ತಾಂತ್ರಿಕ ದೋಷ : ಬೆಳಗಾವಿಯಿಂದ ಮುಂಬೈಗೆ ಹೊರಟ ವಿಮಾನ ಪುನಃ ಬೆಳಗಾವಿಯಲ್ಲೇ ಲ್ಯಾಂಡಿಂಗ್‌…!

ಬೆಳಗಾವಿ : ಶನಿವಾರ ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವೇಸ್ ವಿಮಾನ ಪ್ರಯಾಣ ಆರಂಭಿಸಿದ ನಂತರ ತಾಂತ್ರಿಕ ದೋಷದಿಂದಾಗಿ ಮುಂಬೈನಲ್ಲಿ ಲ್ಯಾಂಡ್‌ ಆಗುವ ಬದಲು ಪುನಃ ಬೆಳಗಾವಿ ನಿಲ್ದಾಣಕ್ಕೆ ಬಂದು ಇಳಿದ ಘಟನೆ ನಡೆದಿರುವುದು ವರದಿಯಾಗಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ … Continued

ಹಿರಿಯ ಹಾರ್ಮೊನಿಯಂ ವಾದಕ, ಶತಾಯುಷಿ ಶ್ರೀಕೃಷ್ಣರಾವ್‌ ಕಲ್ಗುಂಡಿಕೊಪ್ಪ ನಿಧನ

ಶಿರಸಿ : ಉತ್ತರಕನ್ನಡ ಜಿಲ್ಲೆಯ ಹಿರಿಯ ಹಾರ್ಮೊನಿಯಂ ವಾದಕ, ಅತ್ಯುತ್ತಮ ಕೃಷಿಕ ಹಾಗೂ ಶತಾಯುಷಿ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ (100) ಅವರು, ಶನಿವಾರ (ಆಗಸ್ಟ್‌ 16) ಬೆಳಗಿನ ಜಾವ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿರಸಿ ತಾಲೂಕಿನ ಸುಗಾವಿ ಗ್ರಾಮದ ಕಲ್ಗೊಂಡಿಕೊಪ್ಪದ ನಿವಾಸಿಯಾಗಿದ್ದ ಮೃತ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ ಅವರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರು … Continued

ಯಲ್ಲಾಪುರ | ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ; ಸ್ಥಳದಲ್ಲೇ ಮೂವರು ಸಾವು, 7 ಜನರಿಗೆ ಗಂಭೀರ ಗಾಯ

ಯಲ್ಲಾಪುರ : ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ (KSRTC bus) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾಗಿ, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ (ಆ.15) ಮಧ್ಯರಾತ್ರಿ ಈ ಅಪಘಾತ ನಡೆದಿದೆ ಎನ್ನಲಾಗಿದ್ದು, ಓವರ್​ಟೇಕ್​ ಮಾಡುವ ಸಂದರ್ಭದಲ್ಲಿ ಬಸ್ … Continued

ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ : ‘ಸ್ಫೋಟಕʼ ಹೇಳಿಕೆ ನೀಡಿದ ಕೆಎನ್ ರಾಜಣ್ಣ

ತುಮಕೂರು: ನನ್ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್‌. ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಧುಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ, ಮುಂದೆ ಕಾಲ ಬಂದೇ ಬರುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ … Continued

ವೀಡಿಯೊ..| ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಫಾರಿ ವೇಳೆ ಜೀಪು ಬೆನ್ನಟ್ಟಿ ಬಾಲಕನಿಗೆ ಪರಚಿದ ಚಿರತೆ….!

ಬೆಂಗಳೂರು : ಬನ್ನೇರುಘಟ್ಟದ ಜೈವಿಕ ಉದ್ಯಾನವನದ ಸಫಾರಿ ವೇಳೆ ಚಿರತೆಯೊಂದು ಬಾಲಕನ ಮೇಲೆ ದಾಳಿ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶುಕ್ರವಾರ ಸಫಾರಿ ಮಾಡುತ್ತಿದ್ದಾಗ ಚಿರತೆಯೊಂದು ದಾಳಿ ಮಾಡಲು ಯತ್ನಿಸಿದ್ದು, 13 ವರ್ಷದ ಬಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಬೊಮ್ಮಸಂದ್ರ ನಿವಾಸಿ 13 ವರ್ಷದ ಸುಹಾಸ ಎಂಬ ಬಾಲಕ ಮಧ್ಯಾಹ್ನ ತನ್ನ ತಂದೆ-ತಾಯಿ … Continued

ಶಾಸಕ ಸತೀಶ ಸೈಲ್ ಮನೆ ಮೇಲೆ ಇಡಿ ದಾಳಿ ವೇಳೆ ಕೋಟಿಗೂ ಹೆಚ್ಚು ನಗದು, ಕೆಜಿಗಟ್ಟಲೆ ಚಿನ್ನ ಜಪ್ತಿ

ಕಾರವಾರ: ಬೇಲೇಕೇರಿ ಬಂದರಿನಿಂದ ಕಬ್ಬಿಣದ ಅದಿರು ಕಳ್ಳ ಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ್ದ ವೇಳೆ ಅಪಾರ ನಗದು, ಚಿನ್ನ ಮತ್ತು ಬ್ಯಾಂಕ್ ಠೇವಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ತಿಳಿಸಿದೆ. ಈ ಕುರಿತು … Continued

ಶಿರಸಿ | ಕೂಲಿ ಹಣ ಕೊಡಲಿಲ್ಲವೆಂದು ಸಲಾಕೆಯಿಂದ ಹೊಡೆದು ವ್ಯಕ್ತಿಯ ಕೊಲೆ

ಶಿರಸಿ : ಕೂಲಿ ಹಣ ನೀಡಿಲ್ಲ ಎಂದು ಸಲಾಕೆಯಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಮಾಟಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಮಾಟಗೇರಿಯ ರವೀಶ ಗಣಪತಿ ಚನ್ನಯ್ಯ (40) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಮಾಟಗೇರಿಯ ಮಂಜುನಾಥ ಬಸ್ಯಾ ಚನ್ನಯ್ಯ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದು, ಪೊಲೀಸರು ಈತನನ್ನು … Continued

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಶಿವೈಕ್ಯ

ಕಲಬುರಗಿ: ನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಸಂತ, ಜ್ಞಾನ ದಾಸೋಹಿ ಹಾಗೂ ಕಲಬುರಗಿಯ (Kalaburagi) ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಶಿವೈಕ್ಯರಾಗಿದ್ದಾರೆ. ಶ್ರೀ ಡಾ. ಶರಣಬಸವಪ್ಪ ಅಪ್ಪ (Dr.Sharanabasappa Appa) ಗುರುವಾರ (ಆಗಸ್ಟ್‌ 14) ಶಿವೈಕ್ಯರಾದರು. ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಳೆದ ತಿಂಗಳು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯಾದ್ಯಂತ  ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಇರುವುದರಿಂದ ದೇಶದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಗಸ್ಟ್​ 19ರ ವರೆಗೂ … Continued

ಕಾರವಾರ | ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ ; ಬೈಕಿಗೆ ಪಿಕ್‌ಅಪ್‌ ಡಿಕ್ಕಿ ; ಬೈಕ್‌ ಸವಾರ ಸಾವು

ಕಾರವಾರ: ಸರಣಿ ಅಪಘಾತದಿಂದ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ (42) ಎಂಬವರು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಸದಾಶಿವಗಡದಿಂದ ಕಾರವಾರಕ್ಕೆ ಬರುತ್ತಿದ್ದ ವೇಳೆ, ದಿವೇಕರ ಕಾಲೇಜಿನ ಬಳಿ … Continued