ಅಪಘಾತ ನೋಡಲು ಹೋದವರ ಮೇಲೆ ನುಗ್ಗಿದ ಕಾರು : ಪೊಲೀಸರು ಸೇರಿ 9 ಮಂದಿ ಸಾವು

ಅಹಮದಾಬಾದ್‌ :‌ ಅಹಮದಾಬಾದ್‌ನ ಇಸ್ಕಾನ್ ಸೇತುವೆ ಬಳಿ ಕಾರು ಡಿಕ್ಕಿ ಹೊಡೆದು ಪೊಲೀಸ್‌ ಸಿಬ್ಬಂದಿ ಸೇರಿದಂತೆ 9 ಮಂದಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಸರ್ಖೇಜ್-ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಬಳಿ ಥಾರ್ ಮತ್ತು ಡಂಪರ್ ಟ್ರಕ್‌ ನಡುವೆ ತಡರಾತ್ರಿ 1:30 ರ ಹೊತ್ತಿಗೆ ಅಪಘಾತವೊಂದು ಸಂಭವಿಸಿತ್ತು. ಈ ಅಪಘಾತವನ್ನು ನೋಡಲು ಪೊಲೀಸರು ಸೇರಿದಂತೆ … Continued

ಮಣಿಪುರದಲ್ಲಿ ಮಹಿಳೆಯರು ಬೆತ್ತಲೆ ಮೆರವಣಿಗೆ ಘಟನೆ: ಪ್ರಮುಖ ಆರೋಪಿ ಬಂಧನ-ಪೊಲೀಸರು

ನವದೆಹಲಿ: ಮೇ 4 ರಂದು ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೀಡಿಯೊ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಎರಡು ತಿಂಗಳ ನಂತರ ಹಳೆಯ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿದ್ದು, ಒಂದು ದಿನದ ನಂತರ, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಹೆರದಾಸ್ (32) ಎಂದು … Continued

ಡಿ.ಕೆ. ಶಿವಕುಮಾರ ಭಾರತದ ಅತ್ಯಂತ ಶ್ರೀಮಂತ ಶಾಸಕ: ಈ ಶಾಸಕರ ಆಸ್ತಿ ಕೇವಲ ₹1,700-ಅತಿ ಹೆಚ್ಚು- ಅತಿ ಕಡಿಮೆ ಆಸ್ತಿ ಇರುವ ಶಾಸಕರ ಟಾಪ್ 10 ಪಟ್ಟಿ..

ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅತ್ಯಂತ ಶ್ರೀಮಂತ ಶಾಸಕರಾಗಿದ್ದರೆ, ಪಶ್ಚಿಮ ಬಂಗಾಳದ ಬಿಜೆಪಿ ಶಾಸಕರೊಬ್ಬರ ಬಳಿ ಕೇವಲ ₹ 1700 ಆಸ್ತಿ ಇದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್‌(ಎಡಿಆರ್‌)ನ ವರದಿಯ ಪ್ರಕಾರ, ಭಾರತದಾದ್ಯಂತ ಶಾಸಕಾಂಗ ಸಭೆಗಳ ಪ್ರತಿ ಸದಸ್ಯರ ಸರಾಸರಿ ಆಸ್ತಿ ₹13.63 ಕೋಟಿಯಷ್ಟಿದೆ. ಇವರಲ್ಲಿ ಘೋಷಿತ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವವರು ಸರಾಸರಿ ₹16.36 ಕೋಟಿ … Continued

ವೀಡಿಯೊ…; ಮೊಬೈಲ್ ಬಳಸಿದ್ದಕ್ಕೆ ತಂದೆ-ತಾಯಿ ಬೈದರೆಂದು ಜಲಪಾತಕ್ಕೆ ಹಾರಿದ ಹುಡುಗಿ

ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಚಿತ್ರಕೋಟೆ ಜಲಪಾತದ 90 ಅಡಿಗಳಷ್ಟು ಎತ್ತರದಿಂದ ಬಾಲಕಿಯೊಬ್ಬಳು ಜಿಗಿದ ಆಘಾತಕಾರಿ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಂದೆ-ತಾಯಿಗಳು ಬಾಲಕಿ ಮೊಬೈಲ್ ಫೋನ್ ಬಳಸಿದ್ದಕ್ಕಾಗಿ ಬೈದಿದ್ದಕ್ಕೆ ಅವಳು ಇಂತಹ ನಿರ್ಧಾರ ತೆಗೆದುಕೊಳ್ಳಲು ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಾಲಕಿ ನೀರಿನಲ್ಲಿ ತೇಲುತ್ತಿದ್ದರಿಂದ ಬದುಕುಳಿದಿದ್ದಾಳೆ. ಮಂಗಳವಾರ ಸಂಜೆ ಚಿತ್ರಕೂಟ ಚೌಕಿ ಪ್ರದೇಶದಲ್ಲಿ ಈ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ : ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ ಗೋಯಲ್ ಆಸ್ತಿಗಳನ್ನು ಶೋಧಿಸಿದ ಇ.ಡಿ.

ನವದೆಹಲಿ: ವಿದೇಶಿ ವಿನಿಮಯ ಕಾನೂನು ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಮತ್ತು ಅವರ ಸಹಚರರ ಆಸ್ತಿಗಳನ್ನು ಶೋಧಿಸಿದೆ ಎಂದು ವರದಿಯಾಗಿದೆ. 2019ರ ಆರಂಭದಲ್ಲಿ, ಅಬುಧಾಬಿಯ ಎತಿಹಾದ್ ಏರ್‌ವೇಸ್‌ನಿಂದ ಜೆಟ್‌ನಲ್ಲಿ $ 150 ಮಿಲಿಯನ್ ಹೂಡಿಕೆ ಮಾಡಿದ ನಂತರ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ … Continued

ಮಣಿಪುರದಲ್ಲಿ ಹೇಯಕೃತ್ಯ :ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ವೀಡಿಯೊ

ಇಂಫಾಲ್: ಮಣಿಪುರದಲ್ಲಿ ಪುರುಷರ ಗುಂಪು ಇಬ್ಬರು ಮಹಿಳೆಯರನ್ನು ರಸ್ತೆಯ ಮೇಲೆ ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಆಘಾತಕಾರಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಭಾರೀ ಖಂಡನೆ ವ್ಯಕ್ತವಾಗಿದೆ ಮತ್ತು ಕಠಿಣ ಕ್ರಮಕ್ಕೆ ಒತ್ತಯಗಳು ಕೇಳಿಬಂದಿದೆ. ಇಬ್ಬರು ಮಹಿಳೆಯರ ಮೇಲೆ ಸಮೀಪದ ಹೊಲವೊಂದರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಬುಡಕಟ್ಟು ಸಂಘಟನೆ ಆರೋಪಿಸಿದೆ. ಸ್ಥಳೀಯ ಬುಡಕಟ್ಟು ನಾಯಕರ … Continued

ಏಷ್ಯಾ ಕಪ್ ಕ್ರಿಕೆಟ್ 2023 ವೇಳಾಪಟ್ಟಿ ಪ್ರಕಟ : ಸೆಪ್ಟೆಂಬರ್‌ 2ಕ್ಕೆ ಭಾರತ-ಪಾಕಿಸ್ತಾನ ಪಂದ್ಯ

ನವದೆಹಲಿ : ಶ್ರೀಲಂಕಾದ ಕ್ಯಾಂಡಿಯಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ಏಷ್ಯಾ ಕಪ್ 2023 ರಲ್ಲಿ ತನ್ನ ಮೊದಲ ಪಂದ್ಯದಲ್ಲಿ ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬುಧವಾರ ದೃಢಪಡಿಸಿದ್ದಾರೆ. ಆರು ರಾಷ್ಟ್ರಗಳ ಏಷ್ಯನ್ ಪಂದ್ಯಾವಳಿಯನ್ನು ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ … Continued

ಗುಜರಾತ್ ಗಲಭೆಯಲ್ಲಿ ಸಾಕ್ಷ್ಯಾಧಾರ ಸೃಷ್ಟಿಸಿದ ಆರೋಪ: ತೀಸ್ತಾ ಸೆತಲ್ವಾಡಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪಕಕ್ಕೆ ಸಂಬಂಧಿಸಿದಂತೆ ತೀಸ್ತಾ ಸೆತಲ್ವಾಡಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ಅವರಿಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅರ್ಜಿದಾರರಾದ ತೀಸ್ತಾ ಸೆತಲ್ವಾಡ ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದಿಲ್ಲ ಮತ್ತು ಅವರಿಂದ ದೂರವಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಂದು … Continued

ನಮಾಮಿ ಗಂಗೆ ಯೋಜನಾ ಸ್ಥಳದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟ : 15 ಮಂದಿ ಸಾವು, ಹಲವರಿಗೆ ಗಾಯ

ನವದೆಹಲಿ: ಉತ್ತರಾಖಂಡದ ಚಮೋಲಿಯಲ್ಲಿ ಅಲಕನಂದಾ ನದಿಯ ದಡದಲ್ಲಿ ಸೇತುವೆಯನ್ನು ವಿದ್ಯುದ್ದೀಕರಿಸಿದ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಪೊಲೀಸ್ ಅಧಿಕಾರಿ ಸೇರಿದಂತೆ ಹದಿನೈದು ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ವಾಚ್‌ಮನ್ ವಿದ್ಯುತ್ … Continued

ಐ ಎಫ್‌ ಎಫ್‌ ಐ 2023: ವೆಬ್ ಸರಣಿಗಳಿಗೆ ಹೊಸದಾಗಿ ಪ್ರಶಸ್ತಿ ಘೋಷಿಸಿದ ಅನುರಾಗ ಠಾಕೂರ್

ನವದೆಹಲಿ : ಈ ವರ್ಷದಿಂದ ಅತ್ಯುತ್ತಮ ವೆಬ್ ಸರಣಿ ತಯಾರಕರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಕೇಂದ್ರ ಸಚಿವ ಅನುರಾಗ ಠಾಕೂರ್ ಪ್ರಕಟಿಸಿದ್ದಾರೆ. ನವೆಂಬರ್ 20 ರಿಂದ ನಡೆಯಲಿರುವ ಗೋವಾ ಚಿತ್ರೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಪ್ರಶಸ್ತಿಯನ್ನು ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಮೂಲತಃ ಭಾರತೀಯ ಭಾಷೆಯಲ್ಲಿ ಚಿತ್ರೀಕರಿಸಲಾದ ಮೂಲ ವೆಬ್ ಸರಣಿಗೆ … Continued