ಬೆಂಗಳೂರು-ಮಂಡ್ಯದಲ್ಲಿ ಭೂಮಿ ಕಂಪಿಸಿದ ಅನುಭವ; ಭಾರೀ ಶಬ್ದ

ಬೆಂಗಳೂರು: ಬೆಂಗಳೂರು ಹಾಗೂ ಮಂಡ್ಯದ ಹಲವೆಡೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇಂದು (ಶುಕ್ರವಾರ) ಮಧ್ಯಾಹ್ನ 12 : 15ರ ಸುಮಾರಿಗೆ 15 ನಿಮಿಷಗಳ ಅಂತರದಲ್ಲಿ ಎರಡು ಸಲ ಬೆಂಗಳೂರಿನ ರಾಜರಾಜೇಶ್ವರಿ ನಗರ ನಗರ, ನಾಗರಭಾವಿ, ಕೆಂಗೇರಿ, ಯಶವಂತಪುರ, ಕಗ್ಗಲಿಪುರ, ಹೆಗ್ಗಲಪುರ, ಜ್ಞಾನಭಾರತಿ, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ದೊಡ್ಡ ಶಬ್ದ ಉಂಟಾಗಿದೆ. ಮೊದಲ ಸಲ … Continued

ಧಾರವಾಡ: ಎಸ್‌ ಡಿಎಂ ಮೆಡಿಕಲ್ ಕಾಲೇಜ್‌: ಮತ್ತೆ 116 ಜನರಲ್ಲಿ ಕೋವಿಡ್ ಸೋಂಕು ದೃಢ..!

ಧಾರವಾಡ: ಸತ್ತೂರಿನ ಎಸ್ ಡಿ ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಹೆಚ್ಚಳವಾಗಿದ್ದು, ನಿನ್ನೆ (ನ.25) ಮಧ್ಯರಾತ್ರಿ ಮತ್ತೆ 116 ಜನರಲ್ಲಿ ದೃಢಪಟ್ಟಿದೆ. ಮೊದಲಿನ 66 ಸೇರಿ ಒಟ್ಟು 182 ಜನರಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದೆ. ನವೆಂಬರ್‌ 17 ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ … Continued

ಖ್ಯಾತ ವಿದ್ವಾಂಸ-ಲೇಖಕ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ಇನ್ನಿಲ್ಲ

ಬೆಂಗಳೂರು: ಖ್ಯಾತ ಲೇಖಕ ಹಾಗೂ ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ (88) ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ತಮ್ಮ ಬೆಂಗಳೂರಿನ ನಿವಾಸದಲ್ಲಿ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ಅವರು ಕೊನೆಯುಸಿರೆಳೆದಿದ್ದಾರೆ. ಕೆ. ಎಸ್. ನಾರಾಯಣಾಚಾರ್ಯ ಅವರು, 1933ರಲ್ಲಿ ಕನಕಪುರದ ಶ್ರೀ ವೈಷ್ಣವ ವೈದಿಕ ಕುಟುಂಬದಲ್ಲಿ ಜನಿಸಿದರು. ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಇವರು … Continued

ಅತ್ಯಾಚಾರ ಸಂತ್ರಸ್ತೆ ಬಲವಂತದ ಗರ್ಭ ಹೊರಬೇಕಿಲ್ಲ: ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ

ಬೆಂಗಳೂರು: ಸಂವಿಧಾನದ 21ನೇ ವಿಧಿ ಅಡಿಯಲ್ಲಿ ಸಂತಾನೋತ್ಪತ್ತಿ ಆಯ್ಕೆ ಚಲಾಯಿಸುವ ಹಕ್ಕು ಮಹಿಳೆಯ “ವೈಯಕ್ತಿಕ ಸ್ವಾತಂತ್ರ್ಯ”ದ ಭಾಗವಾಗಿದೆ. ತನ್ನ ದೈಹಿಕ ಸಮಗ್ರತೆ ರಕ್ಷಿಸಿಕೊಳ್ಳುವ ಪವಿತ್ರ ಹಕ್ಕನ್ನು ಅವರು ಹೊಂದಿರುತ್ತಾರೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಈಚೆಗೆ ಹೇಳಿದೆ. ಅತ್ಯಾಚಾರಕ್ಕೆ ಒಳಗಾಗಿ ಗರ್ಭ ಧರಿಸಿದ್ದ 16 ವರ್ಷದ ಅಪ್ರಾಪ್ತೆಯು ಗರ್ಭಪಾತಕ್ಕೆ ಮನವಿ ಮಾಡಿದ್ದರು. ವೈದ್ಯಕೀಯ ಗರ್ಭಪಾತ … Continued

ತಪ್ಪಾಗಿದೆ, ಯಾವುದೇ ಧರ್ಮ, ಸಮಾಜ ಜಾತಿ ನಿಂದಿಸುವ ಉದ್ದೇಶ ನನ್ನದಲ್ಲ: ಹಂಸಲೇಖ

ಬೆಂಗಳೂರು: ನನ್ನ ಹೇಳಿಕೆಯಿಂದ ತಪ್ಪಾಗಿದೆ. ಯಾವುದೇ ಧರ್ಮ, ಸಮಾಜ ನಿಂದಿಸುವ ಉದ್ದೇಶ ನನ್ನದಲ್ಲ. ಈ ಘಟನೆಯಿಂದ ನನಗೆ ತುಂಬಾ ನೋವಾಗಿದೆ ಎಂದು ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರವಾದ ರೀತಿಯಲ್ಲಿ ಮಾತನಾಡಿದ್ದ ಹಂಸಲೇಖ ಬಸವನಗುಡಿ ಠಾಣೆಗೆ ಹಾಜರಾಗಿ ಹೇಳಿದ್ದಾರೆ. ಎರಡು ಬಾರಿ ಬಾರಿ ನೋಟಿಸ್ ಕೊಟ್ಟ ನಂತರ ಗುರುವಾರ ತಮ್ಮ ವಕೀಲ ದ್ವಾರಕನಾಥ ಅವರೊಂದಿಗೆ ಬಸವನಗುಡಿ ಪೊಲೀಸ್ … Continued

ಕಾರವಾರ: ತಂದೆಗೆ ಅಂತ್ಯ ಸಂಸ್ಕಾರ ನೆರವೇರಿಸಿದ ಮಗಳು..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಂದೆಯ ಚಿತೆಗೆ ಮಗಳೇ ಅಗ್ನಿ ಸ್ಪರ್ಶ ಮಾಡಿದ ವಿದ್ಯಮಾನ ವರದಿಯಾಗಿದೆ. ಕಾರವಾರ ತಾಲೂಕಿನಲ್ಲಿ ಮಹಿಳೆಯೋರ್ವಳು ತನ್ನ ತಂದೆಗೇ ತಾನೇ ಅಂತ್ಯಕ್ರಿಯೆ ವಿಧಿವಿಧಾನ ನೆರವೇರಿಸಿ ಅಗ್ನಿಸ್ಪರ್ಶ ಮಾಡಿ ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ತಾಲೂಕಿನ ಮುಡಗೇರಿಯಲ್ಲಿ ಇದು ನಡೆದಿದ್ದು, . ಹಿಂದೂ ಧಾರ್ಮಿಕ ವಿಧಿ-ವಿಧಾನದಂತೆ ತಂದೆಗೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಹಿಂದೂ ಧರ್ಮದಲ್ಲಿ … Continued

ಸಚಿವ ಗೋವಿಂದ ಕಾರಜೋಳ ಕಾರು ಡಿಕಿ: ಬೈಕ್‌ ಸವಾರನಿಗೆ ಗಾಯ

ಬೆಂಗಳೂರು: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು (ಗುರುವಾರ) ನಡೆದಿದೆ. ನೆಲಮಂಗಲದ ಮಹಿಮಾಪುರ ಗೇಟ್ ಬಳಿ ಅಪಘಾತವಾಗಿದ್ದು ಬಳಿ ಸಚಿವ ಗೋವಿಂದ ಕಾರಜೋಳ ಅವರ ಕಾರು ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವರ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್‌ ಸವಾರನಿಗೆ ಗುದ್ದಿದ ಪರಿಣಾಮ ಬೈಕ್‌ ಸವಾರನ ಕಾಲು ಮುರಿದಿದೆ … Continued

ಖ್ಯಾತ ಗಾಯಕಿ ತಂದೆ ಶವ ಬೆಂಗಳೂರು ರೈಲ್ವೆ ಹಳಿ ಮೇಲೆ ಪತ್ತೆ; ಅನುಮಾನ ತಂದ ಸಾವು

ಬೆಂಗಳೂರು: ಖ್ಯಾತ ಗಾಯಕಿ ಹರಿಣಿ ಅವರ ತಂದೆ ಎ.ಕೆ. ರಾವ್​ ಅವರ ಮೃತದೇಹ ಬೆಂಗಳೂರಿನ ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ. ಈ ಸಂಬಂಧ ಹರಿಣಿ ಕುಟುಂಬದವರು ದೂರು ನೀಡಿದ್ದಾರೆ. ಸಾವು ಅನುಮಾನಕ್ಕೆ ಕಾರಣವಾಗಿದೆ. ಯಲಹಂಕ ರೈಲ್ವೆ ನಿಲ್ದಾಣದಿಂದ ಅರ್ಧ ಕಿಲೋಮೀಟರ್​ ದೂರದಲ್ಲಿ ಎ.ಕೆ. ರಾವ್​ ಅವರ ಮೃತದೇಹ ಸಿಕ್ಕಿದ್ದು, ನವೆಂಬರ್‌ 22ರ ರಾತ್ರಿಯೇ ಈ ಘಟನೆ … Continued

ನೂಲು, ಜವಳಿ, ಬಟ್ಟೆ ಮೇಲೆ ಶೇ ೧೪೦ ಹೆಚ್ಚುವರಿ ತೆರಿಗೆ ಹೇರಿದ ಕೇಂದ್ರ ಸರ್ಕಾರ: ತಕ್ಷಣವೇ ಹಿಂಪಡೆಯಲು ವಸಂತ ಲದವಾ ಆಗ್ರಹ

ಹುಬ್ಬಳ್ಳಿ: ಕೇಂದ್ರದ ಬಿಜೆಪಿ ಸರಕಾರ ಜನವರಿ ೨೦೨೨ರಿಂದ ನೂಲು, ಜವಳಿ, ನೇಯ್ದ ಬಟ್ಟೆ, ಸಿದ್ಧ ಉಡುಪು, ಕಂಬಳಿ, ಹೊದಿಕೆ, ವಸ್ತ್ರ , ಕರವಸ್ತ್ರಗಳು ಇತ್ಯಾದಿಗಳ ಮೇಲೆ ಶೇ ೧೪೦ರಷ್ಟು ಹೆಚ್ಚುವರಿ ತೆರಿಗೆ ವಿಧಿಸಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ತಕ್ಷಣವೇ ಹೆಚ್ಚುವರಿ ತೆರಿಗೆ ಕ್ರಮ ಕೈಬಿಡಬೇಕೆಂದು ಕಾಂಗ್ರೆಸ್‌ ಪಕ್ಷದ ವಕ್ತಾರ ವಸಂತ ಲದವಾ ಒತ್ತಾಯಿಸಿದ್ದಾರೆ. ಈ … Continued

ಬೆಂಗಳೂರು: ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಹಂಸಲೇಖ

ಬೆಂಗಳೂರು: ಪೇಜಾವರ ಅಧೋಕ್ಷಜ ಮಠದ ಹಿಂದಿನ ಮಠಾಧೀಶರಾದ ದಿವಂಗತ ವಿಶ್ವೇಶತೀರ್ಥರ ಬಗ್ಗೆ ಹಂಸಲೇಖ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರಿನ ವಿಚಾರಣೆಗೆ ಸಂಗೀತ ನಿರ್ದೇಶಕ ನಗರದ ಬಸವನಗುಡಿ ಠಾಣೆಗೆ ಗುರುವಾರ ಹಾಜರಾದರು. ವಿ ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಹಂಸಲೇಖ ಸಾವಧಾನವಾಗಿ ಉತ್ತರಿಸಿದರು. ಈ ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಿರುವ ತನಿಖಾಧಿಕಾರಿಗಳು ಅವಶ್ಯಕತೆ ಇದ್ದರೆ ಮತ್ತೆ … Continued