ನಿರೀಕ್ಷೆಯಂತೆ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ

ಬೆಂಗಳೂರು: ವಿಧಾನಪರಿಷತ್‍ನ ನೂತನ ಸಭಾಪತಿಯಾಗಿ ಜೆಡಿಎಸ್‍ನ ಬಸವರಾಜಹೊರಟ್ಟಿ ಮಂಗಳವಾರ ಆಯ್ಕೆಯಾದರು. ಕಾಂಗ್ರೆಸ್ ಸದಸ್ಯರು ಧರಣಿ, ಗದ್ದಲ ನಡುವೆ ಹೊಟ್ಟಿ ಅವರು ಆಯ್ಕೆಯಾದರು. ಸುಮಾರು ೭ ಬಾರಿ ನಿರಂತರವಾಗಿ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿತ್ತಿರುವ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಅವರು ಎರಡನೇ ಅವಧಿಗೆ ವಿಧಾನಪರಿಷತ್ ಸಭಾಪತಿ ಹುದ್ದೆ ಅಲಂಕರಿಸಿದ್ದಾರೆ. ದೇಶದ ವಿಧಾನಪರಿಷತ್‍ನ ಇತಿಹಾಸದಲ್ಲೇ ಹೊರಟ್ಟಿ ಅವರು … Continued

ಪರಿಷತ್ತಿನಲ್ಲೂ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ತಿನಲ್ಲಿ ಸೋಮವಾರ ಅಂಗೀಕಾರ ದೊರೆಯಿತು. ಕಾಯ್ದೆ ಮಂಡನೆ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ಗದ್ದಲ ಮಾಡಿದರೂ ಕೊನೆಗೆ ಧ್ವನಿ ಮತಕ್ಕೆ ಹಾಕಿದಾಗ ಅಂಗೀಕಾರ ದೊರೆಯಿತು. ಮಸೂದೆ ಮಂಡಿಸಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಕಾಯ್ದೆಗೆ ಸದನ ಒಪ್ಪಿಗೆ ನೀಡುವಂತೆ ಮನವಿ … Continued

ಬಿಬಿಎಂಪಿ ಸಹಾಯಕ ನಿರ್ದೇಶಕರ ಮನೆಯಲ್ಲಿ ಬಿಬಿಎಂಪಿ ಕಡತ ಪತ್ತೆ

ಬೆಂಗಳೂರು: ಬಿಬಿಎಂಪಿ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರ ಮನೆಯಲ್ಲಿ ಬಿಬಿಎಂಪಿ ನಗರಯೋಜನೆ ವಿಭಾಗಕ್ಕೆ ಸೇರಿದ 430ಕ್ಕೂ ಹೆಚ್ಚು ಕಡತಗಳು ಪತ್ತೆಯಾಗಿವೆ. ರಾಜ್ಯ ಭ್ರಷ್ಟಾಚಾರ ನಿಗ್ರಹದ ಬಲೆಗೆ ಬಿದ್ದಿರುವ ಅವರ ಮನೆಯಲ್ಲಿ ಇದಲ್ಲದೆ, 120 ಲೀಟರ್ ಮದ್ಯದ ಬಾಟಲ್‍ಗಳು ಸಹ ಪತ್ತೆಯಾಗಿವೆ. ಪ್ರಕರಣದ ತನಿಖೆಯನ್ನು ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ದೇವೇಂದ್ರಪ್ಪ ಅವರ ಮನೆಯನ್ನು ಶೋಧಿಸಿದಾಗ ವಿವಿಧ ಬ್ಯಾಂಕ್ … Continued

ಗಾಜಿಪುರ ರೈತ ಹೋರಾಟಕ್ಕೆ ಕರ್ನಾಟಕದ ೫೦ ರೈತರು

ಗಾಜಿಪುರ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರತೀಯ ಕಿಸಾನ್‌ ಯೂನಿಯನ್‌ ನಡೆಸುತ್ತಿರುವ ಚಳವಳಿಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ೫೦ ಜನ ರೈತರ ಗುಂಪು ಸೋಮವಾರ ಆಗಮಿಸಿತು. ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಹೋರಾಟಗಾರರ ಡೇರೆಗಳನ್ನು ಕರ್ನಾಟಕದ ಕೃಷಿಕರು ಸೇರಿಕೊಂಡರು. ನಾವು ಬೆಂಗಳೂರು ಹಾಗೂ ಮೈಸೂರಿನಲ್ಲಿ ರೈತ ಪರ ಹೋರಾಟದಲ್ಲಿ ಪಾಲ್ಗೊಂಡಿದ್ದೇವೆ. ಅಲ್ಲದೇ ಉತ್ತರ ಪ್ರದೇಶದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ್ದೆವೆ. … Continued

ವಿಪಕ್ಷಗಳ ಸಭಾತ್ಯಾಗದ ಮಧ್ಯೆ ಆಸ್ತಿ ತೆರಿಗೆ ವಿಧೇಯಕಕ್ಕೆ ಅಂಗೀಕಾರ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಶೇ. ೫ ರಷ್ಟು ರಿಯಾಯ್ತಿ ನೀಡುವ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರೆ ಕಾನೂನು ತಿದ್ದುಪಡಿಗಳ ವಿಧೇಯಕ-೨೦೨೧ಕ್ಕೆ ಕಾಂಗ್ರೆಸ್-ಜೆಡಿಎಸ್ ಸದಸ್ಯರು ಪರಿಷತ್‌ನಲ್ಲಿ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿದರು. ಎರಡೂ ಪಕ್ಷಗಳ ಸಭಾತ್ಯಾಗದ ನಡುವೆ ಯಾವುದೇ ಚರ್ಚೆ ಇಲ್ಲದೆ ಕರ್ನಾಟಕ ಪುರಸಭೆಗಳು ಮತ್ತು … Continued

ನೂತನ ವಿಜಯನಗರ ಜಿಲ್ಲೆಗೆ ಅಧಿಕೃತ ಮುದ್ರೆ

ಬಳ್ಳಾರಿ : ಜಿಲ್ಲೆಯ ಹಲವರ ವಿರೋಧದ ನಡುವೆಯೂ ಅಖಂಡ ಬಳ್ಳಾರಿ‌ ಜಿಲ್ಲೆಯ‌ನ್ನು ವಿಭಜನೆ ಮಾಡಿ ರಾಜ್ಯ ಸರ್ಕಾರ ಅಂತಿಮವಾಗಿ ವಿಜಯನಗರ ಜಿಲ್ಲೆ ರಚನೆಗೆ ರಾಜ್ಯ ಸರ್ಕಾರ ಸೋಮವಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ನೂತನ ಜಿಲ್ಲೆಯಲ್ಲಿ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ, ಹರಪನಹಳ್ಳಿಗಳನ್ನು ತಾಲೂಕುಗಳಾಗಿ ಸೇರ್ಪಡೆ ಮಾಡಲಾಗಿದ್ದು, ಹೊಸಪೇಟೆ ಜಿಲ್ಲಾ ಕೇಂದ್ರವಾಗಲಿದೆ. ವಿಜಯನಗರ ಜಿಲ್ಲೆ ಘೋಷಣೆ … Continued

ಪರಿಷತ್‌ ಅಧ್ಯಕ್ಷ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಗ್ಗೆ ನಾನು ಮಾತನಾಡುವುದಿಲ್ಲ. ಈಗ ನನಗೆ ಒಳ್ಳೆಯ ಅವಕಾಶ ಬಂದಿದೆ. ಪಕ್ಷದ ನಿರ್ದೇಶನದ ಮೇರೆಗೆ ನಾಮಪತ್ರ ಸಲ್ಲಿಸಿದ್ದೇನೆ ಎಂದು ಜೆಡಿಎಸ್‍ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಬಿಜೆಪಿಯ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. … Continued

ಎಸ್‌ಟಿಗೆ ಸೇರಿಸಲು ಒತ್ತಾಯಿಸಿ ಕುರುಬರ ಬಲಪ್ರದರ್ಶನ

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ರಾಜಧಾನಿಯಲ್ಲಿ ಕುರುಬ ಸಮುದಾಯದವರ ಬಲಪ್ರದರ್ಶನ ನಡೆಯಿತು. ಬೆಂಗಳೂರು ಹೊರವಲಯದ ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಸಮಾವೇಶದಲ್ಲಿ ಸಚಿವರಾದ ಕೆಎಸ್ ಈಶ್ವರಪ್ಪ, ಬೈರತಿ ಬಸವರಾಜ, ಎಂ ಟಿ ಬಿ ನಾಗರಾಜ್, ಆರ್. ಶಂಕರ್ ಸೇರಿದಂತೆ ಕಾಂಗ್ರೆಸ್ ಬಿಜೆಪಿ … Continued

ಸಾಹಿತ್ಯ ಕ್ಷೇತ್ರ ಸಮಾಜ ಪರಿವರ್ತನೆಗೆ ಪೂರಕ: ಕಾಗೇರಿ

ಸಿದ್ದಾಪುರ:ಸಾಹಿತ್ಯ ಕ್ಷೇತ್ರ ಸಮಾಜದ ಪರಿವರ್ತನೆಗೆ ಹಾಗೂ ಮೌಲ್ಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವವರ ಬಗ್ಗೆ ಯಾವತ್ತೂ ಗೌರವವಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು ಪಟ್ಟಣದ ಬಾಲಭವನದಲ್ಲಿ ನಡೆದ ಗಂಗಾಧರ ಕೊಳಗಿಯವರ ಯಾನ- ಅಲೆಮಾರಿಯ ಅನುಭವ ಕಥನ ಕೃತಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಹಿತ್ಯ … Continued

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತರಿಂದ ೧ ಕೋಟಿ ರೂ.ದೇಣಿಗೆ

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯ ಕೈಜೋಡಿಸಿದ್ದು, ಒಂದು ಕೋಟಿ ರೂ.ಗಳಿಗೂ  ಹೆಚ್ಚು ದೇಣಿಗೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ   ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ  ಶಿಕ್ಷಣ ತಜ್ಞರು, ಉದ್ಯಮಿಗಳು,ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿ ರಾಮ ಮಂದಿರ ನಿರ್ಮಾಣಕ್ಕೆ ತಮ್ಮ … Continued