ಸಚಿವರೊಂದಿಗೆ 5 ತಾಸುಗಳ ಸಭೆಯ ನಂತರ ಜೂನ್ 15ರ ವರೆಗೆ ಪ್ರತಿಭಟನೆ ಸ್ಥಗಿತಕ್ಕೆ ಕುಸ್ತಿಪಟುಗಳು

ನವದೆಹಲಿ: ಇಂದು, ಬುಧವಾದ ಐದು ತಾಸುಗಳ ಕಾಲ ನಡೆದ ಸಭೆಯ ನಂತರ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಲಿಖಿತ ಪ್ರಸ್ತಾವನೆ ಮಂಡಿಸಿದರು. ಜೂನ್ 15 ರೊಳಗೆ ಕುಸ್ತಿ ಫೆಡರೇಶನ್ ಮುಖ್ಯಸ್ಥರ ವಿರುದ್ಧ ತನಿಖೆಯನ್ನು ಪೂರ್ಣಗೊಳಿಸುವುದಾಗಿ ಅದು ಭರವಸೆ ನೀಡಿದರು. ಆದರೆ ಅವರ ಬಂಧನದ ಬಗ್ಗೆ ಯಾವುದೇ ಮಾತುಗಳಿಲ್ಲ. ಬಿಜೆಪಿ ಸಂಸದರೂ ಆಗಿರುವ … Continued

ತನ್ನದೇ ಇಂಟರ್ನೆಟ್ ಸೇವೆ ಆರಂಭಿಸಿ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕೇರಳ : ಈ ಬಗ್ಗೆ ತಿಳಿದುಕೊಳ್ಳಬೇಕಾದದ್ದು

ತಿರುವನಂತಪುರಂ: ಸಾಮಾನ್ಯ ಜನರಿಗೂ ಇಂಟರ್ನೆಟ್ ಲಭ್ಯತೆ ಸುಧಾರಿಸುವ ಪ್ರಯತ್ನದಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಪ್ರಾರಂಭಿಸಿದ ರಾಜ್ಯ ಸರ್ಕಾರ-ಚಾಲಿತ ಉಪಕ್ರಮವಾದ K-FON ಅಥವಾ ‘ಕೇರಳ ಫೈಬರ್ ಆಪ್ಟಿಕ್ ನೆಟ್‌ವರ್ಕ್’ ತನ್ನದೇ ಆದ ಬ್ರಾಡ್‌ಬ್ಯಾಂಡ್ ಸೇವೆ ಆರಂಭಿಸುವ ಮೂಲಕ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಗಿದೆ. ಸೇವೆಯನ್ನು ಪ್ರಾರಂಭಿಸುವಾಗ, ಮುಖ್ಯಮಂತ್ರಿ ಪಿಣರಾಯಿ … Continued

ಲಕ್ನೋ ನ್ಯಾಯಾಲಯದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್ ಸಂಜೀವ ಜೀವಾನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಲಕ್ನೋ: ಬುಧವಾರ ಲಕ್ನೋ ನ್ಯಾಯಾಲಯದ ಹೊರಗೆ ಕೆಲವು ಅಪರಿಚಿತ ದುಷ್ಕರ್ಮಿಗಳು ಕುಖ್ಯಾತ ಗ್ಯಾಂಗ್‌ಸ್ಟರ್ ಸಂಜೀವ ಜೀವಾ ಎಂಬಾತನನ್ನು ಗುಂಡಿಕ್ಕಿ ಕೊಂದಿದ್ದಾರೆ. ನ್ಯಾಯಾಲಯದೊಳಗೆ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಗುಂಡು ಹಾರಿಸಿ, ಸಂಜೀವ ಜೀವವನ್ನು ಕೊಂದಿದ್ದಾರೆ, ಈ ಘಟನೆಯಲ್ಲಿ ಯುವತಿಯೊಬ್ಬಳು ಗಾಯಗೊಂಡಿದ್ದಾಳೆ. ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಆಪ್ತ ಸಹಾಯಕ ಸಂಜೀವ ಮಹೇಶ್ವರಿ ಜೀವಾ, ಬಿಜೆಪಿ ಶಾಸಕ ಬ್ರಹ್ಮದತ್ … Continued

ಔರಂಗಜೇಬ್, ಟಿಪ್ಪು ಸುಲ್ತಾನ್ ಕುರಿತ ಸಾಮಾಜಿಕ ಮಾಧ್ಯಮದ ಪೋಸ್ಟ್‌ ನಿಂದ ಕೊಲ್ಲಾಪುರ ಉದ್ವಿಗ್ನ , ಲಾಠಿ ಚಾರ್ಜ್‌

ಕೊಲ್ಲಾಪುರ: ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾದ ವಿವಾದಾತ್ಮಕ ಪೋಸ್ಟ್‌ಗಳನ್ನು ವಿರೋಧಿಸಿ ಕೆಲ ಸಂಘಟನೆಗಳು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇಂದು, ಬುಧವಾರ ಬೆಳಿಗ್ಗೆ ಬೃಹತ್ ಪ್ರತಿಭಟನೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂದ್‌ಗೆ ಕರೆ ನೀಡಿದ್ದ ಪ್ರತಿಭಟನಾಕಾರರು ಕೊಲ್ಲಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕದಲ್ಲಿ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಹಾನಿ ಮಾಡಿದ … Continued

ಮಂಗಳೂರು: ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ – ಒಂದು ಹುಲಿ ಸಾವು

ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ನಡೆದ ಎರಡು ಹುಲಿಗಳ ಕಾಳಗದಲ್ಲಿ ಒಂದು ಹುಲಿ ಮೃತಪಟ್ಟಿದೆ ಎಂದು ವರದಿಯಾಗಿದೆ. ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಇಂದು ಬುಧವಾರ (ಜೂನ್‌ 7) ಬೆಳಿಗ್ಗೆ ಸಾವಿಗೀಡಾಗಿದೆ. ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷಾ ವರದಿ … Continued

ಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ಶ್ವೇತಭವನದ ಹೇಳಿಕೆಯಿಂದ ರಾಹುಲ್ ಗಾಂಧಿಗೆ ‘ಕಪಾಳಮೋಕ್ಷ’ : ಬಿಜೆಪಿ

ನವದೆಹಲಿ: ಮಂಗಳವಾರ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ತಮ್ಮ ಅಮೆರಿಕ ಭೇಟಿಯ ಸಂದರ್ಭದಲ್ಲಿ ಅವರು “ನಾಚಿಕೆಯಿಲ್ಲದೆ” ಭಾರತದ ಪ್ರಜಾಪ್ರಭುತ್ವವನ್ನು ಅಮೆರಿಕದಲ್ಲಿ ಟೀಕಿಸುವುದನ್ನು ಮುಂದುವರೆಸಿದ್ದು, ಆದರೆ ಅಮೆರಿಕದ ಶ್ವೇತಭವನವು ಭಾರತವನ್ನು ರೋಮಾಂಚಕ ಪ್ರಜಾಪ್ರಭುತ್ವ ಎಂದು ಹೇಳಿರುವುದು ರಾಹುಲ್‌ ಗಾಂಧಿ ಅವರಿಗೆ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸೈಯದ್ ಜಾಫರ್ ಇಸ್ಲಾಂ ಹೇಳಿದ್ದಾರೆ. … Continued

ತೀವ್ರ ಚಂಡಮಾರುತವಾಗಿ ರೂಪುಗೊಂಡ ‘ಬಿಪರ್‌ಜೋಯ್’ ಚಂಡಮಾರುತ ; ಕರ್ನಾಟಕ, ಮಹಾರಾಷ್ಟ್ರ ಸೇರಿ ನಾಲ್ಕು ರಾಜ್ಯಗಳಲ್ಲಿ ಪರಿಣಾಮ: ಐಎಂಡಿ

ನವದೆಹಲಿ: ಕಳೆದ 6 ಗಂಟೆಗಳಲ್ಲಿ 2 ಕಿಮೀ ವೇಗದಲ್ಲಿ ಉತ್ತರಾಭಿಮುಖವಾಗಿ ಚಲಿಸಿದ ‘ಬಿಪರ್‌ಜೋಯ್’ ಹೆಸರಿನ ಚಂಡಮಾರುತವು ತೀವ್ರ ಚಂಡಮಾರುತವಾಗಿ ಪರಿವರ್ತನೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ತಿಳಿಸಿದೆ. ಐಎಂಡಿ (IMD)ಯು ಬುಧವಾರ ಬೆಳಿಗ್ಗೆ 9ಕ್ಕೆ ನವೀಕರಿಸಲಾದ ಇತ್ತೀಚಿನ ಬುಲೆಟಿನ್‌ನಲ್ಲಿ ತನ್ನ ತೀವ್ರತೆಯನ್ನು ಉಳಿಸಿಕೊಂಡು ಮುಂದಿನ 24 ಗಂಟೆಗಳಲ್ಲಿ ಸುಮಾರು ಉತ್ತರದ ಕಡೆಗೆ ಚಲಿಸುವ … Continued

ಚುನಾವಣಾ ರಾಜಕೀಯಕ್ಕೆ ಬಿಜೆಪಿ ಸಂಸದ ಶಿವಕುಮಾರ ಉದಾಸಿ ವಿದಾಯ

ಹಾವೇರಿ : ಲೋಕಸಭೆ ಚುನಾವಣೆಗೂ ಮುನ್ನ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶಿವಕುಮಾರ ಉದಾಸಿ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಸಂದರ್ಭದಲ್ಲಿ ಇವರು ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿರುವುದು ಪಕ್ಷದ ಕಾರ್ಯಕರ್ತರಿಗೆ ಆಘಾತ ಮತ್ತು ಅಚ್ಚರಿ ತಂದಿದೆ. ಈ ಕುರಿತು ಮಾತನಾಡಿರುವ ಸಂಸದ … Continued

ಕಾಂಗ್ರೆಸ್‌ಗೆ ಹೊಸ ತಲೆನೋವು..? : ಸಚಿನ್‌ ಪೈಲಟ್‌ ಜೂನ್‌ 11ಕ್ಕೆ ಹೊಸ ಪಕ್ಷ ಘೋಷಿಸುವ ಸಾಧ್ಯತೆ-ವರದಿ

ನವದೆಹಲಿ : ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ತೀವ್ರಗೊಂಡಿದ್ದು, ಕಾಂಗ್ರೆಸ್‌ ಪಕ್ಷದ ಭಿನ್ನಮತೀಯ ನಾಯಕನಾಗಿ ಗುರುತಿಸಿಕೊಂಡಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಅವರು ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಸಚಿನ್‌ ಪೈಲಟ್‌ ಅವರು ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯಸ್ಮರಣೆ ದಿನವಾದ ಜೂನ್ 11ರಂದು ಹೊಸ ಪಕ್ಷ ‘ಪ್ರಗತಿಶೀಲ ಕಾಂಗ್ರೆಸ್’ ಘೋಷಿಸುವ … Continued

ಒಡಿಶಾ ರೈಲು ಅಪಘಾತ : 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ

ಭುವನೇಶ್ವರ : ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ 101 ಮೃತದೇಹಗಳನ್ನು ಈವರೆಗೂ ಗುರುತಿಸಲು ಸಾಧ್ಯವಾಗಿಲ್ಲ. 101 ಮೃತದೇಹಗಳನ್ನು ನಾವು ಇದುವರೆಗೂ ಗುರುತಿಸಲು ಸಾಧ್ಯವಾಗಿಲ್ಲ. ಇದರ ಜೊತೆಗೆ ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ 200ಕ್ಕೂ ಹೆಚ್ಚು ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಈಸ್ಟರ್ನ್ ಸೆಂಟ್ರಲ್ ರೈಲ್ವೇ ವಿಭಾಗೀಯ ಮ್ಯಾನೇಜರ್ ರಿಂಕೇಶ ರಾಯ್ … Continued