ರಾಹುಲ್ ಗಾಂಧಿ ಶ್ರೀರಾಮನ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದ ನಾನಾ ಪಟೋಲೆ ; ಇದು “ಅತಿರೇಕದ ಚಮಚಾಗಿರಿ” ಎಂದ ಬಿಜೆಪಿ

ನವದೆಹಲಿ : ಕಾಂಗ್ರೆಸ್ ನಾಯಕ ನಾನಾ ಪಟೋಲೆ ಅವರು ರಾಹುಲ್ ಗಾಂಧಿ ಅವರನ್ನು ಭಗವಾನ್ ಶ್ರೀರಾಮನಿಗೆ ಹೋಲಿಸಿರುವುದು ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪಟೋಲೆ ಅವರ ಈ ಹೇಳಿಕೆಯನ್ನು ಬಿಜೆಪಿ “ಅತಿರೇಕದ ಚಮಚಾಗಿರಿ” (Sycophancy Pro Max) ಎಂದು ಟೀಕಿಸಿದೆ. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯಾದ ನಂತರ ರಾಹುಲ್ ಗಾಂಧಿ ಅವರು ಅಲ್ಲಿಗೆ ಭೇಟಿ ನೀಡದಿರುವ … Continued

ಭಾರಿ ತೆರಿಗೆ ಏರಿಕೆ; ಫೆಬ್ರವರಿ 1ರಿಂದ ಸಿಗರೇಟ್, ಬೀಡಿ, ಪಾನ್ ಮಸಾಲ ದುಬಾರಿ

ನವದೆಹಲಿ: ದೇಶದಲ್ಲಿ ಸಿಗರೇಟ್, ತಂಬಾಕು ಉತ್ಪನ್ನಗಳು ಮತ್ತು ಪಾನ್ ಮಸಾಲಾ ಬೆಲೆಗಳು ಫೆಬ್ರವರಿ 1, 2026 ರಿಂದ ಗಣನೀಯವಾಗಿ ಏರಿಕೆಯಾಗಲಿವೆ. ಪ್ರಸ್ತುತ ಚಾಲ್ತಿಯಲ್ಲಿರುವ ಜಿಎಸ್‌ಟಿ (GST) ಪರಿಹಾರ ಸೆಸ್ ಅನ್ನು ರದ್ದುಗೊಳಿಸಿ, ಅದರ ಬದಲಿಗೆ ಹೊಸ ಅಬಕಾರಿ ಸುಂಕ ಮತ್ತು ಸೆಸ್ ವಿಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ತಡರಾತ್ರಿ ಹೊರಡಿಸಲಾದ ಅಧಿಕೃತ ಅಧಿಸೂಚನೆಯ ಪ್ರಕಾರ, … Continued

2012ರ ಪುಣೆ ಸ್ಫೋಟ ಪ್ರಕರಣದ ಆರೋಪಿ ಗುಂಡಿಕ್ಕಿ ಹತ್ಯೆ

2012ರ ಪುಣೆ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಅಸ್ಲಂ ಶಬ್ಬೀರ್ ಶೇಖ್ ಅಲಿಯಾಸ್ ಬಂಟಿ ಜಹಾಗೀರ್‌ದಾರ್‌ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಶ್ರೀರಾಂಪುರದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಬಂಟಿ ಜಹಾಗೀರ್‌ದಾರ್ ಅಂತ್ಯಕ್ರಿಯೆಯೊಂದರಲ್ಲಿ ಪಾಲ್ಗೊಳ್ಳಲು ಶ್ರೀರಾಂಪುರಕ್ಕೆ ಆಗಮಿಸಿದ್ದ. ಸ್ಮಶಾನದಿಂದ ವಾಪಸ್ ಬರುತ್ತಿದ್ದಾಗ, ಜರ್ಮನ್ ಆಸ್ಪತ್ರೆಯ ಮುಖ್ಯ ದ್ವಾರದ ಬಳಿ ಹೊಂಚು ಹಾಕಿದ್ದ ಇಬ್ಬರು … Continued

ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆ ಎಲ್‌ ಪಿಜಿ ಸಿಲಿಂಡರ್‌ ದರದಲ್ಲಿ ಹೆಚ್ಚಳ

2026ರ ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆ ಎಲ್‌ಪಿಜಿ (LPG) ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಜನವರಿ 1, 2026 ರಂದು ತೈಲ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಪ್ರಮುಖ ನಗರಗಳಲ್ಲಿ 111 ರೂಪಾಯಿಗಳವರೆಗೆ ಹೆಚ್ಚಿಸಿವೆ. ಆದರೆ, 14 ಕೆಜಿ ತೂಕದ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ … Continued

ಸಂತರ ತೀವ್ರ ವಿರೋಧಕ್ಕೆ ಮಣಿದ ಆಯೋಜಕರು ; ಮಥುರಾದಲ್ಲಿ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು

ಲಕ್ನೋ: ಹೊಸ ವರ್ಷದ ಅಂಗವಾಗಿ ಮಥುರಾದಲ್ಲಿ ಆಯೋಜಿಸಲಾಗಿದ್ದ ನಟಿ ಸನ್ನಿ ಲಿಯೋನ್ ಕಾರ್ಯಕ್ರಮವನ್ನು ಸ್ಥಳೀಯ ಸಂತರು ಮತ್ತು ಧಾರ್ಮಿಕ ಮುಖಂಡರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇಂತಹ ಕಾರ್ಯಕ್ರಮಗಳು ಬ್ರಜ್ ಭೂಮಿಯ ಧಾರ್ಮಿಕ ಸಂಪ್ರದಾಯಗಳಿಗೆ ವಿರುದ್ಧವಾಗಿವೆ ಮತ್ತು ಭಕ್ತರ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂದು ಅವರು ಅಸಮಾಧಾನವ್ಯಕ್ತಪಡಿಸಿದ್ದಾರೆ. ಕೋಟಿಗಟ್ಟಲೆ ಭಕ್ತರಿಗೆ ಆಧ್ಯಾತ್ಮಿಕ ಕೇಂದ್ರವಾಗಿರುವ ಪವಿತ್ರ ಮಥುರಾದಲ್ಲಿ … Continued

ಸೋಫಾದಿಂದ ಏಳುವಾಗ ಸೊಂಟದಲ್ಲಿದ್ದ ಪಿಸ್ತೂಲ್ ಸಿಡಿದು ಅನಿವಾಸಿ ಭಾರತೀಯ ಸಾವು

ಫಿರೋಜಪುರ: ಸೋಫಾದಿಂದ ಎದ್ದೇಳುವಾಗ ಸೊಂಟದ ಪಟ್ಟಿಯಲ್ಲಿದ್ದ ಲೋಡ್ ಆಗಿದ್ದ ಪಿಸ್ತೂಲ್ ಆಕಸ್ಮಿಕವಾಗಿ ಸಿಡಿದ ಪರಿಣಾಮ ಅನಿವಾಸಿ ಭಾರತೀಯರೊಬ್ಬರು (NRI) ಮೃತಪಟ್ಟ ದಾರುಣ ಘಟನೆ ಪಂಜಾಬಿನ ಫಿರೋಜ್‌ಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ಧನಿ ಸುಚಾ ಸಿಂಗ್ ಗ್ರಾಮದ ನಿವಾಸಿ ಹರ್ಪಿಂದರ ಸಿಂಗ್ ಅಲಿಯಾಸ್ ಸೋನು ಎಂದು ಗುರುತಿಸಲಾಗಿದೆ. ಹರ್ಪಿಂದರ ಅವರು ಇತ್ತೀಚೆಗಷ್ಟೇ ವಿದೇಶದಿಂದ ಮರಳಿ ಗ್ರಾಮದಲ್ಲಿ … Continued

ಟಿ20 ಕ್ರಿಕೆಟಿನಲ್ಲಿ ಹೊಸ ದಾಖಲೆ ಮಾಡಿದ ಭಾರತದ ತಂಡದ ದೀಪ್ತಿ ಶರ್ಮಾ

ತಿರುವನಂತಪುರಂ: ಭಾರತದ ಆಲ್‌ರೌಂಡರ್ ದೀಪ್ತಿ ಶರ್ಮಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಮಂಗಳವಾರ (ಡಿಸೆಂಬರ್ 30) ಶ್ರೀಲಂಕಾ ವಿರುದ್ಧ ನಡೆದ ಐದನೇ ಟಿ20 ಪಂದ್ಯದಲ್ಲಿ ಅವರು ಈ ಮೈಲಿಗಲ್ಲು ತಲುಪಿದ್ದಾರೆ. ತಿರುವನಂತಪುರಂನ ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾದ ನೀಲಾಕ್ಷಿಕಾ … Continued

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ ಭಾಗಿ

ನವದೆಹಲಿ/ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ಅಧ್ಯಕ್ಷೆ ಬೇಗಂ ಖಲಿದಾ ಜಿಯಾ (80) ಅವರು ಸುದೀರ್ಘ ಅನಾರೋಗ್ಯದ ನಂತರ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯಲ್ಲಿ ಭಾರತ ಸರ್ಕಾರದ ಪರವಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ ಭಾಗವಹಿಸಲಿದ್ದಾರೆ. ಡಾ. ಎಸ್. ಜೈಶಂಕರ ಅವರು ಬುಧವಾರ (ಡಿಸೆಂಬರ್ 31, … Continued

ಜಪಾನ್‌ ಹಿಂದಿಕ್ಕಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾದ ಭಾರತ ; ವರದಿ

ನವದೆಹಲಿ: ಭಾರತದ ಆರ್ಥಿಕ ಶಕ್ತಿಯು ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. 2025ರ ಆರ್ಥಿಕ ಸುಧಾರಣೆಗಳ ಕುರಿತಾದ ಸರ್ಕಾರದ ಅಧಿಕೃತ ವರದಿಯ ಪ್ರಕಾರ, ಭಾರತವು 4.18 ಟ್ರಿಲಿಯನ್ ಅಮೆರಿಕನ್‌ ಡಾಲರ್ ಒಟ್ಟು ದೇಶೀಯ ಉತ್ಪನ್ನದ (GDP) ಗಾತ್ರದೊಂದಿಗೆ ಜಪಾನ್ ದೇಶವನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಭಾರತದ ಆರ್ಥಿಕತೆಯು ಇದೇ ವೇಗದಲ್ಲಿ ಮುಂದುವರಿದರೆ, … Continued

ದೆಹಲಿ ಯುವತಿ ಜೊತೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರನ ಮದುವೆ ನಿಶ್ಚಯ..?

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ, ತಮ್ಮ ದೀರ್ಘಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ಉಂಗುರ ಬದಲಾಯಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅನೇಕ ಮಾಧ್ಯಮ ವರದಿಗಳ ಪ್ರಕಾರ, ಇವರಿಬ್ಬರು ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು ರೈಹಾನ್ ವಾದ್ರಾ … Continued