ವೀಡಿಯೊ : ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ದೊಪ್ಪೆಂದು ಬಿದ್ದ ನೀರಿನ ಟ್ಯಾಂಕ್; ಮುಂದೇನಾಯ್ತು…ನೋಡಿ

ಸೇಬು ಹಣ್ಣನ್ನು ತಿನ್ನುತ್ತಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲ್ಛಾವಣಿಯ ಮೇಲಿದ್ದ ನೀರಿನ ತೊಟ್ಟಿಯೊಂದು ಬಿದ್ದಿದೆ. ಅದೃಷ್ಟವಶಾತ್‌ ಮಹಿಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಮಹಿಳೆ ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶ ರೀತಿಯಲ್ಲಿ ಹೊರನಡೆಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ, ಇದು ಇಂಟರ್ನೆಟ್ ಅನ್ನು ಬೆರಗುಗೊಳಿಸಿದೆ. ವರದಿಗಳ ಪ್ರಕಾರ ಗುಜರಾತಿನ ಸೂರತ್‌ನಲ್ಲಿ ಈ ಘಟನೆ ನಡೆದಿದೆ. ವೈರಲ್ ಆಗಿರುವ ವೀಡಿಯೊ … Continued

“ಪ್ರತಿಯೊಬ್ಬ ಭಾರತೀಯ ನಿಮಗೆ ಋಣಿಯಾಗಿರುತ್ತಾನೆ..”: ಮಾಜಿ ಪ್ರಧಾನಿ ನರಸಿಂಹರಾವ್‌ ಗೆ 1996ರಲ್ಲಿ ರತನ್ ಟಾಟಾ ಬರೆದಿದ್ದ ಪತ್ರ ವೈರಲ್‌

ನವದೆಹಲಿ : ಕೆಲವು ದಿನಗಳ ಹಿಂದೆ ನಿಧನರಾದ ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು 1996 ರಲ್ಲಿ ಮಾಜಿ ಪ್ರಧಾನಿ ದಿವಂಗತ ಪಿ.ವಿ. ನರಸಿಂಹ ರಾವ್ ಅವರನ್ನು ಉದ್ದೇಶಿಸಿ ಬರೆದ ಕೈಬರಹದ‌ ಪತ್ರದ ಚಿತ್ರವನ್ನು ಆರ್‌ಪಿಜಿ ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಹಂಚಿಕೊಂಡಿದ್ದಾರೆ. ಪತ್ರವೊಂದರಲ್ಲಿ, ರತನ್‌ ಟಾಟಾ ಅವರು ಭಾರತದಲ್ಲಿ ಹೆಚ್ಚು ಅಗತ್ಯವಿರುವ ಆರ್ಥಿಕ … Continued

ಅರ್ಜಿ ವಿಚಾರಣೆ ವೇಳೆ ಮಾತಿನ ಚಕಮಕಿ : ಭದ್ರತಾ ಸಿಬ್ಬಂದಿ ಕರೆಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್‌ ಗೊಗೊಯ್‌ ಅವರ ವಿರುದ್ಧ ಅರ್ಜಿ ಸಲ್ಲಿಸಿದ್ದ ವಕೀಲ ಮತ್ತು ಪೀಠದ ನಡುವಿನ ತೀವ್ರ ಮಾತಿನ ಚಕಮಕಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಾಕ್ಷಿಯಾಯಿತು ನ್ಯಾಯಾಧೀಶರ ಹೆಸರನ್ನು ಬಳಸಬೇಡಿ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಸಲಹೆ ನೀಡಿತು. ಆದರೆ ಅವರು ತಮ್ಮ ಮಾತು ಕೇಳಬೇಕು ಎಂದು ಒತ್ತಾಯಿಸಿದರು. … Continued

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ; ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಹೆಸರು ಘೋಷಣೆ

ನವದೆಹಲಿ: ಚುನಾವಣಾ ಆಯೋಗವು (EC) ವಯನಾಡು ಮತ್ತು ನಾಂದೇಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಮಂಗಳವಾರ ಘೋಷಿಸಿದೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಮಂಗಳವಾರ (ಅಕ್ಟೋಬರ್ 15) ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. … Continued

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಟಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭೆ … Continued

ಭಾರತದ ಸೇನೆಗೆ ಮತ್ತಷ್ಟು ಬಲ ; ಅಮೆರಿಕದಿಂದ 31 ಪ್ರಿಡೇಟರ್ ಡ್ರೋನ್‌ ಖರೀದಿಗೆ 32,000 ಕೋಟಿ ರೂ. ಐತಿಹಾಸಿಕ ಒಪ್ಪಂದಕ್ಕೆ ಸಹಿ

ನವದೆಹಲಿ: ದೇಶದ ಸಶಸ್ತ್ರ ಪಡೆಗಳಿಗೆ ದೊಡ್ಡ ಬಲ ನೀಡಲಿರುವ 31 MQ-9B ಪ್ರಿಡೇಟರ್ ಡ್ರೋನ್‌ಗಳ ಖರೀದಿಗೆ ಭಾರತವು ಅಮೆರಿಕದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಅಮೆರಿಕದಿಂದ 31 ಪ್ರಿಡೇಟರ್ ಡ್ರೋನ್‌ಗಳ ಖರೀದಿಗೆ ಭಾರತ ಹಾಗೂ ಅಮೆರಿಕವು 32,000 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಸಹಿ ಹಾಕಿವೆ. ಇದು ಭಾರತೀಯ ಸೇನೆಯ ಕಣ್ಗಾವಲು ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. … Continued

ಮಾಜಿ ಸಚಿವ ಬಾಬಾ ಸಿದ್ದಿಕ್‌ ಹತ್ಯೆ ನಂತರ ನಟ ಸಲ್ಮಾನ್ ಖಾನ್‌ ಭದ್ರತೆ ಹೆಚ್ಚಳ

ಮುಂಬೈ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ವೈ ಫ್ಲಸ್‌ ಭದ್ರತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬಳಿಕ ಸರ್ಕಾರ ಸಲ್ಮಾನ್‌ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದೆ. ಸಲ್ಮಾನ್‌ ಖಾನ್‌ಗೆ ಜೀವಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಬೆಂಗಾವಲು ವಾಹನ ಈಗ … Continued

ವೀಡಿಯೊ..| ಪೊಲೀಸ್‌ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು…!

ಆಘಾತಕಾರಿ ಘಟನೆಯೊಂದರಲ್ಲಿ, ಉದ್ರಿಕ್ತ ಗುಂಪೊಂದು ಸೋಮವಾರ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರನ್ನು ಥಳಿಸಲು ಪ್ರಯತ್ನಿಸಿದೆ. ಆದರೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಯನ್ನು ಪಾರು ಮಾಡಿದ್ದಾರೆ. ಸುದ್ದಿ ಸಂಸ್ಥೆ ಐಎಎನ್‌ಎಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ದೃಶ್ಯಗಳ ಪ್ರಕಾರ, ಜನಸಂದಣಿಯನ್ನು ನಿಯಂತ್ರಿಸಲು ಘಟನಾ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಯ ಹಿಂದೆ ಉದ್ರಿಕ್ತ ಗುಂಪು … Continued

ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣ ; 6 ಕೆನಡಾ ರಾಜತಾಂತ್ರಿಕರನ್ನು ಹೊರಹಾಕಿದ ಭಾರತ

ನವದೆಹಲಿ : ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಗದ್ದಲ ಸೋಮವಾರ ತಡರಾತ್ರಿ ಉಲ್ಬಣಗೊಂಡಿದ್ದು, ಭಾರತವು ಕೆನಡಾದಲ್ಲಿನ ತನ್ನ ಉನ್ನತ ರಾಯಭಾರಿಯನ್ನು ಹಿಂಪಡೆದಿದ್ದು, ಆರು ಕೆನಡಾದ ರಾಜತಾಂತ್ರಿಕರನ್ನು ದೇಶದಿಂದ ಹೊರಹಾಕಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯ ತನಿಖೆಯಲ್ಲಿ ಕೆನಡಾದಲ್ಲಿರುವ ಭಾರತದ ಹೈಕಮಿಷನರ್ ಮತ್ತು ಇತರ ಕೆಲವು ರಾಜತಾಂತ್ರಿಕರನ್ನು ‘ಆಸಕ್ತಿಯ ವ್ಯಕ್ತಿಗಳು’ ಎಂದು … Continued

ಕೆನಡಾದಿಂದ ದೊಡ್ಡ ರಾಜತಾಂತ್ರಿಕ ವಿವಾದ ; ಕೆನಡಾದ ಭಾರತೀಯ ಹೈಕಮಿಷನರ್ ನನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದ ಸರ್ಕಾರ

ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಕೆನಡವು ಅಲ್ಲಿನ ಭಾರತದ ಹೈಕಮಿಷನರ್ ಮತ್ತು ಇತರ ಭಾರತೀಯ ರಾಜತಾಂತ್ರಿಕರನ್ನು ‘ಹಿತಾಸಕ್ತ ವ್ಯಕ್ತಿಗಳು’ ಎಂದು ತನಿಖೆಗೆ ಲಿಂಕ್ ಮಾಡಿದ ನಂತರ ಭಾರತವು ಕೆನಡಾದಲ್ಲಿನ ತನ್ನ ಹೈಕಮಿಷನರ್ ಅವರನ್ನು ಹಿಂಪಡೆಯಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ಸಂಜೆ ಪ್ರಕಟಿಸಿದೆ. ಖ”ಅವರ ಭದ್ರತೆಯನ್ನು ಖಾತ್ರಿಪಡಿಸುವ ಪ್ರಸ್ತುತ … Continued