ಆಂಧ್ರಪ್ರದೇಶ 8-ವರ್ಷದ ಹುಡುಗ ಕುಟುಂಬದ ಪೋಷಣೆಗಾಗಿ ಇ- ಆಟೊರಿಕ್ಷಾ ಓಡಿಸುತ್ತಾನೆ..!

ವಿಜಯವಾಡ: ಎಂಟು ವರ್ಷದ ರಾಜ ಗೋಪಾಲ್ ರೆಡ್ಡಿ ತನ್ನ ಚಿಕ್ಕ ಹೆಗಲ ಮೇಲೆ ಸಂಸಾರದ ಭಾರ ಹೊತ್ತಿದ್ದಾನೆ..! ಆತ ತನ್ನ ಅಂಧ ಹೆತ್ತವರಿಗೆ ಮತ್ತು ಇಬ್ಬರು ಕಿರಿಯ ಸಹೋದರರಿಗೆ ಆಹಾರ ಒದಗಿಸಲು ಈತ ಎಲೆಕ್ಟ್ರಿಕ್ ಆಟೋ ಓಡಿಸುತ್ತಾನೆ…! ರಾಜಗೋಪಾಲ ಇ-ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಈ ಚಿಕ್ಕ ಹುಡುಗನ ಕಥೆ … Continued

ಭ್ರಷ್ಟಾಚಾರ ಪ್ರಕರಣ: ವಿ.ಕೆ.ಶಶಿಕಲಾಗೆ ಸೇರಿದ ಸುಮಾರು 100 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಐಟಿ..!

ಚೆನ್ನೈ: ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ.ಶಶಿಕಲಾ ಅವರಿಗೆ ಸಂಬಂಧಪಟ್ಟ ಸುಮಾರು 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದೆ. ಮಾಜಿ ಮುಖ್ಯಮಂತ್ರಿ ಜಯಲಲಿತಾರ ಆಪ್ತೆಯಾಗಿದ್ದ ಶಶಿಕಲಾ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದರು. ಚೆನ್ನೈನ ಹೊರವಲಯದಲ್ಲಿರುವ ಪಯನೂರ್​ ಗ್ರಾಮದಲ್ಲಿ, ಸುಮಾರು 24 ಎಕರೆ ಪ್ರದೇಶಗಳಷ್ಟು ವಿಸ್ತೀರ್ಣದಲ್ಲಿದ್ದ 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ, ಬೇನಾಮಿ ನಿಷೇಧ ಕಾಯ್ದೆಯಡಿ … Continued

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಾಳೆ ಬ್ರಿಕ್ಸ್ ಶೃಂಗಸಭೆ: ಚೀನಾ ಅಧ್ಯಕ್ಷ ಜಿನ್‍ಪಿಂಗ್ ಕೂಡ ಭಾಗಿ

ನವದೆಹಲಿ:ಭಾರತದ ಅಧ್ಯಕ್ಷತೆಯಲ್ಲಿ ನಾಳೆ (ಸೆಪ್ಟೆಂಬರ್‌ 9ರಂದು) ನಡೆಯಲಿರುವ 13ನೆ ಬ್ರಿಕ್ಸ್ ಶೃಂಗಸಭೆಗೆ ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಭಾಗವಹಿಸಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನಿಂಗ್ ತಿಳಿಸಿದ್ದಾರೆ. ಗುರುವಾರ 13ನೆ ಬ್ರಿಕ್ಸ್ ಶೃಂಗಸಭೆಯು ವರ್ಚುವಲ್‌ ಮೂಲಕ ನಡೆಯಲಿದ್ದು, ಭಾರತ, ರಷ್ಯಾ, ಬ್ರೇಜಿಲ್‌, ಚೀನಾ ಮತ್ತು ದಕ್ಷಿಣ ಆಫ್ರಿಕಾ (ಬ್ರಿಕ್ಸ್) ನಾಯಕರ ವರ್ಚುವಲ್ ಸಭೆಗೆ … Continued

ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಮಹಿಳೆಯರ ಸೇರ್ಪಡೆಗೆ ಕೇಂದ್ರ ಸರ್ಕಾರ ಒಪ್ಪಿಗೆ: ಸುಪ್ರೀಂ ಕೋರ್ಟ್‌ಗೆ ಮಾಹಿತಿ

ನವದೆಹಲಿ: ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಯುವತಿಯರನ್ನು ಸೇರ್ಪಡೆಗೊಳಿಸುವುದಕ್ಕೆ ಸಂಬಂಧಿಸಿದಂತೆ ತಾನು ರಕ್ಷಣಾ ಪಡೆಗಳ ಜೊತೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಂಡಿರುವುದಾಗಿ ಕೇಂದ್ರ ಸರ್ಕಾರವು ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ವಿಚಾರವನ್ನು ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಐಶ್ವರ್ಯಾ ಭಾಟಿ ನ್ಯಾಯಾಲಯಕ್ಕೆ ತಿಳಿಸಿದರು. “ಈ ವಿಚಾರವನ್ನು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತಿದೆ. ಯುವತಿಯರು ಎನ್‌ಡಿಎಗೆ ಸೇರಲು ಅನುಮತಿಸಲಾಗುವುದು. … Continued

ಉತ್ತರಾಖಂಡ ರಾಜ್ಯಪಾಲೆ ಬೇಬಿ ರಾಣಿ ಮೌರ್ಯ ರಾಜೀನಾಮೆ

ಡೆಹ್ರಾಡೂನ್: ಉತ್ತರಾಖಂಡ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುವ ಎರಡು ವರ್ಷಗಳ ಮೊದಲೇ ಬುಧವಾರ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದರು ಎಂದು ರಾಜ್ ಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರು ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ. ಮೌರ್ಯ ಉತ್ತರಾಖಂಡದ ರಾಜ್ಯಪಾಲರಾಗಿ … Continued

ಪಶ್ಚಿಮ ಬಂಗಾಳ: ಬಿಜೆಪಿ ಸಂಸದ ಅರ್ಜುನ್‌ ಸಿಂಗ್‌ ಮನೆ ಗೇಟಿಗೆ ಕಚ್ಚಾ ಬಾಂಬ್‌ ಎಸೆತ

ಕೋಲ್ಕತ್ತಾ: ಬಿಜೆಪಿ ಸಂಸದ ಅರ್ಜುನ್‌ ಸಿಂಗ್‌ ಅವರ ಮನೆಯ ಸಮೀಪದಲ್ಲಿ ಇಂದು (ಬುಧವಾರ) ಬೆಳಗ್ಗೆ ಮೂರು ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದೆ. ಕೋಲ್ಕತ್ತಾದಿಂದ ಸುಮಾರು 100 ಕಿ.ಮೀ. ದೂರದ ಜಗತ್‌ದಲ್‌ನಲ್ಲಿರುವ ಅರ್ಜುನ್‌ ಸಿಂಗ್‌ ಅವರ ಮನೆಯ ಗೇಟಿಗೆ ಬಾಂಬ್‌ಗನನು ಎಸೆಯಲಾಗಿದ್ದು. ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಳಗ್ಗೆ 6:30ರ ಸುಮಾರಿಗೆ ಈ ಕಚ್ಚಾ ಬಾಂಬ್‌ಗಳು ಸ್ಫೋಟಿಸಿರುವುದಾಗಿ … Continued

ಪಿಎಚ್‌ಡಿ -ಸ್ನಾತಕೋತ್ತರ ಪದವಿ ಪಡೆದವರು ನಿಷ್ಪ್ರಯೋಜಕರು, ಅವುಗಳಿಲ್ಲದ ಮುಲ್ಲಾ ಅತ್ಯುತ್ತಮ: ತಾಲಿಬಾನ್‌ ಶಿಕ್ಷಣ ಸಚಿವ..!

ತಾಲಿಬಾನ್ ಅಡಿಯಲ್ಲಿ ಅಫ್ಘಾನಿಸ್ತಾನದಲ್ಲಿ ವಿಶ್ವವಿದ್ಯಾನಿಲಯ ತೆರೆದಾಗ, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರನ್ನು ಪರದೆ ಮೂಲಕ ಬೇರ್ಪಡಿಸಲಾಯಿತು. ಈಗ ತಾಲಿಬಾನ್ ಶಿಕ್ಷಣ ಸಚಿವ ಶೇಖ್ ಮೊರ್ವಿ ನೂರ್ಲಾ ಮುನೀರ್‌  ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ಅವರ ಪ್ರಕಾರ, ಡಾಕ್ಟರೇಟ್ ಮತ್ತು ಸ್ನಾತಕೋತ್ತರ ಪದವಿಗಳು ಯೋಗ್ಯವಾಗಿಲ್ಲ ಯಾಕೆಂದರೆ ಅದು ಮುಲ್ಲಾರಲ್ಲಿ ಇಲ್ಲ ಎಂದು ಅವರು ಹೇಳಿದ್ದಾರೆ ಮತ್ತು ಅವರು “ಎಲ್ಲರಿಗಿಂತ ಬೆಸ್ಟ್‌” … Continued

ಭಾರತದಲ್ಲಿ 37,875 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 37,875 ಹೊಸ ಪ್ರಕರಣಗಳನ್ನು ದಾಖಲಿಸಿದ್ದು, ದೇಶದ ಒಟ್ಟಾರೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 3,30,96,718 ಕ್ಕೆ ತಲುಪಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತ 369 ಸಾವುಗಳನ್ನು ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು … Continued

ತಾಲಿಬಾನ್ ಸರ್ಕಾರದೊಂದಿಗೆ ಭಾರತ ವ್ಯವಹರಿಸ ಕೂಡದು:ಯಶವಂತ್ ಸಿನ್ಹಾ

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಹೊಸದಾಗಿ ರಚನೆಯಾದ ಸರ್ಕಾರದೊಂದಿಗೆ ಭಾರತ ಯಾವುದೇ ರೀತಿಯ ವ್ಯವಹಾರ ನಡೆಸಬಾರದು ಎಂದು ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಯಶವಂತ್ ಸಿನ್ಹಾ ಮಂಗಳವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. “ಅಫ್ಘಾನಿಸ್ತಾನದಲ್ಲಿ ಹೊಸದಾಗಿ ರಚನೆಯಾಗಿರುವ ತಾಲಿಬಾನ್ ಸರ್ಕಾರದೊಂದಿಗೆ ಭಾರತ ಯಾವುದೇ ರೀತಿಯ ವ್ಯವಹಾರ ನಡೆಸಬಾರದು” ಎಂದು ಅವರು ಟ್ವೀಟ್ ಮಾಡಿದ್ದಾರೆ. ಇತ್ತೀಚಿಗೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ತಾಲಿಬಾನ್‌ನೊಂದಿಗೆ … Continued

ಆಜ್ ತಕ್ ಟ್ರೇಡ್‌ಮಾರ್ಕ್ ಉಲ್ಲಂಘಿಸುವ 25 ವೆಬ್‌ಸೈಟ್‌ ಖಾತೆಗಳ ನಿರ್ಬಂಧಿಸುವಂತೆ ಗೂಗಲ್, ಫೇಸ್‌ಬುಕ್‌ಗೆ ದೆಹಲಿ ಹೈಕೋರ್ಟ್ ನಿರ್ದೇಶನ

ನವದೆಹಲಿ: ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರ ದೆಹಲಿ ಹೈಕೋರ್ಟ್ ಏಕಸದಸ್ಯ ಪೀಠವು ಸೋಮವಾರ 25 ವಿಭಿನ್ನ ವೆಬ್‌ಸೈಟ್‌ಗಳು, ಖಾತೆಗಳು ಮತ್ತು “ಆಜ್ ತಕ್” ಟ್ರೇಡ್‌ಮಾರ್ಕ್ ಅನ್ನು ಉಲ್ಲಂಘಿಸಿದ ಆರೋಪದ ಪುಟಗಳನ್ನು ನಿರ್ಬಂಧಿಸಲು ಗೂಗಲ್ ಮತ್ತು ಫೇಸ್‌ಬುಕ್‌ಗೆ ಆದೇಶಿಸಿದೆ. ಸೆಪ್ಟೆಂಬರ್ 2020ರಲ್ಲಿ, ಹೈಕೋರ್ಟ್ ನಾಲ್ಕು ಪ್ರತಿವಾದಿಗಳ ವಿರುದ್ಧ ಇದೇ ರೀತಿಯ ಆದೇಶವನ್ನು ನೀಡಿತ್ತು, ಅದನ್ನು ಈಗ … Continued