₹ 2,000 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಆರೋಪ: ಚಲನಚಿತ್ರ ನಿರ್ಮಾಪಕನ ಬಂಧನ

ನವದೆಹಲಿ: ₹ 2,000 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ದೇಶದಿಂದ ಹೊರಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಸಿನಿಮಾ ನಿರ್ಮಾಪಕನನ್ನು ಬಂಧಿಸಲಾಗಿದೆ. ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ ಡಿಎಂಕೆ ಮಾಜಿ ಪದಾಧಿಕಾರಿ ಜಾಫರ್ ಸಾದಿಕ್ ಎಂಬವನನ್ನು ನಾಲ್ಕು ತಿಂಗಳ ಶೋಧದ ನಂತರ ಬಂಧಿಸಲಾಗಿದೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶನಿವಾರ ತಿಳಿಸಿದೆ. ಎನ್‌ಸಿಬಿ (NCB) … Continued

ವೀಡಿಯೊ..| ವಿಶ್ವದ ಅತಿ ಉದ್ದದ ದ್ವಿಪಥ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ : ಈ ಸೆಲಾ ಸುರಂಗದ ಬಗ್ಗೆ ಐದು ಸಂಗತಿಗಳು

ಗುವಾಹತಿ : ಪ್ರಧಾನಿ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದಲ್ಲಿ ವಿಶ್ವದ ಅತಿ ಉದ್ದದ ದ್ವಿಪಥ ಸುರಂಗವನ್ನು (ಸೆಲಾ ಸುರಂಗ) ಶನಿವಾರ (ಮಾರ್ಚ್‌ 9) ಉದ್ಘಾಟಿಸಿದರು. ಸುಮಾರು 825 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೆಲಾ ಸುರಂಗವು ಇಂಜಿನಿಯರಿಂಗ್ ಕೌಶಲ್ಯದ ಅದ್ಭುತವಾಗಿದೆ. ಇದು ಅರುಣಾಚಲ ಪ್ರದೇಶದ ಬಲಿಪರಾ-ಚರಿದುವಾರ್-ತವಾಂಗ್ ರಸ್ತೆಯಲ್ಲಿ ಸೆಲಾ ಪಾಸ್ ಮೂಲಕ ತವಾಂಗ್‌ಗೆ ಸಂಪರ್ಕ … Continued

ಲೋಕಸಭೆ ಚುನಾವಣೆ : ಟೈಮ್ಸ್​ ನೌ-ಇಟಿಜಿ ಸಮೀಕ್ಷೆ ವರದಿ ಪ್ರಕಟ; ಕಾಂಗ್ರೆಸ್ಸಿಗೆ ಕಳೆದ ಚುನಾವಣೆಗಿಂತಲೂ ಕಡಿಮೆ ಸ್ಥಾನ ಎಂದ ಸಮೀಕ್ಷೆ; ಬಿಜೆಪಿಗೆ ಎಷ್ಟು ಸ್ಥಾನ..?

ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಈಗ ಮತ್ತೊಂದು ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಈಗಲೇ ದೇಶದಲ್ಲಿ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ 358-398 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಟೈಮ್ಸ್​ ನೌ ಸುದ್ದಿ ವಾಹಿನಿ- ಇಟಿಜಿ ನಡೆಸಿರುವ ಸಮೀಕ್ಷೆಯಲ್ಲಿ ಒಟ್ಟು 543 ಕ್ಷೇತ್ರಗಳಲ್ಲಿ … Continued

ವೀಡಿಯೊ…| ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಆನೆ ಸಫಾರಿ ಮಾಡಿದ ಪ್ರಧಾನಿ ಮೋದಿ

ಕಾಜಿರಂಗ ಉದ್ಯಾನವನ(ಅಸ್ಸಾಂ); ಪ್ರಧಾನಿ ಮೋದಿ ಎರಡು ದಿನಗಳ ಅಸ್ಸಾಂ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ 18,000 ಕೋಟಿ ರೂ.ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳನ್ನು ಅಸ್ಸಾಂ ಮತ್ತು ಕೇಂದ್ರ ಸರ್ಕಾರಗಳು ಕೈಗೊಳ್ಳುತ್ತಿವೆ. ಶನಿವಾರ ಬೆಳ್ಳಂಬೆಳಗ್ಗೆಯೇ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡುವ ಮೂಲಕ ತಮ್ಮ ಪ್ರವಾಸ ಆರಂಭಿಸಿದ ಪ್ರಧಾನಿ … Continued

ಶೀಘ್ರವೇ ಬ್ಯಾಂಕ್ ನೌಕರರ ವೇತನ ಶೇ.17ರಷ್ಟು ಹೆಚ್ಚಳ, ವಾರದಲ್ಲಿ 5 ದಿನ ಕೆಲಸಕ್ಕೆ ಒಪ್ಪಿಗೆ ಸಾಧ್ಯತೆ

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕೆ ಕೇಂದ್ರದ ಮೋದಿ ಸರ್ಕಾರ ಒಪ್ಪಿಗೆ ನೀಡಿದ ಒಂದು ದಿನದ ನಂತರ, ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು (Indian Banks’ Association and bank employee unions) ಶುಕ್ರವಾರ ಶೇ.17ರಷ್ಟು ವಾರ್ಷಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿವೆ. ಈ ಕ್ರಮದಿಂದ … Continued

ಲೋಕಸಭೆ ಚುನಾವಣೆ: ಕಾಂಗ್ರೆಸ್ಸಿನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಕರ್ನಾಟಕದಿಂದ 7 ಅಭ್ಯರ್ಥಿಗಳಿಗೆ ಟಿಕೆಟ್‌…!

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದಿಂದ 7, ಕೇರಳದ 15, ತೆಲಂಗಾಣದ 4, ಛತ್ತೀಸ್​ಗಡದ 6, ಮೇಘಾಲಯದ 2, ನಾಗಲ್ಯಾಂಡ್, ಸಿಕ್ಕಿಂ​ ಹಾಗೂ ತ್ರಿಪುರಾದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಒಟ್ಟು 39 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ ಘೋಷಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ … Continued

ವೀಡಿಯೊ…| ರಾಮೇಶ್ವರಂ ಕೆಫೆ ಸ್ಫೋಟ: ಬಾಂಬರ್ ಬಟ್ಟೆ ಬದಲಿಸಿ, ಬಸ್ ಹತ್ತಿದ ಮತ್ತೊಂದು ಸಿಸಿಟಿವಿ ವೀಡಿಯೊ ಹೊರಬಿತ್ತು

ಬೆಂಗಳೂರು : ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಹೊಸ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಈ ಸಿಸಿಟಿವಿ ದೃಶ್ಯವಾಳಿಯು ಶಂಕಿತ ಬಾಂಬರ್ ಬಟ್ಟೆ ಬದಲಿಸಿ ತುಮಕೂರಿಗೆ ಬಸ್ ಹತ್ತಿರಬಹುದು ಎಂದು ಸೂಚಿಸುತ್ತದೆ. ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ ನಂತರ, ಬಾಂಬರ್, … Continued

ಅಂತಾರಾಷ್ಟ್ರೀಯ ಮಹಿಳಾ ದಿನ : ಎಲ್‌ಪಿಜಿ ಅನಿಲ ಸಿಲಿಂಡರ್‌ ದರದಲ್ಲಿ ಭಾರೀ ಇಳಿಕೆ ; ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100 ರೂಪಾಯಿ ಕಡಿಮೆ ಮಾಡಿರುವುದಾಗಿ ಘೋಷಿಸಿದರು. ಎಕ್ಸ್ ಪೋಸ್ಟ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು, “ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿಗಳಷ್ಟು ಕಡಿಮೆ ಮಾಡಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ. “ಇದು ದೇಶಾದ್ಯಂತ ಲಕ್ಷಾಂತರ … Continued

ಬ್ರಿಟನ್‌ ಗೆ ಪ್ರಯಾಣಿಸಲು ಬೇಕಾದ ಪಾಸ್‌ಪೋರ್ಟ್‌ ಪಡೆಯಲು ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋದ ರಾಜೀವ್ ಗಾಂಧಿ ಹತ್ಯೆ ಅಪರಾಧಿ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎಸ್. ನಳಿನಿ ತಮ್ಮ ಪತಿ ಮುರುಗನ್ ಬ್ರಿಟನ್ನಿಗೆ ಪ್ರಯಾಣಿಸಲು ಮತ್ತು ಅಲ್ಲಿ ತನ್ನ ಮಗಳೊಂದಿಗೆ ವಾಸಿಸುವುದಕ್ಕೆ ಪಾಸ್ಪೋರ್ಟ್‌ ಪಡೆಯಲು ಸಂದರ್ಶನಕ್ಕೆ ಹಾಜರಾಗಲು ಅವಕಾಶ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಬೇಕು ಎಂದು ಕೋರಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. . … Continued

ಕೇಂದ್ರ ಸರ್ಕಾರದ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಮೋದಿ ಕ್ಯಾಬಿನೆಟ್‌ ಒಪ್ಪಿಗೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ಡಿಯರ್ನೆಸ್ ರಿಲೀಫ್ ಶೇಕಡಾ 4%ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.ಈ ತಿಂಗಳ ಮಧ್ಯಭಾಗದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದ್ದು, ಹೀಗಾಗಿ ಈಗಲೇ ಈ ನಿರ್ಧಾರ ಹೊರಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಗುರುವಾರ ಕೇಂದ್ರ ಸರ್ಕಾರಿ ನೌಕರರಿಗೆ … Continued