ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗೀಕರಣ ಪ್ರಶ್ನಿಸಿದ್ದ ಮನವಿ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಶ್ನಿಸಿ ವಿಮಾನ ನಿಲ್ದಾಣಗಳ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ವಜಾ ಮಾಡಿದೆ. ವಿಮಾನ ನಿಲ್ದಾಣಗಳನ್ನು ಗುತ್ತಿಗೆ ನೀಡುವ ನೀತಿ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಇದರಲ್ಲಿ ನ್ಯಾಯಾಲಯದ ಮಧ್ಯಪ್ರವೇಶದ ಅಗತ್ಯವಿಲ್ಲ ಎಂದು ಹೇಳಿದ್ದ ಕೇರಳ ಹೈಕೋರ್ಟ್‌ ನಿರ್ಧಾರವನ್ನು ಆಧರಿಸಿ ಹಂಗಾಮಿ … Continued

ಮಹಾರಾಷ್ಟ್ರ: ದೋಣಿ ಮಗುಚಿ ಮೂವರು ಸಾವು, ಹಲವರು ನಾಪತ್ತೆ

ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಮಂಗಳವಾರ ದೋಣಿ ಮಗುಚಿ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದುರ್ಘನೆಯಲ್ಲಿ ಕನಿಷ್ಠ ಎಂಟು ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸ್ ತಂಡ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಪ್ರಾಪ್ತ ಬಾಲಕಿ ಸೇರಿದಂತೆ ಈವರೆಗೆ ಮೂರು ಮೃತದೇಹಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಅಧಿಕಾರಿಯೊಬ್ಬರು … Continued

ಕೋಲ್ಕತ್ತಾ: ಬಿಜೆಪಿ ಸಂಸದ ಅರ್ಜುನ್​ ಸಿಂಗ್​ ಮನೆ ಮೇಲೆ ಎರಡನೇ ಸಲ ಬಾಂಬ್​ ದಾಳಿ..!

ಕೋಲ್ಕತ್ತಾ: ಕೋಲ್ಕತ್ತಾ ಸಮೀಪದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಮೇಲೆ ಮಂಗಳವಾರ ಮತ್ತೊಮ್ಮೆ ಬಾಂಬ್ ದಾಳಿ ನಡೆಸಲಾಗಿದೆ. ಮೊದಲ ಘಟನೆ ನಡೆದು ಒಂದು ವಾರದ ನಂತರ ಮತ್ತೆ ಈ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ 8;30 ರ ಸುಮಾರಿಗೆ ಅವರ ಮನೆಯ ಹಿಂಭಾಗದಲ್ಲಿ ಕಚ್ಚಾ ಬಾಂಬ್‌ ಎಸೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು … Continued

ಮಾನನಷ್ಟ ಪ್ರಕರಣ: ವಿಚಾರಣೆಗೆ ಹಾಜರಾಗದಿದ್ದರೆ ಬಂಧನ ವಾರೆಂಟ್ ಹೊರಡಿಸಬೇಕಾದೀತು- ಕಂಗನಾಗೆ ಮುಂಬೈ ನ್ಯಾಯಾಲಯ ಎಚ್ಚರಿಕೆ

ಮುಂಬೈ ಪ್ರಸಿದ್ಧ ಚಲನಚಿತ್ರ ಸಾಹಿತಿ ಜಾವೇದ್‌ ಅಖ್ತರ್‌ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ ಮುಂಬೈನ ನ್ಯಾಯಾಲಯವೊಂದು ಮುಂದಿನ ವಿಚಾರಣೆಯ ವೇಳೆಗೆ ಬಾಲಿವುಡ್‌ ನಟಿ ಕಂಗನಾ ರನೌತ್‌ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಅವರ ವಿರುದ್ಧ ಬಂಧನ ವಾರೆಂಟ್‌ ಹೊರಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ ಎಮದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ. ಕಂಗನಾ … Continued

ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ: ಕೇಂದ್ರ, ರಾಜ್ಯಗಳಿಂದ ವರದಿ ಕೇಳಿದ ಎನ್‌ಎಚ್‌ಆರ್‌ಸಿ

ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಿಂದ ವಾಣಿಜ್ಯ ಚಟುವಟಿಕೆಗಳು ಹಾಗೂ ಜನರ ಸಂಚಾರದ ಮೇಲಾಗುತ್ತಿರುವ ಪರಿಣಾಮಗಳ ಕುರಿತು ವರದಿ ಪಡೆಯಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಮುಂದಾಗಿದೆ. ಈ ಸಂಬಂಧ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ, ದೆಹಲಿ, ರಾಜಸ್ಥಾನ, ಹರಿಯಾಣ ಹಾಗೂ ಉತ್ತರ ಪ್ರದೇಶ ರಾಜ್ಯ … Continued

ಒಡಿಸ್ಸಾದಲ್ಲಿ ಭಾರೀ ಮಳೆಗೆ ನದಿಗೆ ಉರುಳಿದ ಗೂಡ್ಸ್‌ ರೈಲು

ಭುವನೇಶ್ವರ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗೂಡ್ಸ್‌ ರೈಲಿನ ಆರು ಬೋಗಿಗಳು ಹಳಿ ತಪ್ಪಿ ನದಿಗೆ ಉರುಳಿದ ಘಟನೆ ಒಡಿಶಾದಲ್ಲಿ ನಡೆದಿದೆ. ಈಸ್ಟ್ ಕೋಸ್ಟ್ ರೈಲ್ವೇಸ್ ನ ಅಂಗುಲ್-ತಲ್ಚರ್ ರಸ್ತೆ ಮಾರ್ಗದಲ್ಲಿ ಚಲಿಸುತ್ತಿರುವ ಗೂಡ್ಸ್ ರೈಲಿನ ಕನಿಷ್ಠ ಆರು ಬೋಗಿಗಳು ಮಂಗಳವಾರ ಮುಂಜಾನೆ ಹಳಿ ತಪ್ಪಿ ನದಿಗೆ ಬಿದ್ದಿವೆ ಎಂದು ಅಧಿಕಾರಿಗಳು … Continued

ಅತ್ಯಾಚಾರ ಪ್ರಕರಣದಲ್ಲಿ ಎಲ್‌ಜೆಪಿ ಸಂಸದ ಪ್ರಿನ್ಸ್ ರಾಜ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಚಿರಾಗ್ ಪಾಸ್ವಾನ್ ಅವರ ಸೋದರ ಸಂಬಂಧಿ ಲೋಕ ಜನಶಕ್ತಿ ಪಕ್ಷದ (ಎಲ್ ಜೆಪಿ) ಸಂಸದ ಪ್ರಿನ್ಸ್‌ ರಾಜ್ ಅವರ ವಿರುದ್ಧ ಮಹಿಳೆಯೊಬ್ಬಳು ದೆಹಲಿಯಲ್ಲಿ ಅತ್ಯಚಾರದ ಪ್ರಕರಣ ದಾಖಲಿಸಿದ್ದಾರೆ. ಎಲ್‌ಜೆಪಿ ಕಾರ್ಯಕರ್ತೆಯಾಗಿರುವ ಮಹಿಳೆ, ಬಿಹಾರದ ಸಮಸ್ಟಿಪುರದ ಸಂಸದ ಪ್ರಿನ್ಸ್‌ ರಾಜ್ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಮತ್ತು ಬೆದರಿಕೆ ಹಾಕಿದ್ದಾರೆ ಎಂದು ಮೂರು ತಿಂಗಳ ಹಿಂದೆ … Continued

ಮೊಹಾಲಿ ಮನೆಯಲ್ಲಿ ಶವವಾಗಿ ಪತ್ತೆಯಾದ ರಾಷ್ಟ್ರಮಟ್ಟದ ಶೂಟರ್

ಚಂಡೀಗಢ : ಅಂತಾರಾಷ್ಟ್ರೀಯ ಶೂಟರ್‌ ನಮನ್‌ವೀರ್ ಸಿಂಗ್‌ ಬ್ರಾರ್‌ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ದೇಹಕ್ಕೆ ಗುಂಡು ತಗುಲಿ ಮೃತಪಟ್ಟಿದ್ದು ಶಂಕೆ ವ್ಯಕ್ತವಾಗಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 28 ವರ್ಷದ ಶೂಟರ್‌ ನಮನ್‌ ವೀರ್‌ ಸಿಂಗ್‌ ಬ್ರಾರ್‌ ಅವರು ಸೋಮವಾರ ಬೆಳಗ್ಗೆ ಮೊಹಾಲಿಯಲ್ಲಿರುವ ತಮ್ಮ ಮನೆಯಲ್ಲಿ ಸಾವಿಗೀಡಾಗಿದ್ದು,ತಮ್ಮ ತಲೆಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು … Continued

ಮೂರನೇ ಅಲೆ ಆತಂಕದ ನಡುವೆ, 10ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು:ಅಲ್ಪ ಬದಲಾವಣೆ ದಿಢೀರ್‌ ಏರಿಕೆಯಲ್ಲ ಎಂದ ತಜ್ಞರು

ನವದೆಹಲಿ: ಮೂರನೇ ಅಲೆಯು ಮಕ್ಕಳನ್ನು ಕಾಡಬಹುದು ಎಂಬ ಆತಂಕದ ನಡುವೆ, ಕೇಂದ್ರದ ತಜ್ಞರ ಸಮಿತಿ (expert panel ) ಈ ವರ್ಷದ ಮಾರ್ಚ್ ನಿಂದ ಮಕ್ಕಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದೆ. ದೇಶದ ವೈದ್ಯಕೀಯ ಮೂಲಸೌಕರ್ಯ ಮತ್ತು ಕೋವಿಡ್ ಮ್ಯಾನೇಜ್‌ಮೆಂಟ್ ಯೋಜನೆಯನ್ನು ನಿರ್ವಹಿಸುವ ಎಂಪವರ್ಡ್ ಗ್ರೂಪ್ -1 (ಇಜಿ -1), ಅದರ ದತ್ತಾಂಶದಲ್ಲಿ, … Continued

ಕ್ವಾಡ್ ಶೃಂಗಸಭೆ, ಯುಎನ್ ಜಿಎ ಚರ್ಚೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅಮೆರಿಕಕ್ಕೆ

ನವದೆಹಲಿ: ಸುಮಾರು ಆರು ತಿಂಗಳಲ್ಲಿ ತನ್ನ ಮೊದಲ ವಿದೇಶಿ ಭೇಟಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಡ್ (Quad) ಲೀಡರ್ ಶೃಂಗಸಭೆ ಮತ್ತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (UNGA) ಉನ್ನತ ಮಟ್ಟದ ವಿಭಾಗದಲ್ಲಿ ಭಾಗವಹಿಸಲು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 24 ರಂದು, ವಾಷಿಂಗ್ಟನ್‌ನಲ್ಲಿ ಕ್ವಾಡ್‌ ಚೌಕಟ್ಟಿನ ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದು, ಇದನ್ನು … Continued