ತಾಂತ್ರಿಕ ಸಮಸ್ಯೆ: ಐಟಿಐ ವಿದ್ಯಾರ್ಥಿಗಳ ಪರೀಕ್ಷೆಗೆ ತೊಡಕು

ಬೆಂಗಳೂರು: ತಾಂತ್ರಿಕ ತೊಂದರೆಯಿಂದಾಗಿ ಐಟಿಐ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗುವ ಸ್ಥಿತಿ ಉಂಟಾಗಿದೆ. ರಾಜ್ಯದಲ್ಲಿ ೧೭೫೦ಕ್ಕೂ ಹೆಚ್ಚು ಐಟಿಐ ಕಾಲೇಜುಗಳಿದ್ದು, ೧ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿದೆ. ಕಳೆದ ವರ್ಷ ಜುಲೈ-ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಕೊವಿಡ್‌ ಕಾರಣದಿಂದ ಮುಂದೂಡಲಾಗಿತ್ತು. ೨೦೨೦ರ ನವಂಬರ್‌ನಲ್ಲಿ ಪ್ರಾಯೋಗಿಕ ಹಾಗೂ ಎಂಜಿನೀಯರಿಂಗ್‌ ಡ್ರಾಯಿಂಗ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಉಳಿದ ವಿಷಯಗಳ ಪರೀಕ್ಷೆಗಳನ್ನು ಆನ್‌ಲೈನ್‌ … Continued

ಬಿಜೆಪಿ ಸರ್ಕಾರ ಕೆಟ್ಟು ನಿಂತಿರುವ ಡಕೋಟಾ ಬಸ್:ಸಿದ್ದರಾಮಯ್ಯ

ಬೆಂಗಳೂರು:  ರಾಜ್ಯದಲ್ಲಿ ಸರ್ಕಾರ ಸತ್ತಿದೆ. ಈ ಸರ್ಕಾರ ಕೆಟ್ಟು ನಿಂತಿರುವ ಡಕೋಟಾ ಬಸ್ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿ,   ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ್‌ಶೆಟ್ಟರ್ ಅವರು ಸರ್ಕಾರ ಟೇಕ್ … Continued

ಬೋಗಸ್‌ ಬಿಲ್‌ ತೆಗೆದುಕೊಂಡಿದ್ದರೆ ತನಿಖೆ:ಕಾರಜೋಳ

ಬೆಂಗಳೂರು: ಯಾವುದೇ ಕೆಲಸ ಮಾಡದೆ ಬೋಗಸ್ ಬಿಲ್ ಮಾಡಿ ತೆಗೆದುಕೊಂಡಿದ್ದರೆ ಇಲಾಖೆಯ ಉನ್ನತಾಧಿಕಾರಿಗಳಿಂದ ತನಿಖೆ ಮಾಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನ ಪರಿಷತ್ತಿಗೆ ತಿಳಿಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿಟ್ಟ ಅನುದಾನವನ್ನು ಆ ವರ್ಗದ ಮನೆಗಳಿಂದ ಹಿಡಿದು ಶಾಲೆ, ಮಾರುಕಟ್ಟೆ, ದೇವಾಲಯದವರೆಗೂ ರಸ್ತೆ ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. ಅವರು ಹೋಗಿ ಬರುವ ಶಾಲೆ, … Continued

ಪಾಕ್‌ ಪರ ಘೋಷಣೆ ಇಂದು ಆರೋಪಿಗಳ ವಿಚಾರಣೆ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳಿಗೆ ನ್ಯಾಯಾಲಯ ಸಮನ್ಸ್‌ ನೀಡಿದ ಹಿನ್ನೆಲೆಯಲ್ಲಿ ಬುಧವಾರ ೫ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಕ್ಕೆ ಮೂವರು ಆರೋಪಿಗಳು ಹಾಜರಾದರು. ಭಾರಿ ಪೊಲೀಸ್‌ ಬಿಗಿ ಭದ್ರತೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಯಿತು. ನ್ಯಾಯಾಧೀಶರು  ಮುಂದಿನ ವಿಚಾರಣೆಯನ್ನು ಮಾರ್ಚ್‌ ೧೦ಕ್ಕೆ ಮುಂದೂಡಿದರು. ನಗರದ ಕಾಲೇಜೊಂದರಲ್ಲಿ … Continued

ಗ್ರಾಪಂಗೆ ಸತಿ ಅಧ್ಯಕ್ಷೆ ಪತಿ ಉಪಾಧ್ಯಕ್ಷ

ಹುಬ್ಬಳ್ಳಿ: ಗ್ರಾಮ ಪಂಚಾಯತ ಚುನಾವಣೆಯಲ್ಲಿ ಜಯ ಸಾಧಿಸಿದ್ದ ದಂಪತಿಗಳಿಬ್ಬರು ಒಂದೇ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಗಮನ ಸೆಳೆದಿದ್ದಾರೆ. ತಾಲೂಕಿನ ವರೂರು ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ವಿಶಾಲಾಕ್ಷಿ ಚನ್ನಬಸನಗೌಡ ಚನ್ನಬಸನಗೌಡರ ಅವಿರೋಧವಾಗಿ ಆಯ್ಕೆಯಾದರೆ, ಚನ್ನಬಸನಗೌಡ ಚನ್ನಬಸನಗೌಡರ ಕೂಡ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ವಿಶೇಷ. ವಿಶಾಲಾಕ್ಷಿ ೧ನೇ ವಾರ್ಡ್‌ ನಿಂದ ಆಯ್ಕೆಯಾದರೆ, ಚನ್ನಬಸನಗೌಡ ೨ನೇ ವಾರ್ಡ್‌ನಿಂದ … Continued

ದೆಹಲಿ ಪ್ರತಿಭಟನೆಗೆ ರಾಜ್ಯದಿಂದಲೂ ರೈತರು

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಹೊರವಲಯ ಸಿಂಗುದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಜ್ಯದಿಂದ ಸಾವಿರಾರು ರೈತರು ಮಂಗಳವಾರದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯ ಗಡಿ ಭಾಗಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, … Continued

ಫೆ.೨೮ಕ್ಕೆ ಎಫ್‌ಡಿಎ ಪರೀಕ್ಷೆ

ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ)  ಪರೀಕ್ಷೆಯನ್ನು ಫೆ. 28ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ. ಕೆಪಿಎಸ್‍ಸಿ ಕಚೇರಿಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣದಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಜ.24ಕ್ಕೆ ಎಫ್‍ಡಿಎ ಪರೀಕ್ಷೆ ನಿಗದಿಯಾಗಿತ್ತು. ಪರೀಕ್ಷೆಯ ಹಿಂದಿನ ದಿನವೇ ಪ್ರಶ್ನೆ ಪತ್ರಿಕೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು   ಮುಂದೂಡಲಾಗಿತ್ತು. … Continued

ಎಟಿಎಂ ಹಲ್ಲೆ ಪ್ರಕರಣ: ಆರೋಪಿಗೆ ೧೦ ವರ್ಷ ಶಿಕ್ಷೆ

ಬೆಂಗಳೂರು :  2013ರಂದು  ರಾಜ್ಯವನ್ನೇ ಕಂಗಾಲು ಮಾಡಿದ್ದ   ಎಟಿಎಂ ಹಲ್ಲೆ ಪ್ರಕರಣದ ಅಪರಾಧಿ ಮಧುಕರಗೆ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಾಲ್ಕು ವರ್ಷಗಳ ಕಾಲ ಸುದೀರ್ಘ ವಾದ ಆಲಿಸಿದ ನ್ಯಾಯಾಲಯ  ಮಧುಕರ್ ಅಪರಾಧಿ ಎಂದು ಹೇಳಿತ್ತು ಹಾಗೂ ಶಿಕ್ಷೆ ಪ್ರಕಟಿಸುವುದನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು.  ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್ ನ ಕಾರ್ಪೋರೇಷನ್ ಎಟಿಎಂನಲ್ಲಿ ಮಹಿಳೆಯ … Continued

ಕಾಂಗ್ರೆಸ್‌ ನಾಯಕನಿಗೆ ರಾಮ ಮಂದಿರ ನಿಧಿ ಸಂಗ್ರಹ ಕಾರ್ಯಕ್ರಮ ಉದ್ಘಾಟನೆ ವಿವಾದ

ತಿರುವನಂತಪುರಂ: ಅಯೋಧ್ಯೆಯ ರಾಮ ಮಂದಿರ   ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಕಾರ್ಯಕ್ರಮವನ್ನು ಆಲಪ್ಪುಳ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಉದ್ಘಾಟಿಸಿದ ನಂತರ  ವಿವಾದ ಭುಗಿಲೆದ್ದಿದೆ. ಅಲಪ್ಪುಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ರೆಘುನಾಥನ್ ಪಿಳ್ಳೈ   ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಉದ್ಘಾಟಿಸಿದರು. ಪಲ್ಲಿಪುರಂನ ಕಡವಿಲ್ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕರಿಗೆ ನಿರ್ದಿಷ್ಟ ಮೊತ್ತವನ್ನು ಹಸ್ತಾಂತರಿಸುವ ಮೂಲಕ … Continued

ಸಭಾಪತಿ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ  ಮಂಗಳವಾರ  ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಮಧ್ಯಾಹ್ನ ಕಲಾಪದಲ್ಲಿ ಪದಚ್ಯುತಿ ವಿಚಾರವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರಸ್ತಾಪಿಸಿದರು. ಸದಸ್ಯ ಆಯನೂರು ಮಂಜುನಾಥ್ ಅವರಿಗೆ ನಿರ್ಣಯ ಮಂಡಿಸುವಂತೆ ಆಹ್ವಾನಿಸಿದರು. ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್ ನಿರ್ಣಯ ಮಂಡಿಸುತ್ತಿದ್ದಂತೆಯೇ, … Continued