1ರಿಂದ 8 ನೇ ತರಗತಿ ವರೆಗೆ ಶಾಲೆ ಆರಂಭ: ಆಗಸ್ಟ್ 30ರ ಸಭೆಯಲ್ಲಿ ತೀರ್ಮಾನ

ಬೆಳಗಾವಿ: 1 ರಿಂದ 8ನೇ ತರಗತಿಯವರೆಗೆ ಶಾಲೆಗಳು ಆರಂಭಿಸುವ ಕುರಿತು ಆಗಸ್ಟ್ 30ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಾಲೆ ಆರಂಭಕ್ಕೆ ಪೋಷಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಿತಿಯಲ್ಲಿರುವ ಡಾ. ದೇವಿ ಪ್ರಸಾದ್ ಶೆಟ್ಟಿಯವರು 6 … Continued

ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನಗೆ ತೊಂದರೆ ನೀಡಿದ ದುಷ್ಕರ್ಮಿಗಳು: ದೂರು

ಹೊಸಪೇಟೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಬಂಗ್ಲೆ ಅವರಿಗೆ ದುಷ್ಕರ್ಮಿಗಳು ತೊಂದರೆ ನೀಡಿದ್ದಾರೆ. ಗುರುವಾರ ಮಲ್ಲಿಕಾರ್ಜುನ ಅವರ ಕುಟುಂಬವು ಐತಿಹಾಸಿಕ ಪುಣ್ಯಕ್ಷೇತ್ರವಾದ ಶ್ರೀ ತೇರಿನ ಹನುಮಪ್ಪ, ಶ್ರೀ ತಿರುಗಲ್ ತಿಮ್ಮಪ್ಪ ಮತ್ತು ಶ್ರೀ ಲಕ್ಷ್ಮೀ ದೇವಿ ಮಂದಿರ ದರ್ಶನ ಮಾಡಿ ವಾಪಸ್ಸು ಊರಿಗೆ ತೆರಳುವಾಗ ಅವರಿಗೆ ದುಷ್ಕರ್ಮಿಗಳು ತೊಂದರೆ ನೀಡಿದ್ದಾರೆ. ಈ ದೇವಸ್ಥಾನಗಳ … Continued

ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ನಿಧನ

ಬೆಂಗಳೂರು : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಪ್ರೆಸ್ ಕ್ಲಬ್ ಮಾಜಿ ಉಪಾಧ್ಯಕ್ಷ ಗುಡಿಹಳ್ಳಿ ನಾಗರಾಜ್(66) ಬೆಂಗಳೂರಿನಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶೇಷವಾಗಿ ರಂಗಭೂಮಿಗೆ ವಿಶೇಷ ಕೊಡುಗೆ ನೀಡಿದ್ದ ಗುಡಿಹಳ್ಳಿ, ಪ್ರಜಾವಾಣಿ ಪತ್ರಿಕೆಯಲ್ಲಿ ಸುಧೀರ್ಘ ಅವಧಿಗೆ ಕೆಲಸ ಮಾಡಿದ್ದಾರೆ. ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯವಾಗಿ … Continued

ಕರ್ನಾಟಕದಲ್ಲಿ ಗುರುವಾರ 1,213 ಹೊಸ ಕೊರೊನಾ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕು ಹೊಸ ಪ್ರಕರಣಗಳು ಸತತ ಮೂರನೇ ದಿನ ಇಳಿಕೆಯಾಗಿದೆ. ಗುರುವಾರ 1,213 ಮಂದಿಗೆ ಸೋಂಕು ವರದಿಯಾಗಿದ್ದು, ಇದೇ ವೇಳೆ 25 ಸೋಂಕಿತರು ಮೃತಪಟ್ಟಿದ್ದಾರೆ. 1,206 ಮಂದಿ ಗುಣಮುಖರಾಗಿದ್ದಾರೆ. ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಮಾತ್ರ ಸತತ ಮೂರನೇ ದಿನ ಶೇ.0.6ರಷ್ಟಿದ್ದು, ಮರಣ ದರ ಶೇ.2 ಆಸುಪಾಸಿನಲ್ಲಿದೆ. ಗುರುವಾರ ಅತಿ ಹೆಚ್ಚು ಬೆಂಗಳೂರು … Continued

ಆ.28 ರಿಂದ ಕರ್ನಾಟಕದ 530 ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಒಟ್ಟು 530 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ- ಸಿ.ಇ.ಟಿ.-2021 ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿದ್ದು, ಕೋವಿಡ್ ಗಮನದಲ್ಲಿರಿಸಿಕೊಂಡು ಎಲ್ಲಾ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು … Continued

11 ವರ್ಷದ ಬಾಲಕಿ ಮೇಲೆ ಸೋದರ ಸಂಬಂಧಿಯಿಂದ ಅತ್ಯಾಚಾರದ ಆರೋಪ: ಬಂಧನ

ಸಿದ್ದಾಪುರ : ಸೋದರ ಸಂಬಂಧಿಯಿಂದಲೇ 11 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನಲ್ಲಿ ನಡೆದಿದೆ ಎಂದು ಹೇಳಲಾಗಿದ್ದು, ೧೧ ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಸೋದರ ಸಂಬಂಧಿಯೋರ್ವ ಅ.೨೫ರ ಸಂಜೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಸಿದ್ದಾಪುರ ತಾಲೂಕಿನ … Continued

ಬೈಕ್‌ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿ: ಇಬ್ಬರು ಯುವರು ಸಾವು

ಹುಬ್ಬಳ್ಳಿ: ಉಣಕಲ್ ಕೆರೆ ಬಳಿಯ ಪ್ರೆಸಿಡೆಂಟ್ ಹೊಟೆಲ್ ಹತ್ತಿರ ವೇಗವಾಗಿ ಹೋಗುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ಬುಧವಾರ ಮಧ್ಯರಾತ್ರಿ ೧ ಗಂಟೆಗೆ ಸುಮಾರಿಗೆ ವೇಗವಾಗಿ ಹೋಗುತ್ತಿರುವಾಗ ಬೈಕ್ ನಿಯಂತ್ರಣ ತಪಿ ಪಕ್ಕದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಯಕಿನಲ್ಲಿ ಸವಾರಿ … Continued

ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ವರ್ಸಸ್‌ ಕಾಂಗ್ರೆಸ್‌: ಎಂ.ಬಿ.ಪಾಟೀಲ-ಯಶವಂತರಾಯಗೌಡ ಪಾಟೀಲ ಜಗಳ ತಾರಕಕ್ಕೆ

ವಿಜಯಪುರ: ‘ಪುಣೆಯಲ್ಲಿರುವ ಬಂಥನಾಳ ಶ್ರೀಗಳ ಆಸ್ತಿ ವಿಷಯದಲ್ಲಿ ನನ್ನ ಪಾತ್ರವಿದೆ ಎಂಬ ಮಾಜಿ ಸಚಿವ ಹಾಗೂ ಶಾಸಕ ಎಂ.ಬಿ.ಪಾಟೀಲ ಮಾಡಿರುವ ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಸವಾಲು ಹಾಕಿದ್ದಾರೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಂಥನಾಳ ಮಠದ ಭಕ್ತನಾದ ನಾನು ಅಲ್ಲಿಂದ ಒಳ್ಳೆಯ ಸಂಸ್ಕಾರ ಕಲಿತಿದ್ದೇನೆ. ಆ … Continued

ವಾಯ್ಸ್​ ಮೆಸೇಜ್​ ಮಾಡಿ ಕಾರಿನ ಸಮೇತ ಭದ್ರಾ ನಾಲೆಗೆ ಧುಮುಕಿದ ಒಂದೇ ಕುಟುಂಬದ ನಾಲ್ವರು..!

ಚಿಕ್ಕಮಗಳೂರು: ವಾಯ್ಸ್ ಮೆಸೇಜ್ ಮಾಡಿ ಒಂದೇ ಕುಟುಂಬದ ನಾಲ್ವರು ಕಾರಿನ ಸಮೇತ ಭದ್ರಾ ನಾಲೆಗೆ ಬಿದ್ದ ಘಟನೆ ತರೀಕೆರೆ ತಾಲೂಜಿನ ಎಂ.ಸಿ. ಹಳ್ಳಿ ಬಳಿ ಗುರುವಾರ ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಭದ್ರಾವತಿ ತಾಲೂಕಿನ ಹಳೇ ಜೇಡಿಕಟ್ಟೆ ಗ್ರಾಮದ ಇವರೆಲ್ಲರೂ ಕಾರು ಸಮೇತ ನಾಲೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಲ್ವರಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತಿಬ್ಬರು … Continued

ಮೈಸೂರು ಗ್ಯಾಂಗ್‌ ರೇಪ್‌ ;ವಿಡಿಯೋ ಮಾಡಿ 3 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ದುಷ್ಕರ್ಮಿಗಳು, ದೂರು ಕೊಟ್ರೆ ಸಾಮಾಜಿಕ ಜಾಲತಾಣಕ್ಕೆ ಅಪ್‌ಲೋಡ್‌ ಬೆದರಿಕೆ..!

ಮೈಸೂರು : ಮೈಸೂರಿನ ಲಲಿತಾದ್ರಿಪುರದಲ್ಲಿ ನಡೆದಿದ್ದ ಬೇರೆ ರಾಜ್ಯದ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿದೆ. ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌ ಮಾಡಿದ್ದ ಆರೋಪಿ ಗಳು ಯುವತಿಯ ವಿಡಿಯೋವನ್ನು ಸೆರೆ ಹಿಡಿದು, ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದೆ ಇದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್‌ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ ಎನ್ನುವ … Continued