ನಕ್ಸಲ್ ನಂಟಿನ ಪ್ರಕರಣ: ವಿಠಲ ಮಲೆಕುಡಿಯ, ಅವರ ತಂದೆ ನಿರ್ದೋಷಿ ಎಂದು ಖುಲಾಸೆಗೊಳಿಸಿದ ನ್ಯಾಯಾಲಯ

ಮಂಗಳೂರು: ನಕ್ಸಲ್‌ ನಂಟಿನ ಆರೋಪ ಪ್ರಕರಣದಲ್ಲಿ ಅಂದಿನ ಪತ್ರಿಕೋದ್ಯಮ ವಿದ್ಯಾರ್ಥಿ ವಿಠಲ ಮಲೆಕುಡಿಯ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ನಿರ್ದೋಷಿಗಳು ಎಂದು ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದೆ. ನಕ್ಸಲ್‌ ನಂಟಿನ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪದ ಕುತ್ಲೂರು ನಿವಾಸಿ ಹಾಗೂ ಡಿವೈಎಫ್‌ಐ ಹಾಗೂ … Continued

ಬೆಂಗಳೂರು ಜಲಮಂಡಳಿ ನಿವೃತ್ತ ಮುಖ್ಯ ಎಂಜಿನಿಯರ್ ಆಸ್ತಿ ಜಪ್ತಿ ಮಾಡಿದ ಇಡಿ

ಬೆಂಗಳೂರು: ಬೆಂಗಳೂರು ಜಲ ಮಂಡಳಿ (BWSSB) ನಿವೃತ್ತ ಮುಖ್ಯ ಎಂಜಿನಿಯರ್​ ಎಸ್.ಎಂ.ಬಸವರಾಜ್ ಅವರಿಗೆ ಸೇರಿದ ₹ 7.48 ಕೋಟಿ ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. 2018ರಲ್ಲಿ ಇವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಪೊಲೀಸರು ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ … Continued

ಶಿರಸಿ: ಕಾಡಿನಲ್ಲಿ ದನ ಕಡಿಯುವಾಗಲೇ ಪೊಲೀಸರ ದಾಳಿ; ಓರ್ವನ ಬಂಧನ, ಮೂವರು ಪರಾರಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡಳ್ಳಿ ಗ್ರಾಮದ ಉರ್ದು ಶಾಲೆಯ ಹಿಂಭಾಗದ ಕಾಡಿನ ಜಾಗದಲ್ಲಿ ಅಕ್ರಮವಾಗಿ ಮಾಂಸಕ್ಕಾಗಿ ದನವನ್ನು ಕಡಿಯುತ್ತಿರುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಗೋವನ್ನು ಕಡಿಯುವಾಗಲೇ ಒಬ್ಬನನ್ನು ಬಂಧಿಸಿದ್ದು, ಉಳಿದ ಮೂವರು ಪರಾರಿಯಾಗಿದ್ದಾರೆ. ಕಾಡಿನಲ್ಲಿ ಹಸುವನ್ನು ಮಾಂಸಕ್ಕಾಗಿ ಕಡಿಯಲಾಗುತ್ತಿದೆ ಎಂಬ ಮಾಹಿತಿ ತಿಳಿದ ಪೊಲೀಸರು … Continued

ವಿದೇಶಿ ಹೂಡಿಕೆ ಆಕರ್ಷಣೆಗೆ ನೆರವಾದ ದುಬೈ ಭೇಟಿ : ಸಚಿವ ನಿರಾಣಿ

ಬೆಂಗಳೂರು: ‘ದುಬೈ ಎಕ್ಸ್ ಪೋ 2020’ ಭೇಟಿ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ಬಂಡವಾಳ ಹೂಡಲು ಅನೇಕ ಪ್ರತಿಷ್ಠಿತ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು. ನಾಲ್ಕು ದಿನಗಳ ದುಬೈ ಪ್ರವಾಸದ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನಗಳಲ್ಲಿ ಕಾಲ ನಡೆದ ದುಬೈ ಎಕ್ಸ್ ಪೋದಲ್ಲಿ … Continued

ಬಂಡೀಪುರ; ಗಾಯಾಳು ಹುಲಿ ಪತ್ತೆ, ಕಣ್ಗಾವಲು

ಚಾಮರಾಜನಗರ: ಹುಲಿ ಸಂರಕ್ಷಿತ ಅರಣ್ಯವಾದ ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾದ ಕಾರಣದಿಂದ ಹುಲಿಗಳ ನಡುವೆ ಕಾದಾಟ ಹೆಚ್ಚಾಗುತ್ತಿದ್ದು, ಹೀಗೆ ನಡೆದ ಕಾದಾಟದಲ್ಲಿ ಗಾಯಗೊಂಡ ಹುಲಿಯೊಂದು ಈಗ ಪತ್ತೆಯಾಗಿದೆ. ಬಂಡೀಪರ ಹುಲಿ ಸಂರಕ್ಷಿತ ಪ್ರದೇಶ ಸಫಾರಿ ಝೋನ್‌ನಲ್ಲಿ ಗಾಯಗೊಂಡಿರುವ ಹುಲಿಯೊಂದು ಕಾಣಿಸಿಕೊಂಡಿದೆ. ಗಡಿಯ ವಿಚಾರದಲ್ಲಿ ಹುಲಿಗಳ ನಡುವೆ ಕಾಡಿನಲ್ಲಿ ಕಾದಾಟ ನಡೆಯುವುದು ಸಹಜ ಪ್ರಕ್ರಿಯೆ ಈ ವೇಳೆ … Continued

ರಾಜ್ಯದಲ್ಲಿ 16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಬಲಗೊಳಿಸುವ ಜೊತೆಗೆ ಪೊಲೀಸರ ಕಲ್ಯಾಣಕ್ಕೂ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿನ ದಿನಗಳಲ್ಲಿ ೧೬ ಸಾವಿರ ಪೊಲೀಸ್ ಹುದ್ದೆಗಳನ್ನು ತುಂಬಲಾಗುವುದು ಎಂದಿದ್ದಾರೆ. ಹುಬ್ಬಳ್ಳಿಯ ಹಳೇ ಸಿ.ಎ.ಆರ್. ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಪಾಲ್ಗೊಂಡು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಗೌರವ ಸಮರ್ಪಿಸಿ ಮಾತನಾಡಿದ … Continued

ಪಿಸ್ತೂಲ್‌ ತೋರಿಸಿ ಕಳುವು ಮಾಡುತ್ತಿದ್ದ ನಾಲ್ವರು ಕುಖ್ಯಾತ ಕಳ್ಳರ ಬಂಧನ, 1.25 ಕೋಟಿ ರೂ. ಚಿನ್ನಾಭರಣ ವಶ

ಬೆಂಗಳೂರು: ನಾಲ್ವರು ಕುಖ್ಯಾತ ಕಳ್ಳರನ್ನು ಬಂಸಿಧಿರುವ ಬಾಣಸವಾಡಿ ಉಪ ವಿಭಾಗದ ಪೊಲೀಸರು ಸುಮಾರು 1.25 ಕೋಟಿ ರೂ. ಬೆಲೆ ಬಾಳುವ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ಬಂದು ಪಿಸ್ತೂಲ್ ತೋರಿಸಿ ಸುಲಿಗೆ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸಲು ಬಂಧಿಸಿ ಅವರಿಂದ 5 ಜೀವಂತ ಗುಂಡುಗಳ ಸಮೇತ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು … Continued

ಪೋಲಿಸ್ ಕಾನ್ಸ್‌ಟೇಬಲ್ ಪರೀಕ್ಷೆ: ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಅಕ್ಟೋಬರ್‌ 23, 24ರಂದು ವಿಶೇಷ ಬಸ್‌ಗಳ ವ್ಯವಸ್ಥೆ

ಹುಬ್ಬಳ್ಳಿ: ರಾಜ್ಯಾದ್ಯಂತ ಅಕ್ಟೋಬರ್‌ 24ರಂದು ಭಾನುವಾರ ನಡೆಯುವ ಪೋಲಿಸ್ ಕಾನ್ಸ್‌ಟೇಬಲ್(ಸಿವಿಲ್) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಹಾಗೂ ಮರಳಿ ಸ್ವ-ಸ್ಥಳಗಳಿಗೆ ಹಿಂದಿರುಗಲು ಅಕ್ಟೋಬರ್‌ 23 ಮತ್ತು 24ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್‌ಗಳನ್ನು ಓಡಿಸುತ್ತಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, … Continued

ಕರ್ನಾಟಕದಲ್ಲಿ ಇನ್ನೂ ನಾಲ್ಕೈದು ದಿನ ಭಾರಿ ಮಳೆ, ಕರಾವಳಿ ಜಿಲ್ಲೆಗಳು, ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ರಾಜ್ಯದ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ, … Continued

ಉತ್ತರಾಖಂಡ ಪ್ರವಾಹ : ಕರ್ನಾಟಕದ 92 ಮಂದಿ ಸುರಕ್ಷಿತ, ನೆಟ್ವರ್ಕ್ ಸಮಸ್ಯೆಯಿಂದ ಸಿಗದ ನಾಲ್ವರು

ಬೆಂಗಳೂರು: ಉತ್ತರಾಖಂಡದಲ್ಲಿ ಉಂಟಾಗಿರುವ ನೆರೆ ಹಾಗೂ ಭೂಕುಸಿತದಲ್ಲಿ ರಾಜ್ಯದ 96 ಮಂದಿ ಸಿಲುಕಿದ್ದು, 92 ಜನರು ಸುರಕ್ಷಿತವಾಗಿದ್ದಾರೆ, ನಾಲ್ವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ. ಮಂಗಳವಾರ ರಾತ್ರಿ 10 ಗಂಟೆಯಿಂದ ಬುಧವಾರ ಸಂಜೆ 6 ಗಂಟೆ ವರೆಗೆ ಸಹಾಯವಾಣಿಗೆ ಹತ್ತು ಕರೆಗಳು ಬಂದಿದ್ದು, 96 ಮಂದಿ ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ಸಿಲುಕಿದ್ದಾರೆ. … Continued