ಎಐಎಸ್ಎಂಕೆ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ ತಮಿಳು ನಟ ಶರತ್ ಕುಮಾರ

ಚೆನ್ನೈ: ಲೋಕಸಭೆ ಚುನಾವಣೆಗೆ ಮುನ್ನ, ತಮಿಳು ಹಿರಿಯ ನಟ ಆರ್. ಶರತಕುಮಾರ ಅವರು ಮಂಗಳವಾರ (ಮಾರ್ಚ್ 12) ತಮ್ಮ ಅಖಿಲ ಭಾರತೀಯ ಸಮತುವ ಮಕ್ಕಳ್ ಕಚ್ಚಿ (AISMK) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ. ಎಐಎಸ್‌ಎಂಕೆ (AISMK) ಪದಾಧಿಕಾರಿಗಳು ಮತ್ತು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರ ಸಮ್ಮುಖದಲ್ಲಿ ಶರತಕುಮಾರ ತಮ್ಮ ಪಕ್ಷವನ್ನು ಬಿಜೆಪಿ ಪಕ್ಷದೊಂದಿಗೆ ವಿಲೀನಗೊಳಿಸಿದರು. … Continued

ಮನೋಹರಲಾಲ ಖಟ್ಟರ್ ರಾಜೀನಾಮೆ ನಂತರ ಹರಿಯಾಣದ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಆಯ್ಕೆ

ನವದೆಹಲಿ : ನಯಾಬ್ ಸಿಂಗ್ ಸೈನಿ ಅವರು ಹರಿಯಾಣದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮಂಗಳವಾರ ಮಧ್ಯಾಹ್ನ ಪ್ರಕಟಿಸಿದೆ. ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ , ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಅವರ ಜೆಜೆಪಿಯ ಮೂವರು ಸದಸ್ಯರು ಸೇರಿದಂತೆ ಮನೋಹರ ಖಟ್ಟರ್‌ ಅವರ ಇಡೀ ಸಚಿವ ಸಂಪುಟ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ನೂತನ ಮುಖ್ಯಮಂತ್ರಿ … Continued

ವೀಡಿಯೊ…| ಭಾರತದ ಎಲ್ಲ ಮುಸ್ಲಿಮರು ‘ಸಿಎಎ’ ಸ್ವಾಗತಿಸಬೇಕು…: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಬರೇಲಿ (ಉತ್ತರ ಪ್ರದೇಶ) : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸಿದ ಕೆಲವು ಗಂಟೆಗಳ ನಂತರ, ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಈ ಕಾನೂನನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಹಾಗೂ ಅವರು ಮುಸ್ಲಿಂ ಸಮುದಾಯದ ಭಯ ನಿವಾರಿಸಲು ಪ್ರಯತ್ನಿಸಿದ್ದಾರೆ. ಇದು Bಆರತದ ಮುಸ್ಲಿಮರ ಪೌರತ್ವದ … Continued

ಮಿತ್ರ ಪಕ್ಷಗಳಲ್ಲಿ ಬಿರುಕು : ಹರಿಯಾಣ ಸಿಎಂ ಮನೋಹರಲಾಲ ಖಟ್ಟರ್‌-ಸಚಿವರ ದಿಢೀರ್‌ ರಾಜೀನಾಮೆ…!

ನವದೆಹಲಿ: ಹರ್ಯಾಣದ ಬಿಜೆಪಿ ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಊಹಾಪೋಹಗಳ ನಡುವೆ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಹರ್ಯಾಣದಲ್ಲಿ ಈ ಬೆಳವಣಿಗೆ ನಡೆದಿದೆ. ಖಟ್ಟರ್ ಹಾಗೂ ಅವರ ಸಂಪುಟದ ಸಚಿವರು ರಾಜಭವನಕ್ಕೆ ತೆರಳಿ ರಾಜ್ಯಪಾಲ … Continued

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಕೇಂದ್ರ ಸರ್ಕಾರದ ಅಧಿಸೂಚನೆ ನಂತರ ನಾವು ಜಾರಿ ಮಾಡಲ್ಲ ಎಂದ ಪಶ್ಚಿಮ ಬಂಗಾಳ, ಕೇರಳ ಸಿಎಂಗಳು

ನವದೆಹಲಿ: 2019 ರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದ್ದರೂ ಸಹ, ತಮ್ಮ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯ … Continued

ಇ.ಡಿ.ಅಧಿಕಾರಿಗಳ ಮೇಲೆ ಹಲ್ಲೆ ಪ್ರಕರಣ: ಕಲ್ಕತ್ತಾ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಮಾನತುಗೊಂಡ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಹಜಹಾನ್ ಶೇಖ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ (ಇ ಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಇದೇ ವೇಳೆ ನ್ಯಾಯಮೂರ್ತಿಗಳಾದ … Continued

ಎಂಐಆರ್‌ವಿ (MIRV) ತಂತ್ರಜ್ಞಾನ ಹೊಂದಿದ ಅಗ್ನಿ-5 ಕ್ಷಿಪಣಿಯ ಉಡಾವಣೆ ಯಶಸ್ವಿ : ಆಯ್ದ ಕೆಲವೇ ದೇಶಗಳ ಪಟ್ಟಿಗೆ ಭಾರತವೂ ಸೇರ್ಪಡೆ

ನವದೆಹಲಿ: ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (MIRV) ತಂತ್ರಜ್ಞಾನವನ್ನು ಹೊಂದಿರುವ ಮಿಷನ್ ದಿವ್ಯಾಸ್ತ್ರ ಎಂದು ಹೆಸರಿಸಲಾದ ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಚೊಚ್ಚಲ ಹಾರಾಟ ಪರೀಕ್ಷೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಯಶಸ್ವಿಯಾಗಿ ನಡೆಸಿದೆ. ಈ ಪರೀಕ್ಷೆಯೊಂದಿಗೆ, ಭಾರತವು ಬಹು ಸ್ವತಂತ್ರವಾಗಿ ಟಾರ್ಗೆಟಬಲ್ ರೀಎಂಟ್ರಿ ವೆಹಿಕಲ್ (MIRV) ಸಾಮರ್ಥ್ಯವನ್ನು ಹೊಂದಿರುವ ರಾಷ್ಟ್ರಗಳ … Continued

ತಮಿಳುನಾಡು: ಬಿಜೆಪಿ ಸೇರಿದ ನಟ ರಜನಿಕಾಂತ ಅಭಿಮಾನಿಗಳು

ಚೆನ್ನೈ: ಲೋಕಸಭಾ ಚುನಾವಣಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ತಮಿಳುನಾಡಲ್ಲಿ ಬಿಜೆಪಿ ಪಕ್ಷವನ್ನು ಬಲವರ್ಧನೆ ಮಾಡುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಸೂಪರ್ ಸ್ಟಾರ್ ರಜನಿಕಾಂತ ಅಭಿಮಾನಿ ಸಂಘದ ಸದಸ್ಯರು ಬಿಜೆಪಿ(BJP)ಗೆ ಸೇರ್ಪಡೆಯಾಗಿದ್ದಾರೆ. ಚೆನ್ನೈನಲ್ಲಿ ಸೋಮವಾರ ಅಣ್ಣಾಮಲೈ ನೇತೃತ್ವದಲ್ಲಿ ರಜನಿ ಅಭಿಮಾನಿ ಸಂಘದ (Rajini fans club) ಸದಸ್ಯರು ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಸಮ್ಮುಖದಲ್ಲಿ … Continued

ಲೋಕಸಭೆ ಚುನಾವಣೆಗೂ ಮುನ್ನ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ನಂತರ ಕೇಂದ್ರ ಸರ್ಕಾರವು ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತಂದಿದೆ. ಭಾರತೀಯ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವ ಮುನ್ನವೇ ಈ ಅಧಿಸೂಚನೆ ಹೊರಬಿದ್ದಿದೆ. ಅರ್ಜಿಗಳನ್ನು ಆನ್‌ಲೈನ್ ಮೋಡ್‌ನಲ್ಲಿ ಸಲ್ಲಿಸಲಾಗುತ್ತದೆ. ಇದಕ್ಕಾಗಿ ವೆಬ್ ಪೋರ್ಟಲ್ ಅನ್ನು ಒದಗಿಸಲಾಗಿದೆ. ಕಳೆದ ತಿಂಗಳು, ಕೇಂದ್ರ ಗೃಹ ಸಚಿವ … Continued

₹105 ಕೋಟಿ ತೆರಿಗೆ : ಐಟಿಎಟಿ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ನವದೆಹಲಿ: ಆದಾಯ ತೆರಿಗೆ (ಐಟಿ) ಇಲಾಖೆಯು ₹105 ಕೋಟಿಗಿಂತಲೂ ಹೆಚ್ಚಿನ ತೆರಿಗೆ ಪಾವತಿಸುವಂತೆ ತನಗೆ ನೀಡಿದ್ದ ನೋಟಿಸಿಗೆ ತಡೆ ನೀಡಲು ನಿರಾಕರಿಸಿದ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಆದೇಶ ಪ್ರಶ್ನಿಸಿ ಕಾಂಗ್ರೆಸ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ ಮತ್ತು ನ್ಯಾಯಮೂರ್ತಿ ತುಷಾರ ರಾವ್ ಗೆಡೇಲಾ ಅವರಿದ್ದ ಪೀಠದ ಮುಂದೆ … Continued