ವಿಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದ ನವೀನ ಪಟ್ನಾಯಕ್

ನವದೆಹಲಿ : ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇಂದು, ಗುರುವಾರ 2024 ರ ರಾಷ್ಟ್ರೀಯ ಚುನಾವಣೆಗೆ ಪ್ರತಿಪಕ್ಷಗಳೊಂದಿಗೆ ಕೆಲಸ ಮಾಡುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಬಿಜು ಜನತಾ ದಳ (ಬಿಜೆಡಿ) ಪಕ್ಷವು ಏಕಾಂಗಿಯಾಗಿ ಚುನಾವಣೆಗೆ ಹೋಗಲಿದೆ ಮತ್ತು ಇದು “ಯಾವಾಗಲೂ ಪಕ್ಷದ ಯೋಜನೆಯಾಗಿದೆ” ಎಂದು ಪ್ರಕಟಿಸಿದ್ದಾರೆ. ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ … Continued

ಸುಪ್ರೀಂ ಕೋರ್ಟ್ ತೀರ್ಪಿನ ಕೆಲವೇ ಗಂಟೆಗಳ ನಂತರ ಸೇವಾ ಕಾರ್ಯದರ್ಶಿಯನ್ನು ತೆಗೆದುಹಾಕಿದ ದೆಹಲಿ ಕೇಜ್ರಿವಾಲ್ ಸರ್ಕಾರ

ನವದೆಹಲಿ : ಅಧಿಕಾರಶಾಹಿಗಳ ನಿಯಂತ್ರಣ ಮತ್ತು ನಿಯೋಜನೆ ಕುರಿತು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ ನಂತರ ದೆಹಲಿಯ ಅರವಿಂದ ಕೇಜ್ರಿವಾಲ್‌ ಸರ್ಕಾರ, ದೆಹಲಿ ಸರ್ಕಾರದ ಸೇವಾ ಇಲಾಖೆಯ ಕಾರ್ಯದರ್ಶಿ ಆಶಿಶ್‌ ಮೋರೆ ಅವರನ್ನು ಎತ್ತಂಗಡಿ ಮಾಡಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಮುಖ ಆಡಳಿತಾತ್ಮಕ ಪುನರ್ರಚನೆಯ ಎಚ್ಚರಿಕೆಯೊಂದಿಗೆ ಹಲವು ವರ್ಗಾವಣೆಗಳಲ್ಲಿ ಮೊದಲನೆಯ ಕ್ರಮ ಕೈಗೊಂಡಿದ್ದಾರೆ. ಸುಪ್ರೀಂ … Continued

ರಾಜ್ಯಪಾಲರ ಕ್ರಮ ತಪ್ಪು, ಆದರೆ ರಾಜೀನಾಮೆ ನೀಡಿದ್ದರಿಂದ ಉದ್ಧವ್‌ ಸರ್ಕಾರ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ : ಕಳೆದ ವರ್ಷ ನಡೆದ ಶಿವಸೇನೆ ಬಂಡಾಯಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರಿಗೆ ಹಿನ್ನಡೆಯಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಆಗಿನ ರಾಜ್ಯಪಾಲರ ಕಾನೂನುಬಾಹಿರ ನಿರ್ಧಾರದಿಂದ ಲಾಭ ಗಳಿಸಿದರೂ ಅವರು ತಮ್ಮ ಹುದ್ದೆಯನ್ನು ಉಳಿಸಿಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ. ಕಳೆದ ವರ್ಷ ಜೂನ್‌ನಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ … Continued

ಮಹತ್ವದ ತೀರ್ಪಿನಲ್ಲಿ ಭೂಮಿ, ಪೊಲೀಸ್, ಕಾನೂನು-ಸುವ್ಯವಸ್ಥೆ ಹೊರತುಪಡಿ ಎಲ್ಲ ಸೇವೆಗಳ ಮೇಲೆ ದೆಹಲಿ ಸರ್ಕಾರದ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮಹತ್ವದ ತೀರ್ಪಿನಲ್ಲಿ, ಭೂಮಿ, ಪೊಲೀಸ್ ಮತ್ತು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸೇವೆಗಳನ್ನು ಹೊರತುಪಡಿಸಿ, ಭಾರತೀಯ ಆಡಳಿತ ಸೇವೆ (ಐಎಎಸ್) ಸೇರಿದಂತೆ ರಾಷ್ಟ್ರ ರಾಜಧಾನಿಯಲ್ಲಿನ ಎಲ್ಲಾ ಸೇವೆಗಳ ಮೇಲೆ ದೆಹಲಿ ಸರ್ಕಾರವು ನಿಯಂತ್ರಣವನ್ನು ಹೊಂದಿರುತ್ತದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಸರ್ವಾನುಮತದ ತೀರ್ಪಿನಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿ.ವೈ. ಚಂದ್ರಚೂಡ ಮತ್ತು … Continued

ಅಮೃತಸರದ ಸ್ವರ್ಣ ಮಂದಿರದ ಬಳಿ ಸ್ಫೋಟ : ಐವರ ಬಂಧನ, ವಾರದಲ್ಲಿ ಇದು 3ನೇ ಸ್ಫೋಟ

ಅಮೃತಸರ : ಮೇ 11 ರ ಗುರುವಾರ ಮುಂಜಾನೆ ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಸ್ಫೋಟ ಸಂಭವಿಸಿದೆ. ಈ ನಂತರ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮೃತಸರದ ಗುರು ರಾಮದಾಸಜಿ ನಿವಾಸದ ಹಿಂದೆ ಗುರುವಾರ ಮಧ್ಯರಾತ್ರಿ 12:30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಒಂದು ವಾರದಲ್ಲಿ ಈ ಪ್ರದೇಶದಲ್ಲಿ ಸಂಭವಿಸಿದ ಮೂರನೇ ಸ್ಫೋಟ … Continued

ಶಾಕಿಂಗ್‌…..ತನಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನೇ ಕತ್ತರಿಯಿಂದ ಇರಿದುಕೊಂದ ಆರೋಪಿ ಶಿಕ್ಷಕ…!

ಕೊಲ್ಲಂ (ಕೇರಳ): ಆಘಾತಕಾರಿ ಘಟನೆಯೊಂದರಲ್ಲಿ, ಬುಧವಾರ ಕೇರಳದ ಕೊಟ್ಟಾರಕ್ಕರದ ಆಸ್ಪತ್ರೆಯೊಂದರಲ್ಲಿ ಕುಡಿದ ಮತ್ತಿನಲ್ಲಿದ್ದ ಆರೋಪಿಯೊಬ್ಬ ಯುವ ವೈದ್ಯೆಯ ಮೇಲೆ ಕತ್ತರಿಯಿಂದ ಹಲ್ಲೆ ನಡೆಸಿದ ಪರಿಣಾಮ ವೈದ್ಯೆ ಸಾವಿಗೀಡಾಗಿದ್ದಾಳೆ. ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದಾಳಿಕೋರ ಶಾಲಾ ಶಿಕ್ಷಕ ಎಂದು ಹೇಳಲಾಗಿದೆ. ಮೃತ ವೈದ್ಯೆಯನ್ನು ಹೌಸ್‌ … Continued

ವೀಡಿಯೊ : ಬಿಜೆಪಿ ನಾಯಕಿ ಪತಿಯನ್ನು ಪೊಲೀಸ್ ಠಾಣೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಸಮಾಜವಾದಿ ಪಕ್ಷದ ಶಾಸಕ | ವೀಕ್ಷಿಸಿ

ಉತ್ತರ ಪ್ರದೇಶದ ಅಮೇಥಿಯಲ್ಲಿ ಬುಧವಾರ ಸಮಾಜವಾದಿ ಪಕ್ಷದ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಬಿಜೆಪಿ ಮುನ್ಸಿಪಲ್ ಚುನಾವಣಾ ಅಭ್ಯರ್ಥಿಯ ಪತಿ ಮೇಲೆ ಪೊಲೀಸ್‌ ಠಾಣೆಯಲ್ಲಿಯೇ ಹಲ್ಲೆ ನಡೆಸಿದ್ದಾರೆ. ಬಿಜೆಪಿ ಅಮೇಥಿಯ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ರಾಕೇಶ್ ತನ್ನ ಬೆಂಬಲಿಗರೊಂದಿಗೆ ಬಿಜೆಪಿ ಅಭ್ಯರ್ಥಿ ರಶ್ಮಿ ಸಿಂಗ್ ಅವರ ಪತಿ ದೀಪಕ್ ಸಿಂಗ್ ಅವರನ್ನು ಗೌರಿಗಂಜ್ ಪೊಲೀಸ್ … Continued

ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು…

ಚಿಕ್ಕಮಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಮಾಕೋನಹಳ್ಳಿ ಗ್ರಾಮದಲ್ಲಿ ಮದುಮಗಳೊಬ್ಬಳು ಬುಧವಾರ ಬೆಳಿಗ್ಗೆ ತನ್ನ ಮದುವೆಯ ಉಡುಪಿನಲ್ಲಿಯೇ ಬಂದು ಮತ ಚಲಾಯಿಸಿದ್ದಾರೆ. ಇಂದು ನಡೆಯಲಿರುವ ಮದುವೆಗೂ ಮುನ್ನ ಚಿಕ್ಕಮಗಳೂರು ಜಿಲ್ಲೆಯ ಮತಗಟ್ಟೆ ಸಂಖ್ಯೆ 165ರಲ್ಲಿ ಕುಟುಂಬ ಸಮೇತರಾಗಿ ಬಂದ ಮದುಮಗಳು ಮತ ಚಲಾಯಿಸಿ ಮತದಾನವನ್ನು ಸಂಭ್ರಮಿಸಿದ್ದಾರೆ. ಕರ್ನಾಟಕ ವಿಧಾನಸಭೆ … Continued

ಐನ್‌ಸ್ಟೈನ್‌ ಗಿಂತ ಹೆಚ್ಚಿನ ಐಕ್ಯೂ ಹೊಂದಿರುವ ʼಆಟಿಸಂʼ ಇರುವ 11 ವರ್ಷದ ಈ ಹುಡುಗಿಗೆ ಸಿಗಲಿದೆ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ…!

ಮೆಕ್ಸಿಕೋ ಸಿಟಿಯ 11 ವರ್ಷದ ಬಾಲಕಿ ಅಧಾರಾ ಪೆರೇಜ್ ಸ್ಯಾಂಚೇಜ್ ಚಿಕ್ಕ ವಯಸ್ಸಿನಲ್ಲೇ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಲು ಹೊರಟಿದ್ದಾಳೆ…! ಇಬ್ಬರು ಶ್ರೇಷ್ಠ ಭೌತವಿಜ್ಞಾನಿಗಳಾದ ಆಲ್ಬರ್ಟ್ ಐನ್‌ಸ್ಟೈನ್ ಮತ್ತು ಸ್ಟೀಫನ್ ಹಾಕಿಂಗ್‌ ಅವರಿಗಿಂತ ಹೆಚ್ಚಿನ ಐಕ್ಯೂ ಹೊಂದಿರುವುದು ಪರೀಕ್ಷೆಯ ನಂತರ ದೃಢಪಟ್ಟಿದೆ. ಐಕ್ಯೂ ಪರೀಕ್ಷೆಯಲ್ಲಿ ಅಧಾರಾಳಿಗೆ 162 ಐಕ್ಯೂ ಇರುವುದು ಗೊತ್ತಾಗಿದೆ. … Continued

ಪಾಕಿಸ್ತಾನ ಜೈಲಿನಲ್ಲಿರುವ 199 ಭಾರತೀಯ ಮೀನುಗಾರರ ಬಿಡುಗಡೆಗೆ ನಿರ್ಧಾರ

ಕರಾಚಿ: ಪಾಕಿಸ್ತಾನದ ಸಾಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ 199 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲು ಪಾಕಿಸ್ತಾನ ನಿರ್ಧರಿಸಿದೆ. ಕರಾಚಿಯ ಲಾಂಧಿ ಸೆರೆಮನೆಯಲ್ಲಿ 199 ಭಾರತೀಯ ಮೀನುಗಾರರನ್ನು ಬಂಧಿಸಿ ಇರಿಸಲಾಗಿದೆ. ಈ ಮೀನುಗಾರರನ್ನು ಬಿಡುಗಡೆ ಮಾಡಿ ಶುಕ್ರವಾರ(ಮೇ 12)ರಂದು ವಾಘಾ ಗಡಿಯ ಮೂಲಕ ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನ ನಿರ್ಧರಿಸಿದೆ ಎಂದು ವರದಿಯಾಗಿದೆ. … Continued