ಪಿಯುಸಿ  ದಾಖಲಾತಿ ಅವಧಿ ಫೆ.೨೦ರ ವರೆಗೆ ವಿಸ್ತರಣೆ

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ದಾಖಲಾತಿ ಹಾಗೂ ಕಾಲೇಜು ಬದಲಾವಣೆಗೆ ಫೆಬ್ರವರಿ 20ರ ವರೆಗೂ ಕಾಲಾವಕಾಶ ನೀಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ದಾಖಲಾತಿ ಹಾಗೂ ಕಾಲೇಜು ಬದಲಾವಣೆ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಪದವಿ ಪೂರ್ವ ಕಾಲೇಜುಗಳ ದಾಖಲಾತಿ ದಿನಾಂಕವನ್ನು ವಿಸ್ತರಿಸುವಂತೆ … Continued

ಕೆಎಲ್‌ಇ ಸಂಸ್ಥೆಗೆ ದಾನ ಕೊಟ್ಟ ಜಾಗ ಮರಳಿ ಕೊಡುವ ಪ್ರಶ್ನೆಯೇ ಇಲ್ಲ: ಡಾ.ಕೋರೆ

ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಗೆ ದಾನ ಕೊಟ್ಟ ಜಾಗವನ್ನು ಯಾವುದೇ ಕಾರಣಕ್ಕೂ ಮರಳಿ ಕೊಡುವುದಿಲ್ಲ. ಒಂದೂವರೆ ವರ್ಷದ ನಂತರ ಆ ಜಾಗದಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಕೆಎಲ್‌ಇ ಸಂಸ್ಥೆಯ ಚೇರ್ಮನ್‌ ಡಾ.ಪ್ರಭಾಕರ ಕೋರೆ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರುಸಾವಿರ ಮಠದ ಹಿಂದಿನ ಸ್ವಾಮಿಗಳು ಒಳ್ಳೆಯ ಉದ್ದೇಶಕ್ಕೆ ಜಾಗ ನೀಡಿದ್ದಾರೆ. ಜಾಗ ಕೊಟ್ಟು ೧೭ … Continued

ಫೆ.೧೬ರಿಂದ ಹುಬ್ಬಳ್ಳಿ-ಮುಂಬೈ ವಿಮಾನ ಸೇವೆ ಆರಂಭ

ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಮುಂಬೈ ನಡುವಿನ ತನ್ನ ವಿಮಾನ ಸೇವೆಯನ್ನು ಫೆಬ್ರವರಿ 16 ರಿಂದ ಪುನರಾರಂಭಿಸಲು ಏರ್ ಇಂಡಿಯಾ ನಿರ್ಧರಿಸಿದೆ. ವಾರದಲ್ಲಿ ಮೂರು ದಿನ ( ಮಂಗಳವಾರ, ಶುಕ್ರವಾರ ಮತ್ತು ಶನಿವಾರ) ಏರ್​ಬಸ್​ಗಳು ಸಂಚರಿಸಲಿವೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಸುಮಾರು 10 ತಿಂಗಳಿಂದಇದರ ಸಂಚಾರ ಸ್ಥಗಿತಗೊಂಡಿತ್ತು. ಈಗ ಮತ್ತೆ ಆರಂಭವಾಗಲಿದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ … Continued

ಹುಬ್ಬಳ್ಳಿಗೆ ಬರಲಿದೆ ಏಮ್ಸ್‌ ಆಸ್ಪತ್ರೆ

ಹುಬ್ಬಳ್ಳಿ: ಸ್ಥಾಪಿಸಲು ಉದ್ದೇಶಿಸಿದ್ದ ಪ್ರತಿಷ್ಠಿತ ಆಲ್ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್‌) ಈಗ ಅಲ್ಲಿಂದ ಸ್ಥಳಾಂತರಗೊಳ್ಳಿದ್ದು, ಈಗ ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಜಾಗ ಗುರುತಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಇದುವರೆಗೂ ಶೈಕ್ಷಣಿಕ ಹಾಗೂ ವ್ಯಾಪಾರ ಕ್ಷೇತ್ರದಲ್ಲಿ ಉತ್ತರ ಕರ್ನಾಟಕದ ಹೆಬ್ಬಾಗಿಲಾಗಿದ್ದ ಹುಬ್ಬಳ್ಳಿ-ಧಾರವಾಡ ಈಗ ಆರೋಗ್ಯ ಕ್ಷೇತ್ರದಲ್ಲಿಯೂ ಈಗ ಉತ್ತರ ಕರ್ನಾಟಕದ … Continued

ಮೇಲ್ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ

ಮೈಸೂರು: ನಗರದ ಮಹಾರಾಜ ಪದವಿ ಕಾಲೇಜಿನ ಮೇಲ್ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಕಾಲೇಜಿನ ಅಪರಾಧಶಾಸ್ತ್ರ ವಿಭಾಗದಲ್ಲಿ ಉಪನ್ಯಾಸ ನಡೆಯುತ್ತಿರುವ ಸಂದರ್ಭದಲ್ಲಿ ಛಾವಣಿಯ ಭಾಗವೊಂದು ಕುಸಿದು ದುರ್ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳಾದ ವಿಶಾಲ್‌, ಯಶವಂತ ಹಾಗೂ ಸಲೀಮ್‌ ಪಾಶಾ ಗಾಯಗೊಂಡಿದ್ದಾರೆ. ವಿಶಾಲ್‌ ತಲೆಗೆ ಗಂಭೀರ ಗಾಯವಾಗಿದ್ದು, ಉಳಿದ ಇಬ್ಬರು ವಿದ್ಯಾರ್ಥಿಗಳ ಕೈಗೆ ತರುಚಿದ … Continued

ಸಂವಿಧಾನ-ಕಾನೂನು ಚೌಕಟ್ಟಿನೊಳಗೆ ಮೀಸಲಾತಿ ಬೇಡಿಕೆ ಬಗ್ಗೆ ತೀರ್ಮಾನ: ಬಿಎಸ್‌ವೈ

ಬೆಂಗಳೂರು: ಸಂವಿಧಾನ ಹಾಗೂ ಕಾನೂನು ಚೌಕಟ್ಟಿನಡಿಯಲ್ಲಿ ವಿವಿಧ ಜಾತಿ, ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ ೧೧೩ನೇ ಜಯಂತಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಕೆಂಗಲ್ ಹನುಮಂತಯ್ಯನವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಜಾತಿ-ಸಮುದಾಯಗಳಿಗೆ ಸಂವಿಧಾನದ ಪ್ರಕಾರವೇ … Continued

ಬೋಧನಾ ಶುಲ್ಕ ಕಡಿತ:ಖಾಸಗಿ ಆಡಳಿತ ಮಂಡಳಿಗಳ ಪ್ರತಿಭಟನೆ

ಬೆಂಗಳೂರು: ಬೋಧನಾ ಶುಲ್ಕದಲ್ಲಿ ಶೇ.೩೦ರಷ್ಟು ಕಡಿತ ಹಾಗೂ ಅಭಿವೃದ್ಧಿ ಶುಲ್ಕ ಹಾಗೂ ಇತರ ಹೆಚ್ಚುವರಿ ಪಾವತಿ ಸ್ಥಗಿತಗೊಳಿಸಿದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ೬ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಫೆ.೨೩ರೊಳಗೆ ಸರಕಾರ ತನ್ನ ನಿರ್ಧಾರವನ್ನು ರದ್ದುಗೊಳಿಸದಿದ್ದರೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿ ನಿರ್ಧರಿಸಲಾಗಿದೆ. ಶುಲ್ಕ ಕಡಿತವನ್ನು ರದ್ದುಗೊಳಿಸುವಂತೆ ಸರ್ಕಾರವನ್ನು ಕೇಳುವುದರೊಂದಿಗೆ … Continued

ರೈತರ ಹೋರಾಟ ಪ್ರತಿಷ್ಠೆ ಪ್ರಶ್ನೆ ಆಗುವುದು ಬೇಡ

ರಾಯಚೂರು: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಪ್ರತಿಷ್ಠೆ ಪ್ರಶ್ನೆ ಆಗಬಾರದು. ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ನೋವು ಹೇಳಿಕೊಳ್ಳುವ ಸ್ವಾತಂತ್ರ್ಯವಿದೆ. ಚಳಿ ಲೆಕ್ಕಿಸದೆ ಹೋರಾಟ ಮಾಡಿಕೊಂಡು ಬಂದಿದ್ದಾರೆ. .ಕೇಂದ್ರ ಸರ್ಕಾರ ಅವಸರದಲ್ಲಿ ವಿಧೇಯಕ ಪಾಸು ಮಾಡಬಾರದಿತ್ತು. ಕೃಷಿ ಮಸೂದೆಗೆ ಎರಡ್ಮೂರು ತಿಂಗಳ ಕಾಲಾವಕಾಶ … Continued

ಉಪಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸಲ್ಲ, ನಮ್ಮ ಬಳಿ ಹಣವಿಲ್ಲ

ರಾಯಚೂರು: ರಾಜ್ಯದ ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ, ಮಸ್ಕಿ, ಸಿಂಧಗಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಮ್ಮ ಬಳಿ ಹಣವಿಲ್ಲ ಎಂದರು. 2023ರ ವಿಧಾನಸಭೆ … Continued

ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ

ಬೆಂಗಳೂರು: ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ ಮಾಡಲಾಗುತ್ತದೆ ಎಂದು ಗಣಿ ಮತ್ತ ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ಮರಳು ನೀತಿ ಜಾರಿಯಲ್ಲಿದ್ದು , ಇವೆಲ್ಲವನ್ನೂ ಒಳಗೊಂಡಂತೆ ಒಂದು ನೂತನ ನೀತಿಯನ್ನು ಜಾರಿಗೊಳಿಸಲಾಗುವುದು ಎಂದರು. ಮರಳು ಗಣಿಗಾರಿಕೆ ವಿಚಾರದಲ್ಲಿ ನಿಯಮಗಳನ್ನ … Continued