ಆಂಬುಲೆನ್ಸಿಗೆ ಹೆಚ್ಚು ಹಣ ಪಾವತಿಸಲು ಸಾಧ್ಯವಾಗದ ಕಾರಣ ಮಗನ ಶವದೊಂದಿಗೆ ಬಸ್‌ನಲ್ಲಿ 200 ಕಿಮೀ ಪ್ರಯಾಣಿಸಿದ ವ್ಯಕ್ತಿ…!

ಆಂಬ್ಯುಲೆನ್ಸ್ ಚಾಲಕನ ಕೇಳಿದ 8,000 ರೂಪಾಯಿ ತನ್ನ ಬಳಿ ಇಲ್ಲದ ಕಾರಣ 200 ಕಿಲೋಮೀಟರ್ ದೂರದವರೆಗೆ ತನ್ನ ಐದು ತಿಂಗಳ ಮಗುವಿನ ಶವವನ್ನು ಚೀಲದಲ್ಲಿಟ್ಟುಕೊಂಡು ಸಾರ್ವಜನಿಕ ಬಸ್‌ನಲ್ಲಿ ಪ್ರಯಾಣಿಸಿರುವುದಾಗಿ ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬರು ಭಾನುವಾರ ಹೇಳಿದ್ದಾರೆ. ಸಿಲಿಗುರಿಯಿಂದ ಕಲಿಯಾಗಂಜ್‌ನಲ್ಲಿರುವ ಮನೆಗೆ ಕರೆದುಕೊಂಡು ಹೋಗಿದ್ದಾಗಿ ಹೇಳಿದ್ದಾರೆ. ಆರು ದಿನಗಳ ಕಾಲ ಸಿಲಿಗುರಿಯ ಉತ್ತರ ಬಂಗಾಳ ವೈದ್ಯಕೀಯ ಕಾಲೇಜು … Continued

ಐವರು ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ಕೊಡಿ, ಒಬ್ಬರಿಗೆ ಡಿಸಿಎಂ ಸ್ಥಾನ ನೀಡಿ: ಕಾಂಗ್ರೆಸ್‌ ಮುಂದೆ ಬೇಡಿಕೆ ಇಟ್ಟ ವಕ್ಫ್ ಬೋರ್ಡ್ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಬಹುಮತ ಬಂದ ಪಡೆದ ನಂತರ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಮುಸ್ಲಿಮರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಬೇಡಿಕೆ ಮುಂದಿಟ್ಟಿದ್ದಾರೆ. 224 ಕ್ಷೇತ್ರಗಳ ಪೈಕಿ 9ರಲ್ಲಿ ಮುಸ್ಲಿಮರು ಗೆದ್ದಿದ್ದಾರೆ. ಅಲ್ಲದೆ, ರಾಜ್ಯದಲ್ಲಿ 73 ಶಾಸಕರು ಗೆಲ್ಲಲು ಮುಸ್ಲಿಮರು … Continued

ಕೇರಳ ಕರಾವಳಿಯಲ್ಲಿ ಹಡಗಿನಲ್ಲಿದ್ದ ₹ 12,000 ಕೋಟಿ ಮೌಲ್ಯದ ಡ್ರಗ್ಸ್ ವಶ: ಪಾಕಿಸ್ತಾನದ ವ್ಯಕ್ತಿಯ ಬಂಧನ

ನವದೆಹಲಿ : ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು ₹ 12,000 ಕೋಟಿ ಮೌಲ್ಯದ ಸುಮಾರು 2,500 ಕಿಲೋಗ್ರಾಂಗಳಷ್ಟು ಮೆಥಾಂಫೆಟಮೈನ್ ಡ್ರಗ್ಸ್‌ ಅನ್ನು ಕೇರಳ ಕರಾವಳಿಯ ಭಾರತೀಯ ಸಮುದ್ರ ಪ್ರದೇಶದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಇದು ದೇಶದಲ್ಲಿ ಮೆಥಾಂಫೆಟಮೈನ್‌ನ ಅತಿ ದೊಡ್ಡ ವಶವಾಗಿದೆ ಮತ್ತು ಇದಕ್ಕೆ ಸಂಬಂಧಿಸಿದಂತೆ … Continued

ಐಎನ್‌ಎಸ್ ಮರ್ಮಗೋವಾದಿಂದ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ಷಿಪಣಿ ಯಶಸ್ವಿ ಉಡಾವಣೆ ಮಾಡಿದ ನೌಕಾಪಡೆ

ನವದೆಹಲಿ: ಭಾರತೀಯ ನೌಕಾಪಡೆಯು ತನ್ನ ಮುಂಚೂಣಿ ನಿರ್ದೇಶಿತ ಕ್ಷಿಪಣಿ ನೌಕೆ ಐಎನ್‌ಎಸ್ ಮೊರ್ಮುಗೋವಾ ಬಳಸಿಕೊಂಡು ಭಾನುವಾರ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತನ್ನ ಚೊಚ್ಚಲ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ “ಬುಲ್ಸ್ ಐ” ಅನ್ನು ಹೊಡೆದಿದ್ದಕ್ಕಾಗಿ ಐಎನ್‌ಎಸ್ ಮೊರ್ಮುಗೋವಾವನ್ನು ಅಧಿಕಾರಿ ಶ್ಲಾಘಿಸಿದರು. ಇದು ಭಾರತೀಯ ನೌಕಾಪಡೆಯಿಂದ ಬಳಸಲಾಗುವ ಇತ್ತೀಚಿನ … Continued

ಸಿಬಿಐ ಮುಖ್ಯಸ್ಥರ ಹುದ್ದೆಗೆ ಮೂವರ ಹೆಸರು ಶಾರ್ಟ್‌ಲಿಸ್ಟ್, ಕರ್ನಾಟಕದ ಡಿಜಿಪಿ ಮುಂಚೂಣಿಯಲ್ಲಿ : ಮೂಲಗಳು

ನವದೆಹಲಿ : ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಕೇಂದ್ರೀಯ ತನಿಖಾ ದಳದ ಉನ್ನತ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. … Continued

ಕೃಷ್ಣ ಸಾಗರ ಸರೋವರದಲ್ಲಿ ಮುಳುಗಿ 5 ಮಕ್ಕಳು ಸಾವು

ಗುಜರಾತ್‌ನ ಬೊಟಾಡ್ ಜಿಲ್ಲೆಯ ಕೃಷ್ಣ ಸಾಗರ ಸರೋವರದಲ್ಲಿ ಶನಿವಾರ ಕನಿಷ್ಠ ಐವರು ಮಕ್ಕಳು ಮುಳುಗಿ ಸಾವಿಗೀಡಾಗಿದ್ದಾರೆ. ವರದಿಗಳ ಪ್ರಕಾರ, ಇಬ್ಬರು ಮಕ್ಕಳು ಸರೋವರದಲ್ಲಿ ಈಜುತ್ತಿದ್ದಾಗ ಅವರು ಮುಳುಗಿದ್ದಾರೆ. ಸ್ಥಳದಲ್ಲಿದ್ದ ಇತರ ಮೂವರು ಮಕ್ಕಳು ಅವರನ್ನು ರಕ್ಷಿಸಲು ಕೆರೆಗೆ ಹಾರಿದ್ದಾರೆ. ಆದರೆ, ಅವರೂ ನೀರಿನಲ್ಲಿ ಮುಳುಗಿದ್ದಾರೆ. ಮೃತರೆಲ್ಲರೂ ಅಪ್ರಾಪ್ತರು. ಸಂಜೆ 4.30ರ ಸುಮಾರಿಗೆ ಸ್ಥಳೀಯರು ಈ ಬಗ್ಗೆ … Continued

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ಸಿಗೆ ಈಗ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವುದೇ ಸದ್ಯದ ದೊಡ್ಡ ಸವಾಲು..

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದ ತನ್ನ ಏಕೈಕ ಭದ್ರಕೋಟೆ ಕರ್ನಾಟಕವನ್ನು ಕಳೆದುಕೊಂಡಿದ್ದು, ರಾಜ್ಯದ 223 ಸ್ಥಾನಗಳಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 65 ಮತ್ತು ಎಚ್‌ಡಿ ಕುಮಾರಸ್ವಾಮಿ ಅವರ ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ.30 ವರ್ಷಗಳ ನಂತರ ಸ್ಥಾನಗಳು ಮತ್ತು ಮತಗಳ ಹಂಚಿಕೆಯಲ್ಲಿ ಕಾಂಗ್ರೆಸ್‌ ದಾಖಲೆ ಮಾಡಿದೆ. ಕರ್ನಾಟಕದ ಅಧಿಕಾರದ ಚುಕ್ಕಾಣಿ … Continued

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ : 95.20% ಅಂಕ ಪಡೆದ ಆಸಿಡ್ ದಾಳಿಯಿಂದ ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿನಿ….!

ಚಂಡೀಗಢದ ಇನ್‌ಸ್ಟಿಟ್ಯೂಟ್ ಆಫ್ ಬ್ಲೈಂಡ್‌ನ 15 ವರ್ಷದ ವಿದ್ಯಾರ್ಥಿನಿ ಕಾಫಿ, ಸಿಬಿಎಸ್‌ಇ (CBSE) 10ನೇ ತರಗತಿಯಲ್ಲಿ 95.20% ರಷ್ಟು ಅಂಕಗಳಿಸಿ ತನ್ನ ಶಾಲೆಗೆ ಟಾಪರ್ ಆಗಿದ್ದಾಳೆ. ಆದರೆ, ಈ ಮೈಲಿಗಲ್ಲನ್ನು ತಲುಪುವ ಆಕೆಯ ಪಯಣ ಅಷ್ಟು ಸುಲಭವಾಗಿರಲಿಲ್ಲ. ವಿದ್ಯಾರ್ಥಿನಿ ಕಾಫಿ ಆಸಿಡ್ ದಾಳಿಯಿಂದ ಬದುಕುಳಿದವಳು, ಅವಳು ಕೇವಲ ಮೂರು ವರ್ಷದವಳಿದ್ದಾಗ ಹಿಸಾರ್‌ನ ಬುಧಾನಾ ಗ್ರಾಮದಲ್ಲಿ ವಾಸಿಸುತ್ತಿದ್ದ … Continued

ಅದಾನಿ ವಿರುದ್ಧ ಹಿಂಡೆನ್‌ಬರ್ಗ್‌ ವರದಿ : ತಜ್ಞರ ಸಮಿತಿ ವರದಿ ಸ್ವೀಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಉದ್ಯಮಿ ಗೌತಮ ಅದಾನಿ ಸಮೂಹ ಸಂಸ್ಥೆಗಳ ವಿರುದ್ಧ ಹಿಂಡೆನ್‌ಬರ್ಗ್‌ ಸಂಶೋಧನಾ ವರದಿಗೆ ಸಂಬಂಧಿಸಿದ ತನಿಖೆ ಪೂರ್ಣಗೊಳಿಸಲು ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿಗೆ (ಸೆಬಿ) ಮೂರು ತಿಂಗಳು ಮಾತ್ರ ಕಾಲಾವಕಾಶ ನೀಡಲು ಸಾಧ್ಯ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ ಹೇಳಿದೆ. ತನಿಖಾ ವರದಿ ಸಲ್ಲಿಸಲು ಆರು ತಿಂಗಳು ಕಾಲಾವಕಾಶ ನೀಡುವಂತೆ ಕೋರಿ ಸೆಬಿ ಸಲ್ಲಿಸಿದ್ದ … Continued

ಜ್ಞಾನವಾಪಿ ಮಸೀದಿಯಲ್ಲಿನ ‘ಶಿವಲಿಂಗ’ ರಚನೆಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಪ್ರಯಾಗರಾಜ್: ವಾರಾಣಸಿಯ ಜ್ಞಾನವಾಪಿ ಮಸೀದಿಯೊಳಗೆ ಹಿಂದೂ ಅರ್ಜಿದಾರರು “ಶಿವಲಿಂಗ” ಎಂದು ಹೇಳುವ ರಚನೆಯ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದೆ. ವಾರಾಣಸಿ ಜಿಲ್ಲಾ ನ್ಯಾಯಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಮೀಕ್ಷೆಗಾಗಿ ಅರ್ಜಿದಾರರ ಮನವಿಯನ್ನು ನಿರಾಕರಿಸಿತ್ತು. ಗುರುವಾರದ ಆದೇಶದಲ್ಲಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ರಚನೆಯ ಸಮೀಕ್ಷೆಯಲ್ಲಿ … Continued