ರಾಮ ಮಂದಿರಕ್ಕೆ ಒಂದು ಪೈಸೆಯನ್ನೂ ಕೊಡಬೇಡಿ

ಮಂಗಳೂರು: ರಾಮ ಮಂದಿರಕ್ಕೆ ಒಂದು ಪೈಸೆಯನ್ನೂ ಕೊಡಬೇಡಿ ಅದು ರಾಮ ಮಂದಿರವಲ್ಲ ಆರ್ ಎಸ್ ಎಸ್ ಮಂದಿರ ಎಂದು ಪಿಎಫ್ ಐ ಕಾರ್ಯದರ್ಶಿ ಅನಿಸ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಮಾತನಾಡಿದ ಅನೀಸ್ ಅಹ್ಮದ್, ದೇಶದಲ್ಲಿ ಶಾಂತಿ ಸ್ಥಾಪನೆಗೆ ಬಾಬ್ರಿ ಮಸೀದಿ ಜಾಗ ಕೊಡಿ ಎಂದರು. ಕೊಟ್ಟ ಮೇಲೆ ದೇಶದಲ್ಲಿ … Continued

ಮಾರ್ಚ್ 24 ರಿಂದ ಬೆಂಗಳೂರು ಚಲನಚಿತ್ರೋತ್ಸವ

ಬೆಂಗಳೂರು: ೧೩ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 24ರಿಂದ 31 ರವರೆಗೆ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿ “ಭಾರತೀಯ ಪ್ರದರ್ಶನ ಕಲೆಗಳ ಮಹತ್ವ” ವಿಷಯದ ಮೇಲೆ ಚಿತ್ರೋತ್ಸವವನ್ನು ಏರ್ಪಡಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು … Continued

ಕೊವಿಡ್‌ ನಿಯಮ ಪಾಲಿಸಿ, ಮಧ್ಯಾಹ್ನದ ಊಟ ತನ್ನಿ

ಬೆಂಗಳೂರು: ಇದೇ ತಿಂಗಳು 22ರಿಂದ 6 ರಿಂದ 8ನೇ ತರಗತಿಗಳ ಆರಂಭವಾಗುತ್ತಿರುವುದರಿಂದ ಮಕ್ಕಳ ಸಂಖ್ಯೆ ಶಾಲೆಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. 6ರಿಂದ 8ನೇ ತರಗತಿಗಳ ಆರಂಭಕ್ಕೆ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶುಕ್ರವಾರ ಸುತ್ತೋಲೆ ಹೊರಡಿಸಿದ್ದು, … Continued

ಕರ್ನಾಟಕ: ಕೋವಿಡ್‌ ಲಸಿಕೆ ನಂತರ ಒಬ್ಬ ಸಾವು, ಮೂವರು ಗಂಭೀರ

ಚಿಕ್ಕಬಳ್ಳಾಪುರ: ಕೊವಿಡ್‌ಗೆ ರೋಗನಿರೋಧಕ (ಎಇಎಫ್‌ಐ) ತೆಗೆದುಕೊಂಡ ನಂತರದ ಪ್ರತಿಕೂಲ ಘಟನೆಗಳ ನಂತರ ಜಯದೇವ ಆಸ್ಪತ್ರೆಗೆ ದಾಖಲಾದ ಚಿಕ್ಕಬಳ್ಳಾಪುರದ 56 ವರ್ಷದ ವಾಟರ್‌ಮ್ಯಾನ್ ಅವರನ್ನು ಫೆಬ್ರವರಿ 18ರಂದು ಬಿಡುಗಡೆ ಮಾಡಲಾಯಿತು. ಆದಾಗ್ಯೂ, ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತು, ಮತ್ತು ಆಸ್ಪತ್ರೆಗೆ ಒಯ್ಯುವಾಗ ಅವರು ನಿಧನರಾದರು. ಮತ್ತೊಂದು ಪ್ರಕರಣದಲ್ಲಿ, ಜನವರಿ 20ರಂದು ಲಸಿಕೆ … Continued

ರಾಜ್ಯದಲ್ಲಿ ೨ನೇ ಹಂತದ ಕೊರೊನಾ ಅಲೆ ಶಂಕೆ: ಕಟ್ಟೆಚ್ಚರಕ್ಕೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಕೊರೊನಾ ಅಲೆ ಆರಂಭವಾಗುವ ಸಾಧ್ಯತೆ ಇದೆ ಹೀಗಾಗಿ ಕೇರಳ, ಮಹಾರಾಷ್ಟ್ರದ ಗಡಿ ಜಿಲ್ಲೆ ಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ‌ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಪತ್ರ ಬರೆಯಲಾಗಿದೆ.‌ ನಾಳೆ ಗಡಿ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸರ್ಕಾರ ವಿಡಿಯೋ … Continued

ಕೆ.ಜಿ.ಹಳ್ಳಿ, ಡಿ.ಜಿ.ಹಳ್ಳಿ ಗಲಭೆ: ನಷ್ಟಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮನವಿ

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ನಷ್ಟ ಅನುಭವಿಸಿದವರು ತಮ್ಮ ಆಸ್ತಿಯ ಮಾಹಿತಿಗಳ ಜತೆ ನಷ್ಟ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವಂತೆ ಎಚ್.ಎಸ್.ಕೆಂಪಣ್ಣ ಆಯೋಗ ಮನವಿ ಮಾಡಿದೆ. ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಶುಕ್ರವಾರ ಬಾಲಬ್ರೂಯಿ ಅತಿಥಿಗೃಹದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕರು ನಷ್ಟ ಪರಿಹಾರಕ್ಕಾಗಿ ಆಯೋಗದ ಮುಂದೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದರು. … Continued

ಮೀಸಲಾತಿ : ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇಟ್ಟಿರುವ ಕುರಿತು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಸಚಿವರು ಸಮುದಾಯಗಳ ಬೇಡಿಕೆ ಕುರಿತಾಗಿ ಅಭಿಪ್ರಾಯಗಳನ್ನು ನನ್ನ ಬಳಿ ಹಂಚಿಕೊಂಡಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಣಯಗಳನ್ನು ಕೈಗೊಳ್ಳುವೆ ಎಂದರು. ವಿವಿಧ ಸಮುದಾಯಗಳಿಗೆ … Continued

ಪಿಎಫ್‌ಐ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬೊಮ್ಮಾಯಿ ಸೂಚನೆ

ಬೆಂಗಳೂರು : ದೇಶ ವಿರೋಧಿ ಮತ್ತು ಅಸಂವಿಧಾನಿಕ ಹೇಳಿಕೆ ನೀಡಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ , ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಎಫ್‌ಐ ನಾಯಕರು … Continued

ಅಯೋಧ್ಯಾ ಶ್ರೀರಾಮ ಮಂದಿರ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು?: ಸಚಿವ ಈಶ್ವರಪ್ಪ

ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಶ್ರೀರಾಮ ಮಂದಿರದ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು ಎಂದು ಪ್ರಶ್ನಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ಬೇಕಾದರೆ ಕೂಲಿ ಮಾಡುವ ವ್ಯಕ್ತಿ ಲೆಕ್ಕ ಕೇಳಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಗೌರವವಿಲ್ಲದೇ ರಾಮಮಂದಿರ ನಿರ್ಮಾಣದ ಸ್ಥಳವನ್ನು ವಿವಾದಿತ ಸ್ಥಳ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡುವುದು … Continued

ಕೇರಳದಲ್ಲಿ ಕೊರೊನಾ ಕೇಕೆ: ಕೊಡಗು ಜಿಲ್ಲೆಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳಕ್ಕೆ ಹೋಗಿ ಬರುವವರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಕೇರಳದಲ್ಲಿ ಬುಧವಾರ ಫೆ.17 ರಂದು ಒಂದೇ ದಿನ 4,892 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಅಲ್ಲಿ ಈಗ 60,803ಕ್ಕೆ ಏರಿದಂತಾಗಿದೆ. 746 … Continued