ಎಸ್‌ಸಿ, ಎಸ್‌ಟಿ ಮೀಸಲಾತಿಯಲ್ಲಿ ಉಪ ವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ: ಮಹತ್ವದ ತೀರ್ಪೊಂದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅವುಗಳ ಆಂತರಿಕ ಹಿಂದುಳಿದಿರುವಿಕೆ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ರಾಜ್ಯಗಳಿಗೆ ಇರುವ ಅಧಿಕಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಈ ಮಹತ್ವದ ತೀರ್ಪನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠವು 6:1 ಬಹುಮತದಿಂದ ಅಂಗೀಕರಿಸಿತು. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, … Continued

ವಯನಾಡು ವಿನಾಶಕಾರಿ ಭೂಕುಸಿತ | ಸಾವಿನ ಸಂಖ್ಯೆ 282ಕ್ಕೆ ಏರಿಕೆ; 240ಕ್ಕೂ ಹೆಚ್ಚು ಜನ ನಾಪತ್ತೆ

ವಯನಾಡು : ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದ ನಂತರ ಸಾವಿನ ಸಂಖ್ಯೆ 282ಕ್ಕೆ ಏರಿದೆ ಹಾಗೂ ಗುರುವಾರ ಬೆಳಿಗ್ಗೆ 240 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 1,500 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ವಿವಿಧ ರಕ್ಷಣಾ ತಂಡಗಳು ಮತ್ತು ಸಶಸ್ತ್ರ … Continued

ಕರ್ನಾಟಕದ 7 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಇದು ಮಳೆ ಆಗಸ್ಟ್ 4ರ ವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಆರೆಂಜ್‌ ಅಲರ್ಟ್​ ನೀಡಲಾಗಿದೆ. ಕೊಡಗು ಹಾಗೂ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ … Continued

ವಯನಾಡ್ ಭೂಕುಸಿತ ದುರಂತ : ಸಾವಿನ ಸಂಖ್ಯೆ 239ಕ್ಕೆ ಏರಿಕೆ, ಇನ್ನೂ ಹಲವಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ತಿರುವನಂತಪುರಂ: ಕೇರಳದ ವಯನಾಡಿನಲ್ಲಿ ಜೀವ ಉಳಿಸಲು ರಕ್ಷಣಾ ತಂಡಗಳು ಸಮಯದ ವಿರುದ್ಧ ಓಡುತ್ತಿರುವಾಗ, ಬದುಕುಳಿದವರನ್ನು ಹುಡುಕುವ ಸಾಧ್ಯತೆಗಳು ಕ್ಷೀಣಿಸುತ್ತಿವೆ. ಮಂಗಳವಾರ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಸಾವಿನ ಸಂಖ್ಯೆ 239 ಕ್ಕೆ ಏರಿದೆ, 150 ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಮುಂಡಕ್ಕೈ, ಚೂರಲ್ಮಲಾ ಮತ್ತು ಅಟ್ಟಮಾಲದ ವಿಪತ್ತು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ತಂಡಗಳು ಅವಿರತವಾಗಿ … Continued

ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕಾತಿ ರದ್ದು : ಯುಪಿಎಸ್‌ ಸಿಯಿಂದ ಕ್ರಮ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಬುಧವಾರ ವಿವಾದಿತ ಐಎಎಸ್ ಟ್ರೈನಿ ಪೂಜಾ ಖೇಡ್ಕರ್ ಅವರ ನೇಮಕಾತಿಯನ್ನು ರದ್ದುಗೊಳಿಸಿದೆ ಮತ್ತು ಮುಂದಿನ ಪರೀಕ್ಷೆಗಳನ್ನು ತೆಗೆದುಕೊಳ್ಳದಂತೆ ಅವರನ್ನು ನಿಷೇಧಿಸಿದೆ. ‘ಲಭ್ಯವಿರುವ ಎಲ್ಲ ದಾಖಲಾತಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದು, ಅವರು ನಾಗರಿಕ ಸೇವಾ ಪರೀಕ್ಷಾ (ಸಿಎಸ್‌ಇ-2022) ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ’ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ‘2023ರ ಬ್ಯಾಚ್‌ನ … Continued

ಜೀವ ಮತ್ತು ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿ ಸಂಪೂರ್ಣ ತೆಗೆದುಹಾಕಿ ; ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಗೆ ಪತ್ರ ಬರೆದ ನಿತಿನ್ ಗಡ್ಕರಿ

ನವದೆಹಲಿ: ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದು, ಜೀವ ಮತ್ತು ವೈದ್ಯಕೀಯ ವಿಮೆ (life and medical insurance) ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (GST) ತೆಗೆದುಹಾಕುವುದನ್ನು ಪರಿಗಣಿಸುವಂತೆ ಒತ್ತಾಯಿಸಿದ್ದಾರೆ. ವೈದ್ಯಕೀಯ ವಿಮೆಗೆ ತೆರಿಗೆ ವಿಧಿಸುವುದರಿಂದ ಸಾಮಾಜಿಕವಾಗಿ ಮಹತ್ವದ ಈ … Continued

ವಯನಾಡು ಭೂ ಕುಸಿತ ಸ್ಥಳಕ್ಕೆ ತೆರಳುತ್ತಿದ್ದ ಕೇರಳ ಆರೋಗ್ಯ ಸಚಿವರ ಕಾರು ಅಪಘಾತ

ವಯನಾಡು : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ವಾಹನ ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಅಪಘಾತಕ್ಕೀಡಾಗಿದೆ. ಸಚಿವರು ಭೂಕುಸಿತದಿಂದ ತತ್ತರಿಸಿರುವ ವಯನಾಡ್‌ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಸಚಿವ ವೀನಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮತ್ತು … Continued

ಉತ್ತರಪ್ರದೇಶ ವಿಧಾನಸಭೆಯಲ್ಲಿ ಕಟ್ಟುನಿಟ್ಟಾದ ‘ಲವ್ ಜಿಹಾದ್’ ಮಸೂದೆ ಅಂಗೀಕಾರ ; ಅಪರಾಧಿಗೆ ಜೀವಾವಧಿ ಶಿಕ್ಷೆಯ ಪ್ರಸ್ತಾಪ

ಲಕ್ನೋ : ‘ಉತ್ತರ ಪ್ರದೇಶ ಕಾನೂನುಬಾಹಿರ ಧಾರ್ಮಿಕ ಮತಾಂತರ (ತಿದ್ದುಪಡಿ) ಮಸೂದೆ-2024’ ಅನ್ನು ಉತ್ತರ ಪ್ರದೇಶ ವಿಧಾನಸಭೆ ಮಂಗಳವಾರ ಅಂಗೀಕರಿಸಿದೆ. ಸಂಸದೀಯ ವ್ಯವಹಾರಗಳ ಸಚಿವ ಸುರೇಶ ಖನ್ನಾ ಅವರು ಈ ತಿದ್ದುಪಡಿ ಮಸೂದೆಯನ್ನು ಸದನದಲ್ಲಿ ಸೋಮವಾರ ಮಂಡಿಸಿದ್ದರು. ಮಂಗಳವಾರ ಮಸೂದೆ ಅಂಗೀಕಾರಗೊಂಡಿದೆ. ವಂಚನೆ ಅಥವಾ ಬಲವಂತದಿಂದ ಮತಾಂತರ ಮಾಡುವ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಗರಿಷ್ಠ ಜೀವಾವಧಿ ಶಿಕ್ಷೆ … Continued

ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ, ಹಲವೆಡೆ ಭೂಕುಸಿತದ ಎಚ್ಚರಿಕೆ

ಬೆಂಗಳೂರು : ಬುಧವಾರ (ಜುಲೈ 31) ಕರ್ನಾಟಕದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗುಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ನೀಡಲಾಗಿದೆ. … Continued

ವಯನಾಡು ಭೂಕುಸಿತ ದುರಂತ : ಸಾವಿನ ಸಂಖ್ಯೆ 123 ಕ್ಕೆ ಏರಿಕೆ

ವಯನಾಡು : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ವಿಕೋಪಗಳಲ್ಲಿ ಸಾವಿನ ಸಂಖ್ಯೆ 123 ಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಯನಾಡಿನಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಭಾರೀ ಭೂಕುಸಿತದಲ್ಲಿ 128 ಮಂದಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಇದುವರೆಗೆ 123 ಮಂದಿ ಸಾವಿಗೀಡಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. … Continued