ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳದ ದಾಳಿ ನಂತರ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಬಂಧನ

ನವದೆಹಲಿ: ದೆಹಲಿಯ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿ ಪೊಲೀಸ್ ಘಟಕದ ಭ್ರಷ್ಟಾಚಾರ ನಿಗ್ರಹ ದಳ ಶುಕ್ರವಾರ ಬಂಧಿಸಿದೆ. ಇಂದು, ಶುಕ್ರವಾರ ನಡೆಸಲಾದ ಶೋಧ ಕಾರ್ಯಾಚರಣೆಯಲ್ಲಿ “ಅವರ ವಿರುದ್ಧ ದೋಷಾರೋಪಣೆಯ ವಸ್ತುಗಳು ಮತ್ತು ಸಾಕ್ಷ್ಯಗಳನ್ನು” ವಶಪಡಿಸಿಕೊಂಡ ನಂತರ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲಾಯಿತು. ಅಮಾನತುಲ್ಲಾ ಖಾನ್ ಅಧ್ಯಕ್ಷರಾಗಿರುವ ದೆಹಲಿ ವಕ್ಫ್ ಬೋರ್ಡ್‌ನಲ್ಲಿ ನಡೆದ ನೇಮಕಾತಿಯಲ್ಲಿನ … Continued

2016ರ ಪ್ರಕರಣದಲ್ಲಿ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು ಶಿಕ್ಷೆ

ಗಾಂಧಿನಗರ: 2016 ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ನ್ಯಾಯಾಲಯವು ಶುಕ್ರವಾರ, ಸೆಪ್ಟೆಂಬರ್ 16ರಂದು ಗುಜರಾತ್ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ 18 ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಗುಜರಾತ್ ವಿಶ್ವವಿದ್ಯಾನಿಲಯದ ಕಾನೂನು ವಿಭಾಗದ ಕಟ್ಟಡಕ್ಕೆ ಬಿಆರ್ ಅಂಬೇಡ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡುವಂತೆ ಒತ್ತಾಯಿಸಿ … Continued

ಹೃದಯ ವಿದ್ರಾವಕ : ಸತ್ತ ಮಾಲೀಕನಿಗೆ ವಿದಾಯ ಹೇಳಲು ಸ್ಮಶಾನಕ್ಕೆ ಓಡಿಬಂದ ಆಕಳ ಕರು-ಮೃತದೇಹದ ಮುಂದೆ ಗೋಳಿಟ್ಟ ಗೋವು, ಅಲ್ಲಿದ್ದವರಿಗೆ ಕಣ್ಣೀರು | ವೀಕ್ಷಿಸಿ

ಮೃತಪಟ್ಟ ತನ್ನ ಮಾಲೀಕನಿಗೆ ಅಂತಿಮ ವಿದಾಯ ಹೇಳಲು ಆಕಳು ಕರು (ದೊಡ್ಡದು) ಓಡೋಡಿ ಬಂದ ಹೃದಯವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ ಇದು ಸುದ್ದಿಯಾಗಿತ್ತು. ಆದರೆ ಈಗ ಆಕಳ ಕರು ತನ್ನ ಮಾಲೀಕನ ಶವದ ಮುಂದೆ ಗೋಳಿಡುವ ವೀಡಿಯೊ ವೈರಲ್‌ ಆಗಿದೆ. ಇದು ಎಂಥವನ ಕಣ್ಣಂಚಿನಲ್ಲಿಯೂ ನೀರು ತರಿಸುವಂತಿದೆ. ಜಾರ್ಖಂಡ್‌ನ ಹಜಾರಿಬಾಗ್‌ನ … Continued

ಪ್ರಧಾನಿ ಮೋದಿ ಜನ್ಮದಿನ: ದೆಹಲಿ ರೆಸ್ಟೋರೆಂಟ್‌ನಲ್ಲಿ 56 ಇಂಚಿನ ಥಾಲಿ, 8.5 ಲಕ್ಷ ರೂ. ಬಹುಮಾನ, ಕೇದಾರನಾಥ ಯಾತ್ರೆ : ಥಾಲಿಯ ವಿಶೇಷತೆ ಇಲ್ಲಿದೆ

ನವದೆಹಲಿ: ನಾಳೆ, ಸೆಪ್ಟೆಂಬರ್ 17ರ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಆಚರಿಸಲಾಗುತ್ತಿದೆ. ಅಂದು ದೆಹಲಿಯ ಲುಟ್ಯೆನ್ಸ್‌ನ ರೆಸ್ಟೋರೆಂಟ್ 56 ಇಂಚಿನ ಥಾಲಿಯನ್ನು 10 ದಿನಗಳ ವರೆಗೆ ನೀಡುವುದಾಗಿ ಘೋಷಿಸಿದೆ. ಈ ಯೋಜನೆಯ ಭಾಗವಾಗಿ ಇಬ್ಬರು ಅದೃಷ್ಟಶಾಲಿಗಳು ಕೇದಾರನಾಥ ದೇಗುಲಕ್ಕೆ ಭೇಟಿ ನೀಡುವ ಅವಕಾಶವನ್ನು ಸಹ ಪಡೆಯುತ್ತಾರೆ ಎಂದು ರೆಸ್ಟೋರೆಂಟ್ ಮಾಲೀಕರು ತಿಳಿಸಿದ್ದಾರೆ. ಕನ್ನಾಟ್ … Continued

ಉದ್ಧವ್ ಠಾಕ್ರೆಗೆ ಭಾರೀ ಹಿನ್ನಡೆ : 15 ರಾಜ್ಯಗಳ ಮುಖ್ಯಸ್ಥರಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಪಾಳಯ ಸೇರಿದ 12 ರಾಜ್ಯಗಳ ಮುಖ್ಯಸ್ಥರು…!

ಮುಂಬೈ : ಶಿವಸೇನೆಯ ಬಣ ರಾಜಕೀಯದಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಬಂ ಮೇಲುಗೈ ಸಾಧಿಸಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ಭಾರೀ ಹಿನ್ನಡೆಯಾಗಿದೆ. ಶಿವಸೇನೆಯ ವಿವಿಧ ರಾಜ್ಯ ಘಟಕದ 15 ಮುಖ್ಯಸ್ಥರಲ್ಲಿ 12 ರಾಜ್ಯಗಳ ಮುಖ್ಯಸ್ಥರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣಕ್ಕೆ ಬೆಂಬಲ ಘೋಷಿಸಿದ್ದಾರೆ. ಸೆಪ್ಟೆಂಬರ್‌ 15ರಂದು ಗುರುವಾರ ನಡೆದ ಸಭೆಯಲ್ಲಿ ಶಿವಸೇನಯ … Continued

ಹತ್ತು ವರ್ಷಗಳಿಂದ ಜೈಲಲಿದ್ದು, ದೀರ್ಘಕಾಲದಿಂದ ಮೇಲ್ಮನವಿ ಬಾಕಿ ಇರುವವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿ: ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಮೇಲ್ಮನವಿ ವಿಚಾರಣೆಗೆ ಬಾರದಿರುವ, ಕನಿಷ್ಠ 10 ವರ್ಷಗಳ ಕಾಲ ಜೈಲು ಶಿಕ್ಷೆ ಪೂರ್ಣಗೊಳಿಸಿರುವಂತಹ ಬಂಧಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ ಎಂ ಸುಂದ್ರೇಶ್ ಅವರಿರುವ ಪೀಠ ಈ ಸಂಬಂಧ ಮೂರು ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ. ಅವುಗಳಲ್ಲಿ ಎರಡು ವೈಯಕ್ತಿಕ … Continued

ಬಿಜೆಪಿ ಸೇರ್ಪಡೆಯಾಗಲಿರುವ ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್

ನವದೆಹಲಿ: ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮುಂದಿನ ವಾರ ತಮ್ಮ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ (PLC) ಅನ್ನು ಕೇಸರಿ ಪಕ್ಷದೊಂದಿಗೆ ವಿಲೀನಗೊಳಿಸುವ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸೆಪ್ಟೆಂಬರ್ 19 ರಂದು ವಿಲೀನ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿಯ ಆಪ್ತ ಮೂಲಗಳು ತಿಳಿಸಿದ್ದು, ದಿನಾಂಕವನ್ನು ಇನ್ನೂ ದೃಢಪಡಿಸಿಲ್ಲ ಎಂದು … Continued

ಅಮೆಜಾನ್‌ನ ಜೆಫ್ ಬೆಜೋಸ್ ಹಿಂದಿಕ್ಕಿ ಈಗ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿಯಾದ ಭಾರತದ ಉದ್ಯಮಿ ಗೌತಮ್ ಅದಾನಿ…!

ನವದೆಹಲಿ: ಅದಾನಿ ಗ್ರೂಪ್‌ನ ಅಧ್ಯಕ್ಷ ಮತ್ತು ಭಾರತೀಯ ಬಿಲಿಯನೇರ್ ಗೌತಮ್ ಅದಾನಿ ಅಮೆಜಾನ್‌ನ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಈಗ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಫೋರ್ಬ್ಸ್‌ನ ರಿಯಲ್‌ ಟೈಮ್‌ ಮಾಹಿತಿಯ ಪ್ರಕಾರ, ಅವರು ಈಗ ಟೆಸ್ಲಾ ಸಿಇಒ ಎಲೋನ್ ಮಸ್ಕ್‌ಗಿಂತ ಹಿಂದೆ ಇದ್ದಾರೆ, ಎಲೋನ್‌ ಮಸ್ಕ್‌ ಅವರು $ 273.5 ಶತಕೋಟಿ ನಿವ್ವಳ ಮೌಲ್ಯದೊಂದಿಗೆ … Continued

ಭಾರತ್ ಜೋಡೋ ಯಾತ್ರೆಗೆ 500 ರೂಪಾಯಿ ನೀಡಿದ್ದಕ್ಕೆ ವ್ಯಕ್ತಿಯ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ | ವೀಕ್ಷಿಸಿ

ಕೊಲ್ಲಂ: ಕೇರಳದ ಕೊಲ್ಲಂನಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ಅಂಗಡಿ ಮಾಲೀಕರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅಂಗಡಿಯನ್ನು ಧ್ವಂಸಗೊಳಿಸಿದ್ದಾರೆ. ಕಾಂಗ್ರೆಸ್‌ನ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಪಕ್ಷದ ಕಾರ್ಯಕರ್ತರು ಬೇಡಿಕೆ ಇಟ್ಟಿದ್ದ 2,000 ರೂ.ಗಳನ್ನು ಅಂಗಡಿಯಾತ ನೀಡಲಿಲ್ಲ ಎಂಬುದು ಇದಕ್ಕೆ ಕಾರಣ. ಘಟನೆಯ ವೀಡಿಯೊ ವೈರಲ್ ಆದ ನಂತರ ಕಾಂಗ್ರೆಸ್ ಹೇಳಿಕೆ ನೀಡಿದ್ದು, ಘಟನೆಯಲ್ಲಿ ಭಾಗಿಯಾಗಿರುವ … Continued

ದೆಹಲಿ ಅಬಕಾರಿ ಹರಗಣ :ಕರ್ನಾಟಕ ಸೇರಿ ದೇಶದ 40 ಸ್ಥಳಗಳಲ್ಲಿ ಇ.ಡಿ. ದಾಳಿ

ನವದೆಹಲಿ: ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ ದೇಶಾದ್ಯಂತ ಸುಮಾರು 40 ಸ್ಥಳಗಳಲ್ಲಿ ದಾಳಿಗಳನ್ನು ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ದೆಹಲಿ-ಎನ್‌ಸಿಆರ್‌ನ ಇತರ ಕೆಲವು ನಗರಗಳಲ್ಲಿ ಮದ್ಯದ ಉದ್ಯಮಿಗಳು, ವಿತರಕರು ಮತ್ತು ಸರಬರಾಜು … Continued