ಚಂದ್ರಯಾನ-3 : ವಿಕ್ರಂ ಲ್ಯಾಂಡರ್ ಸ್ಪರ್ಶಿಸಿದ ಸ್ಥಳಕ್ಕೆ ‘ಶಿವ ಶಕ್ತಿ’ ಎಂದು ಹೆಸರಿಡಲು ಐಎಯು ಅನುಮೋದನೆ

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಚಂದ್ರಯಾನ-3 ಮಿಷನ್‌ನ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಸ್ಥಳಕ್ಕೆ ‘ಶಿವ ಶಕ್ತಿ’ ಎಂದು ಹೆಸರಿಡಲು ಅಂತಾರಾಷ್ಟ್ರೀಯ ಖಗೋಳ ಒಕ್ಕೂಟ (IAU) ಅನುಮೋದನೆ ನೀಡಿದೆ. ಹೀಗಾಗಿ ವಿಕ್ರಂ ಲ್ಯಾಂಡರ್ ಇಳಿದ ಸ್ಥಳವನ್ನು ಅಧಿಕೃತವಾಗಿ ‘ಶಿವ ಶಕ್ತಿ’ ಎಂದು ಹೆಸರಿಸಲಾಗಿದೆ. ಚಂದ್ರನ ಮೇಲ್ಮೈಯಲ್ಲಿ ವಿಕ್ರಂ ಲ್ಯಾಂಡರ್ ಇಳಿದ ಸ್ಥಳಕ್ಕೆ … Continued

ಲೋಕಸಭೆ ಚುನಾವಣೆ : 111 ಅಭ್ಯರ್ಥಿಗಳ ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಕಂಗನಾ ರಣಾವತ್‌, ಅರುಣ ಗೋವಿಲಗೆ ಟಿಕೆಟ್‌, ವರುಣ ಗಾಂಧಿಗೆ ನಿರಾಕರಣೆ ; ಸಂಪೂರ್ಣ ಪಟ್ಟಿ…

ನವದೆಹಲಿ: ಬಿಜೆಪಿ ಭಾನುವಾರ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಸಚಿವರಾದ ಅಶ್ವಿನಿಕುಮಾರ ಚೌಬೆ ಮತ್ತು ಜನರಲ್‌ ವಿ ಕೆ ಸಿಂಗ್ ಹಾಗೂ ಸಂಸದ ವರುಣ ಗಾಂಧಿ ಅವರನ್ನು ಕೈಬಿಡಲಾಗಿದೆ. ಉತ್ತರ ಪ್ರದೇಶದ ಒಂಬತ್ತು, ಗುಜರಾತ್‌ನಲ್ಲಿ ಐದು, ಒಡಿಶಾದಲ್ಲಿ 4 ಮತ್ತು ಬಿಹಾರ, ಕರ್ನಾಟಕ ಮತ್ತು ಜಾರ್ಖಂಡ್‌ನಲ್ಲಿ ತಲಾ ಮೂವರು ಸೇರಿದಂತೆ ಇತ್ತೀಚಿನ … Continued

ವೀಡಿಯೋ : ರಸ್ತೆಯಲ್ಲಿ ವೀಡಿಯೊ ಶೂಟ್ ಮಾಡುತ್ತಿದ್ದಾಗ ಮಹಿಳೆಯ ಮಂಗಳಸೂತ್ರ ಕಿತ್ತುಕೊಂಡು ಪರಾರಿಯಾದ ಬೈಕ್‌ ಸವಾರ…!

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಇಂದಾಪುರಂನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ರಸ್ತೆಬದಿಯಲ್ಲಿ ರೀಲ್ ಶೂಟಿಂಗ್‌ ಮಾಡುತ್ತಿದ್ದಾಗ ಮಹಿಳೆಯೊಬ್ಬರ ಮಂಗಳಸೂತ್ರವನ್ನು ಅಪರಿಚಿತ ಬೈಕ್ ಸವಾರ ದೋಚಿರುವ ಘಟನೆ ನಡೆದಿದೆ. ಬೈಕ್ ಸವಾರ ಮಹಿಳೆಯ ಬಳಿಗೆ ವೇಗವಾಗಿ ಬಂದು ಸರ ಕಿತ್ತುಕೊಂಡು ಕ್ಷಿಪ್ರವಾಗಿ ಪರಾರಿಯಾಗಿದ್ದು, ಈ ಘಟನೆ ವೀಡಿಯೊ ವೈರಲ್‌ ಆಗಿದೆ. ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ … Continued

ಐಸಿಸ್‌ ಗೆ ನಿಷ್ಠೆ ತೋರಿದ ಗುವಾಹತಿ ಐಐಟಿ ವಿದ್ಯಾರ್ಥಿ ಬಂಧನ

ಗುವಾಹತಿ : ಐಎಸ್‌ಐಎಸ್‌ಗೆ ನಿಷ್ಠೆ ವ್ಯಕ್ತಪಡಿಸಿ ಉಗ್ರಗಾಮಿ ಸಂಘಟನೆಗೆ ಸೇರಲು ಹೊರಟಿದ್ದ ಐಐಟಿ-ಗುವಾಹತಿ ವಿದ್ಯಾರ್ಥಿಯನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಯುಎಪಿಎ (UAPA) ಅಡಿಯಲ್ಲಿ ಬಂಧಿಸಲಾಗಿದೆ. ಬಯೋಸೈನ್ಸ್‌ನ 4ನೇ ವರ್ಷದ ವಿದ್ಯಾರ್ಥಿಯಾಗಿರುವ ಆರೋಪಿ ತೌಸೀಫ್ ಅಲಿ ಫಾರೂಕಿಯನ್ನು ಶನಿವಾರ ಬಂಧಿಸಲಾಗಿದೆ. ಫಾರೂಕಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಮತ್ತು ಇಮೇಲ್‌ಗಳ ಮೂಲಕ ಭಯೋತ್ಪಾದಕ ಸಂಘಟನೆಗೆ ಸೇರುವ … Continued

ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ ದಂತಚೋರ-ಕಾಡುಗಳ್ಳ ವೀರಪ್ಪನ್‌ ಪುತ್ರಿ

ಚೆನ್ನೈ : ಕೆಲವು ದಿನಗಳ ಹಿಂದೆ ಬಿಜೆಪಿಗೆ ರಾಜೀನಾಮೆ ನೀಡಿದ್ದ ದಂತ ಚೋರ ಹಾಗೂ ಶ್ರೀಗಂಧದ ಕಳ್ಳಸಾಗಾಣಿಕೆದಾರ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಏಪ್ರಿಲ್ 19ರಂದು ಮೊದಲನೇ ಹಂತದ ಲೋಕಸಭೆ ಚುನಾವಣೆಯಲ್ಲಿ ತಮಿಳು ರಾಷ್ಟ್ರೀಯವಾದಿ ಪಕ್ಷವಾದ ನಾಮ್ ತಮಿಳರ್ ಕಚ್ಚಿ‌ (ಎನ್‌ ಟಿ ಕೆ) … Continued

ಅಪರೂಪದ ವಿದ್ಯಮಾನ : ರಾಷ್ಟ್ರಪತಿಗಳ ವಿರುದ್ದವೇ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ ಕೇರಳ ಸರ್ಕಾರ…!

ನವದೆಹಲಿ : ರಾಜ್ಯ ವಿಧಾನಸಭೆ ಅಂಗೀಕರಿಸಿದ ನಾಲ್ಕು ವಿಧೇಯಕಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮ್ಮತಿ ನೀಡದೆ ತಡೆಹಿಡಿದಿರುವುದನ್ನು ಪ್ರಶ್ನಿಸಿ ಕೇರಳ ಸರಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ವಕೀಲ ಸಿ.ಕೆ. ಶಶಿ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ರಾಜ್ಯ ಸರ್ಕಾರದ ಈ ಮಸೂದೆಗಳು ಒಪ್ಪಿಗೆಗಾಗಿ ರಾಜ್ಯಪಾಲರ ಬಳಿ ಸುಮಾರು ಎರಡು ವರ್ಷಗಳಿಂದ ಬಾಕಿ ಉಳಿದಿವೆ. … Continued

ಲೋಕಸಭೆ ಚುನಾವಣೆ : ವಾಯುಪಡೆಯ ಮಾಜಿ ಮುಖ್ಯಸ್ಥ ಆರ್‌ ಕೆ ಎಸ್ ಭದೌರಿಯಾ ಬಿಜೆಪಿಗೆ ಸೇರ್ಪಡೆ

ನವದೆಹಲಿ: ವಾಯುಪಡೆಯ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್‌ಕೆಎಸ್ ಭದೌರಿಯಾ ಅವರು ಸಶಸ್ತ್ರ ಪಡೆಗಳಲ್ಲಿನ ಹುದ್ದೆಯಿಂದ ನಿವೃತ್ತರಾದ ಸುಮಾರು ಎರಡೂವರೆ ವರ್ಷಗಳ ನಂತರ ಭಾನುವಾರ (ಮಾರ್ಚ್ 24) ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ ಠಾಕೂರ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ … Continued

ವೀಡಿಯೊ…| ದೇವಾಲಯದ ಕಾರ್ಯಕ್ರಮದ ವೇಳೆ ಮತ್ತೊಂದು ಆನೆಯ ಮೇಲೆ ದಾಳಿ ಮಾಡಿದ ದೇವರನ್ನು ಹೊತ್ತೊಯ್ಯುತ್ತಿದ್ದ ಆನೆ : ಹಲವರಿಗೆ ಗಾಯ

ತಿರುವನಂತಪುರಂ: ಕೇರಳದ ತರಕ್ಕಲ್‌ನಲ್ಲಿ ದೇವಸ್ಥಾನದ ಕಾರ್ಯಕ್ರಮದ ವೇಳೆ ದೇವರ ಮೂರ್ತಿಯನ್ನು ಹೊತ್ತ ಆನೆಯೊಂದು ಮತ್ತೊಂದು ಆನೆಯ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ಘಟನೆಯ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಶುಕ್ರವಾರ ರಾತ್ರಿ 10:30 ಕ್ಕೆ ಗುರುವಾಯೂರ್ ರವಿಕೃಷ್ಣನ್ ಎಂಬ ಆನೆ, ‘ಅಮ್ಮತಿರುವಾಡಿ’ ದೇವರನ್ನು ಹೊತ್ತೊಯ್ಯುತ್ತಿದ್ದಾಗ, ನಿಯಂತ್ರಣ ಕಳೆದುಕೊಂಡು ದೇವರಮೂರ್ತಿ ಹೊತ್ತೊಯ್ಯುತ್ತಿದ್ದ ಪುತ್ತುಪಲ್ಲಿ … Continued

ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಮೊದಲನೇ ಸರ್ಕಾರಿ ಆದೇಶ ಹೊರಡಿಸಿದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವಾಗಲೇ ಸರ್ಕಾರಕ್ಕೆ ತಮ್ಮ ಮೊದಲ ಆದೇಶವನ್ನು ನೀಡಿದ್ದಾರೆ. ಈ ಆದೇಶವು ಜಲ ಸಚಿವಾಲಯಕ್ಕೆ ಸಂಬಂಧಿಸಿದೆ ಮತ್ತು ಸೂಚನೆಯ ಮೂಲಕ ನಿರ್ದೇಶನವನ್ನು ಕಳುಹಿಸಲಾಗಿದೆ. ದೆಹಲಿ ಸಚಿವರಾದ ಅತಿಶಿ ಇಂದು ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಹೊರಡಿಸಿದ ಆದೇಶದ ಬಗ್ಗೆ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ, ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್ ಪಕ್ಷವು 46 ಲೋಕಸಭಾ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದ್ದು, ಪಕ್ಷದ ನಾಯಕರಾದ ದಿಗ್ವಿಜಯ ಸಿಂಗ್ ಅಜಯ ರೈ ಮತ್ತು ಕಾರ್ತಿ ಪಿ ಚಿದಂಬರಂ ಅವರು ಸಹ ಈ ಪಟ್ಟಿಯಲ್ಲಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರನ್ನು ರಾಜ್‌ಗಢ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದ್ದು, ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಯ ರೈ … Continued