ಕಾಂಗ್ರೆಸ್ ಶಾಸಕಿ ಮನೆಯಲ್ಲಿ 20 ವರ್ಷದ ಯುವಕನ ಶವ ಪತ್ತೆ

ನವಡಾ: ಬಿಹಾರದ ನವಡಾ ಜಿಲ್ಲೆಯ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರ ಮನೆಯಲ್ಲಿ 24 ವರ್ಷದ ಯುವಕನ ಶವ ಶನಿವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವಕ ಪಿಯೂಷ್ ಸಿಂಗ್ ಎಂಬವರು ನೀತು ಸಿಂಗ್ ಅವರ ದೂರದ ಸಂಬಂಧಿಯಾಗಿದ್ದು, ಶವ ಪತ್ತೆಯಾದಾಗ ಶಾಸಕಿ ನೀತು ಸಿಂಗ್ ನರ್ಹತ್‌ನಲ್ಲಿರುವ ಅವರ ಮನೆಯಲ್ಲಿ ಇರಲಿಲ್ಲ ಎಂದು ನಾವಡಾ … Continued

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಕಾನೂನುಬದ್ಧ ಪಕ್ಷವಲ್ಲ : ಬ್ರಿಟಿನ್‌ ಸಂಸತ್ತಿನಲ್ಲಿ ಪಿಒಕೆ ಸಾಮಾಜಿಕ ಕಾರ್ಯಕರ್ತ ಪ್ರತಿಪಾದನೆ

ಲಂಡನ್‌: ಜಮ್ಮು ಮತ್ತು ಕಾಶ್ಮೀರದ ವಿವಾದದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಪಾಕಿಸ್ತಾನ ಕಾನೂನುಬದ್ಧ ಪಾಲುದಾರ ಪಕ್ಷವಲ್ಲ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಪ್ರೊ. ಸಜ್ಜದ್‌ ರಾಜಾ ಪ್ರತಿಪಾದಿಸಿದ್ದಾರೆ. ಬ್ರಿಟನ್ನಿನ ಸಂಸತ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ದಿನಾಚರಣೆ (ಅ.26.1947 ರಂದು ಭಾರತಕ್ಕೆ ಸೇರ್ಪಡೆಯಾದ 76ನೇ ವರ್ಷಾಚರಣೆ) ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ”ಪಾಕ್‌ … Continued

ವಿಶ್ವಕಪ್‌ 2023: ಗಾಯಗೊಂಡ ಭಾರತದ ತಂಡದ ನಾಯಕ ರೋಹಿತ್ ಶರ್ಮಾ; ಇಂಗ್ಲೆಂಡ್ ಪಂದ್ಯಕ್ಕೆ ಆಡ್ತಾರಾ..?

ಲಕ್ನೋ: ಈ ಬಾರಿಯ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಮುಖಾಮುಖಿ ಇಂದು (ಅಕ್ಟೋಬರ್‌ ೨೯) ಇಂಗ್ಲೆಂಡ್ ವಿರುದ್ಧ ನಡೆಯಲಿದೆ. ಲಕ್ನೋದಲ್ಲಿ ನಡೆಯುವ ಭಾರತ – ಇಂಗ್ಲೆಂಡ್ ನಡುವಿನ ಪಂದ್ಯಕ್ಕೆ ಈಗ ಭಾರತದ ತಂಡದಲ್ಲಿ ಮತ್ತೊಬ್ಬರ ಪ್ರಮುಖ ಆಟಗಾರನಿಗೆ ಗಾಯದ ಸಮಸ್ಯೆ ಎದುರಾಗಿದೆ. ಈಗಾಗಲೇ ಹಾರ್ದಿಕ್ ಪಾಂಡ್ಯ ಅವರ ಗಾಯದ ಕಾರಣದಿಂದ ತಂಡದಲ್ಲಿ ಆಡುತ್ತಿಲ್ಲ. ಇದರ … Continued

20 ಕೋಟಿ ರೂಪಾಯಿ ಕೊಡಿ ಇಲ್ಲವಾದಲ್ಲಿ ಕೊಲ್ಲುತ್ತೇವೆ : ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖೇಶ ಅಂಬಾನಿ ಕಂಪನಿಯ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಳುಹಿಸಿರುವ ಇ-ಮೇಲ್‌ನಲ್ಲಿ ಅವರು 20 ಕೋಟಿ ರೂಪಾಯಿ ನೀಡಬೇಕು ಇಲ್ಲವಾದಲ್ಲಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ. “ನೀವು ನಮಗೆ 20 ಕೋಟಿ ನೀಡದಿದ್ದರೆ, ನಾವು … Continued

ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವ ಪತ್ತೆ

ಸೂರತ್ : ಗುಜರಾತ್‌ನ ಸೂರತ್‌ನಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯ ಪ್ರಕಾರ, ಆರು ಮಂದಿ ವಿಷಕಾರಿ ಪದಾರ್ಥಗಳನ್ನು ಸೇವಿಸಿ ಮೃತಪಟ್ಟಿದ್ದಾರೆ. ಏಳನೇ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಮನೀಶ್ ಸೋಲಂಕಿ, ಅವರ ಪತ್ನಿ ರೀಟಾ, ತಂದೆ ಕಾನು, ತಾಯಿ ಶೋಭಾ … Continued

ವಿಶ್ವಕಪ್‌ ಕ್ರಿಕೆಟ್‌ : ನ್ಯೂಜಿಲ್ಯಾಂಡ್‌ ವಿರುದ್ಧ ರೋಚಕ ಜಯಗಳಿಸಿದ ಆಸ್ಟ್ರೇಲಿಯಾ

ಧರ್ಮಶಾಲಾ : ಶನಿವಾರ ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ತಂಡವು ವಿಶ್ವಕಪ್ 2023 ಅಂಕಗಳ ಪಟ್ಟಿಯಲ್ಲಿ ಅಗ್ರ 4 ರಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 388 ರನ್ ಗಳಿಸಿ ಆಲೌಟ್‌ ಆಯಿತು. ನಿಗದಿತ ಗುರಿಯ ಬೆನ್ನಟ್ಟಿದ ನ್ಯೂಜಿಲ್ಯಾಂಡ್‌ ತಂಡಕ್ಕೆ 50 ಓವರ್‌ಗಳಲ್ಲಿ 9 … Continued

ಇಸ್ರೇಲ್-ಹಮಾಸ್ ಯುದ್ಧ : ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆ ನಿರ್ಣಯದ ಮೇಲಿನ ಮತದಾನಕ್ಕೆ ಗೈರಾದ ಭಾರತ ; ಯಾಕೆಂದರೆ….

ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದಲ್ಲಿ ತಕ್ಷಣದ ಮಾನವೀಯ ಕದನ ವಿರಾಮಕ್ಕೆ ಕರೆ ನೀಡಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಲ್ಲಿ ಭಾರತ ಮತದಾನದಿಂದ ದೂರ ಉಳಿದಿದೆ. ತನ್ನ ಗೈರಾಗುವ ನಿರ್ಧಾರಕ್ಕೆ ವಿವರಿಸಿದ ಭಾರತ, ಭಯೋತ್ಪಾದನೆಯ ವಿರುದ್ಧ ವಿಶ್ವ ಸಂಸ್ಥೆಯು ಸ್ಪಷ್ಟ ಸಂದೇಶವನ್ನು ಕಳುಹಿಸಬೇಕಾಗಿದೆ, ಆದರೆ ಕದನ ವಿರಾಮಕ್ಕೆ ಕರೆ ನೀಡಿದ ನಿರ್ಣಯದಲ್ಲಿ ಹಮಾಸ್ ಬಗ್ಗೆ ಉಲ್ಲೇಖಿಸಿಲ್ಲ ಎಂದು ಹೇಳಿದೆ. … Continued

ಅತ್ಯಾಚಾರ, ಲೂಟಿ, ಡಕಾಯಿತಿ, ಜೈಲಿಗೆ ಹೋಗುವುದರಲ್ಲಿ ಮುಸ್ಲಿಮರು ನಂಬರ್ 1′ : ವಿವಾದಕ್ಕೆ ಕಾರಣವಾದ ಅಸ್ಸಾಂ ರಾಜಕಾರಣಿ ಬದ್ರುದ್ದೀನ್ ಅಜ್ಮಲ್ ಹೇಳಿಕೆ

ದಿಸ್ಪುರ: ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ದರೋಡೆ, ಅತ್ಯಾಚಾರ, ಕೊಲೆ, ಈವ್ ಟೀಸಿಂಗ್ ಮತ್ತು ಜೈಲಿಗೆ ಹೋಗುವಂತಹ ಅಪರಾಧಗಳ ವಿಷಯದಲ್ಲಿ ಮುಸ್ಲಿಮರು “ನಂ 1” ಎಂದು ಹೇಳಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಉದ್ಯಮಿ ಹಾಗೂ ರಾಜಕಾರಣಿಯಾಗಿರುವ ಅವರು, ಮುಸ್ಲಿಮರಲ್ಲಿ ಶಿಕ್ಷಣದ ಕೊರತೆಯಿಂದಾಗಿ ಅವರಲ್ಲಿ ಅಪರಾಧಗಳ ಪ್ರಮಾಣ ಹೆಚ್ಚುತ್ತಿದೆ … Continued

ರಾಜಸ್ಥಾನ ವಿಧಾನಸಭೆ ಚುನಾವಣೆ: ಯಾವ್ಯಾವ ಸಮುದಾಯಗಳ ಒಲವು ಯಾವ ಪಕ್ಷಗಳತ್ತ ? ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ಹೇಳುವುದೇನು..?

ಮುಂದಿನ ತಿಂಗಳು ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ವಿವಿಧ ಸಮುದಾಯಗಳಿಗೆ ಯಾವ್ಯಾವ ಪಕ್ಷಗಳು ಪ್ರಮುಖ ಆಯ್ಕೆಯಾಗಿವೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ತಿಳಿಸಿದೆ. ರಜಪೂತ, ಬನಿಯಾ, ಜಾಟ್ ಮತ್ತು ಮೀನಾ ಸೇರಿದಂತೆ ಹಲವು ಸಮುದಾಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ ಎಂದು ಸಮೀಕ್ಷೆಗಳು ತೋರಿಸಿವೆ. ರಾಜ್ಯದಲ್ಲಿ ಗುಜ್ಜರ್, ಮಾಲಿ ಮತ್ತು ಮುಸ್ಲಿಮರ ಮತಗಳನ್ನು … Continued