ರೈತರಿಗೆ ವಂಚಿಸಿದ ‘ಪ್ರಕರಣ’; ಆರೋಪಿ ಪರ ಸಚಿವ ಜಮೀರ್ ಪ್ರಭಾವ ಬೀರಲು ಯತ್ನಿಸಿದರೆ..? ಆಡಿಯೋ ವೈರಲ್‌

ಬೆಂಗಳೂರು: ರಾಜ್ಯದ ರೈತರಿಗೆ ವಂಚಿಸಿದ ತೆಲಂಗಾಣದ ವ್ಯಾಪಾರಿಗಳ ವಿರುದ್ಧದ ಪ್ರಕರಣದಲ್ಲಿ ಆರೋಪಿ ವ್ಯಕ್ತಿಯ ಪರವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಭಾವ ಬೀರಲು ಮುಂದಾಗಿದ್ದರು ಎನ್ನಲಾದ ಪೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಚಿಕ್ಕಬಳ್ಳಾಪುರದ ಪೆರೆಸಂದ್ರ ಪಿಎಸ್‌ಐ ಜಗದೀಶ್ ರೆಡ್ಡಿ ಅವರಿಗೆ ಫೋನ್ ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ರಾಜ್ಯದ ರೈತರಿಗೆ ವಂಚನೆ … Continued

ಮುಂದಿನ 2 ದಿನ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ ಹಾಗೂ ಉತ್ತ-ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್‌ 27, 28 ಹಾಗೂ 29 ರಂದು ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್‌ 26 ರಂದು ಉತ್ತರ ಕನ್ನಡದಲ್ಲಿ ಮಾತ್ರ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ 27 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ … Continued

ಕಿರುತೆರೆ ನಟಿ-ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ವಿರುದ್ಧ ಹಿಟ್‌ & ರನ್‌ ಪ್ರಕರಣ

ಬೆಂಗಳೂರು: ಕಿರುತೆರೆ ನಟಿ, ಬಿಗ್‌ ಬಾಸ್‌ (Bigg boss) ಮಾಜಿ ಸ್ಪರ್ಧಿ ದಿವ್ಯಾ ಸುರೇಶ ಅವರ ವಿರುದ್ಧ ಹಿಟ್ ಆ್ಯಂಡ್ ರನ್ ಆರೋಪ ಕೇಳಿಬಂದಿದೆ. ಅತಿ ವೇಗ ಮತ್ತು ನಿರ್ಲಕ್ಷದಿಂದ ಕಾರು ಚಾಲನೆ ಮಾಡಿದ ಆರೋಪ ಕೇಳಿ ಬಂದಿದ್ದು, ಅಪಘಾತದಲ್ಲಿ ಮಹಿಳೆಯೊಬ್ಬರ ಕಾಲು ಮುರಿದಿದೆ ಎನ್ನಲಾಗಿದೆ. ಅಕ್ಟೋಬರ್ 4ರಂದು ರಾತ್ರಿ 1:30ರ ವೇಳೆಗೆ ಬೆಂಗಳೂರಿನ ಬ್ಯಾಟರಾಯನಪುರ … Continued

ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಕರ್ನಾಟದಲ್ಲಿ ಇಂದು, ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ … Continued

ಹಾವೇರಿ | ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ; ಹೋರಿ ತಿವಿದು ಮೂವರು ಸಾವು

ಹಾವೇರಿ: ದೀಪಾವಳಿ ಹಬ್ಬದ ನಿಮಿತ್ತ ಹಾವೇರಿ ಜಿಲ್ಲೆಯ ವಿವಿಧೆಡೆ ಬುಧವಾರ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಹಾಯ್ದು ಮೂವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಾವೇರಿಯ ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರ ಚಂದ್ರಶೇಖರ ಕೋಡಿಹಳ್ಳಿ (75) ಎಂಬವರು ಮನೆಗೆ ಹೊರಟಿದ್ದ ವೇಳೆ … Continued

ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿನಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ಇದರ … Continued

ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಗುಂಡು

ಮಂಗಳೂರು : ಅಕ್ರಮ ಗೋವು ಸಾಗಣೆಯಲ್ಲಿ ಭಾಗಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬೆನ್ನಟ್ಟಿ, ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು … Continued

“ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆ ಹಂತದಲ್ಲಿದ್ದಾರೆ ಎಂದ ಪುತ್ರ ; ಸಂಭಾವ್ಯ ಉತ್ತರಾಧಿಕಾರಿ ಯಾರೆಂದು ಹೇಳಿದ ಯತೀಂದ್ರ : ರಾಜಕೀಯದಲ್ಲಿ ಸಂಚಲನ…!

ಬೆಂಗಳೂರು/ಬೆಳಗಾವಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರಂತರ ಊಹಾಪೋಹಗಳು ಕೇಳಿಬರುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ ಮತ್ತು ಸಚಿವ ಸತೀಶ ಜಾರಕಿಹೊಳಿ ಅವರಂತಹವರಿಗೆ ‘ಮಾರ್ಗದರ್ಶಕರಾಗಿ’ರಬೇಕು ಎಂದು ಯತೀಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ … Continued

ಅರಬ್ಬೀ ಸಮುದ್ರ-ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ

ಬೆಂಗಳೂರು : ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿಕೆಲದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಚಂಡಮಾರುತವು ಅಂಡಮಾನ್ ಮತ್ತು ನಿಕೋಬಾರ್ … Continued

ಕರ್ನಾಟಕದಲ್ಲಿ ಮಳೆ ಮುಂದುವರಿಕೆ ; ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರದ ಕಾಲ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ … Continued