ಜೂನ್ 18ರಂದು ನಡೆದ ಯುಜಿಸಿ-ನೆಟ್ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ : ಸಿಬಿಐ ತನಿಖೆಗೆ ಆದೇಶ

ನವದೆಹಲಿ: ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿದೆ ಎಂದು ಸೂಚಿಸುವ ಪ್ರಾಥಮಿಕ ಪುರಾವೆಗಳಿಂದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ಹಾಗೂ ಪರೀಕ್ಷಾ ಅಕ್ರಮಗಳ ಬಗ್ಗೆ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಹಸ್ತಾಂತರಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ಹೇಳಿದೆ. ಯುಜಿಸಿ-ನೆಟ್ (UGC-NET) ಪರೀಕ್ಷೆಯನ್ನು ಮರುಹೊಂದಿಸಲಾಗುತ್ತದೆ ಮತ್ತು ಹೊಸ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದು … Continued

ರೈತರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ : 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಅನುಮೋದನೆ ; ಉತ್ಪಾದನಾ ವೆಚ್ಚಕ್ಕಿಂತ 1.5 ಪಟ್ಟು ಹೆಚ್ಚು

ನವದೆಹಲಿ: ಪ್ರಮುಖ ನಿರ್ಧಾರದಲ್ಲಿ, ಖಾರಿಫ್ (ಬೇಸಿಗೆ) ಬಿತ್ತನೆ ಅವಧಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟವು 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಅನುಮೋದಿಸಿದೆ. ಇದು ಉತ್ಪಾದನಾ ವೆಚ್ಚಕ್ಕಿಂತ 1.5 ಪಟ್ಟು ಹೆಚ್ಚಾಗಿದೆ. ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ₹ 117 ಹೆಚ್ಚಿಸಲಾಗಿದೆ. ಹೈಬ್ರೀಡ್ … Continued

ಕಾಶ್ಮೀರ : ಎನ್‌ಕೌಂಟರಿನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು, ಬುಧವಾರ ಬೆಳಗ್ಗೆ ಬಾರಾಮುಲ್ಲಾ ಜಿಲ್ಲೆಯ ವಾಟರ್‌ಗಾಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ … Continued

ಅಯೋಧ್ಯೆ ರಾಮ ಮಂದಿರದ ಬಳಿ ತಮ್ಮದೇ ಬಂದೂಕಿನ ಗುಂಡು ತಗುಲಿ ಭದ್ರತಾ ಸಿಬ್ಬಂದಿ ಸಾವು

ಅಯೋಧ್ಯೆ : ಇಲ್ಲಿನ ರಾಮ ಮಂದಿರದಲ್ಲಿ ನಿಯೋಜನೆಗೊಂಡಿದ್ದ 25 ವರ್ಷದ ಪೊಲೀಸ್ ಜವಾನ ತನ್ನ ಸ್ವಂತ ಬಂದೂಕಿನಿಂದ ಗುಂಡು ತಗುಲಿ ಮೃತಪಟ್ಟಿದ್ದಾರೆ. ಇದು ಆಕಸ್ಮಿಕವಾಗಿ ಗುಂಡು ಹಾರಿದ್ದೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಶತ್ರುಘ್ನ ವಿಶ್ವಕರ್ಮ ಅವರನ್ನು ವಿಶೇಷ ಭದ್ರತಾ ಪಡೆಯ (ಎಸ್‌ಎಸ್‌ಎಫ್) ಭಾಗವಾಗಿ ದೇವಾಲಯದ ಆವರಣದಲ್ಲಿ ಭದ್ರತೆಗಾಗಿ … Continued

ವೀಡಿಯೊ…| ಬೆಂಗಳೂರು : ಅಮೆಜಾನ್‌ನಲ್ಲಿ ಆರ್ಡರ್ ಮಾಡಿದ್ದು ಎಕ್ಸ್‌ಬಾಕ್ಸ್ ; ಆದ್ರೆ ಪಾರ್ಸೆಲ್ ನಲ್ಲಿ ಬಂದಿದ್ದು ನಾಗರ ಹಾವು…!

ಬೆಂಗಳೂರು : ಬೆಂಗಳೂರಿನ ಮಹಿಳೆಯೊಬ್ಬರು ತಮ್ಮ ಅಮೆಜಾನ್ ಪ್ಯಾಕೇಜ್‌ನಲ್ಲಿ ಜೀವಂತ ನಾಗರಹಾವು ಕಂಡು ಆಘಾತಕ್ಕೊಳಗಾಗಿದ್ದಾರೆ. ಮಹಾನಗರದ ಸರ್ಜಾಪುರ ರಸ್ತೆಯಲ್ಲಿ ವಾಸಿಸುವ ಮಹಿಳೆ, ಆನ್‌ಲೈನ್ ಚಿಲ್ಲರೆ ವ್ಯಾಪಾರಿಗಳಿಂದ ಎಕ್ಸ್‌ಬಾಕ್ಸ್ ನಿಯಂತ್ರಕವನ್ನು ಆರ್ಡರ್ ಮಾಡಿದ್ದರು. ಆದರೆ ಪಾರ್ಸೆಲ್ ಬಂದ ನಂತರ ಅದನ್ನು ತೆರೆದಾಗ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ಆಘಾತಕರ ಅಚ್ಚರಿಯನ್ನು ಕಂಡು ಗಾಬರಿಯಾದರು. ಅದರೊಳಗೆ ವಿಷಪೂರಿತ ನಾಗರಹಾವು ಇತ್ತು. … Continued

ಖಲಿಸ್ತಾನಿ ಭಯೋತ್ಪಾದಕ ನಿಜ್ಜರ್ ಸ್ಮರಣಾರ್ಥ ಕೆನಡಾ ಸಂಸತ್ತಿನಲ್ಲಿ ಮೌನಾಚರಣೆ ; ‘ಕನಿಷ್ಕ ವಿಮಾನ ಸ್ಫೋಟʼ ಘಟನೆ ಸ್ಮರಣೆ ಮೂಲಕ ಭಾರತದ ಪ್ರತ್ಯುತ್ತರ…!

ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಸ್ಮರಣಾರ್ಥ ಕೆನಡಾ ಸಂಸತ್ತು ಮೌನ ಆಚರಿಸಿದ ನಂತರ ಭಾರತವು ಸ್ಪಷ್ಟ ಸಂದೇಶ ರವಾನಿಸುವ ಮೂಲಕ ತಿರುಗೇಟು ನೀಡಿದ್ದು, ವ್ಯಾಂಕೋವರ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ 1985ರ ಏರ್ ಇಂಡಿಯಾ ಕನಿಷ್ಕ ವಿಮಾನದಲ್ಲಿ ಖಲಿಸ್ತಾನಿ ಬಾಂಬ್ ಸ್ಫೋಟದಿಂದ ಮೃತಪಟ್ಟ 329 ಜನರ ಸ್ಮರಣಾರ್ಥ ಕಾರ್ಯಕ್ರಮ ನಡೆಸುವುದಾಗಿ ಪ್ರಕಟಿಸಿದೆ. “ಭಾರತವು … Continued

ಭಾರತದಲ್ಲಿ ಜೂನ್ ತಿಂಗಳಲ್ಲಿ ಮಾನ್ಸೂನ್ ಮಳೆ ಕೊರತೆ : ಹವಾಮಾನ ಇಲಾಖೆ

ನವದೆಹಲಿ: ಭಾರತದ ಹವಾಮಾನ ಇಲಾಖೆ (IMD) ಮಂಗಳವಾರ ತನ್ನ ಜೂನ್ ತಿಂಗಳ ಮಳೆಯ ಮುನ್ಸೂಚನೆಯನ್ನು ನವೀಕರಣ ಮಾಡಿದ್ದು, ಈ ವರ್ಷದ ಜೂನ್‌ ತಿಂಗಳಲ್ಲಿ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ತಿಳಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತದ ಕೆಲವು ಭಾಗಗಳು ತೀವ್ರವಾದ ಶಾಖದ ಅಲೆಯಲ್ಲಿ ತತ್ತರಿಸುತ್ತಿವೆ. ಈಗ ದೇಶದಲ್ಲಿ ಮಾನ್ಸೂನ್ ಆಗಮನದ ಕುರಿತಾದ ನವೀಕರಣದಲ್ಲಿ ಭಾರತ … Continued

ವೀಡಿಯೊ..| ಕುಸಿದು ಬಿದ್ದ ಹೊಸ ಸೇತುವೆ ; 12 ಕೋಟಿ ರೂ. ನೀರು ಪಾಲು

ಬಿಹಾರದ ಅರಾರಿಯಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಮಂಗಳವಾರ ಕುಸಿದಿದೆ. ಕೋಟಿಗಟ್ಟಲೆ ಖರ್ಚು ಮಾಡಿ ಬಕ್ರಾ ನದಿಗೆ ನಿರ್ಮಿಸಿದ ಕಾಂಕ್ರೀಟ್ ಸೇತುವೆ ಕೆಲವೇ ಸೆಕೆಂಡ್ ಗಳಲ್ಲಿ ಕುಸಿದುಬಿದ್ದಿದೆ. ₹ 12 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದಿದ್ದು, ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ. ಈ ಸೇತುವೆಯ ಸಂಪರ್ಕ ರಸ್ತೆಗಳ ನಿರ್ಮಾಣ ಬಾಕಿ … Continued

ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಕಾಶ್ಮೀರದ ಶ್ರೀನಗರದಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ

ನವದೆಹಲಿ: ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21 ರಂದು ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ಕೆಐಸಿಸಿ) ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಯೋಜಿಸಲಾಗುವುದು ಎಂದು ಆಯುಷ್ ಖಾತೆ ಸಚಿವ ಪ್ರತಾಪರಾವ್‌ ಜಾಧವ್ ಮಂಗಳವಾರ ತಿಳಿಸಿದ್ದಾರೆ. . ಜಾಧವ್ ಅವರು, ಆಯುಷ್ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ), ಈ ವರ್ಷದ … Continued

ಟಿ-20 ಪಂದ್ಯ : ಕೇವಲ 27 ಎಸೆತಗಳಲ್ಲಿ ಶತಕ ಸಿಡಿಸಿ ಕ್ರಿಸ್‌ ಗೇಲ್ ದಾಖಲೆ ಮುರಿದ ಸಾಹಿಲ್ ಚೌಹಾಣ…!

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಎಸ್ಟೋನಿಯಾದ ಬ್ಯಾಟರ್ ಸಾಹಿಲ್ ಚೌಹಾಣ್ ನೂತನ ವಿಶ್ವದಾಖಲೆ ಬರೆದಿದ್ದಾರೆ. ಅವರು ಕೇವಲ 27 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ..! ಸೈಪ್ರಸ್ ತಂಡದ ವಿರುದ್ಧ ನಡೆದ ಟ್ವೆಂಟಿ-20 ಪಂದ್ಯದಲ್ಲಿ ಎಸ್ಟೋನಿಯಾದ ಸಾಹಿಲ್ ಕೇವಲ 27 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಆ ಮೂಲಕ ವೆಸ್ಟ್‌ಇಂಡೀಸ್‌ನ ಬ್ಯಾಟರ್ ಕ್ರಿಸ್ ಗೇಲ್ ದಾಖಲೆಯನ್ನು ಮೂರು … Continued