ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಉಲ್ಬಣ: ಇಂದು ಸಂಜೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಧಾರವಾಡ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ‌ ಶಾಲೆಗಳಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಇಂದು (ಶನಿವಾರ) ಸಂಜೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಕೋವಿಡ್ ತಜ್ಞರು ಇರುತ್ತಾರೆ. ಹೊಸ ತಳಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಸಭೆಯಲ್ಲಿ ಚರ್ಚೆಯಾದ ಬಳಿಕ ಕೈಗೊಳ್ಳುವ … Continued

ಧಾರವಾಡ: ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಮತ್ತೆ77 ಜನರಲ್ಲಿ ಕೊರೊನಾ ಪತ್ತೆ, ಮೂರು ದಿನಗಳಲ್ಲಿ 281 ಜನರಿಗೆ ಸೋಂಕು..!

ಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು ಇಂದು ಮತ್ತೆ 77 ಜನರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅಲ್ಲದೆ 1822 ಜನರ ತಪಾಸಣಾ ವರದಿಗಳು ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ … Continued

ಧಾರವಾಡ: ಎಸ್‌ಡಿಎಂ ಕಾಲೇಜಿನಲ್ಲಿ ಮತ್ತೆ 22 ಜನರಿಗೆ ಕೊರೊನಾ ಸೋಂಕು, ಎರಡು ದಿನಗಳಲ್ಲಿ 204 ಜನರಿಗೆ ಸೋಂಕು..!

ಧಾರವಾಡ: ಸತ್ತೂರಿನ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಸಂಜೆ ವೇಳೆಗೆ ಮತ್ತಷ್ಟಿ ಕೊರಿನಾ ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಅವರು, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಮಾಹಿತಿ ನೀಡಿದ್ದು, ಇಂದು (ಶುಕ್ರವಾರ) ಸಂಜೆ ವೇಳೆ 22 ಕೋವಿಡ್ ಪ್ರಕರಣಗಳು ದೃಢವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕಳೆದ ನಿನ್ನೆ (ಗುರವಾರ) 66 ಪ್ರಕರಣಗಳು … Continued

40% ಕಮಿಷನ್​ ಬಗ್ಗೆ ಗುತ್ತಿಗೆದಾರರ ಆರೋಪ: ತನಿಖೆಗೆ ಮುಖ್ಯ ಕಾರ್ಯದರ್ಶಿ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಶೇ 40ರಷ್ಟು ಕಮಿಷನ್ ದಂಧೆ ಇದೆ ಎಂಬ ಗುತ್ತಿಗೆದಾರರ ಆರೋಪ‌ದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ರವಿಕುಮಾರ್​ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿ​ಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದ ಮೇರೆಗೆ ಈ​ ಸೂಚನೆ ನೀಡಲಾಗಿದೆ ಎಂದು … Continued

ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ : ವೈದ್ಯಾಧಿಕಾರಿ ಡಾ.ರತ್ನಾಕರ್ ವಶಕ್ಕೆ

ಮಂಗಳೂರು: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಾಧಿಕಾರಿ ಡಾ. ರತ್ನಾಕರ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಡಾ. ರತ್ನಾಕರ್ ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿತ್ತು. ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ … Continued

ಕನ್ನಡ ಗಡಿತಿಲಕ ಪ್ರಶಸ್ತಿಗೆ ವಚನ ಅಧ್ಯಯನ ಕೇಂದ್ರ, ಸರಜೂ ಕಾಟ್ಕರಗೆ ಪ್ರಶಸ್ತಿ

ಬೆಳಗಾವಿ : ಬಿ.ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ಕನ್ನಡ ಗಡಿತಿಲಕ ಪ್ರಶಸ್ತಿಗೆ ಇಲ್ಲಿಯ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಅಂಗಸಂಸ್ಥೆಯಾದ ವಚನ ಅಧ್ಯಯನ ಕೇಂದ್ರ ಹಾಗೂ 2020ನೇ ಸಾಲಿನ ಪ್ರಶಸ್ತಿಗೆ ಗಡಿನಾಡಿನ ಕನ್ನಡ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಿರಿಯ ಸಾಹಿತಿ ಡಾ. ಸರಜೂ ಕಾಟ್ಕರ್ ಅವರು ಆಯ್ಕೆಯಾಗಿದ್ದಾರೆ . ಡಿಸೆಂಬರ್ … Continued

ಹೊಸ ತಳಿಗಳ ಕೊರೊನಾ ಪ್ರಕರಣಗಳು ಪತ್ತೆ: ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸೂಚನೆ

ಬೆಂಗಳೂರು: ಕೊರೊನಾ ವೈರಸ್​ನ B.1.1.529 ಹೊಸ ತಳಿಯ ಪ್ರಕರಣಗಳು ವಿದೇಶಗಳಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಹೊಸ ತಳಿ ವೇಗವಾಗಿ ಹರಡಲಿದೆ ಎಂದು ತಜ್ಞರಿಂದ ಎಚ್ಚರಿಕೆ ಹಾಗೂ ವ್ಯಾಕ್ಸಿನ್ ಪ್ರೊಟೆಕ್ಷನ್ ಮೀರಿ ಸೋಂಕು ತೀವ್ರತೆ ಬಗ್ಗೆ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಎಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ … Continued

ಡಿಸೆಂಬರ್ ೪-೫ ರಂದು ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ಹೊನ್ನಾವರ: ತಾಲೂಕಿನ ಗುಣವಂತೆಯಯಲ್ಲಿ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಆಶ್ರಯದಲ್ಲಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಡಿಸೆಂಬರ್ ೪ ಮತ್ತು ೫ ರಂದು ನಡೆಯಲಿದೆ ಎಂದು ಶ್ರೀಮಯ ಕಲಾಕೇಂದ್ರದ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ಹಾಗೂ ನಾಟ್ಯೋತ್ಸವ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ತಿಳಿಸಿದ್ದಾರೆ. ಕೊರೊನಾ ಕಾರಣದಿಂದ ಈ ಬಾರಿ ನಾಟ್ಯೋತ್ಸವ ನಡೆಸುವುದು … Continued

ಮಂಗಳೂರು : ಮಹಿಳೆ ಸಿಬ್ಬಂದಿ ಜೊತೆ ವೈದ್ಯಾಧಿಕಾರಿ ಅಸಭ್ಯ ವರ್ತನೆ ;ವಿಡಿಯೋ ವೈರಲ್

ಮಂಗಳೂರು : ವೈದ್ಯಾಧಿಕಾರಿಯಾಗಿದ್ದ ಡಾ. ರತ್ನಾಕರ್ ಅವರು ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ತೋರಿದ ವಿಡಿಯೋಗಳು ಈಗ ವೈರಲ್ ಆಗುತ್ತಿವೆ. ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿಡಾ.ರತ್ನಾಕರ್ ವಿರುದ್ಧ ಕೆಲ ತಿಂಗಳ ಹಿಂದೆ ದೂರು ಬಂದಿದ್ದು ಈ ಬಗ್ಗೆ ಆರೋಗ್ಯ ಇಲಾಖೆಯ ಆಂತರಿಕ ಸಮಿತಿ ಹಾಗೂ ಜಿಲ್ಲಾ ಮಟ್ಟದ ದೂರು ಸಮಿತಿಯಿಂದಲೂ … Continued

ಹೊಳೆಯಲ್ಲಿ ಈಜಲು ಹೋಗಿ ಮೂವರು ವಿದ್ಯಾರ್ಥಿಗಳು ನೀರುಪಾಲು

ಹೆಬ್ರಿ : ಶಿವಪುರ ಗ್ರಾಮದ ಭಟ್ರಾಡಿ ಹೊಳೆಗೆ ಈಜಲು ಹೋದ ವಿದ್ಯಾರ್ಥಿಗಳಲ್ಲಿ ಮೂವರು ನೀರುಪಾಲದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದ ಬಗ್ಗೆ ವರದಿಯಾಗಿದೆ. ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಮೃತರನ್ನು ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (16) ಎಂದು ಗುರುತಿಸಲಾಗಿದೆ. ಸ್ಥಳೀಯರ ಸಹಕಾರದಿಂದ … Continued