ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳು 3 ಅವಕಾಶಗಳನ್ನು ಕಳೆದುಕೊಂಡಿವೆ…ಆದರೆ ಈಗ…: ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸುವ ಸಾಧ್ಯತೆಗಳನ್ನು ತಳ್ಳಿಹಾಕಿದ ತಂತ್ರಗಾರ ಪ್ರಶಾಂತ ಕಿಶೋರ ಅವರು, ಪ್ರಧಾನಿ ಮೋದಿ ಸರ್ಕಾರ ಹಿನ್ನಡೆಯ ಸ್ಥಿತಿಯಲ್ಲಿದ್ದಾಗ ವಿಪಕ್ಷಗಳ ಒಕ್ಕೂಟ ಅದರ ಲಾಭ ಪಡೆಯಲು ಅನೇಕ ಬಾರಿ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಮಮಂದಿರ (ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶಂಕುಸ್ಥಾಪನೆ) ಬಗ್ಗೆ ನಿರ್ದಿಷ್ಟವಾಗಿ … Continued

“ನೀವು ಮತವನ್ನೂ ಹಾಕಿಲ್ಲ…”: ತಮ್ಮದೇ ಪಕ್ಷದ ಸಂಸದನಿಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ..

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ ಸಿನ್ಹಾ ಅವರು ಸೋಮವಾರ ಮತದಾನ ಮಾಡದೇ ಇದ್ದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದಿಂದ ಅವರ ಬದಲಿಗೆ ಮನೀಶ ಜೈಸ್ವಾಲ್ ಅವರಿಗೆ ಟಿಕೆಟ್‌ ಘೋಷಿಸಿದಾಗಿನಿಂದ ಅವರು “ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರ” ದಲ್ಲಿ ಭಾಗವಹಿಸುತ್ತಿಲ್ಲ ಎಂದು ಆರೋಪಿಸಿ ಪಕ್ಷವು … Continued

ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ʼಪೋಷೆʼ ಕಾರು ಅಪಘಾತದಲ್ಲಿ ಇಬ್ಬರು ಸಾವು : ತಂದೆಯ ಬಂಧನ

ಪುಣೆ: ಇಬ್ಬರು ವ್ಯಕ್ತಿಗಳನ್ನು ಬಲಿತೆಗೆದುಕೊಂಡ ಮಾರಣಾಂತಿಕ ಕಾರು ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಹೆಚ್ಚುವರಿಯಾಗಿ, ಅಪ್ರಾಪ್ತರಿಗೆ ಮದ್ಯ ನೀಡಿದ ಒಂದೆರಡು ಬಾರ್‌ಗಳ ಮಾಲೀಕರನ್ನೂ ಬಂಧಿಸಲಾಗಿದೆ. ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ, 17 ವರ್ಷ ವಯಸ್ಸಿನ ಅಪ್ರಾಪ್ತ … Continued

ವೀಡಿಯೊ..: ಮುಸ್ಲಿಂ ಮೀಸಲಾತಿ ಬಗ್ಗೆ ಕಾಂಗ್ರೆಸ್‌ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ ಮೋದಿ : ರಾಹುಲ್ ಗಾಂಧಿ ವೈರಲ್ ವೀಡಿಯೊ ಉಲ್ಲೇಖ

ಪಶ್ಚಿಮ ಬಂಗಾಳದ ಜಾರ್‌ಗ್ರಾಮದಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಸ್ಲಿಮರಿಗೆ ಮೀಸಲಾತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಸಿದುಕೊಳ್ಳಲು ಕಾಂಗ್ರೆಸ್ ಉದ್ದೇಶಿಸಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ಪಕ್ಷವು ಇನ್ನೂ ಮುಸ್ಲಿಂ ಲೀಗ್‌ನ ಚಿಂತನೆ ಹೊಂದಿರುವ ಕೋಮುವಾದಿ ಪಕ್ಷವಾಗಿದೆ ಎಂದು ಪ್ರಧಾನಿ ಆರೋಪಿಸಿದರು. “ನನ್ನ ಇತ್ತೀಚಿನ ಸಂದರ್ಶನಗಳಲ್ಲಿ … Continued

ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐಸಿಸ್ ಭಯೋತ್ಪಾದಕರ ಬಂಧನ

ಅಹಮದಾಬಾದ್ : ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಕೆಲವು ದಿನಗಳ ನಂತರ ನಾಲ್ವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ಅದೇ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಭಯೋತ್ಪಾದಕರು ಶ್ರೀಲಂಕಾದ ನಾಗರಿಕರು ಎಂದು ನಂಬಲಾಗಿದೆ. ಈ ನಾಲ್ವರು ತಮ್ಮ ಹ್ಯಾಂಡ್ಲರ್‌ಗಾಗಿ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಹ್ಯಾಂಡ್ಲರ್ ಈ ನಾಲ್ವರು … Continued

‘100 ವರ್ಷದ ನನ್ನ ತಾಯಿಗೆ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿತ್ತು…ನನ್ನ ಬಳಿ 250 ಜೊತೆ ಬಟ್ಟೆಗಳಿವೆ ಎಂಬುದೇ ನನ್ನ ಮೇಲಿನ ದೊಡ್ಡ ಆರೋಪ ʼ : ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾರ್ವಜನಿಕ ಜೀವನ, ನಾಯಕತ್ವ, ಲೋಕಸಭೆ ಚುನಾವಣೆ 2024 ಮತ್ತು ಹಿಂದಿನ ಚುನಾವಣೆಗಳಲ್ಲಿ ಬಳಸಿದ “ಬ್ರ್ಯಾಂಡ್ ಮೋದಿ” ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. “ಬ್ರ್ಯಾಂಡ್” ಎಂದರೇನು ಮತ್ತು ಅದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದು ನನಗೆ ತಿಳಿದಿಲ್ಲ. ಜನರು ಮೋದಿಯವರ ಜೀವನ ಮತ್ತು ಅವರ ಕೆಲಸವನ್ನು ನೋಡುತ್ತಾರೆ ”ಎಂದು ಸುದ್ದಿ ಸಂಸ್ಥೆ … Continued

ಪಿಕಪ್ ವಾಹನ ಪಲ್ಟಿಯಾಗಿ 18 ಮಂದಿ ಸಾವು, ನಾಲ್ವರಿಗೆ ಗಾಯ

ಕವರ್ಧಾ : ಛತ್ತೀಸ್‌ಗಢದ ಕವರ್ಧಾ ಜಿಲ್ಲೆಯಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 18 ಮಂದಿ ಸಾವಿಗೀಡಾಗಿ, 4 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಕವರ್ಧಾದಲ್ಲಿ ಸೋಮವಾರ ಮುಂಜಾನೆ ಅಪಘಾತ ಸಂಭವಿಸಿದ್ದು, ಮೃತರಲ್ಲಿ ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಹಲವಾರು ಪ್ರಯಾಣಿಕರು ಸೇರಿದ್ದಾರೆ. ಅತಿವೇಗದ ಚಾಲನೆಯಿಂದಾಗಿ ವಾಹನವು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. … Continued

ವೀಡಿಯೊ..| ಒಂದೇ ಮತಗಟ್ಟೆಯಲ್ಲಿ 8 ಸಲ ಮತದಾನ ಮಾಡಿದ ಯುವಕ ; ವೀಡಿಯೋ ವೈರಲ್ ಆದ ನಂತರ ಬಂಧನ

ಮೂರನೇ ಹಂತದ ಮತದಾನದ ವೇಳೆ ಉತ್ತರಪ್ರದೇಶದ ಇಟಾಹ್‌ನಲ್ಲಿ ಯುವಕನೊಬ್ಬ ಒಂದೇ ಬೂತ್ ನಲ್ಲಿ 8 ಬಾರಿ ಮತದಾನ ಮಾಡಿದ್ದಾನೆ. ತಾನು ಪ್ರತಿ ಬಾರಿ ಮತದಾನ ಮಾಡಿದ್ದನ್ನೂ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವೀಡಿಯೊ ವೈರಲ್ ಆದ ನಂತರ ಆತನನ್ನು ಬಂಧಿಸಲಾಗಿದೆ. ಅಲ್ಲದೆ, ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಮತಗಟ್ಟೆಯ ಎಲ್ಲ ಸಿಬ್ಬಂದಿಯನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. … Continued

‘ಯಾರೂ ಮೋದಿಗೆ ಮತ ಹಾಕಬೇಡಿ’ ಎಂದು ತರಗತಿಯೊಳಗೆ ಹೇಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕನ ಬಂಧನ

ಮುಜಾಫರಪುರ : ತನ್ನ ತರಗತಿಯ ಮಕ್ಕಳಿಗೆ “ಯಾರೂ ಮೋದಿಗೆ ಮತ ಹಾಕಬೇಡಿ” ಎಂದು ಹೇಳುತ್ತಿದ್ದ ಆರೋಪದ ಮೇಲೆ ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮುಜಾಫರಪುರ ಎಸ್‌ಎಸ್‌ಪಿ ರಾಕೇಶಕುಮಾರ ಪ್ರಕಾರ, ಜಿಲ್ಲಾ ಶಿಕ್ಷಣಾಧಿಕಾರಿ ಎಫ್‌ಐಆರ್ ದಾಖಲಿಸಿದ ನಂತರ, ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಿಕ್ಷಕನ … Continued