಿಗೆ ನೀವೇ ಬುದ್ಧಿಹೇಳಿ ಎಂದು ತನ್ನ ನಾಲ್ಕು ಹಸುಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಾಳೆಹೊನ್ನೂರು ಬಳಿ ಈ ಘಟನೆ ನಡೆದಿದ್ದು, ಸಿದ್ದೀಪುರ … Continued

ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟ; 40 ಮಕ್ಕಳಿಗೆ ಸೋಂಕು ದೃಢ

ಚಿಕ್ಕಮಗಳೂರು : ರಾಜ್ಯದಲ್ಲಿ ಓಮಿಕ್ರಾನ್‌ ಸೋಂಕು ಪತ್ತೆಯಾದ ಬೆನ್ನಿಗೇ ಕೊರೊನಾ ಸೋಂಕು ಸಹ ಹೆಚ್ಚುತ್ತಿದೆ. ಶಾಲೆ, ಕಾಲೇಜುಗಳು ಈಗ ಕೊರೊನಾ ಹಾಟ್‌ಸ್ಪಾಟ್‌ ಆಗುತ್ತಿದ್ದು, ಈಗ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್.ಪುರದ ಸಿಗೋಡು ಗ್ರಾಮದಲ್ಲಿರುವ ಜವಾಹರ್‌ ನವೋದಯ ವಸತಿ ಶಾಲೆಯ 40 ವಿದ್ಯಾರ್ಥಿಗಳಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೊದಲು ಜವಾಹರ್‌ ನವೋದಯ ಶಾಲೆಯ ಮೂವರು ವಿದ್ಯಾರ್ಥಿಗಳು ಹಾಗೂ … Continued

ಪ್ರಥಮ, ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಸಮಯದಲ್ಲಿ ಬದಲಾವಣೆ

ಬೆಂಗಳೂರು: 2021-22 ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷಾ ಸಮಯದಲ್ಲಿ ಕೊಂಚ ಬದಲಾವಣೆ ಮಾಡಿದ್ದು, ಈ ಬಗ್ಗೆ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. 18-11-2021ರಲ್ಲಿ, ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ನಡೆಸುವ ಕುರಿತು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆದರೆ ಈಗ ವೇಳಾಪಟ್ಟಿಯಲ್ಲಿ ಪರೀಕ್ಷೆ ಸಮಯವನ್ನು ಈ ಮೊದಲು ಬೆಳಗ್ಗಿನ … Continued

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಕರ್ನಾಟಕ ಸರ್ಕಾರದ ವಿರೋಧ: ಕೇಂದ್ರಕ್ಕೆ ತಿಳಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಅವರು ಶನಿವಾರ ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ … Continued

ಕೋವಿಡ್-19: ಅರ್ಹ ಜನಸಂಖ್ಯೆ 100% ರಷ್ಟು ಎರಡೂ ಡೋಸ್‌ ಲಸಿಕೆ ಹಾಕಿದ ಮೊದಲ ರಾಜ್ಯವಾಯ್ತು ಹಿಮಾಚಲ ಪ್ರದೇಶ ..!

ಶಿಮ್ಲಾ: ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕೃತ ವಕ್ತಾರರು, ಶನಿವಾರ ಹಿಮಾಚಲ ಪ್ರದೇಶವು ತನ್ನ ವಯಸ್ಕ ಜನಸಂಖ್ಯೆಯ ಶೇಕಡಾ 100ಕ್ಕೆ ನೂರು ಕೋವಿಡ್‌-19 ಲಸಿಕೆ ಹಾಕಿದ ಮೊದಲ ರಾಜ್ಯವಾಗಿದೆ ಎಂದು ದೃಢಪಡಿಸಿದ್ದಾರೆ. ಭಾನುವಾರ ಬಿಲಾಸ್‌ಪುರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಐಐಎಂಎಸ್) ಕೋವಿಡ್-19 ಕಾರ್ಯಕರ್ತರನ್ನು ಗೌರವಿಸಲು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದರು. 53,86,393 … Continued