ಕನಿಷ್ಠ ಬೆಂಬಲ ಬೆಲೆ : ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಫೆ.21ರಂದು ದೆಹಲಿ ಚಲೋ ಮೆರವಣಿಗೆ ಪುನರಾರಂಭ

ನವದೆಹಲಿ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವ ಕೇಂದ್ರ ಸರ್ಕಾರದ ಹೊಸ ಯೋಜನೆಯಲ್ಲಿ ರೈತರ ಹಿತಾಸಕ್ತಿ ಇಲ್ಲ ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರ ಮುಂದಿಟ್ಟ ಪ್ರಸ್ತಾಪವನ್ನು ಸೋಮವಾರ ತಿರಸ್ಕರಿಸಿದ್ದಾರೆ. ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದ ನಂತರ, ಪ್ರತಿಭಟನಾನಿರತ ರೈತರು ಫೆಬ್ರವರಿ 21 ರ ಬೆಳಿಗ್ಗೆ ತಮ್ಮ ‘ದೆಹಲಿ ಚಲೋ’ ಮೆರವಣಿಗೆ ಪುನರಾರಂಭಿಸುವುದಾಗಿ ಹೇಳಿದ್ದಾರೆ. ಪ್ರಸ್ತಾವನೆಯಲ್ಲಿ … Continued

ಲೋಕಸಭೆ ಚುನಾವಣೆ : ಮಹಾರಾಷ್ಟ್ರದಲ್ಲಿ ಬಿಜೆಪಿ-ರಾಜ್‌ ಠಾಕ್ರೆ ಎಂಎನ್‌ಎಸ್‌ ಮೈತ್ರಿ..?

ಮುಂಬೈ : ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್‌ ಸೋಮವಾರ ಮಹಾರಾಷ್ಟ್ರ ನಿರ್ಮಾಣ ಸೇನೆ (MNS) ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಇದು ಬಿಜೆಪಿ-ಎಂಎನ್‌ಎಸ್‌ ಪಕ್ಷಗಳ ನಡುವಿನ ಸಂಭವನೀಯ ಚುನಾವಣಾ ಮೈತ್ರಿ ಕುರಿತ ಊಹಾಪೋಹಗಳಿಗೆ ಕಾರಣವಾಗಿದೆ. ಹಳೆಯ ಸ್ನೇಹಿತರ ನಡುವೆ ಸಭೆಗಳು ನಡೆಯುತ್ತವೆ ಎಂದು ಶೆಲಾರ್ ಹೇಳಿದ್ದಾರೆ. ಆದಾಗ್ಯೂ, “ವಿವರಗಳನ್ನು ಸೂಕ್ತ ಸಮಯದಲ್ಲಿ … Continued

ಚಂಡೀಗಢ ಮೇಯರ್ ಚುನಾವಣೆ : “ನೀವು ಮತಪತ್ರದ ಮೇಲೆ X ಮಾರ್ಕ್ ಏಕೆ ಹಾಕಿದ್ದೀರಿ?” : ಚುನಾವಣಾ ಅಧಿಕಾರಿ ಬೆವರಿಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಮತಪತ್ರವನ್ನು ವಿರೂಪಗೊಳಿಸಿದ ಆರೋಪಿತ ಪ್ರಕರಣದಲ್ಲಿ ಚುನಾವಣಾಧಿಕಾರಿ (ಆರ್‌ ಒ- ರಿಟರ್ನಿಂಗ್‌ ಆಫೀಸರ್‌) ಅನಿಲ ಮಾಸಿಹ್ ಅವರನ್ನು ಸುಪ್ರೀಂ ಕೋರ್ಟ್‌ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಮತ ಎಣಿಸಬೇಕಿದ್ದ ಅಧಿಕಾರಿ ಮತಪತ್ರಗಳಲ್ಲಿ ಟಿಕ್‌ ಮತ್ತು ಇಂಟೂ ಮಾರ್ಕ್‌ಗಳನ್ನು ಹಾಕಿದ್ದು ಏಕೆ ಎಂದು … Continued

ಕಾಂಗ್ರೆಸ್ಸಿಗೆ ಸಡ್ಡು ಹೊಡೆದ ಅಖಿಲೇಶ ಯಾದವ್‌ : ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಷರತ್ತು : ಏನದು..?

ನವದೆಹಲಿ: ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ ಯಾದವ್ ಭಾಗವಹಿಸುವ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮ ಆಗುವವರೆಗೆ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷವು ಭಾಗವಹಿಸುವುದಿಲ್ಲ ಎಂದು … Continued

ರೈತರು-ಕೇಂದ್ರದ ಮಧ್ಯೆ ಸಭೆ ; ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿಗೆ 5 ವರ್ಷ ಕನಿಷ್ಠ ಬೆಂಬಲ ಬೆಲೆ ಪ್ರಸ್ತಾಪ, ಪ್ರತಿಭಟನೆಗೆ ತಾತ್ಕಾಲಿಕ ತಡೆ, ಪ್ರಸ್ತಾವ ಕುರಿತು 2 ದಿನ ಚರ್ಚೆ

ನವದೆಹಲಿ: ರೈತಪರ ಸಂಘಟನೆಗಳೊಂದಿಗಿನ ತಡರಾತ್ರಿ ಸಂಧಾನ ಬಹುತೇಕ ಸಫಲವಾಗಿದೆ ಎಂದು ಹೇಳಲಾಗಿದ್ದು, ‘ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗಳನ್ನು 5 ವರ್ಷಗಳ ವರೆಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯಲ್ಲಿ ಖರೀದಿಸುವ ಕುರಿತು ಪ್ರಸ್ತಾಪ ಮುಂದಿಡಲಾಗಿದೆ ಎಂದು ಸಂಧಾನ ಮಾತುಕತೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದ್ವಿದಳ ಧಾನ್ಯಗಳು, … Continued

ಚಂಡೀಗಢ ಮೇಯರ್ ಆಯ್ಕೆ ಪ್ರಕರಣ : ಸುಪ್ರೀಂ ಕೋರ್ಟ್ ವಿಚಾರಣೆಗೆ ಮುಂಚಿತವಾಗಿ 3 ಎಎಪಿ ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ

ಚಂಡೀಗಢ: ಮೇಯರ್ ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪದ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಬಿಜೆಪಿ ನಾಯಕ ಮನೋಜ ಸೋಂಕರ್ ಅವರು ಭಾನುವಾರ ಸಂಜೆ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರದ ಬೆಳವಣಿಗೆಯಲ್ಲಿ ಆಮ್‌ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಬಿಜೆಪಿ ಸೇರುವ ಮೂಲಕ ಎಎಪಿಗೆ ಆಘಾತ ನೀಡಿದ್ದಾರೆ. ಜನವರಿ 30 … Continued

ʼಮದುವೆʼಯಾಗಲು ʼಹುಡುಗಿʼ ಬೇಕೆಂದು ವಿಶಿಷ್ಟ ಐಡಿಯಾ ಮಾಡಿದ ಯುವಕ : ಇ-ರಿಕ್ಷಾದಲ್ಲಿ ಹೋರ್ಡಿಂಗ್ ಹಾಕಿಕೊಂಡು ಓಡಾಟ…!!

ಮಧ್ಯಪ್ರದೇಶದ ದಾಮೋಹ್‌ನಲ್ಲಿ 29 ವರ್ಷದ ವ್ಯಕ್ತಿಯೊಬ್ಬ ತಾನು ಮದುವೆಯಾಗಲು ವಧುವನ್ನು ಹುಡುಕಲು ವಿಶಿಷ್ಟ ವಿಧಾನವನ್ನು ಅನುಸರಿಸಿದ್ದಾರೆ. ಅವರು ತಮ್ಮ ಉದ್ದೇಶ ಮತ್ತು ವೈಯಕ್ತಿಕ ವಿವರಗಳನ್ನು ಹೋರ್ಡಿಂಗ್‌ನಲ್ಲಿ ಪ್ರಕಟಿಸಿ ಅದನ್ನು ಇ-ರಿಕ್ಷಾದಲ್ಲಿ ಲಗತ್ತಿಸಿದ್ದಾರೆ. ದೀಪೇಂದ್ರ ರಾಥೋಡ ಎಂಬ ವ್ಯಕ್ತಿ ತಾವು ಮದುವೆಯಾಗಲು ಹುಡುಗಿ ಹುಡುಕುವುದಕ್ಕಾಗಿ ಈ ವಿಸಿಷ್ಟ ವಿಧಾನವನ್ನು ಅನುಸರಿಸಿದ್ದಾರೆ. ಅವರು ತಾವು ಮದುವೆಯಾಗಲು ಬಯಸುತ್ತಿರುವುದಾಗಿ ಹೇಳಿದ್ದಾರೆ, … Continued

ಸುಪ್ರೀಂ ಕೋರ್ಟ್ ವಿಚಾರಣೆಗೂ ಮುನ್ನ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮನೋಜ ಸೋಂಕರ್

ಚಂಡೀಗಢ : ಮತ ಎಣಿಕೆ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ನಿಗದಿತ ವಿಚಾರಣೆ ನಡೆಸಲಿರುವ ಒಂದು ದಿನ ಮೊದಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮನೋಜ ಸೋಂಕರ್ ಅವರು ಭಾನುವಾರ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಂಚೆ … Continued

ಅಯೋಧ್ಯೆ ರಾಮ ಮಂದಿರ: ಕ್ಯೂ ನಿರ್ವಹಣೆಗಾಗಿ ಟ್ರಸ್ಟ್ ಟಿಟಿಡಿಯಿಂದ ನೆರವು ಕೋರಿದ ರಾಮಮಂದಿರ ಟ್ರಸ್ಟ್

ಅಯೋಧ್ಯೆ : ಅಯೋಧ್ಯೆಗೆ ಭೇಟಿ ನೀಡುವ ಶ್ರೀರಾಮ ಭಕ್ತರಿಗೆ ಸುರಕ್ಷಿತ ಮಾರ್ಗ ಮತ್ತು ಸಂಚಾರ ಕಲ್ಪಿಸಲು ಒಂದು ಪ್ರಮುಖ ಹೆಜ್ಜೆಯಾಗಿ ಅಯೋಧ್ಯೆ ರಾಮಮಂದಿರ ಟ್ರಸ್ಟ್ ಈಗ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಅನ್ನು ಸಂಪರ್ಕಿಸಿದೆ. ಭಕ್ತರ ದಟ್ಟಣೆ ತಪ್ಪಿಸಲು ಸುವ್ಯವಸ್ಥೆ, ಸರತಿ ಸಾಲು ನಿರ್ವಹಣಾ ವ್ಯವಸ್ಥೆ ಇತ್ಯಾದಿಗಳ ಕುರಿತು ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನ ಪ್ರತಿನಿಧಿಗಳಿಗೆ ಟಿಟಿಡಿ … Continued

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಸಾದ ನಡ್ಡಾ ಅವರ ಅಧಿಕಾರಾವಧಿಯನ್ನು ಈ ವರ್ಷದ ಜೂನ್‌ ವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಮಂಡಳಿಯು ಭಾನುವಾರ ಅಂಗೀಕರಿಸಿತು. ಇದಲ್ಲದೆ, ಪಕ್ಷದ ಸಂಸದೀಯ ಮಂಡಳಿಯ ನಂತರದ ಅನುಮೋದನೆಗೆ ಒಳಪಟ್ಟು ಸ್ವತಂತ್ರವಾಗಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಜೆ.ಪಿ. ನಡ್ಡಾ ಅವರಿಗೆ ನೀಡಲಾಗಿದೆ. ದೆಹಲಿಯಲ್ಲಿ ನಡೆದ ಬಿಜೆಪಿಯ … Continued