ವೀಡಿಯೊ..| ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾಗೇರಿ

ನವದೆಹಲಿ : ನೂತನ ಲೋಕಸಭಾ ಸದಸ್ಯರು ಸೋಮವಾರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಕನ್ನಡ ಸೇರಿದಂತೆ ಸಂಸ್ಕೃತ, ಹಿಂದಿ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸದರು. ಕೆಲವರು ಇಂಗ್ಲೀಷ್‌ನಲ್ಲೂ ಪ್ರಮಾಣ ವಚನ ಸ್ವೀಕರಿಸಿದರು.  ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನಸೆಳೆದರು. ಎಲ್ಲ ಸಂಸದರಿಗೂ … Continued

ತಾಪಂ, ಜಿಪಂ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಚುನಾವಣಾ ಆಯೋಗ

ಬೆಂಗಳೂರು : ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲ್ಲೂಕು ಪಂಚಾಯತ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಹೈಕೋರ್ಟ್‌ಗೆ ಸೋಮವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಆಯೋಗದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ … Continued

ಟಿ 20 ವಿಶ್ವಕಪ್ 2024 ; ಆಸ್ಟ್ರೇಲಿಯಾ ಮಣಿಸಿ ಸೆಮಿಫೈನಲ್‌ ಪ್ರವೇಶಿಸಿದ ಭಾರತ

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯ): ಸೋಮವಾರ (ಜೂನ್ 24) ಗ್ರಾಸ್ ಐಲೆಟ್‌ನಲ್ಲಿ ನಡೆದ ತಮ್ಮ ಕೊನೆಯ ಸೂಪರ್ 8 ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 24 ರನ್‌ಗಳಿಂದ ಸೋಲಿಸಿದ ನಂತರ ಭಾರತವು T20 ವಿಶ್ವಕಪ್ 2024 ರ ಸೆಮಿಫೈನಲ್ ಪ್ರವೇಶಿಸಿದೆ. ಆಸ್ಟ್ರೇಲಿಯಾ ತಂಡಕ್ಕೆ 20 ಓವರ್‌ಗಳಲ್ಲಿ 181/7 ರನ್‌ ಗಳಿಸಲಷ್ಟೇ ಸಾಧ್ಯವಾಯಿತು. ಗ್ರೂಪ್ 1 ರ ಈ ವಿಜಯವು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜೂನ್‌ 27 ರ ವರೆಗೂ ಹಲವು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿರುವ ಹಿನ್ನಲೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದಿನಿಂದ ಆರಂಭವಾಗಿ ಜೂನ್ 27 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ, ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು … Continued

ಅಂತರಿಕ್ಷದಿಂದ ‘ರಾಮಸೇತು’ ಹೇಗೆ ಕಾಣುತ್ತದೆ ? ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ಹಂಚಿಕೊಂಡ ಹೈ-ರೆಸಲ್ಯೂಶನ್ ಫೋಟೋ ವೈರಲ್‌

ನವದೆಹಲಿ: ಐರೋಪ್ಯ ಬಾಹ್ಯಾಕಾಶ ಸಂಸ್ಥೆ (European Space Agency) ತನ್ನ ಕೋಪರ್ನಿಕಸ್ ಸೆಂಟಿನೆಲ್-2 ಉಪಗ್ರಹದಿಂದ ತೆಗೆದ ‘ರಾಮಸೇತು’ವಿನ ಚಿತ್ರವನ್ನು ಹಂಚಿಕೊಂಡಿದೆ. ಆಡಮ್ಸ್ ಬ್ರಿಡ್ಜ್ ಎಂದೂ ಕರೆಯಲ್ಪಡುವ ಇದು ಭಾರತ ಮತ್ತು ಶ್ರೀಲಂಕಾವನ್ನು ಸಂಪರ್ಕಿಸುವ ಶೋಲ್ಗಳ ಸರಪಳಿಯಾಗಿದೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ರಾಮಸೇತು ಶ್ರೀಲಂಕಾದ ಮನ್ನಾರ್ ದ್ವೀಪ ಹಾಗೂ ಭಾರತದ … Continued

ಜಿಂಬಾಬ್ವೆ T20 ಸರಣಿಗೆ ಭಾರತದ ತಂಡ ಪ್ರಕಟ ; ಗಿಲ್ ಗೆ ನಾಯಕತ್ವ, ಹಿರಿಯರಿಗೆ ವಿಶ್ರಾಂತಿ, ಯುವ ಆಟಗಾರರಿಗೆ ಮಣೆ

ನವದೆಹಲಿ: ಜುಲೈ 6ರಿಂದ ಮತ್ತು 14 ರ ವರೆಗೆ ನಡೆಯಲಿರುವ ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ T20 ಸರಣಿಗೆ ಭಾರತದ ತಂಡ ಪ್ರಕಟಿಸಲಾಗಿದ್ದು, ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ತಂಡದ ನಾಯಕನಾಗಿ ಶುಭಮನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ, ಯುವ ಆಟಗಾರರಾದ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ ಮತ್ತು ನಿತೀಶ್ ರೆಡ್ಡಿ ಅವರು … Continued

ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಜೆಪಿ ನಡ್ಡಾ ನೇಮಕ

ನವದೆಹಲಿ: ಉತ್ತರ ಮುಂಬೈ ಕ್ಷೇತ್ರದಿಂದ 18ನೇ ಲೋಕಸಭೆಗೆ ಪ್ರವೇಶಿಸಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಬದಲಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರನ್ನಾಗಿ ನೇಮಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಫೆಬ್ರವರಿಯಲ್ಲಿ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದ 41 ಅಭ್ಯರ್ಥಿಗಳಲ್ಲಿ ಜೆ.ಪಿ. ನಡ್ಡಾ ಕೂಡ ಒಬ್ಬರು. ಗೋಯಲ್ ಅವರು ಜುಲೈ 5, … Continued

ಮೃತ ಪತ್ನಿಯ ಅಂತ್ಯಸಂಸ್ಕಾರ ಮುಗಿದು 4 ದಿನಗಳ ಬಳಿಕ 600 ಕಿಮೀ ದೂರದಲ್ಲಿ ಆಕೆ ಜೀವಂತವಾಗಿ ಪತ್ತೆ…!

ಗೋರಖಪುರ : ಪತ್ನಿ ಮೃತಪಟ್ಟಿದ್ದಾಳೆ ಎಂದು ಆಕೆಯ ಅಂತ್ಯಸಂಸ್ಕಾರ ನಡೆಸಿದ್ದ ಪತಿಗೆ ನಾಲ್ಕು ದಿನಗಳ ನಂತರ ಪತ್ನಿ 600 ಕಿ.ಮೀ. ದೂರದಲ್ಲಿ ಪತ್ತೆಯಾಗಿದ್ದು, ಈಗ ಸತಿ ಪತಿ ಮತ್ತೆ ಒಂದಾಗಿರುವ ಅಸಾಮಾನ್ಯ ಘಟನೆ ಉತ್ತರ ‍ಪ್ರದೇಶದ ಗೋರಖಪುರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಗೋರಖಪುರದ ಬನ್ಸ್‌ಗಾಂವ್‌ನ ನಿವಾಸಿ ರಾಮ ಸುಮೇರ್ (60) ಅವರು ತಮ್ಮ ಪತ್ನಿ ಫೂಲ್ಮತಿ … Continued

ಪುನಃ ಸೋದರಳಿಯನನ್ನೇ ತಮ್ಮ ಉತ್ತರಾಧಿಕಾರಿಯಾಗಿ ಮರುನೇಮಕ ಮಾಡಿದ ಮಾಯಾವತಿ

ನವದೆಹಲಿ : ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ ಆನಂದ ಅವರನ್ನು ಮತ್ತೆ ಪಕ್ಷದಲ್ಲಿ ತಮ್ಮ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಿದ್ದಾರೆ. ಲೋಕಸಭೆ ಚುನಾವಣೆಯ ಸಮಯದಲ್ಲೇ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ ಆನಂದ (28) ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಮತ್ತು ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಿದ್ದರು. … Continued

ಯುಜಿಸಿ ನೆಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ತಂಡದ ಮೇಲೆ ಜನರ ಗುಂಪಿನ ದಾಳಿ ; ನಾಲ್ವರ ಬಂಧನ

ಪಾಟ್ನಾ: ಯುಜಿಸಿ ನೆಟ್ (UGC-NET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಗಾಗಿ ಬಿಹಾರಕ್ಕೆ ತೆರಳಿದ್ದ ಕೇಂದ್ರೀಯ ತನಿಖಾ ದಳ(CBI)ದ ತಂಡದ ಮೇಲೆ ನಾವಡಾದಲ್ಲಿ ದಾಳಿ ಮಾಡಿದ್ದಾರೆ. ಈ ತಂಡವು ʼನಕಲಿʼ ಎಂದು ಗ್ರಾಮಸ್ಥರು ಭಾವಿಸಿದ್ದರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಸುಮಾರು 200 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅವರಲ್ಲಿ ಎಂಟು ಮಂದಿಯನ್ನು ಮಾತ್ರ ಹೆಸರಿಸಲಾಗಿದೆ. … Continued