ಶುಭಾಂಶು ಶುಕ್ಲಾ ತಂಡ ಭೂಮಿಗೆ ಮರಳಲು ದಿನಾಂಕ ನಿಗದಿ

ನವದೆಹಲಿ: ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಸೇರಿದ ಆಕ್ಸಿಯಮ್-4 ತಂಡವು ಜುಲೈ 14ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (International Space Station) ಪುನಃ ಭೂಮಿಗೆ ಮರಳಲಿದೆ ಎಂದು ಪ್ರಕಟಿಸಲಾಗಿದೆ. “ನಾವು ಸ್ಟೇಷನ್ ಪ್ರೋಗ್ರಾಂನೊಂದಿಗೆ ಕೆಲಸ ಮಾಡುತ್ತಿದ್ದೇವೆ, ಆಕ್ಸಿಯಮ್ -4 ಪ್ರಗತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ನಾವು ಆ ಮಿಷನ್ ಅನ್ನು ಅನ್‌ಡಾಕ್ … Continued

ಸಾಲ ಮರುಪಾವತಿಸುವ ವಿಚಾರದಲ್ಲಿ ಜಗಳ: ಪತ್ನಿಯ ಮೂಗು ಕಚ್ಚಿ ತುಂಡರಿಸಿದ ಪತಿ…!

ದಾವಣಗೆರೆ : ಸಾಲ ಮರುಪಾವತಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ದಾವಣೆಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ವ್ಯಕ್ತಿ ತನ್ನ ಪತ್ನಿಯನ್ನು ನಿಂದಿಸಿ, ಆಕೆಯ ಮೂಗಿನ ತುದಿಯನ್ನು ಕಚ್ಚಿ ಕತ್ತರಿಸಿದ್ದಾನೆ. ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ. ಈ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ … Continued

ವೀಡಿಯೊ..| ಗ್ರಾಮದ ಪದ್ಧತಿ ಉಲ್ಲಂಘಿಸಿ ಮದುವೆ ; ದಂಪತಿಯನ್ನು ನೊಗಕ್ಕೆ ಕಟ್ಟಿ, ಕೋಲಿನಿಂದ ಹೊಡೆದು ಹೊಲ ಉಳುಮೆ ಮಾಡಿಸಿದ ಗುಂಪು

ಸ್ಥಳೀಯ ಸಾಮಾಜಿಕ ರೂಢಿಗಳಿಗೆ ವಿರುದ್ಧವಾಗಿ ಮದುವೆಯಾದ ಯುವ ಜೋಡಿಯನ್ನು ಶಿಕ್ಷಿಸುವ ಮತ್ತು ಅವಮಾನಿಸುವ ಉದ್ದೇಶದಿಂದ, ಒಡಿಶಾದಲ್ಲಿ ಗುಂಪೊಂದು ಅವರನ್ನು ಎತ್ತುಗಳಂತೆ ನೊಗಕ್ಕೆ ಕಟ್ಟಿ ಹೊಲವನ್ನು ಉಳುವಂತೆ ಮಾಡಿದ ಘಟನೆ ನಡೆದಿರುವುದು ವರದಿಯಾಗಿದೆ. ಈ ಘಟನೆಯನ್ನು ಚಿತ್ರೀಕರಿಸಲಾಗಿದ್ದು, ವೀಡಿಯೊವನ್ನು ಈಗ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪರಸ್ಪರ ಪ್ರೀತಿಸಿದ್ದ ರಾಯಗಡ ಜಿಲ್ಲೆಯ ಕಂಜಮಝಿರಾ ಗ್ರಾಮದ ಯುವಕ ಮತ್ತು … Continued

ವಿಜಯಪುರ : 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ 58 ಮಂದಿ ಸಾವಿಗೀಡಾಗಿದ್ದ ಕೊಯಮತ್ತೂರು ಸ್ಫೋಟದ ಆರೋಪಿ ಬಂಧನ

ವಿಜಯಪುರ :  ಸಾದಿಕ್ ಅಲಿಯಾಸ್ ಟೈಲರ್ ರಾಜಾ ಎಂಬಾತನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. 27 ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಶಂಕಿತನನ್ನು ಅಂತಿಮವಾಗಿ ಭಯೋತ್ಪಾದನಾ ನಿಗ್ರಹ ದಳ ಮತ್ತು ಕೊಯಮತ್ತೂರು ನಗರ ಪೊಲೀಸರ ಜಂಟಿ ತಂಡವು ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬಂಧಿಸಿದೆ. 58 ಜನರ ಸಾವು ಹಾಗೂ 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ … Continued

ವೀಡಿಯೊ.. |ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಒಂಬತ್ತು ಗುಂಡು ಹಾರಿಸಿದ ಖಲಿಸ್ತಾನಿ ಭಯೋತ್ಪಾದಕ

ಕೆನಡಾದಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ಜಿತ್ ಸಿಂಗ್ ಲಡ್ಡಿ ಗುಂಡಿನ ದಾಳಿಯ ಹೊಣೆಯನ್ನು ವಹಿಸಿಕೊಂಡಿದ್ದು, ಇದರಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ಕಪಿಲ್‌ ಶರ್ಮಾ ಅವರ ರೆಸ್ಟೋರೆಂಟ್ ಉದ್ಯಮಕ್ಕೆ ಮೊದಲ ಪ್ರವೇಶವಾಗಿದೆ … Continued

ಮನೆಯಲ್ಲೇ ಟೆನಿಸ್ ಆಟಗಾರ್ತಿ ರಾಧಿಕಾ ಯಾದವಗೆ ಗುಂಡಿಕ್ಕಿ ಕೊಂದ ತಂದೆ….!

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ 25 ವರ್ಷದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಗುರುವಾರ ಗುರುಗ್ರಾಮದ ಸೆಕ್ಟರ್ 57 ರಲ್ಲಿರುವ ಅವರ ಮನೆಯಲ್ಲಿ ಆಕೆಯ ತಂದೆಯೇ ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಸುಶಾಂತ್ ಲೋಕ್ ಫೇಸ್ -2ರಲ್ಲಿರುವ ಅವರ ನಿವಾಸದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, … Continued

ಹೇರ್‌ ಕಟ್‌ ಮಾಡಿಸಿಕೊಳ್ಳಲು ಹೇಳಿದ್ದಕ್ಕೆ ಗುರು ಪೂರ್ಣಿಮೆ ದಿನವೇ ಪ್ರಾಂಶುಪಾಲರನ್ನು ಇರಿದು ಕೊಂದ ಇಬ್ಬರು ವಿದ್ಯಾರ್ಥಿಗಳು…!

ಚಂಡೀಗಢ: ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದ ಹಿಸಾರ್‌ನಲ್ಲಿರುವ ಶಾಲೆಯೊಂದರ ಪ್ರಾಂಶುಪಾಲರನ್ನು 12 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ವರದಿಯಾಗಿದೆ. ಕಾಕತಾಳೀಯವಾಗಿ, ಶಿಕ್ಷಕರು ಮತ್ತು ಮಾರ್ಗದರ್ಶಕರಿಗೆ ಗೌರವ ತೋರಿಸಲು ಆಚರಿಸುವ ಗುರು ಪೂರ್ಣಿಮೆಯ ದಿನವಾದ ಇಂದು ಗುರುವಾರ ಈ ದುರಂತದ ಘಟನೆ ನಡೆದಿದೆ. ಪ್ರಾಂಶುಪಾಲರು ಕ್ಷೌರ ಮಾಡಿಸಿಕೊಳ್ಳಲು ಮತ್ತು ಶಿಸ್ತನ್ನು ಪಾಲಿಸಲು ಸೂಚಿಸಿದ … Continued

ಶಾಲೆಯ ಟಾಯ್ಲೆಟ್ಟಿನಲ್ಲಿ ರಕ್ತದ ಕಲೆ ಕಂಡುಬಂದಿದ್ದಕ್ಕೆ ಮುಟ್ಟಾದ ಹುಡುಗಿಯ ಪತ್ತೆಗೆ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದರು…!!

ಥಾಣೆ : ಋತುಮತಿಯಾದ (Periods) ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವ ಸಲುವಾಗಿ ಶಿಕ್ಷಕರು 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರ ಬಟ್ಟೆ, ಒಳಉಡುಪುಗಳನ್ನು ಬಿಚ್ಚಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharastra) ಥಾಣೆಯ ಶಹಪೂರದ ಶಾಲೆಯೊಂದರಲ್ಲಿ ನಡೆದಿದೆ. ಈ ಸಂಬಂಧ ಥಾಣೆಯಲ್ಲಿರುವ ಖಾಸಗಿ ಶಾಲೆಯ ಪ್ರಾಂಶುಪಾಲರು ಮತ್ತು ಇನ್ನೊಬ್ಬ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ (ಜುಲೈ 10) … Continued

ರೈಲ್ವೆ ಹಳಿಯ ಸಮೀಪವೇ ಮರಿಗೆ ಜನ್ಮ ನೀಡಿದ ಕಾಡಾನೆ ; 2 ತಾಸು ನಿಂತ ರೈಲು | ಹೃದಯಸ್ಪರ್ಶಿ ವೀಡಿಯೊ ವೀಕ್ಷಿಸಿ

ಒಂದು ಹೃದಯಸ್ಪರ್ಶಿ ವಿದ್ಯಮಾನದಲ್ಲಿ ಜಾರ್ಖಂಡ್‌ನಲ್ಲಿ ಕಾಡಾನೆಯೊಂದು ಹಳಿಗೆ ಸಮೀಪದಲ್ಲಿಯೇ ಮರಿಗೆ ಜನ್ಮ ನೀಡುತ್ತಿರುವಾಗ ರೈಲು ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಿದ ಅಪರೂಪದ ಘಟನೆ ನಡೆದಿದೆ. ರೈಲು ಎರಡು ಗಂಟೆಗಳಿಗೂ ಹೆಚ್ಚು ಕಾಲ ನಿಂತಿದ್ದರಿಂದ ಆನೆ ಸುರಕ್ಷಿತವಾಗಿ ಹೆರಿಗೆ ಮಾಡಲು ಅವಕಾಶ ಮಾಡಿಕೊಟ್ಟಿತು. ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆಯಲ್ಲಿ ಆನೆ ಮತ್ತು ಅದರ … Continued

ಬಾಹ್ಯಾಕಾಶ ರೈತನಾದ ಶುಭಾಂಶು ಶುಕ್ಲಾ ; ಬಾಹ್ಯಾಕಾಶ ನಿಲ್ದಾಣದಲ್ಲಿ ಮೆಂತೆ, ಹೆಸರುಕಾಳು ಗಿಡ ಬೆಳೆಸುತ್ತಿರುವ ಭಾರತದ ಗಗನಯಾತ್ರಿ

ನವದೆಹಲಿ: ತಮ್ಮ ಬಾಹ್ಯಾಕಾಶ ಯಾನದ ಕೊನೆಯ ಹಂತದಲ್ಲಿ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ರೈತನಾಗಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ‘ಹೆಸರುಕಾಳು’ ಮತ್ತು ‘ಮೆಂತ್ಯ’ ಬೀಜಗಳ ಮೊಳಕೆಯೊಡೆಯುವಿಕೆಯನ್ನು ಅವರು ದಾಖಲಿಸುತ್ತಿದ್ದಾರೆ. ಸೂಕ್ಷ್ಮ ಗುರುತ್ವಾಕರ್ಷಣೆಯು ಮೊಳಕೆಯೊಡೆಯುವಿಕೆ ಮತ್ತು ಸಸ್ಯಗಳ ಆರಂಭಿಕ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಉದ್ದೇಶಿಸಿರುವ ಅಧ್ಯಯನದ ಭಾಗವಾಗಿ ಗಗನಯಾತ್ರಿ ಶುಕ್ಲಾ … Continued