ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲೀಯರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮ

ನವದೆಹಲಿ : ಶನಿವಾರ (ಜೂನ್ 15) ಛತ್ತೀಸ್‌ಗಢದ ಅಬುಜ್ಮದ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಹತರಾಗಿದ್ದಾರೆ. ಹಾಗೂ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ ನಾಲ್ಕು ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮದ್ ಅರಣ್ಯದಲ್ಲಿ ಶನಿವಾರ ಬೆಳಿಗ್ಗೆ … Continued

‘ಬಿಜೆಪಿ ದುರಹಂಕಾರ’ ಹೇಳಿಕೆಯ ಕೋಲಾಹಲದ ನಂತರ ಯೂ-ಟರ್ನ್ ಹೊಡೆದ ಆರ್‌ ಎಸ್‌ ಎಸ್ ನಾಯಕ

ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಾಧನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಆರ್‌ಎಸ್‌ಎಸ್‌ ಪ್ರಮುಖ ಇಂದ್ರೇಶಕುಮಾರ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಭಗವಾನ್‌ ರಾಮನ ಮಹಿಮೆ ಮರುಸ್ಥಾಪನೆಯ ಗುರಿಯ ಹೊಂದಿದ್ದವರು ಅಧಿಕಾರಕ್ಕೆ ಬಂದಿದ್ದಾರೆ. ಭಗವಾನ್‌ ರಾಮನನ್ನು ವಿರೋಧಿಸಿದವರು ಸೋತಿದ್ದಾರೆ ಎಂದು ಹೇಳಿದ್ದಾರೆ. . ಜೈಪುರ ಬಳಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ … Continued

ಯುಎಪಿಎ ಅಡಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿದ ದೆಹಲಿ ಲೆಫ್ಟಿನೆಂಟ್

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 2010 ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದಲ್ಲಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ(Unlawful Activities (Prevention) Act)ಯಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ (ಜೂನ್ 14) ತಿಳಿಸಿದ್ದಾರೆ. ಅರುಂಧತಿ ರಾಯ್ … Continued

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿಗೆ ಹೊತ್ತು ತಂದ ವಿಶೇಷ ಐಎಎಫ್ ವಿಮಾನ

ಕೊಚ್ಚಿ : ಕುವೈತ್‌ನಲ್ಲಿ ಬುಧವಾರ (ಜೂನ್ 12) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿಗೀಡಾದ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ವಿಶೇಷ ಐಎಎಫ್ ವಿಮಾನ ಇಂದುಮಶುಕ್ರವಾರ (ಜೂನ್‌ 14) ಕೊಚ್ಚಿಗೆ ಬಂದಿಳಿಯಿತು. ಕುವೈತ್‌ನ ಮಂಗಾಫ್ ಪ್ರದೇಶದ ಕಾರ್ಮಿಕ ವಸತಿ ಸೌಲಭ್ಯದಿಂದ ಮೃತರ ಅವಶೇಷಗಳನ್ನು ತಕ್ಷಣವೇ ಸ್ವದೇಶಕ್ಕೆ ತರಲು ಭಾರತ ಸರ್ಕಾರ ಆಯೋಜಿಸಿದ್ದ ಭಾರತದ ವಾಯು … Continued

ವೀಡಿಯೊ..| ದುರಹಂಕಾರಿಯಾದವರನ್ನು ಶ್ರೀರಾಮನೇ 241ಕ್ಕೆ ನಿಲ್ಲಿಸಿದ್ದಾನೆ : ಬಿಜೆಪಿ ವಿರುದ್ಧ ಆರ್‌ಎಸ್‌ಎಸ್ ನಾಯಕನ ವಾಗ್ದಾಳಿ

ಜೈಪುರ: ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದಿಂದ ಟೀಕೆಗೆ ಒಳಗಾಗಿದೆ, ಆರೆಸ್ಸೆಸ್ ನಾಯಕ ಇಂದ್ರೇಶಕುಮಾರ ಅವರು ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷವಾದ ಬಿಜೆಪಿಯ ಇತ್ತೀಚಿನ ಕಳಪೆ ಪ್ರದರ್ಶನವನ್ನು “ದುರಹಂಕಾರ” ಎಂದು ಟೀಕಿಸಿದ್ದಾರೆ. ಜೈಪುರ ಸಮೀಪದ ಕನೋಟಾದಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶಕುಮಾರ ಅವರು, “ಶ್ರೀರಾಮನ ಭಕ್ತರು ಕ್ರಮೇಣ ದುರಹಂಕಾರಿಯಾದರು. … Continued

ಈ ಲೋಕಸಭೆಯಲ್ಲಿ 93%ರಷ್ಟು ಸಂಸದರು ಕೋಟ್ಯಧಿಪತಿಗಳು: ಟಾಪ್‌ 10 ಶ್ರೀಮಂತ ಲೋಕಸಭಾ ಸದಸ್ಯರ ಆಸ್ತಿ ಎಷ್ಟು ಗೊತ್ತೆ..? ಇಲ್ಲಿದೆ ಮಾಹಿತಿ

ನವದೆಹಲಿ : 18ನೇ ಲೋಕಸಭೆಗೆ ಚುನಾಯಿತರಾದ 543 ಸಂಸದರಲ್ಲಿ 504 ಅಥವಾ 93 ಪ್ರತಿಶತದಷ್ಟು ಮಂದಿ ಕೋಟ್ಯಧಿಪತಿಗಳಾಗಿದ್ದು, ಹಿಂದಿನ ಎರಡು ಸಾರ್ವತ್ರಿಕ ಚುನಾವಣೆಗಳಿಗೆ ಹೋಲಿಸಿದರೆ ಇದು ಗಮನಾರ್ಹ ಹೆಚ್ಚಳವಾಗಿದೆ. ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಪ್ರಕಾರ, 2019 ರಲ್ಲಿ ಚುನಾಯಿತ ಸಂಸದರಲ್ಲಿ 88%ರಷ್ಟು ಸಂಸದರು ಕೋಟ್ಯಧಿಪತಿಗಳಾಗಿದ್ದರೆ, 2014 ರಲ್ಲಿ 82# ರಷ್ಟು ಸಂಸದರು ಕೋಟ್ಯಧಿಪತಿಗಳಾಗಿದ್ದಾರೆ. … Continued

ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ ಕುಂದ್ರಾ ವಿರುದ್ಧ ತನಿಖೆಗೆ ಕೋರ್ಟ್ ಸೂಚನೆ

ಮುಂಬೈ: ಚಿನ್ನದ ಸ್ಕೀಮ್‌ನಲ್ಲಿ ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ , ಅವರ ಪತಿ ರಾಜ ಕುಂದ್ರಾ ಮತ್ತು ಇತರರ ವಿರುದ್ಧದ ದೂರಿನ ತನಿಖೆ ನಡೆಸುವಂತೆ ಮುಂಬೈ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶಿಸಿದೆ. ನ್ಯಾಯಾಲಯವು ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (BKC) ಪೊಲೀಸ್ ಠಾಣೆಗೆ ದೂರಿನಲ್ಲಿ ಮಾಡಲಾದ ಆರೋಪಗಳನ್ನು ತನಿಖೆ ಮಾಡಲು ಮತ್ತು ಆರೋಪಿತ ವ್ಯಕ್ತಿಗಳು … Continued

‘ಹಮಾರೆ ಬಾರಹ’ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಹಮಾರೆ ಬಾರಹ’ ಚಿತ್ರದ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದ್ದು ಇಸ್ಲಾಮ್‌ ನಂಬಿಕೆ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರನ್ನು ಅವಹೇಳನ ಮಾಡುತ್ತದೆ ಎಂದು ಆರೋಪಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ತ್ವರಿತ ನಿರ್ಧಾರ ತೆಗೆದುಕೊಳ್ಳುವಂತೆ ಬಾಂಬೆ ಹೈಕೋರ್ಟ್‌ಗೆ ಸೂಚಿಸಿದೆ. ಚಲನಚಿತ್ರ ಪ್ರಮಾಣೀಕರಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಇತ್ಯರ್ಥವಾಗುವವರೆಗೆ ಚಲನಚಿತ್ರ ಪ್ರದರ್ಶನ ಮಾಡುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ವಿಕ್ರಂನಾಥ … Continued

ನೀಟ್‌ ಪರೀಕ್ಷೆ ವಿವಾದ : ಕೃಪಾಂಕ ರದ್ದು, ಕಡಿಮೆ ಸಮಯಾವಕಾಶ ಸಿಕ್ಕವರಿಗೆ ಮರುಪರೀಕ್ಷೆ ; ಸುಪ್ರೀಂ ಕೋರ್ಟಿಗೆ ಕೇಂದ್ರ

ನವದೆಹಲಿ: ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆ (ನೀಟ್‌ ಯುಜಿ 2024) ಬರೆಯಲು ಕಡಿಮೆ ಕಾಲಾವಕಾಶ ದೊರೆತಿದ್ದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ಬರೆಯುವ ಇಲ್ಲವೇ ಸಮಯದ ನಷ್ಟ ಅನುಭವಿಸಿದ್ದಕ್ಕಾಗಿ ಈ ಹಿಂದೆ ನೀಡಲಾಗಿದ್ದ ಕೃಪಾಂಕ ತ್ಯಜಿಸುವ ಆಯ್ಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಸಮರ್ಪಕವಾಗಿ ನಡೆದ … Continued

ವೀಡಿಯೊ..| ಪ್ಲಾಸ್ಟಿಕ್ ನೀರಿನ ಬಾಟಲಿಯಿಂದ ಕಾರಿಗೆ ಬೆಂಕಿ ಹೊತ್ತಿಕೊಂಡ ವೀಡಿಯೊ ವೈರಲ್; ಇದಕ್ಕೆ ಕಾರಣ ತೋರಿಸಿದ ಇನ್ಸ್ಟಾಗ್ರಾಮರ್‌-ವೀಕ್ಷಿಸಿ

ರಸ್ತೆ ಬದಿಯಲ್ಲಿ ಕಾರೊಂದು ಹೊತ್ತಿ ಉರಿಯುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವಾಹನದೊಳಗೆ ಬಿಟ್ಟಿದ್ದ ನೀರಿನ ಬಾಟಲಿಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಬಾಟಲಿಯು ಸೂರ್ಯನ ತೀವ್ರ ಶಾಖದ ಕಿರಣಕ್ಕೆ ಒಡ್ಡಿಕೊಂಡ ನಂತರ ನಂತರ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಘಟನೆಯ ಸ್ಥಳವು ಅಸ್ಪಷ್ಟವಾಗಿದ್ದರೂ, ಇದು ದೆಹಲಿ-ಎನ್‌ಸಿಆರ್ ಪ್ರದೇಶದ ಘಟನೆ ಎಂದು ನಂಬಲಾಗಿದೆ, … Continued