ಈತ ವಿಶ್ವದ ಶ್ರೀಮಂತ ಭಿಕ್ಷುಕ ; ಮುಂಬೈನಲ್ಲಿ 2 ಬಿಎಚ್​ಕೆ ಮನೆ ಇರುವ ಮಿಲಿಯನೇರ್ : ಈತನ ಒಟ್ಟು ಆಸ್ತಿ ಎಷ್ಟು ಗೊತ್ತೆ..?

ಭಿಕ್ಷಾಟನೆಯು ಸಾಮಾನ್ಯವಾಗಿ ಬಡತನದೊಂದಿಗೆ ಸಂಬಂಧಿಸಿದೆ ಎಂಬುದು ಸಾಮಾನ್ಯವಾದ ನಂಬಿಕೆ. ಆದರೆ ಕೆಲವರಿಗೆ   ಇದು ಭಾರೀ ಲಾಭದಾಯಕ ಉದ್ಯೋಗ. ಭಾರತದ ಭಿಕ್ಷುಕರೊಬ್ಬರು ವಿಶ್ವದ ಶ್ರೀಮಂತ ಭಿಕ್ಷುಕ ಎಂದು ಗುರುತಿಸಲ್ಪಟ್ಟಿದ್ದಾರೆ, ಅವರ ಆಸ್ತಿಯ ಮೌಲ್ಯ ನಿವ್ವಳ 7.5 ಕೋಟಿ ರೂ.ಗಳು. ಮುಂಬೈನಲ್ಲಿ ನೆಲೆಸಿರುವ ಭರತ್‌ ಜೈನ್ ಎಂಬ 54 ವರ್ಷ ವಯಸ್ಸಿನ ವ್ಯಕ್ತಿ 40 ವರ್ಷಗಳಿಂದ ಭಿಕ್ಷಾಟನೆ ಮಾಡುತ್ತಿದ್ದಾರೆ. … Continued

ಹಿಂದಿನ ಜಗನ್ ಸರ್ಕಾರ ಆಡಳಿತದಲ್ಲಿ ತಿರುಪತಿ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ; ಚಂದ್ರಬಾಬು ನಾಯ್ಡು ಗಂಭೀರ ಆರೋಪ

ಅಮರಾವತಿ : ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದಲ್ಲಿ ʼತಿರುಪತಿ ಲಡ್ಡುʼಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಗಂಭೀರ ಆರೋಪ ಮಾಡಿದ್ದಾರೆ. ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಈ ಆರೋಪವನ್ನು ತಳ್ಳಿಹಾಕಿದೆ ಮತ್ತು ಇದು ದುರುದ್ದೇಶಪೂರಿತ ಆರೋಪ ಎಂದು ಹೇಳಿದೆ. ಬುಧವಾರ ನಡೆದ … Continued

ವೀಡಿಯೊ..| ಆಸ್ಪತ್ರೆಯ ತುರ್ತು ಚಿಕಿತ್ಸಾ ಕೊಠಡಿ ಒಳಕ್ಕೆ ಚಪ್ಪಲಿ ತೆಗೆದು ಬರುವಂತೆ ಹೇಳಿದ್ದಕ್ಕೆ ವೈದ್ಯರಿಗೆ ಥಳಿಸಿದ ರೋಗಿಯ ಕುಟುಂಬ…!

ಆಘಾತಕಾರಿ ಘಟನೆಯೊಂದರಲ್ಲಿ, ಗುಜರಾತಿನಲ್ಲಿ ಆಸ್ಪತ್ರೆಯ ವೈದ್ಯರು ವೈದ್ಯಕೀಯ ತುರ್ತು ಕೋಣೆಗೆ ಪ್ರವೇಶಿಸುವ ಮೊದಲು ಚಪ್ಪಲಿಯನ್ನು ತೆಗೆದಿಟ್ಟು ಬರುವಂತೆ ರೋಗಿಯ ಕುಟುಂಬದವರಿಗೆ ಸೂಚಿಸಿದ ನಂತರ ಅವರು ವೈದ್ಯರಿಗೆ ಮನಬಂದಂತೆ ಥಳಿಸಿದ್ದಾರೆ ಎಂದು ವರದಿಯಾಗಿದೆ. ಗುಜರಾತಿನ ಭಾವನಗರದ ಸಿಹೋರ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮಹಿಳೆಗೆ ತಲೆಗೆ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ … Continued

ʼಒಂದು ರಾಷ್ಟ್ರ ಒಂದು ಚುನಾವಣೆʼ ; ರಾಮನಾಥ ಕೋವಿಂದ ಸಮಿತಿ ವರದಿಗೆ ಮೋದಿ ಸಂಪುಟ ಅನುಮೋದನೆ

ನವದೆಹಲಿ :‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಮೂಲಗಳ ಪ್ರಕಾರ, ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ. ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಬುಧವಾರ ಕೇಂದ್ರ ಸಚಿವ ಸಂಪುಟದ ಮುಂದೆ … Continued

ತನ್ನ ಅನುಮತಿಯಿಲ್ಲದೆ ‘ಬುಲ್ಡೋಜರ್ ನ್ಯಾಯ’ಕ್ಕೆ ಮುಂದಾಗುವುದು ಬೇಡ : ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ

ನವದೆಹಲಿ: ಅಪರಾಧ ಪ್ರಕರಣದಲ್ಲಿ ಆರೋಪಿಗಳಾಗಿರುವವರ ಮನೆ ಅಥವಾ ಅಂಗಡಿಗಳನ್ನು ನ್ಯಾಯಾಲಯದ ಅನುಮತಿ ಪಡೆಯದೇ ಬುಲ್ಡೋಜರ್‌ ಬಳಸಿ ನೆಲಸಮ ಮಾಡುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್‌ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ, ಅನಧಿಕೃತ ಕಟ್ಟಡ ತೆರವುಗೊಳಿಸಲು ಇಂತಹ ಕ್ರಮ ಅಗತ್ಯವಿರುವ ಪ್ರಕರಣಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಮುಂದಿನ ವಿಚಾರಣೆ ಅಕ್ಟೋಬರ್ 1ರಂದು … Continued

ಉಗ್ರ ಅಫ್ಜಲ್ ಗುರು ಪರ ನಿಂತ ಕುಟುಂಬದ ಅತಿಶಿಗೆ ದೆಹಲಿ ಸಿಎಂ ಪಟ್ಟ ; ಮಲಿವಾಲ್ ಆರೋಪ : ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದ ಎಎಪಿ

ನವದೆಹಲಿ: ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ​ ಕೇಜ್ರಿವಾಲ್​ ಮುಖ್ಯಮಂತ್ರಿ ಕುರ್ಚಿಯನ್ನು ಆಪ್​ ನಾಯಕಿ ಅತಿಶಿ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ (43) ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರವಿಂದ ಕೇಜ್ರಿವಾಲ್ ಅವರ ದೆಹಲಿ ನಿವಾಸದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ನೂತನ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ಎಎಪಿ ನಾಯಕಿ ಅತಿಶಿ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ: ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ನೂತನ ಮುಖ್ಯಮಂತ್ರಿ ಹುದ್ದೆಗೆ ಸಚಿವೆ ಆತಿಶಿ ಹೆಸರನ್ನು ಪ್ರಸ್ತಾಪಿಸಿದ್ದು, ಪಕ್ಷವು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರು ಜಾಮೀನು ಪಡೆದು ಹೊರಬಂದ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ದೆಹಲಿ ಜನತೆ ತಮ್ಮನ್ನು … Continued

ವೀಡಿಯೊ..| ವಂದೇ ಭಾರತ ರೈಲಿಗೆ ಚಾಲನೆ ನೀಡುವ ವೇಳೆ ರೈಲ್ವೆ ಹಳಿ ಮೇಲೆ ಬಿದ್ದ ಶಾಸಕಿ…

ಇಟಾವಾ : ಆಗ್ರಾ-ವಾರಾಣಸಿ ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲಿಗೆ ಸೋಮವಾರ ಹಸಿರು ನಿಶಾನೆ ತೋರಿಸುವಾಗ ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬಹ್ದೌರಿಯಾ ಅವರು ರೈಲ್ವೆ ಹಳಿ ಮೇಲೆ ಬಿದ್ದ ಘಟನೆ ನಡೆದಿದೆ. ಘಟನೆಯ ಉದ್ದೇಶಿತ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ರೈಲು ಆಗಮಿಸುತ್ತಿದ್ದಂತೆ ಕಿಕ್ಕಿರಿದ ಪ್ಲಾಟ್‌ಫಾರ್ಮ್ ನಡುವೆ ಈ … Continued

ಟ್ರೈನಿ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ ; ಎಫ್‌ಐಆರ್ ವಿಳಂಬ : ಸಿಬಿಐ

ಕೋಲ್ಕತ್ತಾ : ಕೋಲ್ಕತ್ತಾ ಆರ್‌.ಜಿ.ಕರ್‌ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಇನ್ನಷ್ಟು ಆಘಾತಕಾರಿ ಸಂಗತಿಗಳು ಬಹಿರಂಗೊಳ್ಳುತ್ತಿದ್ದು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರ ಫೌಲ್ ಪ್ಲೇ ಅನ್ನು ಅದು ಎತ್ತಿ ತೋರಿಸುತ್ತದೆ. ಆಗಸ್ಟ್ 9 ರಂದು ಸರ್ಕಾರಿ ಸ್ವಾಮ್ಯದ ಆರ್‌.ಜಿ.ಕರ್‌ ಆಸ್ಪತ್ರೆಯಲ್ಲಿ 31 ವರ್ಷದ … Continued