ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇ ಗೌಡ

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುರುವಾರ ಕೋರ್ಟ್‌ ಪ್ರಜ್ವಲ್‌ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತಿಳಿಸಿತ್ತು. ಶನಿವಾರ ಶಿಕ್ಷೆಯ ಪ್ರಮಾಣ ಶಿಕ್ಷೆಯ ಪ್ರಮಾಣ ಪ್ರಕಟ ಆಗುತ್ತಿರುವಂತೆಯೇ ಮಾಜಿ ಪ್ರಧಾನಿ ಕಣ್ಣೀರು ಹಾಕಿದ್ದಾರೆ. ಮಧ್ಯಾಹ್ನದಿಂದ ಮಾಜಿ ಪ್ರಧಾನಿ ಟಿವಿ ನೋಡುತ್ತಲೇ … Continued

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ

ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲು ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‌ಗಳ … Continued

2022ರ ನಂತರ ಮೊದಲ ಬಾರಿಗೆ 100 ದಾಟಿದ ಬಿಜೆಪಿ ರಾಜ್ಯಸಭಾ ಸದಸ್ಯರ ಸಂಖ್ಯೆ

ನವದೆಹಲಿ: ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿಗೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ, ಏಪ್ರಿಲ್ 2022ರ ನಂತರ ಮೊದಲ ಬಾರಿಗೆ ಪಕ್ಷವು ರಾಜ್ಯಸಭೆಯಲ್ಲಿ 100 ರ ಗಡಿ ದಾಟಿದೆ. ಮೂವರು ನಾಮನಿರ್ದೇಶಿತ ಸದಸ್ಯರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಳೆದ ತಿಂಗಳು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಖ್ಯಾತ ವಕೀಲ ಉಜ್ವಲ … Continued

ಯಲ್ಲಾಪುರ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಕಲಾವಿದ ಚಂದ್ರಶೇಖರ ಸಿದ್ದಿ ಆತ್ಮಹತ್ಯೆ

ಕಾರವಾರ : ಜನಪ್ರಿಯ ರಿಯಾಲಿಟಿ ಶೋ ‘ಕಾಮಿಡಿ ಕಿಲಾಡಿಗಳು’ ಮೂಲಕ ರಾಜ್ಯಕ್ಕೆ ಪರಿಚಿತರಾಗಿದ್ದ ಕಲಾವಿದ ಚಂದ್ರಶೇಖರ ಸಿದ್ದಿ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿಮ್ಮಳ್ಳಿ ಗ್ರಾಮದ ಸಿದ್ದಿ ಸಮುದಾಯಕ್ಕೆ ಸೇರಿದ ಚಂದ್ರಶೇಖರ, ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯಾದ್ಯಂತ ಹೆಸರು ಮಾಡಿದ್ದರು. ನಿನಾಸಂನಲ್ಲಿ ನಾಟಕ … Continued

ಅತ್ಯಾಚಾರ ಪ್ರಕರಣ | ಪ್ರಜ್ವಲ್‌ ರೇವಣ್ಣ ದೋಷಿ ಎಂದು ನ್ಯಾಯಾಲಯ ತೀರ್ಪು : ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿ ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಆಗಸ್ಟ್ 1) ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ತೀರ್ಪು ಪ್ರಕಟಿಸಿದರು. ನಾಳೆ, … Continued

ಬೆಂಗಳೂರು | ಬಾಲಕನ ಅಪಹರಿಸಿ ಬರ್ಬರ ಹತ್ಯೆ : ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ

ಬೆಂಗಳೂರು: ಟ್ಯೂಷನ್​ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಕಗ್ಗಲಿಪುರ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗುರುವಾರ ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಮಾರಕಾಸ್ತ್ರಗಳನ್ನು ಬಳಸಿ ಆರೋಪಿಗಳು … Continued

ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನ

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ ನಟ, ಬಿಗ್‌ ಬಾಸ್‌ ಖ್ಯಾತಿಯ ಪ್ರಥಮ್‌ ಅವರ ಮುಖಕ್ಕೆ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ದೊಡ್ಡಬಳ್ಳಾಪುರ ಎಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ್ದಾಗ ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದರ್ಶನ್‌ ಫ್ಯಾನ್ಸ್‌ ಎನ್ನಲಾಗಿದ್ದ ಕೆಲವರ ವಿರುದ್ಧ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದರು. ಈ … Continued

ಮುಡಾ ಹಗರಣ : ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾ. ದೇಸಾಯಿ ಆಯೋಗ

ಬೆಂಗಳೂರು : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮವಾಗಿ ಸೈಟುಗಳನ್ನು ಹಂಚಿಕೆ ಆರೋಪದ ಬಗ್ಗೆ ತನಿಖೆಗಾಗಿ ನೇಮಕ ಮಾಡಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌. ದೇಸಾಯಿ ಅವರ ನೇತೃತ್ವದ ವಿಚಾರಣಾ ಆಯೋಗವು ಒಂದು ವರ್ಷದ ಬಳಿಕ ರಾಜ್ಯ ಸರ್ಕಾರಕ್ಕೆ ಆರು ಸಂಪುಟಗಳ ವರದಿಯನ್ನು ಗುರುವಾರ ಸಲ್ಲಿಸಿದೆ. ತಮ್ಮ ತಂಡದೊಂದಿಗೆ ಆಗಮಿಸಿದ ನ್ಯಾಯಮೂರ್ತಿ … Continued

ಕೆಎಸ್​ಆರ್​ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ; ಆಗಸ್ಟ್ 5ರಿಂದ ಸ್ತಬ್ಧವಾಗುತ್ತಾ ಬಸ್ಸುಗಳ ಓಡಾಟ..?

ಬೆಂಗಳೂರು : 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ … Continued

ಧರ್ಮಸ್ಥಳ ಪ್ರಕರಣ : 6ನೇ ಸ್ಥಳದಲ್ಲಿ ಮಾನವ ಮೂಳೆ ರೀತಿಯ ಅವಶೇಷಗಳು ಪತ್ತೆ ; ವರದಿ

ಮಂಗಳೂರು : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ 3ನೇ ದಿನ ಗುರುವಾರದ ಶೋಧ ಕಾರ್ಯದ ವೇಳೆ ಆರನೇ ಸ್ಥಳದಲ್ಲಿ ಅಗೆಯುವ ವೇಳೆ ಮೂಳೆ ರೀತಿಯ ಅವಶೇಷಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ. ದೂರುದಾರ ಗುರುತಿಸಿರುವ ನೇತ್ರಾವತಿ ಸ್ನಾನ ಘಟ್ಟದ ಸಮೀಪವಿರುವ … Continued