ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿದ ಬಿಜೆಪಿ

ನವದೆಹಲಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಗುರುವಾರ ಪಕ್ಷದ ಸಂಘಟನಾತ್ಮಕ ವಿಭಾಗದಲ್ಲಿ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದ್ದು, ದೇಶದ ಪ್ರಮುಖ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ತ್ರಿಪುರಾ ರಾಜ್ಯಗಳ ಬಿಜೆಪಿ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಈ ಕುರಿತು ಪಕ್ಷದ … Continued

ಸೌದಿ ಜೈಲಿನಲ್ಲಿ 20 ವರ್ಷ, ಮಲಯಾಳಿಗಳಿಂದ 34 ಕೋಟಿ ರೂ. ‘ಬ್ಲಡ್ ಮನಿ’ ಸಂಗ್ರಹ :ಗಲ್ಲು ಶಿಕ್ಷೆಯಿಂದ ಪಾರಾಗಿ ತಾಯ್ನಾಡಿಗೆ ಮರಳಿದ ವ್ಯಕ್ತಿ !

ಕೋಝಿಕ್ಕೋಡ್ : ವಿದೇಶಿ ಜೈಲಿನಲ್ಲಿ ಸುದೀರ್ಘ 20 ವರ್ಷಗಳ ಕಾಲ ಮರಣದಂಡನೆ ಭೀತಿಯಲ್ಲಿ ದಿನದೂಡುತ್ತಿದ್ದ ಕೇರಳದ ಕೋಝಿಕ್ಕೋಡ್ ಮೂಲದ ವ್ಯಕ್ತಿ ಕೊನೆಗೂ ಗುರುವಾರ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ಅರೇಬಿಯಾದ ಜೈಲಿನಿಂದ ಬಿಡುಗಡೆಯಾಗಿ ಬಂದ ಅಬ್ದುಲ್ ರಹೀಮ್ಅವರನ್ನು ಕರಿಪುರ ವಿಮಾನ ನಿಲ್ದಾಣದಲ್ಲಿ ಅವರ ಕುಟುಂಬಸ್ಥರು, ಆಪ್ತರು ಹರ್ಷೋದ್ಗಾರಗಳೊಂದಿಗೆ ಬರಮಾಡಿಕೊಂಡರು. ಸೌದಿ ನಿಯಮಾವಳಿಗಳ ಪ್ರಕಾರ ಬರೋಬ್ಬರಿ 34 ಕೋಟಿ … Continued

ತ್ವಿಶಾ ಶರ್ಮಾ ಸಾವು : ಅತ್ತೆ-ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್‌ ಬಂಧಿಸಿದ ಸಿಬಿಐ

ಭೋಪಾಲ್‌ : ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಸಿಬಿಐ (CBI) ಅಧಿಕಾರಿಗಳು,ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ತ್ವಿಶಾ ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ಭೋಪಾಲ್‌ನಲ್ಲಿ ಗುರುವಾರ ಬಂಧಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಟ್ವಿಶಾ ಶರ್ಮಾ ಅವರು ತಮ್ಮ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಗಿರಿಬಾಲಾ ಸಿಂಗ್ ಅವರಿಗೆ ಮೇ 15 ರಂದು ಭೋಪಾಲ್‌ನ 10ನೇ … Continued

ವಿಡಿಯೋ | ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌ ಸರ್ಕಾರದ ನಾಯಕತ್ವ ಬದಲಾವಣೆಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಹೊರಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾತ್ರಿ ಮರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೊಂದಿಗೆ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು … Continued

ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಂಗೀಕಾರ ; ಯುಸಿಸಿ ತಂದ ದೇಶದ 3ನೇ ರಾಜ್ಯ

ಗುವಾಹತಿ: ವಿಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆಯೇ, ಅಸ್ಸಾಂ ವಿಧಾನಸಭೆಯು ಬುಧವಾರ ‘ಏಕರೂಪ ನಾಗರಿಕ ಸಂಹಿತೆ (UCC) ಅಸ್ಸಾಂ, 2026’ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಿದೆ. ಇದರೊಂದಿಗೆ ಉತ್ತರಾಖಂಡ ಮತ್ತು ಗುಜರಾತ್ ನಂತರ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅಂಗೀಕರಿಸಿದ ದೇಶದ ಮೂರನೇ ರಾಜ್ಯವಾಗಿ ಅಸ್ಸಾಂ ಹೊರಹೊಮ್ಮಿದೆ. (ಗೋವಾದಲ್ಲಿ ಪೋರ್ಚುಗೀಸ್ ಆಳ್ವಿಕೆಯ ಕಾಲದಿಂದಲೇ ಸಾಮಾನ್ಯ ನಾಗರಿಕ ಕಾನೂನು … Continued

ಬ್ರೇಕ್ ಫಾಸ್ಟ್ ಸಭೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ತೀವ್ರ ಕುತೂಹಲ ಮತ್ತು ಊಹಾಪೋಹಗಳಿಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಾವೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಮುಂದೆ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಅಧಿಕೃತ ಚಾಲನೆ … Continued

ಮಮತಾ ಬ್ಯಾನರ್ಜಿಗೆ ಆಘಾತ: ಟಿಎಂಸಿ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ತೀವ್ರ ರಾಜಕೀಯ ಆಘಾತ ಎದುರಾಗಿದೆ. ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದ ಬರಾಸತ್ ಕ್ಷೇತ್ರದ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಅವರು ಬುಧವಾರ (ಮೇ 27) ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕಾಕೋಲಿ ಘೋಷ್ ಅವರು ತೃಣಮೂಲ ಕಾಂಗ್ರೆಸ್‌ನ ಮಹಿಳಾ … Continued

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಕೂಡದು ಎಂದು ಹಲವಾರು ಶಾಸಕರು, ಸಚಿವರ ಒತ್ತಡ ; ಮೌನಕ್ಕೆ ಜಾರಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ  ಗುರುವಾರ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ. ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ, ಬುಧವಾರ ಸಿದ್ದರಾಮಯ್ಯ ಅವರ ಆಪ್ತ ಸಚಿವರು ಮತ್ತು ನಿಷ್ಠಾವಂತ ಶಾಸಕರು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ … Continued

ಪಶ್ಚಿಮ ಬಂಗಾಳದಲ್ಲಿ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ : ಭಾರತ-ಬಾಂಗ್ಲಾ ಗಡಿಯಲ್ಲಿ ನುಸುಳುಕೋರರ ನೂಕುನುಗ್ಗಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅಕ್ರಮ ನುಸುಳುವಿಕೆ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಸರ್ಕಾರದ ಹೊಸ “ಪತ್ತೆ ಹಚ್ಚಿ, ತೆಗೆದುಹಾಕಿ ಮತ್ತು ಗಡೀಪಾರು ಮಾಡಿ” (detect, delete and deport) ನೀತಿಯ ಬೆನ್ನಲ್ಲೇ, ಬಾಂಗ್ಲಾದೇಶದ ಗಡಿ ಪರಿಶೀಲನಾ ಕೇಂದ್ರಗಳ ಬಳಿ ಶಂಕಿತ ಅಕ್ರಮ ಬಾಂಗ್ಲಾದೇಶಿ ವಲಸಿಗರು ಭಾರಿ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ಸರ್ಕಾರದ ಈ ಆಕ್ಷನ್ … Continued

ಮತದಾರರ ಪಟ್ಟಿ ‘ವಿಶೇಷ ಪರಿಷ್ಕರಣೆ’ ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಆಯೋಗವು (ECI) ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ (Special Intensive Revision – SIR) ನಡೆಸುವ ಸಂಪೂರ್ಣ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ (ಮೇ 27) ಮಹತ್ವದ ತೀರ್ಪು ನೀಡಿದೆ. ಕಳೆದ ವರ್ಷ ನಡೆದ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ, ಅಂದರೆ 2025ರ ಜೂನ್‌ನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ … Continued