ಮುಂಬೈ ವಿಮಾನ ನಿಲ್ದಾಣದಲ್ಲಿ 18 ಕೋಟಿ ಮೌಲ್ಯದ ಕೊಕೇನ್‌ ವಶ: ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಇಬ್ಬರು ವಿದೇಶಿ ಪ್ರಜೆಗಳನ್ನು ಅಧಿಕಾರಿಗಳು ಬಂಧಿಸಿದ್ದು, ಅವರ ಲಗೇಜಿನಲ್ಲಿ 18 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಪತ್ತೆಯಾಗಿದೆ. ಇಬ್ಬರು ಪ್ರಯಾಣಿಕರು – ಕೀನ್ಯಾದ ಪುರುಷ ಮತ್ತು ಗಿನಿಯಾದ ಮಹಿಳೆ ಎಂದು ಗುರುತಿಸಲಾಗಿದ್ದು, ಇಥಿಯೋಪಿಯನ್ ಏರ್‌ಲೈನ್ಸ್ ವಿಮಾನದಲ್ಲಿ ಅಡಿಸ್ ಅಬಾಬಾದಿಂದ ಮುಂಬೈಗೆ ಬಂದರು. ಡೈರೆಕ್ಟರೇಟ್ … Continued

ಇಂಡೋ-ಮ್ಯಾನ್ಮಾರ್ ಗಡಿ ಮೂಲಕ ಕಳ್ಳ ಸಾಗಣೆಯಲ್ಲಿ ತಂದ 11.5 ಕೋಟಿ ರೂ..ಮೌಲ್ಯದ 288 ಮೆಟ್ರಿಕ್ ಟನ್ ಅಡಕೆ ವಶಪಡಿಸಿಕೊಂಡ ಇ.ಡಿ.

ಮುಂಬೈ: ಅಡಕೆ ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಇಂಡೋನೇಷ್ಯಾದಿಂದ ಇಂಡೋ-ಮ್ಯಾನ್ಮಾರ್ ಗಡಿಯ ಮೂಲಕ ತಂದ ಸುಮಾರು 11.5 ಕೋಟಿ ಮೌಲ್ಯದ ಸುಮಾರು 288 ಮೆಟ್ರಿಕ್ ಟನ್ (ಎಂಟಿ) ಅಡಿಕೆ ಹಾಗೂ 16.5 ಲಕ್ಷ ರೂಪಾಯಿ ನಗದು, ದಾಖಲೆಗಳು, ಡಿಜಿಟಲ್ ಸಾಧನಗಳು ಮತ್ತು ಇತರ ಪುರಾವೆಗಳನ್ನು ವಶಪಡಿಸಿಕೊಂಡಿದೆ. ಮಹಾರಾಷ್ಟ್ರದ ಗೊಂಡಿಯಾ ಮತ್ತು ನಾಗ್ಪುರ … Continued

ತತ್ಕಾಲ್ ಟಿಕೆಟ್‌ಗಾಗಿ ಸರದಿ ಬ್ರೇಕ್‌ ಮಾಡಿದ್ದನ್ನು ವಿರೋಧಿಸಿದವರ ಮೇಲೆ ರೈಲ್ವೇ ನಿಲ್ದಾಣದಲ್ಲಿ ಗುಂಡಿನ ದಾಳಿ

ಪಟ್ನಾ: ಭಾನುವಾರ ಪಾಟ್ನಾದ ಬಿಹ್ತಾ ರೈಲ್ವೇ ನಿಲ್ದಾಣದಲ್ಲಿ ತತ್ಕಾಲ್ ಟಿಕೆಟ್‌ಗಾಗಿ ಸರತಿ ಸಾಲಿನಲ್ಲಿ ಬರದೆ ಮುನ್ನುಗ್ಗಿದ್ದನ್ನು ವಿರೋಧಿಸಿದ್ದಕ್ಕೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ನಂತರ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಭಾನುವಾರದ ತತ್ಕಾಲ್ ಟಿಕೆಟ್‌ಗಾಗಿ ಬಿಹ್ತಾ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಭಾರಿ ಜನಸಂದಣಿ ಇತ್ತು. ಈ ನಡುವೆ ಕೌಂಟರ್‌ನಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ವಿಚಾರದಲ್ಲಿ ಜನರ ನಡುವೆ … Continued

ಬೇರೊಂದು ಧರ್ಮಕ್ಕೆ ಮತಾಂತರಗೊಂಡ ಬಳಿಕ ಜಾತಿಯಾಧಾರಿತ ಮೀಸಲಾತಿ ಬಯಸುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌

ಚೆನ್ನೈ: ಯಾವುದೇ ವ್ಯಕ್ತಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಂಡ ಬಳಿಕ ತನ್ನ ಹಿಂದಿನ ಧರ್ಮದಲ್ಲಿನ ಜಾತಿಯಾಧಾರಿತವಾದ ಮೀಸಲಾತಿ ಸವಲತ್ತು ಪಡೆಯಲು ಸಾಧ್ಯವಿಲ್ಲ ಎಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ. ಮತಾಂತರಗೊಂಡ ಬಳಿಕ ಆ ವ್ಯಕ್ತಿಯು ಜನ್ಮತಃ ಬಂದಿದ್ದ ಜಾತಿ ಅಥವಾ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ ಎಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ. ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ಅವರು ಡಿಸೆಂಬರ್ 1 … Continued

ಬಂಗಾಳದ ಟಿಎಂಸಿ ಬೂತ್ ಅಧ್ಯಕ್ಷರ ನಿವಾಸದಲ್ಲಿ ಸ್ಫೋಟ: ಇಬ್ಬರು ಸಾವು, ಇಬ್ಬರಿಗೆ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಭೂಪತಿನಗರ ಪ್ರದೇಶದ ಪುರ್ಬಾ ಮೇದಿನಿಪುರ ಜಿಲ್ಲೆಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೂತ್ ಅಧ್ಯಕ್ಷ ರಾಜಕುಮಾರ ಮನ್ನಾ ಅವರ ನಿವಾಸದಲ್ಲಿ ಶುಕ್ರವಾರ ತಡರಾತ್ರಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಸ್ಫೋಟದ ಪ್ರಭಾವ ಎಷ್ಟು ಪ್ರಬಲವಾಗಿದೆಯೆಂದರೆ, ಘಟನೆಯಲ್ಲಿ ಹುಲ್ಲಿನ ಛಾವಣಿಯ ಮಣ್ಣಿನ ಮನೆ ಹಾರಿಹೋಗಿದೆ. ಮೃತರ ಗುರುತು … Continued

ರೈಲು ಹಳಿ ಮೇಲೆ ಪೊಲೀಸರು ಎಸೆದ ತನ್ನ ತೂಕದ ಮಾಪನ ಯಂತ್ರ ತರಲು ಹೋದಾಗ ರೈಲು ಡಿಕ್ಕಿ ಹೊಡೆದು ಕಾಲು ಕಳೆದುಕೊಂಡ ಯುವಕ

ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ 18 ವರ್ಷದ ತರಕಾರಿ ಮಾರಾಟಗಾರನೊಬ್ಬ ಶುಕ್ರವಾರ ರೈಲಿಗೆ ಸಿಲುಕಿ ತನ್ನ ಕಾಲುಗಳನ್ನು ಕಳೆದುಕೊಂಡಿದ್ದು, ಪೊಲೀಸರು ರೈಲ್ವೆ ಹಳಿ ಮೇಲೆ ಎಸೆದ ತನ್ನ ತೂಕ ಮಾಪಕ ಯಂತ್ರವನ್ನು ತರಲು ಹೋದಾಗ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಕಾನ್ಪುರದ ರೈಲ್ವೆ ನಿಲ್ದಾಣದ ಬಳಿ ಹೆಚ್ಚಾಗಿ ತರಕಾರಿ ಮಾರಾಟಗಾರರು ಒತ್ತುವರಿ ಮಾಡಿಕೊಂಡಿರುವ ಅತಿಕ್ರಮಣಗಳನ್ನು … Continued

ಭಾರತವು ನನ್ನ ಅವಿಭಾಜ್ಯ ಭಾಗವಾಗಿದೆ, ನಾನು ಎಲ್ಲಿಗೆ ಹೋದರೂ ಅದನ್ನು ನನ್ನೊಂದಿಗೆ ಒಯ್ಯುತ್ತೇನೆ: ಪದ್ಮಭೂಷಣ ಪುರಸ್ಕಾರ ಸ್ವೀಕರಿಸಿದ ಗೂಗಲ್‌ ಸಿಇಒ ಸುಂದರ್ ಪಿಚೈ

ವಾಷಿಂಗ್ಟನ್: “ಭಾರತವು ನನ್ನ ಭಾಗವಾಗಿದೆ ಮತ್ತು ನಾನು ಎಲ್ಲಿಗೆ ಹೋದರೂ ಅದನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ” ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ ಪಿಚೈ ಹೇಳಿದ್ದಾರೆ. ಅಮೆರಿಕದ ಭಾರತೀಯ ರಾಯಭಾರಿಯಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಅವರು ಹೇಳಿದ್ದಾರೆ. ಭಾರತೀಯ-ಅಮೆರಿಕನ್ ಸುಂದರ ಪಿಚೈ ಅವರಿಗೆ ವ್ಯಾಪಾರ ಮತ್ತು ಕೈಗಾರಿಕೆ ವಿಭಾಗದಲ್ಲಿ 2022 ರ ಪದ್ಮಭೂಷಣ … Continued

ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ನಿಷೇಧಿಸಿದ ಮದ್ರಾಸ್ ಹೈಕೋರ್ಟ್

ಚೆನ್ನೈ:  ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಶುಕ್ರವಾರ ತಮಿಳುನಾಡಿನ ದೇವಾಲಯಗಳಲ್ಲಿ ಭಕ್ತರು ತಮ್ಮ ಮೊಬೈಲ್ ಫೋನ್‌ಗಳನ್ನು ಬಳಕೆಯನ್ನು ನಿಷೇಧಿಸಿದೆ. ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದು ಎಂದು ನ್ಯಾಯಾಲಯ ಹೇಳಿದೆ. ಈ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿ ಸಹ ನೇಮಿಸಬೇಕು ಎಂದು ಸೂಚಿಸಿದೆ. ಮೊಬೈಲ್‌ಗಳು … Continued

ಬಿಜೆಪಿ-ಆರ್‌ ಎಸ್‌ ಎಸ್‌ ನವರು ಜೈ ಸಿಯಾ ರಾಮ ಹೇಳೋಲ್ಲ, ಬದಲಿಗೆ ಜೈ ಶ್ರೀರಾಮ ಎಂದು ಘೋಷಣೆ ಕೂಗ್ತಾರೆ: ಇದಕ್ಕೆ ರಾಹುಲ್‌ ಗಾಂಧಿ ಕೊಟ್ಟ ಕಾರಣ ಇಲ್ಲಿದೆ | ವೀಕ್ಷಿಸಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ ಅಗರ್‌ನಲ್ಲಿ ನಡೆದ ಸಭೆಯೊಂದರಲ್ಲಿ ಶುಕ್ರವಾರ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ‘ಜೈ ಸಿಯಾ ರಾಮ’ ಅಥವಾ ‘ಜೈ ಸೀತಾ ರಾಮ’ ಎಂದು ಸ್ತುತಿಯನ್ನು ಹೇಳುವುದಿಲ್ಲ ಮತ್ತು ಬದಲಾಗಿ ‘ಜೈ ಶ್ರೀ ರಾಮ’ ಎಂಬ ಸ್ತುತಿಯನ್ನು ಉದ್ಘೋಷಿಸುತ್ತಾರೆ. ಏಕೆಂದರೆ ಅವರ … Continued

ಚಾಲಕನಿಗೆ ಹೃದಯಾಘಾತ, ನಿಯಂತ್ರಣ ತಪ್ಪಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಬಸ್‌ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಜಬಲ್‌ಪುರ (ಮಧ್ಯಪ್ರದೇಶ): ಜಬಲ್‌ಪುರದ ಟ್ರಾಫಿಕ್ ಸಿಗ್ನಲ್‌ನಲ್ಲಿ ಕ್ಯಾಮೆರಾದಲ್ಲಿ ಸೆರೆಹಿಡಿದ ನಾಟಕೀಯ ದೃಶ್ಯಗಳಲ್ಲಿ, ಸಿಟಿ ಬಸ್‌ನ ಚಾಲಕ ಹಠಾತ್ ಹೃದಯಾಘಾತದಿಂದ ಮೃತಪಟ್ಟ ನಂತರ ನಿಯಂತ್ರಣ ತಪ್ಪಿದ ಬಸ್‌ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ರಿಕ್ಷಾಗಳು ಮತ್ತು ಮೋಟರ್‌ ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇದು ಜನರಲ್ಲಿ ಒಬ್ಬರನ್ನು ಕೊಂದಿತು ಮತ್ತು ಹಲವರು ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. … Continued