ರಿಕವರಿ ಏಜೆಂಟ್‌ಗಳಿಗೆ ಆರ್‌ಬಿಐ ಬಿಸಿ: ಸಾಲ ವಸೂಲಿ ವೇಳೆ ಬೆದರಿಕೆ ಹಾಕುವಂತಿಲ್ಲ ಎಂದು ಸುತ್ತೋಲೆ

ಮುಂಬೈ: ಸಾಲ ವಸೂಲು ಮಾಡುವಾಗ ರಿಕವರಿ ಏಜೆಂಟರು ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ಅನಂತರ ಪೋನ್‌ ಮಾಡಿ ಬೆದರಿಕೆ ಹಾಕುವಂತಿಲ್ಲ ಎಂದು ಆರ್‌ಬಿಐ ಶುಕ್ರವಾರ ಹೊಸ ಸುತ್ತೋಲೆ ಹೊರಡಿಸಿದೆ. ಬ್ಯಾಂಕೇತರ ವಿತ್ತೀಯ ಸಂಸ್ಥೆಗಳು (ಎನ್‌ಬಿಎಫ್ಸಿ), ಆಸ್ತಿ ಪುನರ್‌ರಚನೆ ಸೇವೆ ನೀಡುವ ಕಂಪನಿಗಗಳಿಗೆ (ಎಆರ್‌ಸಿ) ಹೊಸ ನಿಯಮ ಅನ್ವಯವಾಗಲಿದೆ. ಈ ಹಿಂದೆಯೇ … Continued

ನೂಪುರ್ ಶರ್ಮಾ ಹತ್ಯೆಗೆ ಜೆಇಎಂ ಭಯೋತ್ಪಾದಕ ಸಂಘಟನೆಯಿಂದ ನಿಯೋಜಿಸಿದ್ದ ಉಗ್ರನ ಬಂಧನ

ಲಕ್ನೋ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶುಕ್ರವಾರ ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ತೆಹ್ರಿಖ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ)-ಸಂಬಂಧಿತ ಭಯೋತ್ಪಾದಕ ಮುಹಮ್ಮದ್ ನದೀಮ್‌ನನ್ನು ಸಹರಾನ್‌ಪುರದಿಂದ ಬಂಧಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಜೆಇಎಂ ಮತ್ತು ಟಿಟಿಪಿಯೊಂದಿಗೆ ನದೀಮ್ ನೇರ ಸಂಪರ್ಕ ಹೊಂದಿದ್ದ. ನೂಪುರ್ ಶರ್ಮಾ ಅವರನ್ನು ಕೊಲ್ಲುವ ಕೆಲಸವನ್ನು … Continued

75ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ: ಕೋವಿಡ್ ಕಾರಣದಿಂದ ದೊಟ್ಟಮಟ್ಟದಲ್ಲಿ ಗುಂಪು ಸೇರುವುದನ್ನು ತಪ್ಪಿಸಿ ; ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ದೇಶದಾದ್ಯಂತ ಪ್ರತಿದಿನ ಹೊಸದಾಗಿ 15 ಸಾವಿರಕ್ಕೂ ಹೆಚ್ಚು ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ದೊಡ್ಡಮಟ್ಟದಲ್ಲಿ ಸಭೆ ಸೇರುವಂತಿಲ್ಲ, ಪ್ರತಿಯೊಬ್ಬರೂ ತಪ್ಪದೆ ಕೋವಿಡ್ ನಿಯಯಮಾವಳಿಗಳನ್ನು ಅನುಸರಿಬೇಕು ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ. ಕೇಂದ್ರ ಗೃಹ ಸಚಿವಾಲಯವು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ … Continued

ಬಾಡಿಗೆಗಳ ಮೇಲೆ ಜಿಎಸ್‌ಟಿ ? : ಜಿಎಸ್‌ಟಿ ನೋಂದಾಯಿತ ಬಾಡಿಗೆದಾರರು ಮನೆ ಬಾಡಿಗೆಗೆ 18% ತೆರಿಗೆ ಪಾವತಿಸಬೇಕು; ಯಾರು ಪಾವತಿಸಬೇಕು, ಇಲ್ಲಿದೆ ಮಾಹಿತಿ

ನವದೆಹಲಿ: ಜುಲೈ 18 ರಿಂದ ಜಾರಿಗೆ ಬಂದ ಹೊಸ ಜಿಎಸ್‌ಟಿ ನಿಯಮಗಳ ಪ್ರಕಾರ, ಜಿಎಸ್‌ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಒಬ್ಬ ಹಿಡುವಳಿದಾರನು ವಸತಿ ಆಸ್ತಿಯನ್ನು ಬಾಡಿಗೆಗೆ ಪಡೆಯಲು ಶೇಕಡಾ 18 ರಷ್ಟು ಜಿಎಸ್‌ಟಿ ಪಾವತಿಸಬೇಕಾಗುತ್ತದೆ. GST ಅಡಿಯಲ್ಲಿ ನೋಂದಾಯಿಸಲಾದ ಬಾಡಿಗೆದಾರರಿಗೆ ಪಾವತಿಸಿದ ಬಾಡಿಗೆಗೆ ಶೇಕಡಾ 18 ತೆರಿಗೆ ಮಾತ್ರ ಅನ್ವಯಿಸುತ್ತದೆ. ಈ ಹಿಂದೆ, ಬಾಡಿಗೆ ಅಥವಾ ಲೀಸ್‌ನಲ್ಲಿ … Continued

ಮಹಾರಾಷ್ಟ್ರ ಸರ್ಕಾರದ ಶೇ. 75ರಷ್ಟು ಸಚಿವರ ಮೇಲಿದೆ ಕ್ರಿಮಿನಲ್ ಪ್ರಕರಣಗಳು: ಎಡಿಆರ್‌

ಮುಂಬೈ: ಮಹಾರಾಷ್ಟ್ರದ ಶೇ. 75ರಷ್ಟು ಸಚಿವರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಘೋಷಿಸಿಕೊಂಡಿದ್ದಾರೆ ಎಂದು ವರದಿಯೊಂದು ಹೇಳಿದೆ. ಮಹಾರಾಷ್ಟ್ರದ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ 20 ಸಚಿವರಿದ್ದು, ಅವರಲ್ಲಿ 15 ಮಂದಿ ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಎಡಿಆರ್‌ ಸಂಸ್ಥೆ ಹೇಳಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ … Continued

ಬಿಡುಗಡೆಗೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜೀವ್ ಗಾಂಧಿ ಹಂತಕಿ ನಳಿನಿ

ನವದೆಹಲಿ: ಪೆರಾರಿವಾಲನ್ ನಂತರ, ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮತ್ತೊಬ್ಬ ಅಪರಾಧಿ ನಳಿನಿ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಅರ್ಜಿಯ ವಿಚಾರಣೆ ನಡೆಯುತ್ತಿರುವಾಗಲೇ ಆಕೆ ಜಾಮೀನು ಕೋರಿದ್ದರು. ಮಾಜಿ ಪ್ರಧಾನಿ ಹತ್ಯೆ ಪ್ರಕರಣದಲ್ಲಿ ನಳಿನಿ ಸೇರಿ ಆರು ಮಂದಿಗೆ ಶಿಕ್ಷೆ ವಿಧಿಸಲಾಗಿತ್ತು. 31 ವರ್ಷಗಳ ಕಾಲ ಜೈಲಿನಲ್ಲಿದ್ದ ಅಪರಾಧಿಗಳಲ್ಲಿ … Continued

ದಯಾಮರಣಕ್ಕಾಗಿ ಯುರೋಪ್‌ಗೆ ಹೋಗುತ್ತಿರುವ ವ್ಯಕ್ತಿಯನ್ನು ತಡೆಯುವಂತೆ ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಕುಟುಂಬದ ಸ್ನೇಹಿತೆ

ನವದೆಹಲಿ: ಬೆಂಗಳೂರು ಮೂಲದ ಮಹಿಳೆಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನೋಯ್ಡಾ ಮೂಲದ 48 ವರ್ಷದ ತನ್ನ ಸ್ನೇಹಿತರೊಬ್ಬರು ದಯಾಮರಣ ಅಥವಾ ಆತ್ಮಹತ್ಯೆಗೆ ಸಹಾಯ ಪಡೆದುಕೊಳ್ಳಲು ಸ್ವಿಟ್ಜರ್‌ಲ್ಯಾಂಡ್‌ಗೆ ಪ್ರಯಾಣಿಸುವುದನ್ನು ತಡೆಯಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ಬೆಲ್ಜಿಯಂಗೆ ತೆರಳಲು ಬಯಸುವುದಾಗಿ ಭಾರತೀಯ ವೀಸಾ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ವ್ಯಕ್ತಿ ಷೆಂಗೆನ್ ವೀಸಾ ಪಡೆದಿದ್ದಾನೆ … Continued

ರಾಹುಲ್ ಆಗದಿದ್ರೆ ಯಾರಾಗ್ತಾರೆ ಕಾಂಗ್ರೆಸ್‌ ಅಧ್ಯಕ್ಷರು ? : ಅಧ್ಯಕ್ಷ ಸ್ಥಾನದ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಚರ್ಚೆ ಶುರು, ಖರ್ಗೆ, ವಾಸ್ನಿಕ್‌ ಹೆಸರು ಚಾಲ್ತಿಗೆ

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಕಾಂಗ್ರೆಸ್‌ನಲ್ಲಿ ರಾಹುಲ್ ಗಾಂಧಿ ಹಾಗೂ ಹಾಲಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೆಸರುಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆದರೆ, ಈ ಬಾರಿ ರಾಹುಲ್ ಪಕ್ಷದ ಅಧ್ಯಕ್ಷರಾಗುವ ಬಗ್ಗೆ ಕಾಂಗ್ರೆಸ್ ನಾಯಕರು ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಅದೇ ಸಮಯದಲ್ಲಿ, ಕೇರಳದ ವಯನಾಡ್ ಲೋಕಸಭಾ … Continued

ಮೂಡ್ ಆಫ್ ನೇಷನ್ ಸಮೀಕ್ಷೆ: 2024ರಲ್ಲಿಯೂ ಮೋದಿಯೇ ಪ್ರಧಾನಿಯಾಗಬೇಕೆಂದು ಅರ್ಧಕ್ಕಿಂತ ಹೆಚ್ಚು ಜನರ ಒಲವು; ಸಿಎಂಗಳಲ್ಲಿ ನವೀನ್‌ ಪಟ್ನಾಯಕ್‌ ಬೆಸ್ಟ್‌

ನವದೆಹಲಿ: ಹಣದುಬ್ಬರ, ಕೋವಿಡ್ -19 ಸಾಂಕ್ರಾಮಿಕ, ತೈಲ ಬೆಲೆಗಳು ಮತ್ತು ಕಳೆದ ಎರಡು ವರ್ಷಗಳಿಂದ ಎನ್‌ಡಿಎ ನೇತೃತ್ವದ ಸರ್ಕಾರವನ್ನು ಕಾಡುತ್ತಿರುವ ಹಲವಾರು ಸಮಸ್ಯೆಗಳ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅತ್ಯಂತ ಜನಪ್ರಿಯ ಮತ್ತು ಎತ್ತರದ ರಾಜಕೀಯ ನಾಯಕರಾಗಿ ಉಳಿದಿದ್ದಾರೆ ಎಂದು ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಆಗಸ್ಟ್ ಆವೃತ್ತಿ ಹೇಳುತ್ತದೆ. ರಾಷ್ಟ್ರದ … Continued

ಇಂದಿನಿಂದ ಕಾರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ಕೋವಿಡ್‌-19 ಲಸಿಕೆ ಲಭ್ಯ

ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟ ಜನಸಂಖ್ಯೆಗೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆಗಳ ಎರಡನೇ ಡೋಸ್ ನಿರ್ವಹಣೆ ಮಾಡಿದ ದಿನಾಂಕದಿಂದ ಆರು ತಿಂಗಳ ನಂತರ ಬಯೋಲಾಜಿಕಲ್ ಇ ಕಾರ್ಬೆವಾಕ್ಸ್ ಅನ್ನು ಮುನ್ನೆಚ್ಚರಿಕೆ ಡೋಸ್ ಆಗಿ ತೆಗೆದುಕೊಳ್ಳಲು ಕೇಂದ್ರವು ಅನುಮೋದಿಸಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ. ಕೋವಿಡ್‌-19 ಲಸಿಕೆ Corbevax ಆಗಸ್ಟ್ 12 ರಿಂದ … Continued