ಕಾಂಗ್ರೆಸ್‌ನ ಜನಧ್ವನಿ ಯಾತ್ರೆ ಆರಂಭ, ೧೦೦ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲೇಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಪೂರ್ವಭಾವಿಯಾಗಿ ಬುಧವಾರದಿಂದ ಜನಧ್ವನಿ ಯಾತ್ರೆಗೆ ಚಾಲನೆ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ ದೇವನಹಳ್ಳಿಯಲ್ಲಿ ಜನಧ್ವನಿ ಯಾತ್ರೆ ಆರಂಭಗೊಂಡಿದ್ದು, ಬೆಳಿಗ್ಗೆ ಕೆಪಿಸಿಸಿ ಕಚೇರಿ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ … Continued

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ: ದೂರು ನೀಡಿದ ದಿನೇಶ್‌ ಕಲ್ಹಳ್ಳಿಗೆ ಇಂದು ನೋಟಿಸ್‌?

ಬೆಂಗಳೂರು: ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಬಯಲು ಮಾಡಿದ, ದೂರುದಾರ ದಿನೇಶ್‌ ಕಲ್ಲಹಳ್ಳಿಗೆ ಬುಧವಾರ ಸಂಜೆಯೊಳಗೆ ಕಬ್ಬನ್‌ ಪಾರ್ಕ್‌ ಪೊಲೀಸರು ನೋಟಿಸ್‌ ನೀಡಲಿದ್ದಾರೆ. ಸಂತ್ರಸ್ತೆ ಬಗ್ಗೆ ದೂರುದಾರ ದಿನೇಶ್‌ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕಬ್ಬನ್‌ ಪಾರ್ಕ್‌ ಪೊಲೀಸರು ನೋಟಿಸ್‌ ನೀಡಲಿದ್ದು, ಸಿಡಿ, ಸಂತ್ರಸ್ತೆ ಬಗ್ಗೆ ಮತ್ತಷ್ಟು ಮಾಹಿತಿ ನೀಡುವ ಕುರಿತು ಗುರುವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ … Continued

ರಮೇಶ ಜಾರಕಿಹೊಳಿ ವಿರುದ್ಧ ಗೋಕಾಕದಲ್ಲಿ ಪ್ರತಿಭಟನೆ

ಬೆಳಗಾವಿ: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಾಜ್ಯ ರಾಜಕೀಯದಲ್ಲಿ ಮಂಗಳವಾರ ಸಂಚಲನ ಮೂಡಿಸಿತ್ತು. ಅವರ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಬುಧವಾರ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಗೋಕಾಕ್‌ನಲ್ಲಿ ಪ್ರತಿಭಟನೆ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ … Continued

ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಬಂದ್‌ ಎಚ್ಚರಿಕೆ

ಗೋಕಾಕ್ : ರಾಸಲೀಲೆ ಸಿಡಿ ಬಯಲು ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಬಸವೇಶ್ವರ ವೃತ್ತದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು … Continued

ರಾಸಲೀಲೆ ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಬುಧವಾರ ರಾಜೀನಾಮೆ ನೀಡಿದ್ದಾರೆ. ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಜಾರಕಿಹೊಳಿಯಿಂದ ಈ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು … Continued

ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯದಿದ್ದರೆ ರಾಷ್ಟ್ರಪತಿಗೆ ದೂರು : ಕಾಂಗ್ರೆಸ್ ಎಚ್ಚರಿಕೆ

ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಡಬೇಕು, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು, ಇಲ್ಲದೇ ಹೋದರೆ ರಾಜ್ಯಪಾಲರು ಹಾಗೂ ರಾಷ್ಟ್ರಪತಿಯವರಿಗೆ ದೂರು ನೀಡಲಾಗುವುದು ಎಂದು ಕಾಂಗ್ರೆಸ್‌ ಎಚ್ಚರಿಸಿದೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿಂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮೇಶ್ ಜಾರಕಿಹೊಳಿ ರಾಜೀನಾಮೆ … Continued

ಪಿಚ್ಚರ್ ಅಭಿ ಬಾಕಿ ಹೈ; ರಾಸಲೀಲೆ ಸಿಡಿ ಬಗ್ಗೆ ಕಾಂಗ್ರೆಸ್‌ ಟ್ವೀಟ್‌

ಬೆಂಗಳೂರು: ಬಿಜೆಪಿಯ ಆಂತರಿಕ ಜಗಳದ ಫಲವಾಗಿ ಮೊದಲ ಒಂದು ಸಿಡಿ ಹೊರಬಿದ್ದಿದೆ ಎಂದು ಸಚಿವರ ರಾಸಲೀಲೆಯದ್ದು ಎನ್ನಲಾದ ಸಿಡಿ ಬಗ್ಗೆ ರಾಜ್ಯ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ. ಇದು ಕೇವಲ ಟ್ರೇಲರ್ “ಪಿಚ್ಚರ್ ಅಭಿ ಬಾಕಿ ಹೈ ಎಂದು ಕೆಪಿಸಿಸಿ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ. ಜಾರಕಿಹೊಳಿ ಸೆಕ್ಸ್ ಸಿಡಿ ಬಯಲಾಗುತ್ತಿದ್ದಂತೆ ಅಸಮಾಧಾನಿತರು, ಅತೃಪ್ತರು ಒಳಗೊಳಗೇ ಸಂತೃಪ್ತಿಯ … Continued

ಆ ಯುವತಿ ಯಾರೆಂಬುದೇ ಗೊತ್ತಿಲ್ಲ:, ಈ ಬಗ್ಗೆ ಸಮಗ್ರ ತನಿಖೆಯಾಗಲಿ: ರಮೇಶ ಜಾರಕಿಹೊಳಿ

ಬೆಂಗಳೂರು: ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರೆಂಬುದೇ ನನಗೆ ಗೊತ್ತಿಲ್ಲ. ಇದೆಲ್ಲ ನನ್ನ ವಿರುದ್ಧ ನಡೆಸಿದ ಷಡ್ಯಂತ್ರ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ. ಜಾರಕಿಹೊಳಿ ಅವರದ್ದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣ ಕುರಿತಂತೆ ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿರುವ ಜಾರಕಿಹೊಳಿ, ನಾನು ಅತ್ಯಂತ … Continued

ಮನೆಯಲ್ಲಿ ಲಸಿಕೆ ಹಾಕಿಸಿಕೊಂಡರೆ ಏನು ತಪ್ಪು?

ಕರ್ನಾಟಕದ ನಿವಾಸದಲ್ಲಿ ತಮ್ಮ ಮೊದಲ ಸಿಒವಿಐಡಿ -10 ವ್ಯಾಕ್ಸಿನೇಷನ್ ಡೋಸ್ ತೆಗೆದುಕೊಂಡ ಕರ್ನಾಟಕ ಸಚಿವ ಬಿ.ಸಿ.ಪಾಟೀಲ್ ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯವನ್ನು ಕೆರಳಿಸಿದ್ದಾರೆ. ಆರೋಗ್ಯ ಸಚಿವಾಲಯವು ನಿಗದಿ ಪಡಿಸಿದ ನಿಯಮಾವಳಿಗಳ ಪ್ರಕಾರ, ಒಬ್ಬ ವ್ಯಕ್ತಿಯು ಆಯಾ ವ್ಯಾಕ್ಸಿನೇಷನ್ ಕೇಂದ್ರಕ್ಕೆ ಭೇಟಿ ನೀಡಿ ಚುಚ್ಚು ಮದ್ದು ತೆಗೆದುಕೊಳ್ಳಬೇಕು. ಆದರೆ ಶಾಸಕರು ಸಿಒವಿಐಡಿ -19 ಲಸಿಕೆಯ ಮೊದಲ ಡೋಸ್‌ … Continued

ಅಖಂಡ ವಿರುದ್ಧ ಡಿಕೆಶಿ ಶಿಸ್ತುಕ್ರಮದ ಎಚ್ಚರಿಕೆ

ಬೆಂಗಳೂರು: ಡಿಜೆ ಹಳ್ಳಿ ಕೆಜೆಹಳ್ಳಿ ಪ್ರಕರಣ ಕುರಿತು ತಮ್ಮ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ. ಡಿಜೆಹಳ್ಳಿ-ಕೆಜೆಹಳ್ಳಿ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸದೇ ಡಿಕೆಶಿ ತಮಗೆ ಅನ್ಯಾಯ ಮಾಡುತ್ತಿದ್ದು, ಸಿದ್ದರಾಮಯ್ಯ ಜೊತೆಗೂಡಿ ದೆಹಲಿಯ ಹೈಕಮಾಂಡ್ … Continued