ಟಿ 20 ವಿಶ್ವಕಪ್‌ 2024 : ಇಂಗ್ಲೆಂಡ್‌ ಸೋಲಿಸಿ 10 ವರ್ಷಗಳ ನಂತರ ಫೈನಲ್‌ ಪ್ರವೇಶಿಸಿದ ಭಾರತ

ಗುರುವಾರ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಅನ್ನು 68 ರನ್‌ಗಳಿಂದ ಸೋಲಿಸುವ ಮೂಲಕ ಫೈನಲ್‌ ಪ್ರವೇಶಿಸಿದ ಭಾರತ ಇದೇ ವೇಳೆ 2022ರ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಫೈನಲ್‌ ಪ್ರವೇಶಿಸಿದ ಭಾರತದ ಕ್ರಿಕೆಟ್‌ ತಂಡವು 2024 ರ ಟಿ20 ವಿಶ್ವಕಪ್‌ ಪ್ರಶಸ್ತಿಗಾಗಿ ಶನಿವಾರ (ಜೂನ್‌ ೨೯) ದಕ್ಷಿಣ ಆಫ್ರಿಕಾದ … Continued

ಅಸಾದುದ್ದೀನ್ ಒವೈಸಿ ಮನೆಗೆ ಕಪ್ಪು ಮಸಿ ಎರಚಿದ ದುಷ್ಕರ್ಮಿಗಳು; ಇದಕ್ಕೆ ʼಹೆದರಲ್ಲ’ ಎಂದ ಸಂಸದ

ನವದೆಹಲಿ:ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ದೆಹಲಿಯ ಅಧಿಕೃತ ನಿವಾಸವನ್ನು ಗುರುವಾರ (ಜೂನ್ 27) ಕೆಲವು ಅಪರಿಚಿತ ದುಷ್ಕರ್ಮಿಗಳು ಕಪ್ಪು ಶಾಯಿ ಎರಚಿದ್ದಾರೆ. ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಎಕ್ಸ್ ಪೋಸ್ಟ್ ಮೂಲಕ ಈ ಮಾಹಿತಿಯನ್ನು ನೀಡಿದ್ದಾರೆ. .ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ ಕೂಗಿದ್ದಕ್ಕಾಗಿ ಎಐಎಂಐಎಂ ಸಂಸದ ಕಳೆದ ಕೆಲವು … Continued

ಮಾಜಿ ಉಪಪ್ರಧಾನಿ ಎಲ್.​ಕೆ. ಅಡ್ವಾಣಿ ಆರೋಗ್ಯ ಸ್ಥಿರ; ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಉಪಪ್ರಧಾನಿ  ಲಾಲಕೃಷ್ಣ ಅಡ್ವಾಣಿ ಅವರು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಿಂದ ಗುರುವಾರ ಡಿಸ್ಚಾರ್ಜ್ ಆಗಿದ್ದಾರೆ. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಡ್ವಾಣಿ ಅವರ ಅಧಿಕೃತ ವೈದ್ಯ ಡಾ ಸಂಜಯ್ ಲಾಲ್ವಾನಿ ಖಚಿತಪಡಿಸಿದ್ದಾರೆ. ಬುಧವಾರ ರಾತ್ರಿ … Continued

ಭಾರೀ ಮಳೆ: ಜೂನ್‌ 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ನಾಳೆ, ಶುಕ್ರವಾರ (ಜೂನ್‌ 28)ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜೂನ್‌ 28)ರಂದು ರಜೆ ಘೋಷಿಸಲಾಗಿದೆ. ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ … Continued

ʼತುರ್ತು ಪರಿಸ್ಥಿತಿ ಹೇರಿಕೆʼ ನಮ್ಮ ಸಂವಿಧಾನದ ಮೇಲಿನ ಅತಿದೊಡ್ಡ ನೇರ ದಾಳಿ; ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: 1975 ರಲ್ಲಿ ದೇಶದ ಮೇಲೆ ಹೇರಲಾದ ತುರ್ತು ಪರಿಸ್ಥಿತಿಯು ಸಂವಿಧಾನದ ಮೇಲಿನ ನೇರ ದಾಳಿಯ ಕರಾಳ ಅಧ್ಯಾಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಗುರುವಾರ ಸಂಸತ್ತಿನ ಜಂಟಿ ಅಧಿವೇಶನದ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಹೊಸ ಲೋಕಸಭೆ ನೂತನ ಸ್ಪೀಕರ್‌ ಅವರನ್ನು ಆಯ್ಕೆ ಮಾಡಿದ ನಂತರ ಇದು ಸಂಸತ್ತಿನಲ್ಲಿ … Continued

ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಇಬ್ಬರ ಬಂಧನ

ನವದೆಹಲಿ : ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯ ತನಿಖಾ ದಳ (CBI) ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಪಾಟ್ನಾದ ಮನೀಶಕುಮಾರ ಮತ್ತು ಅಶುತೋಷ ಬಂಧಿತ ಆರೋಪಿಗಳು. ಸಿಬಿಐ ಮೂಲಗಳ ಪ್ರಕಾರ, ಮನೀಶಕುಮಾರ ತನ್ನ ಕಾರಿನಲ್ಲಿ ವಿದ್ಯಾರ್ಥಿಗಳನ್ನು ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾನೆ ಮತ್ತು ಕನಿಷ್ಠ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಯನ್ನು ನೀಡಿದ್ದಾನೆ. … Continued

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ರಿಕ್ಷಾ ಚಾಲಕರು ಸಾವು

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ಆಟೋ ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ನಗರದ ರೊಸಾರಿಯೋ ಬಳಿ ಬುಧವಾರ ರಾತ್ರಿ ನಡೆದಿದ್ದು ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ಹಾಸನದ ಅಲ್ಲೂರು ನಿವಾಸಿ ರಾಜು (50) ಹಾಗೂ ಪುತ್ತೂರಿನ ರಾಮಕುಂಜ ನಿವಾಸಿ ದೇವರಾಜ ಗೌಡ (46) ಎಂದು ಗುರುತಿಸಲಾಗಿದೆ. ಇಬ್ಬರೂ … Continued

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂ) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. 96 ವರ್ಷದ ನಾಯಕನನ್ನು ದೆಹಲಿಯ ಏಮ್ಸ್‌ನ ಜೆರಿಯಾಟ್ರಿಕ್ ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ.  ವಯೋಸಹಜ ಸಮಸ್ಯೆಯಿಂದಾಗಿ ಅವರನ್ನು ಬುಧವಾರ ದೆಹಲಿಯ ಆಲ್ ಇಂಡಿಯಾ … Continued

ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೊಡಾ ಮರುನೇಮಕ

ನವದೆಹಲಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನಿಡಿದ್ದ ಸ್ಯಾಮ್ ಪಿತ್ರೊಡಾ ಅವರನ್ನು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಆದೇಶಿಸಿದ್ದಾರೆ. ಗಾಂಧಿ ಕುಟುಂಬದ ನಿಷ್ಠ ಸ್ಯಾಮ್ ಪಿತ್ರೋಡಾ ಅವರು ನೀಡಿದ್ದ ‘ಜನಾಂಗೀಯ’ ಹೇಳಿಕೆಗಳು ಮತ್ತು ಉತ್ತರಾಧಿಕಾರ ತೆರಿಗೆಯ … Continued

ಕಾಲೇಜಿನಲ್ಲಿ ಹಿಜಾಬ್‌ಗೆ ನಿಷೇಧ ಪ್ರಶ್ನಿಸಿದ್ದ ವಿದ್ಯಾರ್ಥಿಗಳ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ಮುಂಬೈ: ತಮ್ಮ ಧರ್ಮ ಪ್ರತಿನಿಧಿಸುವ ಬುರ್ಖಾ, ನಖಾಬ್‌, ಪದಕ, ಟೊಪ್ಪಿಗೆ ಅಥವಾ ಸ್ಟೋಲ್‌ ರೀತಿಯ ಬಟ್ಟೆ ಧರಿಸುವುದಕ್ಕೆ ಕಾಲೇಜು ಆಡಳಿತ ಮಂಡಳಿ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಮುಂಬೈ ಕಾಲೇಜೊಂದರ ಒಂಬತ್ತು ವಿದ್ಯಾರ್ಥಿಗಳು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಕಾಲೇಜಿನ ನಿರ್ಧಾರದಲ್ಲಿ ತಾನು ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಎ.ಎಸ್. ಚಂದೂರ್ಕರ್‌ ಮತ್ತು … Continued