ಜೆಡಿಯು ಸಂಸತ್ ಉದ್ಘಾಟನಾ ಕಾರ್ಯಕ್ರಮ ಬಹಿಷ್ಕರಿಸಿದ್ದರೂ ಹಾಜರಾದ ರಾಜ್ಯಸಭೆಯ ಉಪಸಭಾಪತಿ : ಜೆಡಿಯು ತೀವ್ರ ಅಸಮಾಧಾನ

ಪಾಟ್ನಾ: ಪಕ್ಷವು ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಿದರೂ ಸಮಾರಂಭದಲ್ಲಿ ಪಾಲ್ಗೊಂಡಿದ್ದಕ್ಕಾಗಿ ರಾಜ್ಯಸಭೆ ಉಪ ಸಭಾಪತಿ ಹರಿವಂಶ್ ವಿರುದ್ಧ ಜೆಡಿಯು ಮುಖ್ಯ ವಕ್ತಾರ ನೀರಜಕುಮಾರ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ. “ಪತ್ರಿಕೋದ್ಯಮಕ್ಕೆ ನಿಮ್ಮ ಕೊಡುಗೆಯನ್ನು ಗುರುತಿಸಿ ಪಕ್ಷವು ನಿಮ್ಮನ್ನು ರಾಜ್ಯಸಭೆಗೆ ಕಳುಹಿಸಿದೆ. ಆದರೆ ದೇಶದ ಸಂಸದೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕರಾಳ ಅಧ್ಯಾಯವಾದಾಗ, ನಿಮ್ಮ ಉನ್ನತ … Continued

ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ 10 ಮಂದಿ ಸಾವು

ಮೈಸೂರು: ಮೈಸೂರಿನ ಟಿ ನರಸಿಪುರ ಸಮೀಪ ಖಾಸಗಿ ಬಸ್‌ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಹತ್ತು ಜನರು ಹತ್ತು ಮಂದಿ ಮೃತಪಟ್ಟ ಘಟನೆ ವರದಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಇನ್ನೋವಾ ಕಾರಿನಲ್ಲಿ ಒಂದೇ ಕುಟುಂಬದ ಪ್ರಯಾಣಿಕರು ಮೈಸೂರು ಪ್ರವಾಸಕ್ಕೆ ಆಗಮಿಸಿದ್ದರು. ಟಿ ನರಸಿಪುರ ಸಮೀಪದಕುರುಬೂರು ಗ್ರಾಮದ ಪಿಂಜರ ಪೋಳ … Continued

ಮುಂದಿನ ಪೀಳಿಗೆಯ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಜಿಎಸ್‌ಎಲ್‌ವಿ ರಾಕೆಟ್‌ನಲ್ಲಿ ನ್ಯಾವಿಗೇಷನ್ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಹಾರಾಟದ ಸುಮಾರು 20 ನಿಮಿಷಗಳ ನಂತರ, ರಾಕೆಟ್ ಸುಮಾರು 251 ಕಿಮೀ ಎತ್ತರದಲ್ಲಿ ಜಿಯೋಸಿಂಕ್ರೋನಸ್ ವರ್ಗಾವಣೆ ಕಕ್ಷೆಯಲ್ಲಿ (ಜಿಟಿಒ) ಉಪಗ್ರಹವನ್ನು ನಿಯೋಜಿಸಿತು ಎಂದು ಇಸ್ರೋ ಹೇಳಿದೆ. ನ್ಯಾವಿಗೇಷನ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಯಲ್ಲಿ ಇರಿಸಲಾಗಿದೆ.”ನಾವು ಈಗ … Continued

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಪೊಲೀಸರು ಸೇರಿ 5 ಮಂದಿ ಸಾವು, 12 ಮಂದಿಗೆ ಗಾಯ

ಇಂಫಾಲ: ಮಣಿಪುರದಲ್ಲಿ ನಿನ್ನೆ, ಭಾನುವಾರ ಹೊಸದಾಗಿ ಹಿಂಸಾಚಾರ ಭುಗಿಲೆದ್ದಿದ್ದು,ಓರ್ವ ಪೊಲೀಸ್ ಸೇರಿದಂತೆ ಕನಿಷ್ಠ ಐವರು ಸಾವಿಗೀಡಾಗಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಹಿಂಸಾಚಾರ ಪೀಡಿತ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಗಂಟೆಗಳ ಮೊದಲು ಮತ್ತೆ ಹಿಂಸಾಚಾರ ನಡೆದಿದೆ. ಗೃಹ ಸಚಿವ ಅಮಿತ್ ಶಾ ಇಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ತಿಂಗಳಲ್ಲಿ … Continued

ನೂತನ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ ಮಾಡಲಿರುವ ಕೇಂದ್ರ ಸರ್ಕಾರ: ಇದರ ವಿಶೇಷತೆ ಏನು..?

ನವದೆಹಲಿ : ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಆಚರಿಸುತ್ತಿರುವ ಭಾರತದ ಗೌರವದ ಗುರುತಾಗಿಯೂ ಕಾರ್ಯನಿರ್ವಹಿಸುತ್ತದೆ. ನಾಣ್ಯದ ಒಂದು ಬದಿಯು ಅಶೋಕ ಸ್ತಂಭದ ಸಿಂಹದ ಲಾಂಛನ ಹೊಂದಿರುತ್ತದೆ, ಅದರ ಕೆಳಗೆ “ಸತ್ಯಮೇವ … Continued

ನೂತನ ಸಂಸತ್ತಿನ ಉದ್ಘಾಟನೆ: ಮೇ 28ರ ಸಮಾರಂಭದಲ್ಲಿ ಯಾವ ಪಕ್ಷಗಳು ಪಾಲ್ಗೊಳ್ಳುತ್ತಿವೆ..? ಯಾವ್ಯಾವ ಪಕ್ಷಗಳು ಬಹಿಷ್ಕರಿಸುತ್ತಿವೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಕಟ್ಟಡವನ್ನು ಉದ್ಘಾಟನೆ ಮಾಡುವುದನ್ನು ಪ್ರತಿಪಕ್ಷಗಳು ವಿರೋಧಿಸುತ್ತಿರುವ ಕಾರಣ ನೂತನ ಸಂಸತ್ ಭವನದ ಉದ್ಘಾಟನೆ ಈಗ ಚರ್ಚೆಗೆ ಗ್ರಾಸವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಕಟ್ಟಡವನ್ನು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂಬುದು ವಿರೋಧ ಪಕ್ಷದ ಅಭಿಪ್ರಾಯವಾಗಿದೆ. ಪ್ರತಿಭಟನೆಯ ಸಂಕೇತವಾಗಿ, 21 ವಿರೋಧ ಪಕ್ಷಗಳು ಸಮಾರಂಭವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ, … Continued

ಶನಿವಾರ 24 ಶಾಸಕರಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಮೂಲಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇನ್ನೂ 24 ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಪಕ್ಷದ ಕೇಂದ್ರ ನಾಯಕರ ನಡುವೆ ನಡೆದ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಗಳು ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ … Continued

ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದ ಎಎಪಿ ನಾಯಕ ಸತ್ಯೇಂದ್ರ ಜೈನ್‌; ಆಸ್ಪತ್ರೆಗೆ ದಾಖಲು

ನವದೆಹಲಿ: ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ಹಾಗೂ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರು ದೆಹಲಿಯ ತಿಹಾರ್‌ ಜೈಲಿನ ಸ್ನಾನಗೃಹದಲ್ಲಿ ಇಂದು, ಗುರುವಾರ (ಮೇ 25) ಕುಸಿದು ಬಿದ್ದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೂ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಸತ್ಯೇಂದ್ರ ಜೈನ್‌ ಅವರು ಬೆಳಿಗ್ಗೆ … Continued

ಇನ್‍ಸ್ಟಾಗ್ರಾಮ್‍ನಲ್ಲಿ 25 ಕೋಟಿ ಫಾಲೋವರ್ಸ್‌ : ದಾಖಲೆ ಬರೆದ ವಿರಾಟ್ ಕೊಹ್ಲಿ

ನವದೆಹಲಿ : ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ ಪ್ರದರ್ಶಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದ ಟೀಂ ಇಂಡಿಯಾದ ಮಾಜಿ ನಾಯಕ, ಇದೀಗ ತನ್ನ ಇನ್‍ಸ್ಟಾಗ್ರಾಮ್‍ ಫಾಲೋವರ್ಸ್‍ಗಳ ಸಂಖ್ಯೆಯಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ವಿರಾಟ್‌ ಕೊಹ್ಲಿ ಇನ್‍ಸ್ಟಾಗ್ರಾಮ್‍ ಖಾತೆಯನ್ನು ಫಾಲೋ ಮಾಡುತ್ತಿರುವವರ ಸಂಖ್ಯೆ ಇದೀಗ 25 ಕೋಟಿ ದಾಟಿದೆ. ಆ ಮೂಲಕ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ನಲ್ಲಿ 25 ಕೋಟಿ … Continued