ಲೆಫ್ಟಿನೆಂಟ್ ಗವರ್ನರ್ ಆದೇಶದ ಮೇರೆಗೆ ಅತಿಶಿಗೆ ಸೇರಿದ ವಸ್ತುಗಳನ್ನು ಸಿಎಂ ನಿವಾಸದಿಂದ ಹೊರಹಾಕಲಾಗಿದೆ: ಎಎಪಿ ಆರೋಪ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆರೋಪಿಸಿದೆ. ಇದು ಎಎಪಿ ಮತ್ತು ಕೇಂದ್ರದ ನಡುವೆ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. “ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ … Continued

ರತನ್‌ ಟಾಟಾ ಆರೋಗ್ಯ ಸ್ಥಿತಿ ಗಂಭೀರ : ವರದಿ

ಮುಂಬೈ: ದೇಶದ ಪ್ರಮುಖ ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್‌ನ ವಿಶ್ರಾಂತ ಅಧ್ಯಕ್ಷ ರತನ್‌ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮುಂಬೈನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವರದಿಗಳು ಹೇಳಿವೆ. ಮುಂಬೈ : ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ … Continued

ಹರಿಯಾಣದಲ್ಲಿ ಶಾಕಿಂಗ್‌ ಸೋಲಿನ ನಂತರ ಕಾಂಗ್ರೆಸ್‌ ಕಡೆಗಣಿಸುತ್ತಿರುವ ಇಂಡಿಯಾ ಬಣದ ಮಿತ್ರಪಕ್ಷಗಳು…!

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಮಿತ್ರಪಕ್ಷಗಳು ಅದರ ಗಾಯಕ್ಕೆ ಉಪ್ಪು ಸವರುತ್ತಿವೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಹೇಳುತ್ತಿವೆ. ಈ ಮಧ್ಯೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಒಂದು ದಿನದ … Continued

10ನೇ ಬಾರಿಗೆ ರೆಪೋ ದರ ಯಥಾಸ್ಥಿತಿಯಲ್ಲಿ ಇರಿಸಿದ ಆರ್‌ ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರೆಪೋ ದರ (Repo Rate)ವನ್ನು ಶೇ. 6.5ರಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರೆಪೋ ದರ ಸದ್ಯಕ್ಕೆ ಇಳಿಕೆ ಮಾಡುವುದು ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿ (Monetary Policy Committee) ಹೆಚ್ಚಿನ ಸದಸ್ಯರು ಅಭಿಪ್ರಾಯಪಟ್ಟ ನಂತರ ಈ ತೀರ್ಮಾನಕ್ಕೆ ಬರಲಾಗಿದೆ ಎಂದು … Continued

ಹರಿಯಾಣ, ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟ : ಮತ್ತೊಮ್ಮೆ ಠುಸ್‌ ಪಟಾಕಿಯಾದ ಎಕ್ಸಿಟ್ ಪೋಲ್‌ಗಳು…!

ನವದೆಹಲಿ: ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಪ್ರಕಟಿಸಿದ್ದು, ಹರಿಯಾಣದಲ್ಲಿ ಬಿಜೆಪಿ ಬಹುಮತ ಪಡೆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) -ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತ ಪಡೆದಿದೆ. ಈ ಫಲಿತಾಂಶಗಳು ಮತ್ತೊಮ್ಮೆ ಎಕ್ಸಿಟ್ ಪೋಲ್‌ಗಳು ಹೇಳಿದ್ದು ಠುಸ್‌ ಆಗಿದೆ. ಅದು ಹರಿಯಾಣದಲ್ಲಿ ಕಾಂಗ್ರೆಸ್‌ಗೆ … Continued

ವೀಡಿಯೊ…| ಭಾರತವನ್ನು ಹೊಗಳಿ ಹೆಚ್ಚುವರಿ ಲಗೇಜ್‌ ಶುಲ್ಕ ವಿಧಿಸಿದ ಪಾಕಿಸ್ತಾನದ ಸರ್ಕಾರಿ ಏರ್‌ಲೈನ್ಸ್‌ ವಿರುದ್ಧ ಹರಿಹಾಯ್ದ ಝಾಕಿರ್ ನಾಯ್ಕ್

ವಿವಾದಿತ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಅವರು ತಮ್ಮ ಪಾಕಿಸ್ತಾನದ ಭೇಟಿಯ ಸಮಯದಲ್ಲಿ ಅವರು ಆ ದೇಶಕ್ಕೆ ಪ್ರಯಾಣಿಸುತ್ತಿದ್ದಾಗ ಹೆಚ್ಚುವರಿ ಸಾಮಾನು ಸರಂಜಾಮುಗಳ ಮೇಲೆ ವಿಧಿಸಿದ್ದ ಶುಲ್ಕ ಮನ್ನಾ ಮಾಡಲು ಪಾಕಿಸ್ತಾನದ ಸರ್ಕಾರಿ ಏರ್‌ಲೈನ್ಸ್‌ ನಿರಾಕರಿಸಿದ್ದಕ್ಕೆ ಗರಂ ಆಗಿದ್ದಾರೆ. ಪಾಕಿಸ್ತಾನ್ ಇಂಟರ್‌ನ್ಯಾಶನಲ್ ಏರ್‌ಲೈನ್ಸ್ (ಪಿಐಎ) ತನ್ನ ಹೆಚ್ಚುವರಿ ಸಾಮಾ-ಸರಂಜಾಮುಗಳಿಗೆ ವಿಧಿಸಿಲಾಗಿದ್ದ ಶುಲ್ಕದಲ್ಲಿ ಶೇಕಡಾ 50 ರಷ್ಟು … Continued

ಹರಿಯಾಣ ವಿಧಾನಸಭೆ ಚುನಾವಣೆ 2024: ಹಿಸಾರ್‌ ಕ್ಷೇತ್ರದಿಂದ ಜಯಗಳಿಸಿದ ಭಾರತದ ಅತ್ಯಂತ ಶ್ರೀಮಂತ ಮಹಿಳೆ

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಹಿಸಾರ್ 18,941 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ಬಿಜೆಪಿಯ ಕಮಲ್ ಗುಪ್ತಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ ರಾರಾ ಅವರನ್ನು ಸೋಲಿಸಿದ್ದಾರೆ. ಹಿಸಾರ್‌ನ ಜನರಿಗೆ ಕೃತಜ್ಞತೆ ವ್ಯಕ್ತಪಡಿಸಿದ ಸಾವಿತ್ರಿ ಜಿಂದಾಲ್ … Continued

ಜಾಟ್ ಕೇಂದ್ರೀಕೃತ ಪ್ರಚಾರದಿಂದ ಹಿಡಿದು ಒಳಜಗಳದ ವರೆಗೆ…: ಹರಿಯಾಣದಲ್ಲಿ ಕಾಂಗ್ರೆಸ್‌ ಆಘಾತಕಾರಿ ಸೋಲಿನ ಹಿಂದಿನ 5 ಕಾರಣಗಳು…

ನವದೆಹಲಿ: ಹರಿಯಾಣ ಚುನಾವಣೆಯ ಮತ ಎಣಿಕೆಗೆ ಮಂಗಳವಾರ ಬೆಳಗ್ಗೆ ಆರಂಭವಾದ ನಂತರ 9 ಗಂಟೆ ಸುಮಾರಿಗೆ ಕಾಂಗ್ರೆಸ್‌ ಬಿಜೆಪಿಗಿಂತ ಸಾಕಷ್ಟು ಮುನ್ನಡೆ ಸಾಧಿಸಿತ್ತು. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಜಲೇಬಿ ಹಂಚುವುದು ಮತ್ತು ಡೊಳ್ಳು ಬಾರಿಸುವ ಸಂಭ್ರಮಾಚರಣೆಯೂ ನಡೆದಿತ್ತು. ಇದಕ್ಕೆ ವ್ಯತಿರಿಕ್ತವಾಗಿ ಬಿಜೆಪಿ ಕಚೇರಿ ನಿರ್ಜನವಾಗಿತ್ತು. ಆದರೆ ಒಂದು ಗಂಟೆಯ ನಂತರ, ಟ್ರೆಂಡ್‌ ಸಂಪೂರ್ಣ ಬದಲಾಯಿತು. … Continued

ಒಮರ್‌ ಅಬ್ದುಲ್ಲಾ ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿ

ಶ್ರೀನಗರ : ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್‌ ಅಬ್ದುಲ್ಲಾ ಅವರು ತಮ್ಮ ಪುತ್ರ ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ … Continued

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ; ನ್ಯಾಶನಲ್ ಕಾನ್ಫರೆನ್ಸ್- ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ…

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಮೈತ್ರಿಕೂಟವು ಕೇಂದ್ರಾಡಳಿತ ಪ್ರದೇಶದ 90 ಸ್ಥಾನಗಳಲ್ಲಿ 49 ಸ್ಥಾನಗಳನ್ನು ಗೆಲುವು ಸಾಧಿಸಿದೆ ಅಥವಾ ಮುನ್ನಡೆ ಸಾಧಿಸಿದೆ. ವಿವಾದಾತ್ಮಕ ಹೊಸ ನಿಯಮದ ಅಡಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ ಸಿನ್ಹಾ ಅವರು ಇನ್ನೂ ಐವರನ್ನು ಶಾಕರನ್ನಾಗಿ ನಾಮನಿರ್ದೇಶನ ಮಾಡಲಿದ್ದಾರೆ. ಬಹುತೇಕ … Continued