ಸಮಾಜದಲ್ಲಿ ತಾರತಮ್ಯ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು: ಮೀಸಲಾತಿ ಬೆಂಬಲಿಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್

ನಾಗ್ಪುರ : ಸಮಾಜದಲ್ಲಿ ತಾರತಮ್ಯ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ ಭಾಗವತ್ ಬುಧವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ಸಂಘಟನೆಯು “ಸಂವಿಧಾನದಲ್ಲಿ ಒದಗಿಸಲಾದ ಮೀಸಲಾತಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನಾವು ನಮ್ಮದೇ ಸಹಜೀವಿಗಳನ್ನು ಸಾಮಾಜಿಕ ವ್ಯವಸ್ಥೆಯಲ್ಲಿ ಹಿಂದೆ … Continued

ಇಂಡಿಯಾ- ಭಾರತ ಹೆಸರಿನ ವಿವಾದ: ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಬೇಡಿ ಎಂದು ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಸುಮಾರು ಎರಡು ದಿನಗಳ ಭಾರೀ “ಇಂಡಿಯಾ-ಭಾರತ” ರಾಜಕೀಯ ಗದ್ದಲದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ತಮ್ಮ ಸಚಿವರಿಗೆ ಸೂಚಿಸಿದ್ದಾರೆ. ಜಿ 20 ಮತ್ತು ಇತರ ವಿಷಯಗಳ ಕುರಿತು ಚರ್ಚಿಸಲಾದ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ “ಕಾಮೆಂಟ್ ಮಾಡಬೇಡಿ” ಎಂದು ಹೇಳಿದ್ದಾರೆ ಮೂಲಗಳು ಹೇಳಿವೆ … Continued

ತಕ್ಕ ಪ್ರತಿಕ್ರಿಯೆ ಅಗತ್ಯವಿದೆ : ಡಿಎಂಕೆ ನಾಯಕನ “ಸನಾತನ” ಹೇಳಿಕೆಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ನವದೆಹಲಿ: ಸನಾತನ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ “ತಕ್ಕ ಪ್ರತಿಕ್ರಿಯೆಯ ಅಗತ್ಯವಿದೆ” ಎಂದು ಹೇಳಿದ್ದಾರೆ. ಹೊಸ ಸಂಸತ್ತಿನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನವನ್ನು ಕೇಂದ್ರ ಸರ್ಕಾರ ಕೈಬಿಟ್ಟಿರುವುದು ಸನಾತನ ಧರ್ಮದ ಸಾಧಕರ ತಾರತಮ್ಯಕ್ಕೆ ಉದಾಹರಣೆ ಎಂದು … Continued

ʼಇಂಡಿಯಾʼ ಅಥವಾ ʼಭಾರತʼ ಚರ್ಚೆ ಬೆನ್ನಲ್ಲೇ ಇಂಡಿಯಾ-ಭಾರತ ನಡುವಿನ ವ್ಯತ್ಯಾಸ ಹೇಳುವ ಲಾಲು ಪ್ರಸಾದ ಯಾದವ ಹಳೆಯ ವೀಡಿಯೊ ವೈರಲ್‌ | ವೀಕ್ಷಿಸಿ

ಅಧಿಕೃತ ಜಿ 20 ಶೃಂಗಸಭೆಯ ಆಹ್ವಾನ ಪತ್ರಿಕೆಗಳಲ್ಲಿ ‘ಪ್ರೆಸಿಡೆಂಟ್‌ ಆಫ್‌ ಇಂಡಿಯಾʼ ಬದಲಿಗೆ ‘ಪ್ರೆಸಿಡೆಂಟ್‌ ಆಫ್‌ ಭಾರತ’ ಎಂದು ಬಳಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ ಯಾದವ್ ಅವರ ಹಳೆಯ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿದೆ. ಹಳೆಯ NDTV ಸಂದರ್ಶನದ ಈ ಕ್ಲಿಪ್ ನಲ್ಲಿ ಲಾಲು ಯಾದವ್ ಇಂಡಿಯಾ … Continued

ಪಂಜಾಬಿನಲ್ಲಿ ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟದಲ್ಲಿ ಬಿರುಕು? : ಕಾಂಗ್ರೆಸ್‌ ಜೊತೆ ಮೈತ್ರಿಯಿಲ್ಲ-ಎಲ್ಲ ಕ್ಷೇತ್ರಗಳಲ್ಲೂ ಏಕಾಂಗಿ ಸ್ಪರ್ಧೆ ಎಂದು ಪ್ರಕಟಿಸಿದ ಆಪ್‌ ಸಚಿವರು..!

ಚಂಡೀಗಢ : ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಂಜಾಬ್ ಸಚಿವರಾದ ಅನ್ಮೋಲ್ ಗಗನ್ ಮಾನ್ ಬುಧವಾರ ಹೇಳಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ರಾಜ್ಯದ ಜನತೆ ಪ್ರೀತಿಸುತ್ತಾರೆ. ಜನರು ಪ್ರಾಮಾಣಿಕ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಮತ್ತು ಕಾಂಗ್ರೆಸ್ ಜೊತೆ ಯಾವುದೇ ರೀತಿಯ ಮೈತ್ರಿಯನ್ನು ಸಹಿಸುವುದಿಲ್ಲ ಎಂದು … Continued

ಬಿಜೆಪಿಗೆ ರಾಜೀನಾಮೆ ನೀಡಿದ ನೇತಾಜಿ ಸುಭಾಷ ಚಂದ್ರ ಬೋಸ್ ಮೊಮ್ಮಗ

ನವದೆಹಲಿ: ನೇತಾಜಿ ಸುಭಾಷಚಂದ್ರ ಬೋಸ್ ಅವರ ಮೊಮ್ಮಗ ಚಂದ್ರಕುಮಾರ ಬೋಸ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಚಂದ್ರ ಬೋಸ್ ಅವರು 2016 ರಲ್ಲಿ ಬಿಜೆಪಿ ಸೇರಿದ್ದರು ಮತ್ತು 2016 ರ ವಿಧಾನಸಭೆ ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದರು. ನಾನು ಬಿಜೆಪಿಗೆ ಸೇರಿದಾಗ ನೇತಾಜಿ ಸುಭಾಷಚಂದ್ರ ಬೋಸ್ … Continued

ಜಿ20 ಆಹ್ವಾನ ಪತ್ರಿಕೆ ವಿವಾದದ ನಡುವೆಯೇ ‘ಇಂಡಿಯಾ’ ಹೆಸರಿಗೆ ಜಿನ್ನಾ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದ ಕಾಂಗ್ರೆಸ್‌ ಸಂಸದ ಶಶಿ ತರೂರ್

ನವದೆಹಲಿ: ‘ಪ್ರೆಸಿಡೆಂಟ್‌ ಆಫ್‌ ಭಾರತ’ ಹೆಸರಿನಲ್ಲಿ ಜಿ 20 ಔತಣಕೂಟದ ಆಹ್ವಾನಗಳನ್ನು ಕಳುಹಿಸಲಾಗಿದ್ದು, ʼಇಂಡಿಯಾʼಕ್ಕೆ ‘ಭಾರತ’ ಎಂದು ಕರೆಯಲು ಯಾವುದೇ ಸಾಂವಿಧಾನಿಕ ಆಕ್ಷೇಪವಿಲ್ಲ ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳಿದ್ದಾರೆ. ಆದರೆ “ಗಣಿಸಲಾಗದ ಬ್ರ್ಯಾಂಡ್ ಮೌಲ್ಯ” ಹೊಂದಿರುವ ‘ಇಂಡಿಯಾ’ವನ್ನು ತ್ಯಜಿಸಿ ಸರ್ಕಾರವು ಸಂಪೂರ್ಣವಾಗಿ “ಮೂರ್ಖತನ ಪ್ರದರ್ಶಿಸಲಾರದು ಎಂದು ತಾನು ಭಾವಿಸುವುದಾಗಿ ಅವರು ಹೇಳಿದ್ದಾರೆ. ಪಾಕಿಸ್ತಾನದ … Continued

ಪ್ರಧಾನಿ ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ : ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಕೋರಿ 9 ವಿಷಯಗಳ ಪಟ್ಟಿ

ನವದೆಹಲಿ: ಸೆಪ್ಟೆಂಬರ್ 18ರಿಂದ 22ರ ವರೆಗೆ ನಡೆಯಲಿರುವ ವಿಶೇಷ ಸಂಸತ್ ಅಧಿವೇಶನದ ಕಾರ್ಯಸೂಚಿಯನ್ನು ಕೋರಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅವರು ಒಂಬತ್ತು ವಿಷಯಗಳನ್ನು ಪಟ್ಟಿ ಮಾಡಿದ್ದಾರೆ ಮತ್ತು ಮುಂಬರುವ ಅಧಿವೇಶನದಲ್ಲಿ ಅವುಗಳ ಬಗ್ಗೆ ಚರ್ಚೆಗೆ ಸಮಯಾವಕಾಶ ನೀಡಬೇಕು ಎಂದು ಪ್ರಧಾನಿಯನ್ನು ಕೋರಿದ್ದಾರೆ. “ನೀವು ಸಂಸತ್ತಿನ … Continued

ಧಾರ್ಮಿಕ ಭಾವನೆಗಳಿಗೆ ಧಕ್ಕೆ : ಉದಯನಿಧಿ, ಪ್ರಿಯಾಂಕ್‌ ಖರ್ಗೆ ವಿರುದ್ಧ ಪ್ರಕರಣ ದಾಖಲು

ನವದೆಹಲಿ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಉದಯನಿಧಿ ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಮತ್ತು ಅವರ ಹೇಳಿಕೆಯನ್ನು … Continued

ದಕ್ಷಿಣಾ ಆಫ್ರಿಕಾದಲ್ಲಿ ನಡೆದ ಬ್ರಿಕ್ಸ್‌ ಅಧಿಸೂಚನೆಯಲ್ಲಿ -ಆಸಿಯಾನ್ ಶೃಂಗಸಭೆ ನೋಟಿಫಿಕೇಶನ್ನಿನಲ್ಲಿ ‘ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ’ ಎಂದು ಉಲ್ಲೇಖ

ನವದೆಹಲಿ : ಜಿ20 ನಾಯಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಔತಣಕೂಟದ ಆಮಂತ್ರಣದಲ್ಲಿ ಸಾಂಪ್ರದಾಯಿಕ ‘ಪ್ರೆಸಿಡೆಂಟ್‌ ಆಫ್‌ ಇಂಡಿಯಾ’ ಎಂಬ ಪದದ ಬದಲಿಗೆ ‘ಪ್ರೆಸಿಡೆಂಟ್‌ ಆಫ್‌ ಭಾರತ’ ಎಂಬ ಪದವನ್ನು ಬಳಸಿದ್ದು ಭಾರೀ ಚರ್ಚೆ ಮತ್ತು ಊಹಾಪೋಹಗಳಿಗೆ ಕಾರಣವಾಗಿದೆ. ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂಡಿಯಾಕ್ಕೆ ‘ಭಾರತ’ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂಬ ಚರ್ಚೆಗೆ ನಾಂದಿ … Continued