ಕೇದಾರನಾಥ ಬಳಿ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ: 7 ಮಂದಿ ಸಾವು

ಕೇದಾರನಾಥ : ಮಂಗಳವಾರ(ಅಕ್ಟೋಬರ್ 18), ಉತ್ತರಾಖಂಡದ ಕೇದಾರನಾಥದ ಲಿಂಚೋಲಿ ಪ್ರದೇಶದ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಟೇಕಾಫ್ ಆದ ಕೂಡಲೇ ಪತನಗೊಂಡಿದೆ. ಪ್ರಯಾಣಿಸುತ್ತಿದ್ದ 2 ಪೈಲಟ್‌ಗಳು ಮತ್ತು 5 ಪ್ರಯಾಣಿಕರು ಸೇರಿದಂತೆ ಏಳು ಜನರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಉತ್ತರಾಖಂಡ ಸರ್ಕಾರ ತಿಳಿಸಿದೆ. ಕೇದಾರನಾಥ ಕ್ಷೇತ್ರಕ್ಕೆ ಯಾತ್ರಿಗಳನ್ನು ಕರೆದುಕೊಂಡು … Continued

ಚಳಿಗಾಲ-ಹಬ್ಬದ ಸಮಯ: ಪ್ರತಿರಕ್ಷಣಾ ವ್ಯವಸ್ಥೆ ತಪ್ಪಿಸಿಕೊಳ್ಳುವ XBB ಕೋವಿಡ್‌-19 ರೂಪಾಂತರದ ಎಚ್ಚರಿಕೆ ನೀಡಿದ ಮಹಾರಾಷ್ಟ್ರ

ಮುಂಬೈ: ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣಗಳಲ್ಲಿ 17.7% ಏರಿಕೆಯಾದ ಹಿನ್ನೆಲೆಯಲ್ಲಿ, ರಾಜ್ಯ ಆರೋಗ್ಯ ಇಲಾಖೆ ಸೋಮವಾರ XBB ರೂಪಾಂತರವನ್ನು ಉಲ್ಲೇಖಿಸಿದೆ. ಇದು ಈಗ ದೇಶದಲ್ಲಿ ಮೊದಲ ಬಾರಿಗೆ ಕಂಡುಬಂದಿದ್ದು, ಕೆಲವು ರಾಜ್ಯಗಳಲ್ಲಿ ಹೆಚ್ಚಿನ ಪ್ರಕರಣಗಳಿಗೆ ಕಾರಣವಾಗಿದೆ. ಜೊತೆಗೆ ಚಳಿಗಾಲ ಮತ್ತು ಹಬ್ಬದ ಋತುವಿನಲ್ಲಿ ಮತ್ತಷ್ಟು ಸ್ಪೈಕ್‌ಗಳಿಗೆ ಉತ್ತೇಜನ ನೀಡುವ ಅಂಶಗಳಾಗಿವೆ. … Continued

ಕಾಶ್ಮೀರದಲ್ಲಿ ಉಗ್ರರಿಂದ ವಲಸೆ ಕಾರ್ಮಿಕರ ಮೇಲೆ ಗ್ರೆನೇಡ್ ದಾಳಿ: ಇಬ್ಬರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ದಲ್ಲಿ ಉಗ್ರರು ಕೈಬಾಂಬ್ (ಗ್ರೆನೇಡ್) ಎಸೆದಿದ್ದರಿಂದ ಇಬ್ಬರು ವಲಸೆ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮೃತರು ಉತ್ತರ ಪ್ರದೇಶದ ಕನೌಜ್ ಜಿಲ್ಲೆಯವರು ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಯೋತ್ಪಾದಕರು ಕಾಶ್ಮೀರಿ ಪಂಡಿತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಕೆಲವೇ ದಿನಗಳ ನಂತರ ಈ ಆಘಾತಕಾರಿ ಘಟನೆ ನಡೆದಿದೆ. ಶೋಪಿಯಾನ್​ನ ಹಾರ್ಮೆನ್ ಎಂಬಲ್ಲಿ ಭಯೋತ್ಪಾದಕರು ಕೈಬಾಂಬ್ … Continued

ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆ: ನಡೆಯಲಿದೆ 36ನೇ ಬಿಸಿಸಿಐ ಅಧ್ಯಕ್ಷರಾಗಿ ಕರ್ನಾಟಕದ ರೋಜರ್‌ ಬಿನ್ನಿ ಅವಿರೋಧ ಆಯ್ಕೆ

ನವದೆಹಲಿ: ಮಂಗಳವಾರ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ನಂತರ ಭಾರತದ ಮಾಜಿ ಕ್ರಿಕೆಟಿಗ. ಕರ್ನಾಟಕದ ರೋಜರ್ ಬಿನ್ನಿ ಅವರು ಸೌರವ್ ಗಂಗೂಲಿ ಅವರ ಬದಲಿಗೆ ಭಾರತೀಯ ಕ್ರಿಕೆಟ್‌ ಮಂಡಳಿ(ಬಿಸಿಸಿಐ)ಯ ನೂತನ ಅಧ್ಯಕ್ಷರಾಗಲಿದ್ದಾರೆ. ಅವಿರೋಧವಾಗಿ ಆಯ್ಕೆಯಾಗಲಿರುವುದರಿಂದ ಮುಂದಿನ ಪದಾಧಿಕಾರಿಗಳ ಆಯ್ಕೆ ಕೇವಲ ಔಪಚಾರಿಕವಾಗಿ ನಡೆಯಲಿದೆ .ರೋಜರ್‌ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗುತ್ತಾರೆ. ಕಾರ್ಯದರ್ಶಿಯಾಗಿ ಜಯ್ ಶಾ, ಆಶಿಶ್ … Continued

ವೈದ್ಯ, ಅವರ ತಾಯಿ ಮೇಲೆ ಡಿಎಂಕೆ ಪದಾಧಿಕಾರಿಯಿಂದ ಹಲ್ಲೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ | ವೀಕ್ಷಿಸಿ

ಚೆನ್ನೈ: ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ವೈದ್ಯರು ಮತ್ತು ಅವರ ತಾಯಿಯ ಮೇಲೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪದಾಧಿಕಾರಿಯೊಬ್ಬರು ಹಲ್ಲೆ ನಡೆಸಿರುವ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಡಿಎಂಕೆ ಕಾರ್ಯಕಾರಿಯು ಪೆರಿಯಕಡೈ ವೀಧಿಯಲ್ಲಿರುವ ತನ್ನ ಕ್ಲಿನಿಕ್‌ನಲ್ಲಿ ಸಿದ್ಧ ವೈದ್ಯ ( BSMS) ಮತ್ತು ಅವರ ತಾಯಿಯ … Continued

ಮುಸ್ಲಿಂ ವೈಯಕ್ತಿಕ ಕಾನೂನು: 15 ವರ್ಷ ಮೀರಿದ ಮುಸ್ಲಿಂ ಹುಡುಗಿಯರು ಮದುವೆಯಾಗಬಹುದೇ ಎಂಬುದನ್ನು ಪರಿಶೀಲಿಸಲಿರುವ ಸುಪ್ರೀಂಕೋರ್ಟ್‌

ನವದೆಹಲಿ: ಹದಿನೈದು ವರ್ಷ ವಯಸ್ಸಿನ ಮುಸ್ಲಿಂ ಹುಡುಗಿ ತಾನು ಬಯಸಿದ ವ್ಯಕ್ತಿಯೊಂದಿಗೆ ಮದುವೆಯಾಗಬಹುದೇ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿಸಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎ. ಎಸ್. ಓಕಾ ಅವರಿದ್ದ ಪೀಠವು ಈ ಪ್ರಕರಣದಲ್ಲಿ ಹಿರಿಯ ವಕೀಲ ರಾಜಶೇಖರ ರಾವ್ ಅವರನ್ನು ಅಮಿಕಸ್ ಕ್ಯೂರಿಯಾಗಿ ನೇಮಿಸಿದೆ ಎಂದು ಬಾರ್‌ … Continued

ಸಿಬಿಐ ವಿಚಾರಣೆ ವೇಳೆ ಎಎಪಿ ತೊರೆಯುವಂತೆ ಒತ್ತಡ ಹಾಕಿದ್ರು, ಇಲ್ಲದಿದ್ರೆ ಪ್ರಕರಣ ಮುಂದುವರಿಯುತ್ತವೆ ಎಂದು ಹೆದರಿಸಲಾಯ್ತು: 9 ಗಂಟೆಗಳ ಸಿಬಿಐ ವಿಚಾರಣೆ ನಂತರ ಸಿಸೋಡಿಯಾ ಆರೋಪ

ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ, ಉದ್ಯಮಿ ವಿಜಯ್ ನಾಯರ್ ಸೇರಿದಂತೆ ಇತರ ಆರೋಪಿಗಳೊಂದಿಗಿನ ಅವರ ಸಂಬಂಧಗಳು ಮತ್ತು ಪ್ರಕರಣದ ಶೋಧದ ಸಮಯದಲ್ಲಿ ಪತ್ತೆಯಾದ ದಾಖಲೆಗಳ ವಿವಿಧ ಅಂಶಗಳ ಮೇಲೆ ದೆಹಲಿ ಉಪಮುಖ್ಯಮಂತ್ರಿ ಮನೀಶ ಸಿಸೊಡಿಯಾ ಒಂಬತ್ತು ಗಂಟೆಗಳ ಕಾಲ ಸಿಬಿಐನಿಂದ ಗ್ರಿಲ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು, ಸೋಮವಾರ ನಾನು ಸಿಬಿಐ ಕಚೇರಿಯಲ್ಲಿ … Continued

ಬ್ಯಾಂಕ್‌ ದರೋಡೆಗೆ ಬಂದ ಮಾರಕಾಸ್ತ್ರ ಹಿಡಿದ ದರೋಡೆಕೋರನ ವಿರುದ್ಧ ಇಕ್ಕಳ ಹಿಡಿದು ಧೈರ್ಯದಿಂದ ಹೋರಾಡಿದ ಮಹಿಳಾ ಬ್ಯಾಂಕ್ ಮ್ಯಾನೇಜರ್ | ವೀಕ್ಷಿಸಿ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವೀಡಿಯೊವೊಂದು ಮಹಿಳಾ ಉದ್ಯೋಗಿಯೊಬ್ಬರು ಬ್ಯಾಂಕ್ ದರೋಡೆಯನ್ನು ಎದುರಿಸುತ್ತಿರುವುದನ್ನು ತೋರಿಸುತ್ತದೆ. ಬ್ಯಾಂಕಿನಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ಸೆರೆಹಿಡಿಯಲಾದ ಕ್ಲಿಪ್, ಬ್ಯಾಂಕ್ ಮ್ಯಾನೇಜರ್ ಇಕ್ಕಳವನ್ನು  ಹಿಡಿದುಕೊಂಡು ಚಾಕು ಹಿಡಿದ ದರೋಡೆಕೋರನನ್ನು ಎದುರಿಸಿದ್ದಾರೆ. ಶನಿವಾರ ರಾಜಸ್ಥಾನದ ಗಂಗಾನಗರದಲ್ಲಿ ಮರುದಾರ ಗ್ರಾಮೀಣ ಬ್ಯಾಂಕ್‌ನಲ್ಲಿ ಈ ಘಟನೆ ನಡೆದಿದ್ದು, ಧೈರ್ಯದಿಂದ ದರೋಡೆಕೋರನನ್ನು ಎದುರಿಸಿದ ಶಾಖೆಯ ವ್ಯವಸ್ಥಾಪಕರನ್ನು ಪೂನಂ ಗುಪ್ತಾ … Continued

ಅಂಡಮಾನ್‌ನಲ್ಲಿ ಲೈಂಗಿಕ ದೌರ್ಜನ್ಯದ ಆರೋಪ: ಹಿರಿಯ ಐಎಎಸ್ ಅಧಿಕಾರಿ ಅಮಾನತು

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ಹಿರಿಯ ಐಎಎಸ್ ಅಧಿಕಾರಿ ಜಿತೇಂದ್ರ ನಾರಾಯಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಗೃಹ ಸಚಿವಾಲಯ (MHA) ಸೋಮವಾರ ಅಮಾನತುಗೊಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ಪೊಲೀಸರಿಂದ 1990-ಬ್ಯಾಚ್ ಐಎಎಸ್ ಅಧಿಕಾರಿ ಜಿತೇಂದ್ರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳ ಕುರಿತು ಅಕ್ಟೋಬರ್ … Continued

ಚಂದ್ರಚೂಡ್ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ ರಾಷ್ಟ್ರಪತಿ ಮುರ್ಮು, ನವೆಂಬರ್ 9 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ನವೆಂಬರ್ 9 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಅನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ಡಾ. ಜಸ್ಟಿಸ್ ಡಿವೈ ಚಂದ್ರಚೂಡ್ ಅವರನ್ನು ನವೆಂಬರ್ 9, 22 ರಿಂದ … Continued