ನಟ ಶಿವರಾಂ ಸವೆಸಿದ ದಾರಿ..:600ಕ್ಕೂ ಹೆಚ್ಚು ಸಿನೆಮಾಗಳಲ್ಲಿ ನಟನೆ.. ಚಿತ್ರ ನಿರ್ಮಾಣ-ನಿರ್ದೇಶನ..ಅಯ್ಯಪ್ಪನ ಮಹಾನ್‌ ಭಕ್ತ..

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಶಿವರಾಮಣ್ಣ ಹಾಗೂ ಶರಪಂಜರ ಶಿವರಾಂ ಎಂದೇ ಗುರುತಿಸಿಕೊಂಡಿದ್ದ, ಸುಮಾರು ಆರು ದಶಕಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಹಿರಿಯ ನಟ ಶಿವರಾಂ ಇಂದು (ಶನಿವಾರ) ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶನಿವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮಧಯಾಹ್ನ ನಮ್ಮನ್ನಗಲಿದ್ದಾರೆ. … Continued

ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ನಟ ಶಿವರಾಂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಂತರ ಅಂತ್ಯಕ್ರಿಯೆ

ಬೆಂಗಳೂರು: ನಾಳೆ ಭಾನುವಾರ, ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮೊದಲು ಭಾನುವಾರ (ನಾಳೆ) ರವೀಂದ್ರ ಕಲಾಕ್ಷೇತ್ರದಲ್ಲಿ 2 ಗಂಟೆಗಳ ಕಾಲ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಚಿವ ಆರ್‌.ಅಶೋಕ ಈ ಮಾಹಿತಿ ನೀಡಿದ್ದಾರೆ. ಚಿತ್ರರಂಗದ … Continued

ತಲ್ವಾರ್‌ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ

ಮಂಗಳೂರು: ಶುಕ್ರವಾರ ಮಂಗಳೂರು ಹೊರವಲಯದ ಬಂಗ್ರಕುಳೂರಿನಲ್ಲಿ ಮಾರಾಕಾಯುಧಗಳನ್ನು ತೋರಿಸಿ ಮೂರು ದನಗಳನ್ನು ಕದ್ದಯೊಯ್ದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಕಾವೂರು ಪೊಲೀಸರು ಆರೊಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ಉಳ್ಳಾಲದ ಮಹಮ್ಮದ್ ಸಲೀಂ (32). ಮಹಮದ್ ತಂಜಿಲ್(25), ಮಹಮದ್ ಇಕ್ಬಾಲ್( 23)ಎಂಬವರು ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಬಂಗ್ರಕುಳೂರು ಬಳಿಯ ಮನೆಗಳ … Continued

ಫಲಿಸದ ಚಿಕಿತ್ಸೆ- ಕನ್ನಡ ಚಿತ್ರ ರಂಗದ ಹಿರಿಯ ನಟ ಶಿವರಾಂ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್​.ಶಿವರಾಂ ಶನಿವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮನೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು ಬೆಂಗಳೂರಿನ ವಿದ್ಯಾಪೀಠ ಬಳಿ ಇರುವ ಪ್ರಶಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಚಲನಚಿತ್ರ, ಕಿರುತೆರೆ ಸೇರಿದಂತೆ ಹಲವಾರು ಚಲನಚಿತ್ರ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಅವರಿಗೆ … Continued

ಓಮಿಕ್ರಾನ್ ಗಂಭೀರ ಸ್ವರೂಪದ ಸೋಂಕು ಅಲ್ಲ: ತಮ್ಮ ಅನುಭವ ಹಂಚಿಕೊಂಡ ಮೊದಲ ಸೋಂಕಿತ ಬೆಂಗಳೂರಿನ ವೈದ್ಯರು

ಬೆಂಗಳೂರು: ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಬಗ್ಗೆ ಜನರು ಆತಂಕ ಪಡಬೇಕಾಗಿಲ್ಲ ಎಂದು ಓಮಿಕ್ರಾನ್ ಸೋಂಕಿತ ಬೆಂಗಳೂರಿನ ವೈದ್ಯರು ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ. ಭಾರತದ ಮೊದಲ ಇಬ್ಬರು ಓಮಿಕ್ರಾನ್ ಸೋಂಕಿತರಲ್ಲಿ ಒಬ್ಬರಾದ ಅವರು ಯಾವುದೇ ಪ್ರಯಾಣ ಇತಿಹಾಸ ಇಲ್ಲದ ಬೆಂಗಳೂರಿನ 46 ವರ್ಷದ ವೈದ್ಯರು ಈಗ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಈವರೆಗೂ ತಮ್ಮಲ್ಲಿ ಯಾವುದೇ … Continued

ಉತ್ತಮ ಚೇತರಿಕೆಕಂಡ ಓಮಿಕ್ರಾನ್‌ ಸೋಂಕಿತ ಬೆಂಗಳೂರಿನ ವೈದ್ಯರ ಆರೋಗ್ಯ

ಬೆಂಗಳೂರು: ಭಾರತದಲ್ಲಿ ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರದೊಂದಿಗೆ ಪತ್ತೆಯಾದ ಮೊದಲ ವ್ಯಕ್ತಿಗಳಲ್ಲಿ ಒಬ್ಬರಾದ ಬೆಂಗಳೂರು ಮೂಲದ ವೈದ್ಯರು ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅರಿವಳಿಕೆ ತಜ್ಞರ ಪ್ರಾಥಮಿಕ ಸಂಪರ್ಕಗಳಾದ ಅವರ ಪತ್ನಿ, ಅವರ ಮಗಳು ಮತ್ತು ನೇತ್ರ ತಜ್ಞರೂ ಆಗಿರುವ ಇನ್ನೊಬ್ಬ ವೈದ್ಯರು ಸಹ ಕೋವಿಡ್‌-19 ಸೋಂಕಿಗೆ ಒಳಗಾಗಿದ್ದು, ಅವರು ಸಹ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ … Continued

ಓಮಿಕ್ರಾನ್‌ ಪೀಡಿತ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ನಂತರ ನಾಪತ್ತೆಯಾಗಿದ್ದ 10 ಪ್ರಯಾಣಿಕರಲ್ಲಿ 9 ಮಂದಿ ಪತ್ತೆ

ಬೆಂಗಳೂರು: ಓಮಿಕ್ರಾನ್‌ ಪೀಡಿತ ದೇಶ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿದ ನಂತರ ನಾಪತ್ತೆಯಾಗಿದ್ದ 10 ಪ್ರಯಾಣಿಕರ ಪೈಕಿ ಇಂದು 9 ಮಂದಿ ಪತ್ತೆಯಾಗಿದ್ದಾರೆ ಎಂದು ತಿಳಿಸಲಾಗಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷ ವಯಸ್ಸಿನ ವ್ಯಕ್ತಿಗೆ ಓಮಿಕ್ರಾನ್‌ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅದೇ ವಿಮಾನದಲ್ಲಿ 57 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದರು. ಅವರಲ್ಲಿ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. … Continued

ಪಂಚರ್‌ ಆಗಿ ನಿಂತಿದ್ದ ಲಾರಿಗೆ ಟ್ಯಾಂಕರ್‌ ಡಿಕ್ಕಿ: ನಾಲ್ವರ ಸಾವು

ಚಿತ್ರದುರ್ಗ: ಪಂಚರ್‌ ಆಗಿ ನಿಂತಿದ್ದ ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು  ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಈರುಳ್ಳಿ ಲಾರಿಗೆ ಪಂಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಸಂಜಯ್, ರೋಣ ಮೂಲದ … Continued

ಜವಾದ್‌ ಚಂಡ ಮಾರುತ ಪ್ರಭಾವ: ಕರ್ನಾಟಕದ ಕೆಲಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ರಾಜ್ಯದ ಕೆಲವು ಭಾಗದಲ್ಲಿ ಮುಂದಿನ ಎರಡು ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ಹಿನ್ನೆಲೆ ಕರ್ನಾಟಕದ … Continued

ಇನ್ಮುಂದೆ ಮಾಸ್ಕ್ ಧರಿಸದಿದ್ದರೆ ಬೀಳುತ್ತೆ ದಂಡ..! ನಗರ ಪ್ರದೇಶದಲ್ಲಿ 250, ಹಳ್ಳಿಗಳಲ್ಲಿ 100 ರೂ. ಫಿಕ್ಸ್

ಬೆಂಗಳೂರು: ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗುತ್ತಿದ್ದಂತೆ ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಿದೆ. ಈಗ ಓಮಿಕ್ರಾನ್ ನಿಯಂತ್ರಣ ಮಾಡಲು ಮತ್ತೆ ಮಾರ್ಗಸೂಚಿಗಳನ್ನು ಜಾರಿ ಮಾಡಲು ನಿರ್ಧರಿಸಿದ್ದು, ದಂಡ ಪ್ರಯೋಗಕ್ಕೆ ಮತ್ತೆ ಜಾರಿಗೆ ತರಲು ಚಿಂತಿಸಿದ್ದು, ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಇದ್ದರೆ 250 ರೂ. ಮತ್ತು … Continued