ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ; ಕುನಾಲ್ ಕಾಮ್ರಾಗೆ ಮುಂಬೈ ಪೊಲೀಸರಿಂದ ಸಮನ್ಸ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಮುಂಬೈನ ಖಾರ್ ಪೊಲೀಸರು ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಸದ್ಯ ಕಾಮ್ರಾ ಮಹಾರಾಷ್ಟ್ರದ ಹೊರಗಿರುವ ಕಾರಣ ಬೆಳಗ್ಗೆ 11 ಗಂಟೆಗೆ ಹೇಳಿಕೆ ದಾಖಲಿಸಿಕೊಳ್ಳುವಂತೆ ವಾಟ್ಸಾಪ್‌ನಲ್ಲಿ ಸಮನ್ಸ್‌ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಅಲಾಹಾಬಾದ್‌ ಹೈಕೋರ್ಟಿಗೆ ನ್ಯಾಯಮೂರ್ತಿ ವರ್ಮಾ ವರ್ಗಾವಣೆ ಮಾಡಲು ಕೊಲಿಜಿಯಂ ನಿರ್ಧಾರ

ನವದೆಹಲಿ : ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಮರಳಿ ಅವರ ಮಾತೃ ಸಂಸ್ಥೆಯಾದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನಿರ್ಧರಿಸಿದೆ. ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸುವಾಗ ಸುಟ್ಟ ನೋಟಿನ ಕಂತೆಗಳು ಪತ್ತೆಯಾದ ನಂತರ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಈ ನಿರ್ಧಾರ ಕೈಗೊಂಡಿದೆ. ಮಾರ್ಚ್‌ 20 … Continued

ಸಂಸದರಿಗೆ ಸಂಬಳ, ಪಿಂಚಣಿ-ಭತ್ಯೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸೋಮವಾರ ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ಸಂಸದರ (ಲೋಕಸಭೆ ಮತ್ತು ರಾಜ್ಯಸಭೆ) ಸಂಬಳವನ್ನು 24% ಹೆಚ್ಚಳ ಮಾಡುವುದಾಗಿ ಘೋಷಿಸಿದೆ. ಸಂಸದೀಯ ವ್ಯವಹಾರಗಳ ಸಚಿವಾಲಯವು ಹೊರಡಿಸಿದ ಅಧಿಸೂಚನೆಯು ಹಾಲಿ ಸದಸ್ಯರಿಗೆ ದೈನಂದಿನ ಭತ್ಯೆಗಳನ್ನು ಮತ್ತು ವೆಚ್ಚದ ಹಣದುಬ್ಬರ ಸೂಚ್ಯಂಕದ ಆಧಾರದ ಮೇಲೆ ಮಾಜಿ ಸದಸ್ಯರಿಗೆ ಐದು … Continued

ಕೇರಳ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ರಾಜೀವ ಚಂದ್ರಶೇಖರ ಆಯ್ಕೆ

ತಿರುವನಂತಪುರಂ : ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಕೇಂದ್ರದ ಮಾಜಿ ಐಟಿ ಸಚಿವ ಮತ್ತು ತಂತ್ರಜ್ಞ-ರಾಜಕಾರಣಿ ರಾಜೀವ ಚಂದ್ರಶೇಖರ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಸೋಮವಾರ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ರಾಜ್ಯ ಪರಿಷತ್ ಸಭೆಯಲ್ಲಿ ಪಕ್ಷದ ಕೇಂದ್ರ ವೀಕ್ಷಕ ಪ್ರಹ್ಲಾದ ಜೋಶಿ ರಾಜ್ಯಾಧ್ಯಕ್ಷ … Continued

ಡಿಸಿಎಂ ಏಕನಾಥ ಶಿಂಧೆಯನ್ನು ದ್ರೋಹಿ ಎಂದು ಕರೆದ ಕುನಾಲ್‌ ಕಾಮ್ರಾ ; ಕಾರ್ಯಕ್ರಮ ನಡೆದ ಸ್ಥಳ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಪಕ್ಷ ಬದಲಿಸಿದ್ದಕ್ಕಾಗಿ ಹಾಸ್ಯನಟ ಕುನಾಲ್ ಕಾಮ್ರಾ ಅವರನ್ನು ಗೇಲಿ ಮಾಡಿದ ವೀಡಿಯೊ ಕಾಣಿಸಿಕೊಂಡ ಕೆಲವೇ ಗಂಟೆಗಳ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿಂಧೆ ಸೇನಾ ಶಾಸಕ ಮುರ್ಜಿ ಪಟೇಲ್ ಅವರ ದೂರಿನ ಮೇರೆಗೆ ಹಾಸ್ಯನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈಗ ಅವರು ಈಗ ಏಕನಾಥ ಶಿಂಧೆ … Continued

ಮಾರ್ಚ್‌ 30ರಿಂದ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮತ್ತೊಂದು ವಿಮಾನ ಹಾರಾಟ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ (Hubballi) ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲು ಮತ್ತೊಂದು ವಿಮಾನಯಾನ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಭಾನುವಾರ ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಈ ಸೇವೆ ಆರಂಭಿಸುವ ಕುರಿತು ನಿರ್ಣಯಕೈಗೊಳ್ಳಲಾಗಿದೆ ಮಾರ್ಚ್‌ 30 ವಿಮಾನಯಾನ ಪ್ರಾರಂಭವಾಗಲಿದ್ದು, ಈ ಮೂಲಕ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು … Continued

ಮಹಿಳೆ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಿದ ಕ್ರೈಸ್ತ ಪಾದ್ರಿ -ಸ್ವಯಂ ಘೋಷಿತ ʼಪ್ರವಾದಿʼ : ವೀಡಿಯೊ ವೈರಲ್

ಚಂಡೀಗಢ: ಪಂಜಾಬ್ ಮೂಲದ ಸ್ವಯಂ-ಘೋಷಿತ ಕ್ರೈಸ್ತ ಪಾದ್ರಿ ಬಜೀಂದರ್ ಸಿಂಗ್ ಅವರು ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ಈಗ ಹೊಸ ವಿವಾದಕ್ಕೆ ಸಿಲುಕಿದ್ದಾರೆ. ಪಂಜಾಬ್ ಪೊಲೀಸರು ಸ್ವಯಂ ಘೋಷಿತ ಪಾದ್ರಿ ಬಜೀಂದರ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಿದ ವಾರಗಳ ನಂತರ, ಅವರು ತಮ್ಮ ಕಚೇರಿಯಲ್ಲಿ ಪುರುಷ ಮತ್ತು … Continued

ನಗದು ದೊರೆತಿಲ್ಲ, ಇದು ನನ್ನನ್ನು ಸಿಲುಕಿಸಲು ಪಿತೂರಿ: ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ

ನವದೆಹಲಿ: ಬೆಂಕಿ ಆಕಸ್ಮಿಕಕ್ಕೆ ತುತ್ತಾದ ದೆಹಲಿಯ ತಮ್ಮ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ ಎಂಬ ಆರೋಪ ತಮ್ಮ ಮೇಲೆ ಸುಳ್ಳು ಆಪಾದನೆ ಮತ್ತು ಅಪಪ್ರಚಾರದ ಪಿತೂರಿಯ ಭಾಗ ಎಂದು ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಹೇಳಿದ್ದಾರೆ. ತನಿಖೆಗಾಗಿ ವಿವಿಧ ಹೈಕೋರ್ಟ್‌ಗಳ ಮೂವರು ನ್ಯಾಯಮೂರ್ತಿಗಳನ್ನು ನೇಮಿಸಲಾಗಿದ್ದು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸಲ್ಲಿಸಿದ ವರದಿ … Continued

ಪತ್ನಿ, ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ, ಇಬ್ಬರು ಮಕ್ಕಳು ಸಾವು

ಸಹರಾನ್ಪುರ: ಉತ್ತರ ಪ್ರದೇಶದ ಸಹರಾನಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಬಿಜೆಪಿ ಮುಖಂಡ ಯೋಗೇಶ ರೋಹಿಲ್ಲಾ ಅವರು ಪತ್ನಿ ಮತ್ತು ಮೂವರು ಮಕ್ಕಳಿಗೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಹರಾನಪುರ ಜಿಲ್ಲೆಯ ಗಂಗೋಹ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗತೇಡ ಗ್ರಾಮದಲ್ಲಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ಅವರ ಮಗ ಮತ್ತು 11 ವರ್ಷದ … Continued

ನಗದು ಪತ್ತೆ ಪ್ರಕರಣ: ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ಹಣದ ರಾಶಿ ಪತ್ತೆಯಾಗಿದೆ ಎಂಬ ಆರೋಪವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ … Continued