ವೀಡಿಯೊ…| ಸುಪ್ರೀಂ ಕೋರ್ಟ್‌ ಸಿಜೆಐ ಚಂದ್ರಚೂಡರ ʼಮರಣದಂಡನೆ ಪ್ರಶ್ನೆʼಗೆ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ವಕೀಲರ ಉತ್ತರ ಹೇಗಿದೆ ನೋಡಿ…

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ರಾಷ್ಟ್ರೀಯ ನ್ಯಾಯಾಂಗ ವಸ್ತುಸಂಗ್ರಹಾಲಯ ಮತ್ತು ಆರ್ಕೈವ್ (ಎನ್‌ಜೆಎಂಎ) ಉದ್ಘಾಟನಾ ಸಮಾರಂಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ ಅವರು ಗುರುವಾರ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ವಕೀಲರ ಜೊತೆ ಸಂವಾದ ನಡೆಸಿದರು. ಇತರ ನ್ಯಾಯಾಧೀಶರ ಸಮ್ಮುಖದಲ್ಲಿ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದ ಮುಖ್ಯ ನ್ಯಾಯಾಧೀಶ ಚಂದ್ರಚೂಡ ಅವರು ಭಾರತದಲ್ಲಿ ಮರಣದಂಡನೆಯ ಬಗ್ಗೆ ಪ್ರಶ್ನೆಯನ್ನು ಕೇಳುವ … Continued

ಈಗ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನಗೆ ಜೀವ ಬೆದರಿಕೆ ; 50 ಲಕ್ಷ ರೂ. ಹಣದ ಬೇಡಿಕೆ

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಕುರಿತು ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ. ಛತ್ತೀಸ್‌ಗಢದ ರಾಯ್ಪುರ ನಿವಾಸಿ ಫೈಜಾನ್ ಎಂಬಾತ ಬೆದರಿಕೆ ಕರೆ ಮಾಡಿದ್ದಾನೆ ಎಂದು ಎನ್ನಲಾಗಿದೆ. ಮುಂಬೈ ಪೊಲೀಸ್ ತಂಡವು ತನಿಖೆಗಾಗಿ ರಾಯಪುರಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. … Continued

ವೀಡಿಯೊ..| ಆರ್ಟಿಕಲ್ 370 ಬ್ಯಾನರ್ ಪ್ರದರ್ಶನ ; ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ-ತಳ್ಳಾಟ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಗುರುವಾರ ಸದನ ಪುನರಾರಂಭವಾಗುತ್ತಿದ್ದಂತೆ ಹೈಡ್ರಾಮಾ ನಡೆಯಿತು. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಬೇಕು ಎಂಬ ನಿರ್ಣಯದ ಕುರಿತಾಗಿ ಕಲಾಪದಲ್ಲಿ ಗದ್ದಲ ನಡೆಯಿತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರು ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಗೊತ್ತುವಳಿಯನ್ನು ಭಾರಿ ಗದ್ದಲದ ನಡುವೆ ಜಮ್ಮು … Continued

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ ದಾಖಲೆಯ ಗೆಲುವು ; ಕರೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅದ್ಭುತ ಗೆಲುವಿಗಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಮಾತುಕತೆಯ ಸಮಯದಲ್ಲಿ, ಟ್ರಂಪ್ ಅವರು ಪ್ರಧಾನಿ ಮೋದಿ ಅವರನ್ನು ಅದ್ಭುತ ವ್ಯಕ್ತಿ ಎಂದು ಬಣ್ಣಿಸಿದರು ಮತ್ತು ಇಡೀ ಜಗತ್ತು ಅವರನ್ನು ಪ್ರೀತಿಸುತ್ತಿದೆ ಎಂದು ಹೇಳಿದರು … Continued

ಅಮೆರಿಕದ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೆ.ಡಿ. ವ್ಯಾನ್ಸ್ ಭಾರತದ ಅಳಿಯ…! ಅವರ ಪತ್ನಿ ಆಂಧ್ರ ಪ್ರದೇಶ ಮೂಲದವರು…!!

ಹೈದರಾಬಾದ್: ಅಮೆರಿಕದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜೆ.ಡಿ. ವ್ಯಾನ್ಸ್ ಅವರು ಭಾರತದ ಅಳಿಯ. ಅವರ ಪತ್ನಿ ಪತ್ನಿ ಉಷಾ ಚಿಲುಕುರಿ ಅವರು ಆಂಧ್ರಪ್ರದೇಶದ ಮೂಲದವರು. ಅವರ ತಂದೆ-ತಾಯಿ ಆಂಧ್ರಪ್ರದೇಶದವರು ಹಾಗೂ ಆಂಧ್ರಪ್ರದೇಶಕ್ಕೆ ವಲಸೆ ಹೋದವರು. ಅವರು 2014 ರಲ್ಲಿ ಜೆ.ಡಿ. ವ್ಯಾನ್ಸ್ ಜೊತೆ ಕೆಂಟುಕಿಯಲ್ಲಿ ವಿವಾಹವಾದರು ಮತ್ತು ಪ್ರತ್ಯೇಕ ಸಮಾರಂಭದಲ್ಲಿ ಹಿಂದೂ ಪದ್ಧತಿಯಂತೆ ಕಾರ್ಯಕ್ರಮ ನಡೆಯಿತು. ದಂಪತಿಗೆ … Continued

ಎಚ್‌.ಡಿ.ಕುಮಾರಸ್ವಾಮಿ, ನಿಖಿಲ್‌ ವಿರುದ್ಧ ಬಲವಂತದ ಕ್ರಮ ಬೇಡ : ಹೈಕೋರ್ಟ್‌

ಬೆಂಗಳೂರು : ಲೋಕಾಯುಕ್ತ ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ ಚಂದ್ರಶೇಖರ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್‌ ಸಂಬಂಧ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್‌ ಮತ್ತು ಜೆಡಿಎಸ್‌ ಶಾಸಕ ಸುರೇಶಬಾಬು ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್‌ ಬುಧವಾರ ರಾಜ್ಯ ಸರ್ಕಾರಕ್ಕೆ … Continued

ಕಾಂಗ್ರೆಸ್ಸಿನಿಂದ ಅಚ್ಚರಿಯ ನಡೆ ; ಪಕ್ಷದ ಹಿಮಾಚಲ ಪ್ರದೇಶ ರಾಜ್ಯ ಘಟಕ ವಿಸರ್ಜಿಸಿದ ಹೈಕಮಾಂಡ್‌…!

ನವದೆಹಲಿ: ಹಿಮಾಚಲ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕವನ್ನು ವಿಸರ್ಜಿಸಲಾಗಿದೆ. ಕಾಂಗ್ರೆಸ್‌ ತನ್ನದೇ ಪಕ್ಷದ ಮುಖ್ಯಮಂತ್ರಿಯನ್ನು ಹೊಂದಿರುವ ಮೂರು ರಾಜ್ಯಗಳಲ್ಲಿ ಹಿಮಾಚಲ ಪ್ರದೇಶವೂ ಒಂದಾಗಿದೆ. ಬುಧವಾರ ಹೇಳಿಕೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು, ‘ಹಿಮಾಚಲದ ಸಂಪೂರ್ಣ ರಾಜ್ಯ ಘಟಕ, ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರು ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಂಪೂರ್ಣ ವಿಸರ್ಜಿಸುವ … Continued

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್‌ ಜಯಭೇರಿ ; ಭಾರತದ ಷೇರು ಮಾರುಕಟ್ಟೆಯಲ್ಲಿ ಏರಿಕೆ

ಮುಂಬೈ : 2024 ರ ಅಮೆರಿಕ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸುತ್ತಿದ್ದಂತೆ ಭಾರತದ ಸ್ಟಾಕ್ ಮಾರ್ಕೆಟ್ ಬುಧವಾರ (ನವೆಂಬರ್ 6) ಏರಿಕೆ ಕಂಡಿದೆ. ಅಮೆರಿಕದ ಚುನಾವಣಾ ಫಲಿತಾಂಶಗಳಲ್ಲಿ ಟ್ರೆಂಡ್‌ಗಳು ಟ್ರಂಪ್ ಮುನ್ನಡೆ ಸಾಧಿಸುತ್ತಿದ್ದಂತೆಯೇ ಬಿಎಸ್‌ಇ ಸೆನ್ಸೆಕ್ಸ್ 1,093.1 ಪಾಯಿಂಟ್‌ಗಳು ಅಥವಾ ಶೇಕಡಾ 1.37 ರಷ್ಟು ಏರಿಕೆ ಕಂಡು ಇಂಟ್ರಾಡೇ ಗರಿಷ್ಠ 80,569.73 … Continued

ಮುಡಾ ಹಗರಣ : ಸತತ ಎರಡು ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು, ಬುಧವಾರ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಲೋಕಾಯುಕ್ತ ಪೊಲೀಸರು ಸತತ 2 ತಾಸುಗಳ ಕಾಲ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದ್ದು, ಅವರಿಗೆ ಸುಮಾರು 40 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಯಿತು ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಅವರು ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಕರ್ನಾಟಕದ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ 40 ಬಂಡಾಯ ನಾಯಕರನ್ನು ಉಚ್ಚಾಟಿಸಿದ ಬಿಜೆಪಿ

ಮುಂಬೈ : ಸೀಟು ಹಂಚಿಕೆ ಕುರಿತು ಮಹಾಯುತಿ ಮಿತ್ರಪಕ್ಷಗಳ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆ ಬಿಜೆಪಿ ಮಂಗಳವಾರ 37 ವಿಧಾನಸಭಾ ಕ್ಷೇತ್ರಗಳಲ್ಲಿ 40 ನಾಯಕರು ಮತ್ತು ಪದಾಧಿಕಾರಿಗಳನ್ನು ಉಚ್ಚಾಟಿಸಿದೆ. ಬಿಜೆಪಿ ಪದಾಧಿಕಾರಿ ಹುದ್ದೆಯನ್ನು ಹೊಂದಿದ್ದರೂ, ನೀವು ಪಕ್ಷದ ಶಿಸ್ತು ಉಲ್ಲಂಘಿಸುವ ಕೆಲಸ ಮಾಡಿದ್ದೀರಿ. ಇಂತಹ ಕ್ರಮಗಳು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಮತ್ತು ನಿಮ್ಮನ್ನು ತಕ್ಷಣ … Continued