ಪಂಚಮಸಾಲಿಗೆ 2ಎ ಮೀಸಲು: ವರದಿ ಬಂದ ನಂತರ ಕ್ರಮ

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಂದುಳಿದ ವರ್ಗಗಳ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಿಕೊಟ್ಟಿದ್ದಾರೆ. ಆಯೋಗದಿಂದ ಶಿಫಾರಸು ಬಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು … Continued

ಸಭಾಪತಿ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಸೀರ್ ಅಹಮ್ಮದ್ ..?

ಬೆಂಗಳೂರು: ವಿಧಾನಪರಿಷತ್‍ನ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ಫೆ.೯ರಂದು ನಡೆಯವ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಬಹುತೇಕ ನಿಚ್ಚಳವಾಗಿದೆ. ಪ್ರತಾಪ್‍ಚಂದ್ರಶೆಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಸೋಮವಾರದಿಂದ ಚುನಾವಣಾ ಪ್ರಕ್ರಿಯೆಗಳು ಆರಂಭಗೊಳ್ಳಲಿದ್ದು, ಸೋಮವಾರ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕಾಗಿದೆ. ಮಂಗಳವಾರ ನೂತನ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಬಹುತೇಕ ಸಂದರ್ಭಗಳಲ್ಲಿ ಸಭಾಪತಿಯವರನ್ನು ಅವಿರೋಧ ಆಯ್ಕೆ ಮಾಡುವ ಸಂಪ್ರದಾಯವಿದ್ದು, … Continued

ನೆಟ್‌ ಪಾಸಾದ ಗಿರಿಜನ ಹಾಡಿಯ ಯುವತಿ ಸೃಜನಾ

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಗರಹೊಳೆ ನಾಗಾಪುರ ಗಿರಿಜನ ಹಾಡಿಯ ಯುವತಿಯೊನ್ನರು ಯುಜಿಸಿ ನಡೆಸುವ ನೆಟ್‌ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದಾರೆ. ನೆಟ್‌ ಪರೀಕ್ಷೆ ಪಾಸಾದ ಮೊದಲ ಯುವತಿ ಎಂಬ ಕೀರ್ತಿಗೆ ವಿ.ಪಿ.ಸೃಜನ ಪಾತ್ರವಾಗಿದ್ದಾರೆ. ಮುಂದೆ ಐಎಎಸ್‌ ಮಾಡುವ ಗುರಿ ಈಕೆಯದು. ಹಲವು ಸವಾಲುಗಳ ಮಧ್ಯೆ ಕೂಡ ಸೃಜನ ಸಾಧನೆ ಮಾಡಿದ್ದು ವಿಶೇಷ. ೨೦೨೦ರ ಅಕ್ಟೋಬರ್‌ನಲ್ಲಿ ಸಹಾಯಕ ಪ್ರಾಧ್ಯಾಪಕರ … Continued

ನ್ಯಾಯಾಧೀಶರಿಗೆ ಕೊಲೆಬೆದರಿಕೆ: ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು ದಾಖಲು

ಬೆಂಗಳೂರು: ನ್ಯಾಯಾಧೀಶರು ಹಾಗೂ ನ್ಯಾಯವಾದಿಗಳನ್ನು ಕೊಲ್ಲುವುದಾಗಿ ಬೆದರಿಕೆಯ ಪತ್ರ ಬರೆದಿದ್ದಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯ ೭೨ರ ಹರೆಯದ ವ್ಯಕ್ತಿಯೊಬ್ಬರ ಮೇಲೆ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿದೆ. ನ್ಯಾಯಮೂರ್ತಿ ಅಭಯ ಶ್ರೀನಿವಾಸ, ಓಕಾ ಹಾಗೂ ನ್ಯಾಯಮೂರ್ತಿ ಶಂಕರ ಮಗದುಮ್‌ ಅವರನ್ನೊಳಗೊಂಡ ನ್ಯಾಯಪೀಠ, ನ್ಯಾಯಾಲದಯ ಅವಹೇಳನ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಿದೆ. ಈ ಕುರಿತ ವಿಚಾರಣೆ ಮಾರ್ಚ್‌ ೧ರಂದು ನಡೆಯಲಿದೆ. ಆರೋಪಿ … Continued

ರೈತರಿಂದ ರಸ್ತೆ ತಡೆ: ಬೆಂಗಳೂರಿನಲ್ಲಿ ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು  ದೇಶಾದ್ಯಂತ ಶನಿವಾರ ಕರೆ ನೀಡಿದ್ದ ದೇಶವ್ಯಾಪಿ ರಸ್ತೆ ತಡೆ ಚಳವಳಿ ಬಿಸಿ ರಾಜಧಾನಿಗೂ ತಟ್ಟಿತು. ರೈತ ಸಂಘಟನೆಯವರು ಬೆಂಗಳೂರಿನ ಕೆಲ ರಸ್ತೆಗಳನ್ನು ಬಂದ್‌ ಮಾಡಿದ್ದರಿಂದ ಸಂಚಾರ ದಟ್ಟಣೆ ಉಂಟಾಯಿತು. ಮೈಸೂರು ಬ್ಯಾಂಕ್‌ ವೃತ್ತ, ಸದಹಳ್ಳಿ ಗೇಟ್‌, ದೇವನಹಳ್ಳಿ ರಸ್ತೆ, ಯಲಹಂಕ ಹೊಸ ಪೊಲೀಸ್‌ ಠಾಣೆ … Continued

ಸೆಲ್ಫಿ ಹುಚ್ಚಿಗೆ ದಂಪತಿ ಸಾವು

ಹಾಸನ: ಸೆಲ್ಫಿ ಹುಚ್ಚಿಗೆ ನವದಂಪತಿಗಳಿಬ್ಬರು ಜೀವ ಕಳೆದುಕೊಂಡಿದ್ದಾರೆ. ಕೃತಿಕಾ ಹಾಗೂ ಅರ್ಥೇಶ ದಂಪತಿ ಹೇಮಾವತಿ ನದಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಬೈಕ್‌ ಮೇಲೆ ದಂಪತಿ ಹೆಂಡತಿಯ ತವರಿಗೆ ಹೋಗುವಾಗ ದಾರಿ ಮಧ್ಯೆ ನದಿಯ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರ್ಘಟನೆ ಸಂಭವಿಸಿದೆ. ನವವಿವಾಹಿತರ ಮಧ್ಯೆ ಜಗಳ ನಡೆದಿರುವುದು ಕಂಡುಬಂದಿಲ್ಲ. ಕಾಲು ಜಾರಿ ನದಿಯಲ್ಲಿ ಬಿದ್ದಿರಬಹುದು ಎಂದು … Continued

ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ ಮಹಿಳಾ ಐಪಿಎಸ್‌ ಅಧಿಕಾರಿ ದೂರು

ಬೆಂಗಳೂರು: ರಾಜ್ಯದ ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಪತಿ ಮತ್ತು ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಬಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಪತಿ ಐಎಫ್ಎಸ್ ಅಧಿಕಾರಿ ನಿತಿನ್ ಸುಭಾಷ್  ಸೇರಿದಂತೆ ಏಳು ಜನರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು … Continued

ದಾಖಲೆ ಇಲ್ಲದ ೧.೪೭ ಕೋಟಿ ರೂ. ಹಣ ವಶಕ್ಕೆ

ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಬೇನಾಮಿ ಹಣ ಪತ್ತೆಯಾಗಿದ್ದು, ಅಜಾದ್ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಕೆಆರ್ ರಸ್ತೆಯ ಗ್ಯಾಲಕ್ಸಿ ಶಾದಿ ಮಹಲ್ ಬಳಿಯಲ್ಲಿ ಈ ಹಣ ಪತ್ತೆಯಾಗಿದ್ದು, ಸ್ವಿಫ್ಟ್ ಕಾರಿನಲ್ಲಿ ಸಾಗಿಸುತ್ತಿದ್ದ 1.47 ಕೋಟಿ ರೂ.ಮೌಲ್ಯದ ಹಣವನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಗ್ಯಾಲಕ್ಸಿ ಶಾದಿ ಮಹಲ್ ಬಳಿ ಎಎಸ್‍ಐ … Continued

ಕಾಂಗ್ರೆಸ್‌ ಶಾಶ್ವತವಾಗಿ ಪ್ರತಿಪಕ್ಷದಲ್ಲಿರುವಂತೆ ಮಾಡ್ತೇನೆ: ಗುಡುಗಿದ ಯಡಿಯೂರಪ್ಪ

ಬೆಂಗಳೂರು: ಸವಾಲುಗಳನ್ನು ಎದುರಿಸಿ ಜನರ ವಿಶ್ವಾಸ ಗೆದ್ದು ೪ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ. ಸವಾಲುಗಳನ್ನು ಎದುರಿಸಲು ನನಗೆ ಎಲ್ಲಿಲ್ಲದ ಉತ್ಸಾಹ. ಸವಾಲುಗಳು ನನ್ನನ್ನು ಗಟ್ಟಿಗೊಳಿಸುತ್ತವೆ. ಮುಂದಿನ ಚುನಾವಣೆಯಲ್ಲೂ ಎಲ್ಲ ಸವಾಲುಗಳನ್ನು ಎದುರಿಸಿ ಬಿಜೆಪಿಯನ್ನು ೧೫೦ ಸ್ಥಾನಗಳಲ್ಲಿ ಗೆಲ್ಲಿಸಿ ಮತ್ತೆ ಬಿಜೆಪಿ ಸರ್ಕಾರವನ್ನೆ ಅಧಿಕಾರಕ್ಕೆ ತಂದು ಕಾಂಗ್ರೆಸ್‌ನ್ನು ಶಾಶ್ವತವಾಗಿ ಪ್ರತಿಪಕ್ಷದ ಸ್ಥಾನದಲ್ಲಿರುವಂತೆ ಮಾಡಿಯೇ ತೀರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ … Continued

ಎಸ್‌ಟಿ ಮೀಸಲಿಗಾಗಿ ಫೆ.೭ರಂದು ಕುರುಬರ ಬೃಹತ್‌ ಸಮಾವೇಶ

ಬೆಂಗಳೂರು: ಕರ್ನಾಟಕದ ಕುರುಬರನ್ನು ಎಸ್ಟಿ ಮೀಸಲಾತಿಗೆ ಒಳಪಡಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿ ನಡೆಸಿದ ಕುರುಬರ ಐತಿಹಾಸಿಕ ಪಾದಯಾತ್ರೆ ಅಭೂತಪೂರ್ವ ಯಶಸ್ವಿಯಾಗಿದ್ದು, ಫೆ,೭ರಂದು ಬೆಂಗಳೂರಿನ ಇಂಟರ್‌ನ್ಯಾಶನಲ್‌ ಎಕ್ಸಿಬಿಶನ್‌ ಮೈದಾನದಲ್ಲಿ ಕುರುಬರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟ … Continued