ಮನೆಯ 8 ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ವ್ಯಕ್ತಿ : ನಂತರ ತಾನೂ ಆತ್ಮಹತ್ಯೆ…

ಛಿಂದವಾರಾ :  ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದವಾರಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಚಿಂದ್ವಾರಾ ಜಿಲ್ಲಾ ಕೇಂದ್ರದಿಂದ 145 ಕಿಮೀ ದೂರದಲ್ಲಿರುವ ಬೋಡಾಲ್ ಕಚ್ಚರ್ ಎಂಬ ಬುಡಕಟ್ಟು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಈ ಹತ್ಯೆ ನಡೆದಿದೆ. … Continued

ರಾಜ​ಕೋಟ್ ಅಗ್ನಿ ದುರಂತದಲ್ಲಿ​ ಗೇಮ್​ ಝೋನ್​ ಸಹ ಮಾಲೀಕನೂ ಸಾವು

ರಾಜ​ಕೋಟ್​ : ಗುಜರಾತಿನ ರಾಜ​ಕೋಟ್​ ಟಿಆರ್​ಪಿ ಗೇಮ್​ ಝೋನ್​ನ ಮಾಲೀಕ ಪ್ರಕಾಶ​ ಹಿರಾನ್​ ಕೂಡ ಅಗ್ನಿ ದುರಂತ(Fire Accident)ದಲ್ಲಿ ಮೃತಪಟ್ಟಿದ್ದಾರೆ. ಗೇಮ್‌ ಜೋನ್‌ನಲ್ಲಿ ಪತ್ತೆಯಾದ ಅವಶೇಷಗಳಿಂದ ತೆಗೆದ ಡಿಎನ್ಎ ಮಾದರಿಯು ಪ್ರಕಾಶ​ ಅವರ ತಾಯಿಯ ಡಿಎನ್​ಎ ಜತೆ ಹೊಂದಿಕೆಯಾದ ನಂತರ ಅವರ ಮೃತದೇಹವನ್ನು ಗುರುತಿಸಲಾಗಿದೆ. ಬೆಂಕಿ ಅನಾಹುತದಲ್ಲಿ ಸೆರೆಹಿಡಿಯಲಾದ ಸಿಸಿಟಿವಿ ದೃಶ್ಯಾವಳಿಗಳು ಘಟನಾ ಸ್ಥಳದಲ್ಲಿ ಪ್ರಕಾಶ … Continued

ಪಾಕಿಸ್ತಾನದ ತಪ್ಪಿನಿಂದಲೇ ಕಾರ್ಗಿಲ್‌ ಯುದ್ಧ ; ಭಾರತದ ಜತೆಗಿನ ಶಾಂತಿ ಒಪ್ಪಂದ ಉಲ್ಲಂಘಿಸಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನದ ಮಾಜಿ ಪ್ರಧಾನಿ

ಲಾಹೋರ್: ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಭಾರತದೊಂದಿಗೆ ನಾವು ಮಾಡಿಕೊಂಡಿದ್ದ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂಬುದನ್ನು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಒಪ್ಪಿಕೊಂಡಿದ್ದಾರೆ. ಜನರಲ್ ಪರ್ವೇಜ್ ಮುಷರಫ್ ಅವರ ಕಾರ್ಗಿಲ್ ದುಸ್ಸಾಹಸವನ್ನು ಸ್ಪಷ್ಟವಾಗಿ ಉಲ್ಲೇಖಿಸಿ ನವಾಜ್‌ ಷರೀಫ್ ಈ ಹೇಳಿಕೆ ನೀಡಿದ್ದಾರೆ. “ಮೇ 28, 1998 ರಂದು ಪಾಕಿಸ್ತಾನವು ಐದು ಪರಮಾಣು ಪರೀಕ್ಷೆಗಳನ್ನು … Continued

ವೀಡಿಯೊ.. | ಸುಡಾನ್‌ನಲ್ಲಿ ನಡೆದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಚೀನಾ ಸೈನಿಕರ ವಿರುದ್ಧ ಜಯಗಳಿಸಿದ ಭಾರತದ ಸೈನಿಕರು

ಖಾರ್ತೂಮ್: ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಅಂಗವಾಗಿ ಸುಡಾನ್‌ನಲ್ಲಿ ನಿಯೋಜಿಸಲಾದ ಭಾರತೀಯ ಸೈನಿಕರು ಹಾಗೂ ಚೀನಾ ಸೈನಿಕರ ನಡುವಿನ ಹಗ್ಗಜಗ್ಗಾಟದ ಸ್ಪರ್ಧೆಯಲ್ಲಿ ಭಾರತವು ಚೀನಾದ ವಿರುದ್ಧ ಗಮನಾರ್ಹವಾದ ಜಯ ದಾಖಲಿಸಿದೆ ಎಂದು ಸೇನಾ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಎರಡು ದೇಶಗಳು ನಡುವೆ ಸಂಬಂಧ ಹದಗೆಟ್ಟಿದ್ದರೂ ವೈರಲ್ ವೀಡಿಯೊದಲ್ಲಿ ಸೆರೆಹಿಡಿಯಲಾದ ಈ ಸ್ಪರ್ಧೆಯಲ್ಲಿ ಎರಡೂ ದೇಶಗಳ ಸೈನಿಕರು ಅನುಕರಣೀಯ ಸೌಹಾರ್ದತೆ … Continued

ವೀಡಿಯೊ ಬಿಡುಗಡೆ ಮಾಡಿದ ಬೆನ್ನಲ್ಲೇ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ…!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮೇ 31ರಂದು ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನದ ಟಿಕೆಟ್‌ ಬುಕ್‌ ಆಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ವಿಶೇಷ ತನಿಖಾ ತಂಡದ (ಎಸ್‌ಐಟಿ) ಎದುರು ವಿಚಾರಣೆಗೆ ಮೇ 31ರಂದು ಹಾಜರಾಗುವುದಾಗಿ ತಿಳಿಸಲು ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್‌ ರೇವಣ್ಣ, … Continued

ಲೋಕಸಭೆ ಚುನಾವಣೆ ಪ್ರಚಾರ ಮುಕ್ತಾಯದ ನಂತರ ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಮೇಲೆ 48 ಗಂಟೆ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ : ಯಾಕೆ ಗೊತ್ತೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಿಂದ ಜೂನ್ 1 ರವರೆಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಪ್ರಸಿದ್ಧ ವಿವೇಕಾನಂದ ಬಂಡೆ  ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ ಮತ್ತು ತಮ್ಮ ಲೋಕಸಭಾ ಚುನಾವಣಾ ಪ್ರಚಾರ ಅಂತ್ಯಗೊಂಡ ನಂತರ ಅವರು ಅಲ್ಲಿ ಧ್ಯಾನ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರು ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರು … Continued

ಬಿಜೆಪಿ ನಾಯಕ ಬಿಎಲ್ ಸಂತೋಷ ಬಂಧನಕ್ಕೆ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪ್ಲಾನ್‌ ಬಯಲು…!? ಇದಕ್ಕೆ ಕಾರಣ..?

ಹೈದರಾಬಾದ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ದೆಹಲಿ ಅಬಕಾರಿ ಹಗರಣದಲ್ಲಿ ಆರೋಪಿಯಾಗಿರುವ ತಮ್ಮ ಪುತ್ರಿ ಕೆ. ಕವಿತಾ ಅವರನ್ನು ಆರೋಪ ಮುಕ್ತಗೊಳಿಸಲು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಸಂಚು ರೂಪಿಸಿದ್ದರು ಎಂದು ತೆಲಂಗಾಣದ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು … Continued

ರೀಮಲ್ ಚಂಡಮಾರುತ: ಅಸ್ಸಾಂ, ಮಿಜೋರಾಂನಲ್ಲಿ ಭಾರಿ ಗಾಳಿಮಳೆ, 24 ಮಂದಿ ಸಾವು

ಗುವಾಹತಿ: ‘ರೀಮಲ್‌’ ಚಂಡಮಾರುತದ ಪರಿಣಾಮ ಮಿಜೋರಾಂ ಮತ್ತು ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ಮಳೆ ಸಂಬಂಧಿಸಿದ ಅನಾಹುತದಲ್ಲಿ 24 ಜನರು ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮಿಜೋರಾಂ ಮತ್ತು ಅಸ್ಸಾಂನಲ್ಲಿ ಬಿರುಗಾಳಿಯಿಂದ ಕೂಡಿದ ಭಾರಿ ಮಳೆಯಾಗಿದೆ. ಮಿಜೋರಾಂನ ಐಜ್ವಾಲ್ ಜಿಲ್ಲೆಯ ಮೆಲ್ತುಮ್‌ನಲ್ಲಿ ಕಲ್ಲಿನ ಕ್ವಾರಿ ಕುಸಿದ ಪರಿಣಾಮ 15 … Continued

ಮುಂಗಾರು ಮಳೆ: ಈ ವರ್ಷ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ತಿಂಗಳಾಂತ್ಯಕ್ಕೆ ಕೇರಳಕ್ಕೆ ಮುಂಗಾರು ಆಗಮನವಾಗಲಿದ್ದು, ಜೂನ್‌ ಮೊದಲ ವಾರದಲ್ಲಿ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋುತ್ಯ ಮಾನ್ಸೂನ್‌ ಕುರಿತು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಅಂತಿಮ ವರದಿ ಬಿಡುಗಡೆ ಮಾಡಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆ … Continued

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಸಹಾಯಕ ವಿಭವಕುಮಾರಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ

ನವದೆಹಲಿ: ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಹಾಯಕ ವಿಭವಕುಮಾರ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ನಿರಾಕರಿಸಿದೆ. ದೆಹಲಿಯ ತೀಸ್ ಹಜಾರಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಸುಶೀಲ ಅನುಜ ತ್ಯಾಗಿ ಅವರು ಈ ಆದೇಶ ನೀಡಿದ್ದಾರೆ. ದೆಹಲಿ ಪೊಲೀಸರು ಮೇ … Continued